ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ನಾಟಿಕೋಳಿ ಮರಿ ವಿತರಣೆ

ಪುತ್ತೂರು: ಗ್ರಾಮೀಣ ಭಾಗದ ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ ಉಚಿತವಾಗಿ ನಾಟಿಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ನೂರಿನ್ನೂರು ಕೋಳಿಮರಿಗಳನ್ನು ಸಾಕಿಕೊಂಡು, ಜೀವನವನ್ನು ಸುಗಮವಾಗಿ ಸಾಗಿಸಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಗ್ರಾಮೀಣ ಭಾಗದ ಅರ್ಹ ರೈತ ಮಹಿಳೆಯರಿಗೆ ಉಚಿತ ನಾಟಿ ಕೋಳಿ ಮರಿಗಳನ್ನು ವಿತರಿಸಿ ಮಾತನಾಡಿದರು.ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟನಲ್ಲಿ ಸರಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಲ್ಲಿ ಇದು ಕೂಡ ಒಂದು. ಐವತ್ತು ಸಾವಿರ ಕೋಳಿಮರಿಗಳನ್ನು […]

ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ನಾಟಿಕೋಳಿ ಮರಿ ವಿತರಣೆ Read More »

ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ

ಪುತ್ತೂರು: ಪುತ್ತೂರು ವಕೀಲರ ಸಂಘದಿಂದ ಬುಧವಾರ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಯಿತು. ಮಂಗಳೂರಿನ ಯುವ ವಕೀಲ ಕುಲ್‌ದೀಪ್ ಶೆಟ್ಟಿ ಅವರ ಮೇಲಿನ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಮಾತನಾಡಿ, ಕುಲದೀಪ್ ಶೆಟ್ಟಿ ಅವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿದ್ದು ಅಲ್ಲದೇ,

ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ನೇತೃತ್ವದ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯವು ಪಿ.ಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್‌ಕಾಲೇಜು ಸಾಂಸ್ಕೃತಿಕ ಹಾಗೂ ಸೃಜನಶೀಲ ಸ್ಪರ್ಧೆ `ಅನ್ವೇಷಣಾ-೨೦೨೨’ರಲ್ಲಿ ಪುತ್ತೂರಿನ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ನಿಂತಿಕಲ್ಲು ಕೆ.ಎಸ್. ಗೌಡ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು. ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದ ಶ್ರೀ ಶಂಕರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಭಾರತ ದೇಶ

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ Read More »

ಅಮೆಝಾನ್‌ನಿಂದ ೨೦,೦೦೦ ಉದ್ಯೋಗಿಗಳ ವಜಾ?

ಹೊಸದಿಲ್ಲಿ: ಕೊರೋನಾ ಬಳಿಕ ಕಂಪೆನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಗೆ ಕತ್ತರಿ ಹಾಕುತ್ತಿರುವುದು ತಿಳಿದಿರುವ ಸಂಗತಿ. ಇದೇ ಸಾಲಿಗೆ ಇದೀಗ ಅಮೆಝಾನ್ ಕೂಡ ಸೇರುತ್ತಿದೆ. ಕಾರ್ಪೊರೇಟ್ ಅಧಿಕಾರಿಗಳು ಸೇರಿದಂತೆ ೨೦ ಸಾವಿರ ಉದ್ಯೋಗಿಗಳನ್ನು ಅಮೆಝಾನ್ ವಜಾಗೊಳಿಸುವ ಸಾಧ್ಯತೆಯ ಬಗ್ಗೆ ಕಂಪ್ಯೂಟರ್ ವರ್ಲ್ಡ್ ವರದಿ ಮಾಡಿದೆ. ಸಾಂಕ್ರಾಮಿಕದ ಅವಧಿಯಲ್ಲಿ ಅಗತ್ಯಕ್ಕಿಂತ ಹೆಚ್ಚು ನೇಮಕಾತಿ ಮಾಡಿಕೊಂಡಿರುವುದರಿAದ ವೆಚ್ಚ ಕಡಿತದ ಭಾಗವಾಗಿ ಅಮೆಝಾನ್ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಜಗತ್ತಿನಾದ್ಯಂತ ೧.೬ ದಶಲಕ್ಷ ಉದ್ಯೋಗಿಗಳ ಹೊಂದಿರುವ ದೈತ್ಯ ತಂತ್ರಜ್ಞಾನ ಕಂಪನಿ ಅಮೆಝಾನ್,

ಅಮೆಝಾನ್‌ನಿಂದ ೨೦,೦೦೦ ಉದ್ಯೋಗಿಗಳ ವಜಾ? Read More »

ಯುಎಇ ದೇಶದ ಪಾಸ್‌ಪೋರ್ಟ್ ಅತ್ಯುತ್ತಮ: ವರದಿ

ದುಬೈ: ಜಗತ್ತಿನಲ್ಲಿಯೇ ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ದೇಶ ಯುಎಇಯದ್ದು ಎಂದು ವರದಿಯೊಂದು ತಿಳಿಸಿದೆ.ಆರ್ಟನ್ ಕ್ಯಾಪಿಟಲ್ ಸಂಸ್ಥೆ ಪ್ರಕಟಿಸಿದ ಪಾಸ್‌ಪೋರ್ಟ್ ಸೂಚ್ಯಂಕದ ಪ್ರಕಾರ ಜಗತ್ತಿನಲ್ಲಿಯೇ ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ದೇಶ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಆಗಿವೆ. ಅತ್ಯುತ್ತಮ ಪಾಸ್‌ಪೋರ್ಟ್ ಹೊಂದಿದ ಟಾಪ್ ೧೦ ದೇಶಗಳ ಪಟ್ಟಿಯಲ್ಲಿ ಯುರೋಪಿಯನ್ ದೇಶಗಳ ಪಾರಮ್ಯದ ನಡುವೆ ಯುಎಇ ಅಗ್ರ ಸ್ಥಾನ ಗಳಿಸಿದೆ.ಯುಎಇ ಪಾಸ್‌ಪೋರ್ಟ್ ಹೊಂದಿದವರು ಯಾವುದೇ ಸಮಸ್ಯೆಯಿಲ್ಲದೆ ೧೮೦ ದೇಶಗಳನ್ನು ಪ್ರವೇಶಿಸಬಹುದಾಗಿದೆ. ಜರ್ಮನಿ ಮತ್ತು ಸ್ವೀಡನ್ ದೇಶಗಳ ಪಾಸ್‌ಪೋರ್ಟ್ಗಳನ್ನು ಬಳಸಿ ಪ್ರಯಾಣಿಸಬಹುದಾದ

ಯುಎಇ ದೇಶದ ಪಾಸ್‌ಪೋರ್ಟ್ ಅತ್ಯುತ್ತಮ: ವರದಿ Read More »

ಸರ್ವೋಚ್ಚ ನ್ಯಾಯಾಲಯದ ಮೊಬೈಲ್ ಆ್ಯಪ್ ೨.೦ ಆವೃತ್ತಿಗೆ ಚಾಲನೆ

ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯವು ತನ್ನ ಮೊಬೈಲ್ ಆ್ಯಪ್‌ನ ಆ್ಯಂಡ್ರಾಯ್ಡ್ ಆವೃತ್ತಿ ೨.೦ಕ್ಕೆ ಬುಧವಾರ ಚಾಲನೆ ನೀಡಿದ್ದು, ವಿವಿಧ ಸಚಿವಾಲಯಗಳ ಕಾನೂನು ಅಧಿಕಾರಿಗಳು ಮತ್ತು ನೋಡಲ್ ಅಧಿಕಾರಿಗಳು ನೈಜ ಸಮಯದಲ್ಲಿ ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಬಹುದು. ದಿನದ ಕಲಾಪಗಳ ಆರಂಭಕ್ಕೆ ಮುನ್ನ ಇದನ್ನು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಆ್ಯಪ್‌ನ ಆ್ಯಂಡ್ರಾಯ್ಡಾ ಆವೃತ್ತಿ ೨.೦ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಐಒಎಸ್ ಆವೃತ್ತಿಯು ಇನ್ನೊಂದು ವಾರದಲ್ಲಿ ಲಭ್ಯವಾಗಲಿದೆ. ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ

ಸರ್ವೋಚ್ಚ ನ್ಯಾಯಾಲಯದ ಮೊಬೈಲ್ ಆ್ಯಪ್ ೨.೦ ಆವೃತ್ತಿಗೆ ಚಾಲನೆ Read More »

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ ೧೭ರಂದು ಧನು ಪೂಜೆ ಆರಂಭಗೊಳ್ಳಲಿದೆ. ಒಂದು ಪರ್ಯಂತ ಕಾಲ ಉಷಃ ಕಾಲದಲ್ಲಿ ನಡೆಯುವ ಧನು ಪೂಜೆಯು ಜ. ೧೪ರವರೆಗೆ ನಡೆಯಲಿದೆ. ಊರ – ಪರವೂರ ಭಕ್ತರನ್ನು ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಯಾವುದೇ ವಿಶೇಷ ಉತ್ಸವವೆಂದರೆ ಭಕ್ತರ ದಂಡೇ ಹರಿದು ಬರುತ್ತದೆ. ಧನು ಮಾಸದ ಮೈಕೊರೆಯುವ ಚಳಿಯನ್ನು ಲೆಕ್ಕಿಸದೇ, ಭಕ್ತಸಮೂಹ ದೇವಸ್ಥಾನಕ್ಕೆ ಧಾವಿಸಿ ಬರುತ್ತಾರೆ. ಹಾಗಾಗಿ, ಧನು ಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳುವ ಸಡಗರವಾದರೆ, ಶ್ರೀ

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ Read More »

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ

ಶಿಗ್ಗಾಂವ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವ್ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ Read More »

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ Read More »

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹಾವೇರಿ, ಶಿಗ್ಗಾಂವಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ Read More »

error: Content is protected !!
Scroll to Top