ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11 ರಂದು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ಹೇಳಿದರು. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಉಜ್ರುಪಾದೆಯಲ್ಲಿ ಹಲವು ಶತಮಾತನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2009 ಜುಲೈ 7,,೮ ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ […]

ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ Read More »

ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯ 2022ನೇ ಸಾಲಿನಲ್ಲಿ ನಡೆಸಿದ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಅಂತಿಮ ವಿಭಾಗದ 4 ವಿದ್ಯಾರ್ಥಿಗಳು ರ್‍ಯಾಂಕ್ ಗಳಿಸಿದ್ದಾರೆ. ಬಿಕಾಂ ವಿಭಾಗದ ಆಕಾಂಕ್ಷ ಹೆಚ್ (3400/3343), ಬಿಎಸ್‌ಸಿ ವಿಭಾಗದ ವಿದ್ಯಾರ್ಥಿಗಳಾದ ಅಪೂರ್ವ ಜಿ (3400/3352), ಶ್ರೀವರದ ಪಿ (3400/3324), ಬಿಎ ವಿಭಾಗದ ರುಚಿತ ಹೆಗ್ಡೆ (3400/3042) ಅಂಕಗಳನ್ನು ಪಡೆದಿದ್ದಾರೆ. ಬಿಎ ವಿಭಾಗದಲ್ಲಿ ಒಟ್ಟು 89 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 66 ಮಂದಿ ತೇರ್ಗಡೆಗೊಂಡಿದ್ದಾರೆ. ಬಿಎಸ್‌ಸಿ ವಿಭಾಗದಲ್ಲಿ 142 ಮಂದಿ ಪರೀಕ್ಷೆಗೆ ಹಾಜಾರಾಗಿದ್ದು

ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್‍ಯಾಂಕ್‌ಗಳು Read More »

ನೆಲ್ಲಿಕಟ್ಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ 80 ಲಕ್ಷ ರೂ. ವೆಚ್ಚದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ನೆಲ್ಲಿಕಟ್ಟೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ವಿವಿಧ ಕಾಮಗಾರಿಗಳಿಗೆ ಸಂಬಂಧಪಟ್ಟ ಸುಮಾರು ಐದು ಕೋಟಿ ರೂ. ಕಾಮಗಾರಿಗಳಿಗೆ ಮುಂದಿನ ಒಂದು ವಾರದಲ್ಲಿ ಶಿಲಾನ್ಯಾಸ ಮಾಡಲಿದ್ದೇವೆ. ಪ್ರಸ್ತುತ ಉಪ್ಪಿನಂಗಡಿ, ಪುತ್ತೂರು, ವಿಟ್ಲ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಲಾ ಕಾಲೇಜು, ಪದವಿ ಕಾಲೇಜುಗಳಿಗೆ ಶಿಲಾನ್ಯಾಸ ಮಾಡಲಾಗಿದೆ. ಅಲ್ಲದೆ ಉಪ್ಪಿನಂಗಡಿ ಪದವಿಪೂರ್ವ ಕಾಲೇಜು ಲೋಕಾರ್ಪಣೆ ಜತೆಗೆ ಶಿಲಾನ್ಯಾಸವನ್ನೂ

ನೆಲ್ಲಿಕಟ್ಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ

ಹಾಸನದ ವ್ಯಕ್ತಿ ಸಾವಿಗೀಡಾದ ಬಳಿಕ ಎಚ್ಚರಿಕೆ ಗಂಟೆ ಬೆಂಗಳೂರು : ರಾಜ್ಯದಲ್ಲಿ ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಇದು ರಾಜ್ಯದಲ್ಲಿ ಎಚ್‌3ಎನ್‌2 ವೈರಸ್‌ನಿಂದ ಸಂಬವಿಸಿದ ಮೊದಲ ಸಾವು.ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆರೋಗ್ಯ ತಪಾಸಣೆ ಭರದಿಂದ ಸಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲು ಮುಂದಾಗಿದೆ. ಅನಾರೋಗ್ಯ ಪೀಡಿತ ಜನರು ಹಾಗೂ ವೃದ್ಧರನ್ನು ಕೂಡ ಪರೀಕ್ಷೆ ನಡೆಸಲಾಗಿದೆ ಎಂದು ಡಿಎಚ್‌ಓ ಡಾ.ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.ಎಚ್‌3ಎನ್‌2 ವೈರಸ್‌ ಸೋಂಕಿತರಲ್ಲಿ

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ Read More »

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ಮಾರ್ಚ್ 9ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ನಡೆದು, ಸಂಜೆ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ದೈವಕ್ಕೆ ಎಣ್ಣೆ ಬೂಳ್ಯ ನೀಡಿ, ಬಳಿಕ ಅನ್ನಸಂತರ್ಪಣೆ ಜರಗಿತು. ಇದೇ ಸಂದರ್ಭ ನೇಮೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಕ್ಕಿಡಿಪ್ ಡ್ರಾದ ಫಲಿತಾಂಶ ನಡೆಯಿತು. ರಾತ್ರಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು, ಗ್ರಾಮಸ್ಥರಿಗೆ ಸಿರಿಮುಡಿ ಗಂಧಪ್ರಸಾದ

ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ Read More »

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ

ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ ಚಿಕ್ಕಮಗಳೂರು: ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಾ.7 ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ತಮ್ಮ ಸಮಸ್ಯೆಗಳಿಗೆ ಕಿವಿಕೊಡದೆ ಕಣ್ಣು ಮುಚ್ಚಿ ಕುಳಿತು, ಚುನಾವಣೆ ಬಂದ ಕೂಡಲೇ ಉಡುಗೊರೆ ನೀಡಲು ಮುಂದಾದ ಜನಪ್ರತಿನಿಧಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸೀರೆಗಳಿಗೆ ಬೆಂಕಿ ಹಚ್ಚಿದ ಯುವಕ,

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ Read More »

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ವಿಚಾರ ಸಂಬಂಧ ಅಧ್ಯಯನ ನಡೆಸಲು ರಾಜಸ್ಥಾನ ರಾಜ್ಯಕ್ಕೆ ಸಮಿತಿಯನ್ನು ರವಾನಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿಯೂ ಚುನಾವಣೆ ನಡೆಯಲಿದೆ. ಹೀಗಾಗಿ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರಿತಿರುವ ಬಿಜೆಪಿ, ಯಾವುದೇ ರೀತಿಯಲ್ಲೂ ಎಡವದಂತೆ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಒಂದು ವೇಳೆ ಒಪಿಎಸ್ ಬಗ್ಗೆ ಸರ್ಕಾರ ತದ್ವಿರುದ್ಧವಾಗಿ ನಿರ್ಧಾರ ತೆಗೆದುಕೊಂಡಿದ್ದೇ ಆದರೆ, ಅದು ಕೇವಲ

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ! Read More »

ಸತತ ಮೂರನೇ ಬಾರಿ ಚೀನದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆ

ಬೀಜಿಂಗ್‌ : ಹಲವು ಪ್ರತಿಕೂಲ ಪರಿಸ್ಥಿತಿಯಿರುವ ಹೊರತಾಗಿಯೂ ಕ್ಸಿ ಜಿನ್‌ಪಿಂಗ್‌ ಅವರೇ ಚೀನದ ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಪುನರಾಯ್ಕೆಯಾಗಿದ್ದಾರೆ. ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್‌ನ 14ನೇ ಸಭೆಯಲ್ಲಿ ಕ್ಸಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಏರಿದಾಗ ಕ್ಸಿ ಜಿನ್‌ಪಿಂಗ್ ಅವರು ವಿಶ್ವಾಸಘಾತುಕ, ಭ್ರಷ್ಟ ಅಥವಾ ನಿಷ್ಪರಿಣಾಮಕಾರಿ ಎಂದು ಪರಿಗಣಿಸಲ್ಪಟ್ಟ ಅಧಿಕಾರಿಗಳನ್ನು ತೆಗೆದುಹಾಕಲು ಬೃಹತ್ ಅಭಿಯಾನವನ್ನು ಕೈಗೊಂಡಿದ್ದರು. ಆ ಖಾಲಿ ಸ್ಥಾನಗಳಲ್ಲಿ ಮಿತ್ರರನ್ನು ತುಂಬುವ ಮೂಲಕ ಜಿನ್‌ಪಿಂಗ್ ತಮ್ಮ ನೆಲೆಯನ್ನು ಭದ್ರಪಡಿಸಿಕೊಂಡಿದ್ದರು.ಚೀನದಲ್ಲಿ

ಸತತ ಮೂರನೇ ಬಾರಿ ಚೀನದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆ Read More »

ಇಂಡೋನೇಷ್ಯಾದ ರಾಜಧಾನಿಯ ಸ್ಥಳಾಂತರ

ಜಕಾರ್ತ : ಇಂಡೋನೇಷ್ಯಾದ ರಾಜಧಾನಿಯನ್ನೇ ಸ್ಥಳಾಂತರ ಮಾಡಲಾಗುತ್ತಿದೆ. ಹಾಲಿ ರಾಜಧಾನಿ ಜಕಾರ್ತದಲ್ಲಿ ಜನದಟ್ಟಣೆ, ಮಾಲಿನ್ಯ ಹೆಚ್ಚಳವಾಗಿದ್ದು, ಭೂಕಂಪಗಳಿಗೆ ತುತ್ತಾಗಿ, ಕ್ಷಿಪ್ರಗತಿಯಾಗಿ ಜಾವಾ ಸಮುದ್ರಕ್ಕೆ ಮುಳುಗುವ ಭೀತಿ ಇದ್ದ ಹಿನ್ನೆಲೆಯಲ್ಲಿ ಹೊಸ ರಾಜಧಾನಿ ನಿರ್ಮಾಣ ಆರಂಭಿಸಲಾಗಿದೆ.ಈಗ ಸರ್ಕಾರ ಇಂಡೋನೇಷ್ಯಾದ ರಾಜಧಾನಿಯನ್ನು ಬೊರ್ನಿಯೊ ದ್ವೀಪಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದೆ. ಹೊಸ ಮಹಾನಗರವು “ಸುಸ್ಥಿರ ಅರಣ್ಯ ನಗರ” ಎಂದು ಇಂಡೋನೇಷ್ಯಾದ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಈ ಯೋಜನೆ ಪರಿಸರವಾದಿಗಳ ಮತ್ತು ಸ್ಥಳೀಯ ಸಮುದಾಯಗಳ ಕೆಂಗಣ್ಣಿಗೆ ಗುರಿಯಾಗಿದೆ. ಒರಾಂಗುಟನ್‌ಗಳಂತಹ ಅಳಿವಿನಂಚಿನಲ್ಲಿರುವ ಪ್ರಾಣಿಗಳ

ಇಂಡೋನೇಷ್ಯಾದ ರಾಜಧಾನಿಯ ಸ್ಥಳಾಂತರ Read More »

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ

ಪುತ್ತೂರು : ಕುದ್ಮಾರಿನ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನದ ದೈವಗಳ ನೇಮೋತ್ಸವದ ಅಂಗವಾಗಿ ಗುರುವಾರ ರಾತ್ರಿ ಲಕ್ಕಿಡಿಪ್ ಡ್ರಾ ಫಲಿತಾಂಶ ನಡೆಯಿತು. ಫಲಿತಾಂಶ ಹೀಗಿದೆ: ಪ್ರಥಮ  :  3831, ದ್ವಿತೀಯ  : 4347, ತೃತೀಯ : 2994 ದೈವಸ್ಥಾನದಲ್ಲಿ ನೇಮೋತ್ಸವ ಆರಂಭಕ್ಕೆ ಮುನ್ನ ಗಣ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಫಲಿತಾಂಶ ನಡೆಸಿಕೊಟ್ಟರು. ಬಳಿಕ ಅನ್ನಸಂತರ್ಪಣೆ, ನೇಮೋತ್ಸವ ಜರಗಿತು.

ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ Read More »

error: Content is protected !!
Scroll to Top