ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ. 23ರಂದು ವಿದ್ಯಾಚೇತನ ಆಡಿಟೋರಿಯಂನಲ್ಲಿನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಮಾತನಾಡಿ, ಕಲಿತ ಶಾಲೆಗೆ ಕೊಡುಗೆ ನೀಡುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದಂತಾಗುತ್ತದೆ. ಅಲ್ಲದೇ, ಹಿರಿಯ ವಿದ್ಯಾರ್ಥಿಗಳು ಶಾಲೆಗೆ ಮತ್ತೊಮ್ಮೆ ಬಂದು, ಕಾರ್ಯಕ್ರಮ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ ಎಂದರು.ಇದೇ ಸಂದರ್ಭ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಮುಂದೋಡಿ, ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ […]

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ Read More »

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹುದ್ದೆ ಖಾಲಿಗೆ ಸದನದಲ್ಲಿ ಉತ್ತರ | ಶಾಸಕರ ಪ್ರಯತ್ನಕ್ಕೆ ಉನ್ನತ ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ

ಪುತ್ತೂರು: ಇಲ್ಲಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೊನೆಗೂ ಸಚಿವರು ಅಧಿವೇಶನದಲ್ಲಿ ಅಸ್ತು ಎಂದಿದ್ದಾರೆ. ಶಾಸಕ ಸಂಜೀವ ಮಠಂದೂರು ಅವರು ಕೇಳಿರುವ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಉತ್ತರ ನೀಡಿದ್ದರು. ಆದರೆ ಉತ್ತರ ತೃಪ್ತಿಕರವಾಗಿರದೇ ಇದ್ದುದರಿಂದ, ಸದನದಲ್ಲಿ ಮಾತನಾಡಲು ಅವಕಾಶ ಸಿಕ್ಕಾಗ, ಸಭಾಧ್ಯಕ್ಷರ ಗಮನ ಸೆಳೆದು, ಸಮಸ್ಯೆಗೆ ಪರಿಹಾರ ನೀಡುವಲ್ಲಿ ಶಾಸಕ ಸಂಜೀವ ಮಠಂದೂರು ಯಶಸ್ವಿಯಾಗಿದ್ದಾರೆ. ಹಳೆ ತಾಲೂಕು ಕಚೇರಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಸರಕಾರಿ ಮಹಿಳಾ ಪ್ರಥಮ

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹುದ್ದೆ ಖಾಲಿಗೆ ಸದನದಲ್ಲಿ ಉತ್ತರ | ಶಾಸಕರ ಪ್ರಯತ್ನಕ್ಕೆ ಉನ್ನತ ಶಿಕ್ಷಣ ಸಚಿವರಿಂದ ಪರಿಹಾರದ ಭರವಸೆ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು, ಕಡಬ ಕೇಂದ್ರ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್  ಪುತ್ತೂರು ಹಾಗೂ ಕಡಬ ತಾಲೂಕು ಕೇಂದ್ರ ಒಕ್ಕೂಟದ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಮತ್ತು ಒಕ್ಕೂಟಗಳ ಸಾಧನ ಸಮಾವೇಶ ಡಿ. 23ರಂದು ಪುತ್ತೂರು ಕೊಂಬೆಟ್ಟು ಬಂಟರ ಭವನದಲ್ಲಿ ಜರಗಿತು. ಸ್ವ-ಸಹಾಯ ಸಂಘಗಳಿಗೆ ಸರ್ಕಾರದ ಸವಲತ್ತು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸ್ವಸಹಾಯ ಸಂಘ ಸೇರಿದಂತೆ ಪುತ್ತೂರಿನಲ್ಲಿ ಬಹಳಷ್ಟು ಸ್ವಸಹಾಯ ಸಂಘಗಳು ಕೆಲಸ ನಿರ್ವಹಿಸುತ್ತಿವೆ. ಇತ್ತೀಚೆಗೆ ಇಂತಹ ಸಂಘಗಳಿಗೆ ಸರ್ಕಾರದ ಸವಲತ್ತು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು, ಕಡಬ ಕೇಂದ್ರ ಒಕ್ಕೂಟದ ಪದಗ್ರಹಣ, ಸಾಧನ ಸಮಾವೇಶ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್‌ ಸ್ಟೇಟ್ಸ್‌ ಮೂಲದ ಬಹುರಾಷ್ಟ್ರೀಯ ಹೆಲ್ತ್‌ ಕೇರ್‌ ಮತ್ತು ಇನ್ಶೂರೆನ್ಸ್ ಕಂಪನಿ ಆಪ್ಟಮ್‌ನ ಮೆಡಿಕಲ್‌ ಕೋಡರ್‌ ಹುದ್ದೆಗಳಿಗಾಗಿ ನಡೆದ ನೇಮಕಾತಿ ತರಬೇತಿಯ ಸಮಾರೋಪ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ಯಾವುದೇ ಕಾರ್ಯದಲ್ಲಿ ನಾವು ಪ್ರಾಮಾಣಿಕ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತ. ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದು ಮಾತ್ರವಲ್ಲದೆ, ಉದ್ಯೋಗಕ್ಕಾಗಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ Read More »

ಉತ್ತಮ ಸಮಾಜ ನಿರ್ಮಾಣಕ್ಕೆ ಯುವಜನತೆ ತಯಾರಾಗಬೇಕು

ಪುತ್ತೂರು:  ಆಧುನಿಕ ಯುಗದಲ್ಲಿ ಯುವಜನತೆಯು  ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದು, ಕೆಲವೊಮ್ಮೆ  ಎದುರಿಸುವ ಸಲುವಾಗಿ  ವಿಫಲವಾಗುತ್ತಾರೆ. ಕಷ್ಟಗಳು ಎದುರಾದಾಗ ಅದನ್ನು ಹಿಮ್ಮೆಟ್ಟಿ ಮುಂದುವೆರೆಯಬೇಕು. ಇತ್ತೀಚಿನ ದಿನಗಳಲ್ಲಿ ಯುವಜನತೆ ಬಹಿರಂಗವಾಗಿ ಗೆದ್ದರೂ ಕೂಡ ಅಂತರಂಗದಲ್ಲಿ  ಸೋಲುತ್ತಾರೆ. ಯಾವುದೇ  ಸಂದರ್ಭದಲ್ಲೂ  ಹಿಂಜರಿಯದೆ ಸದೃಡತೆಯಿಂದ, ಆತ್ಮಸ್ಥೈರ್ಯದಿಂದ  ಮುನ್ನುಗ್ಗಬೇಕು. ಯುವಜನತೆ ಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಆಗಲು ಸಾಧ್ಯ. ಆದರಿಂದ ರಾಷ್ಟ್ರ ನಮ್ಮನ್ನು ಕಟ್ಟುವುದಲ್ಲ ನಾವು  ರಾಷ್ಟ್ರವನ್ನು ಕಟ್ಟಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಆರತಿ ಹೇಳಿದರು. ಇವರು

ಉತ್ತಮ ಸಮಾಜ ನಿರ್ಮಾಣಕ್ಕೆ ಯುವಜನತೆ ತಯಾರಾಗಬೇಕು Read More »

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಡಿ. ೨೪ರಂದು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಹೆತ್ತವರೊಂದಿಗೆ ಸಂವಾದ ನಡೆಯಲಿದೆ. ಅಂತಾರಾಷ್ಟ್ರೀಯ ತರಬೇತುದಾರ, ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗ್ಗೆ 9ಕ್ಕೆ ಡಾ.ಕರಜಗಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವರು. ತದನಂತರ 10.30ರಿಂದ 12.30ರ ವರೆಗೆ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅಪರಾಹ್ನ 1.30ರಿಂದ ಹೆತ್ತವರೊಂದಿಗೆ ಡಾ. ಗುರುರಾಜ ಕರಜಗಿ ಸಂವಾದ ನಡೆಸಲಿದ್ದು, ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ.

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ Read More »

ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

7 ದಿನಗಳಲ್ಲಿ ಭೂ ಪರಿವರ್ತನೆ ಆಗದಿದ್ದರೆ ತನ್ನಿಂದ ತಾನೇ ಡೀಮ್ಡ್ ಬೆಳಗಾವಿ: ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ ವಿಳಂಬ ತಪ್ಪಿಸುವ ಉದ್ದೇಶದ ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ನೀಡಲಾಯಿತು.ಕಂದಾಯ ಸಚಿವ ಆರ್‌.ಆಶೋಕ್‌ ಮಾತನಾಡಿ, ಕೃಷಿ ಭೂಮಿಯನ್ನು ಕೈಗಾರಿಕೆ, ವಾಣಿಜ್ಯ ಮತ್ತಿತರ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಅನುಮೋದನೆ ನೀಡುವುದನ್ನು ಮಸೂದೆಯಲ್ಲಿ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳಿಗೆ

ಭೂ ಪರಿವರ್ತನೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »

ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ

ಅವರು ಬರೆದ 900 ಹಿಂದಿ ಹಾಡುಗಳು ಸೂಪರ್ ಹಿಟ್! ಚಿಕ್ಕಂದಿನಿಂದ ಹಿಂದಿ ಸಿನೆಮಾದ ಅತ್ಯಂತ ಸುಮಧುರವಾದ ಗೀತೆಗಳನ್ನು ಕೇಳುತ್ತಾ, ಆರಾಧನೆ ಮಾಡುತ್ತ ಬೆಳೆದ ನನಗೆ 60-70ರ ದಶಕದ ಕೆಲವು ಹಾಡುಗಳು ಹುಚ್ಚು ಹಿಡಿಸಿಬಿಟ್ಟಿದ್ದವು. ಆ ಹಾಡುಗಳನ್ನು ಬರೆದ ಕವಿಯ ಕಾವ್ಯ ಶಕ್ತಿಗೆ ಬೆರಗಾಗದೆ ಇರಲು ಸಾಧ್ಯವೇ ಇರಲಿಲ್ಲ.ಆ ಕವಿ ಯಾರು ಎಂದು ಹುಡುಕಲು ತೊಡಗಿದಾಗ ವಿಸ್ಮಯ ಮೂಡಿತು. ಅತ್ಯಂತ ಕಡುಬಡತನದಲ್ಲಿ ಜನ್ಮ ತಾಳಿದ ಆ ಕವಿ, ಹಸಿದ ಹೊಟ್ಟೆಯಲ್ಲಿ 17 ವರ್ಷದ ಅವಧಿಯಲ್ಲಿ ಬರೆದ 900 ಸಿನೆಮಾ

ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ, ಜ್ವರವಿದ್ದರೆ ಕೋವಿಡ್‌ ಪರೀಕ್ಷೆ

ಕೊರೊನಾ ಹಿನ್ನೆಲೆಯಲ್ಲಿ ಮತ್ತೆ ಸರಕಾರದಿಂದ ಮಾರ್ಗಸೂಚಿ ಬೆಂಗಳೂರು: ದೇಶದಲ್ಲಿ ಮತ್ತೆ ಕೊರೋನಾ ಭೀತಿ ಆವರಿಸಿದ್ದು, ಚೀನಾದಲ್ಲಿ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊಸದಾಗಿ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೊ, ವಿಮಾನ ಪ್ರಯಾಣದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ, ಜ್ವರವಿದ್ದರೆ ಕೋವಿಡ್‌ ಪರೀಕ್ಷೆ Read More »

ರಂಗಸ್ಥಳದಲ್ಲೇ ಕುಸಿದು ಬಿದ್ದು ಕಟೀಲು ಮೇಳದ ಕಲಾವಿದ ನಿಧನ

ಕಟೀಲಿನಲ್ಲಿ ನಡೆದ ಪ್ರದರ್ಶನದಲ್ಲಿ ರಾತ್ರಿ 12ಕ್ಕೆ ನಡೆದ ಘಟನೆ ಮಂಗಳೂರು : ಕಟೀಲು 4ನೇ ಮೇಳದ ಹಿರಿಯ ಕಲಾವಿದ ಗುರುವಪ್ಪ ಬಾಯಾರು (58) ಅವರು ಕಟೀಲಿನ ಸರಸ್ವತಿ ಸದನದಲ್ಲಿ ಗುರುವಾರ ರಾತ್ರಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರಸ್ವತಿ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ತ್ರಿಜನ್ಮ ಮೋಕ್ಷ ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ಸ್ಥಳದಲ್ಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ

ರಂಗಸ್ಥಳದಲ್ಲೇ ಕುಸಿದು ಬಿದ್ದು ಕಟೀಲು ಮೇಳದ ಕಲಾವಿದ ನಿಧನ Read More »

error: Content is protected !!
Scroll to Top