ಸಿದ್ದರಾಮಯ್ಯ ಕಿರೀಟಕ್ಕೆ ಇನ್ನೊಂದು ಗರಿ

ಎಂಟು ವರ್ಷ ಆಳ್ವಿಕೆ ಮಾಡಿದ ಮುಖ್ಯಮಂತ್ರಿ ಎಂಬ ದಾಖಲೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೇ 20ಕ್ಕೆ 3 ವರ್ಷ ಪೂರ್ಣಗೊಳ್ಳಲಿದೆ. ಅದಕ್ಕೂ 4 ದಿನ ಮೊದಲೇ ಸಿದ್ದರಾಮಯ್ಯ ಅವರ ಹಲವು ದಾಖಲೆಗಳ ಸಾಲಿನಲ್ಲಿ ಮತ್ತೊಂದು ಸಾಧನೆ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ಸಿಎಂ ಆಗಿ ಅವರು ಹೊರಹೊಮ್ಮಿದ್ದಾರೆ. ಮೈಸೂರು ತಾಲೂಕು ಬೋರ್ಡ್ ಚುನಾವಣೆಗೆ ಸ್ಪರ್ಧಿಸುವ ಮೂಲಕ 1977ರಲ್ಲಿ ಸಾರ್ವಜನಿಕ ಸೇವೆಗೆ ಪಾದಾರ್ಪಣೆ ಮಾಡಿದ್ದ ಸಿದ್ದರಾಮಯ್ಯ ತಮ್ಮ ರಾಜಕೀಯ ಬದುಕಿನ […]

ಸಿದ್ದರಾಮಯ್ಯ ಕಿರೀಟಕ್ಕೆ ಇನ್ನೊಂದು ಗರಿ Read More »

ಬಂಟ್ವಾಳ : ಗುಜರಿ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಬಂಟ್ವಾಳ: ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್‌ನಲ್ಲಿ ಬೆಂಕಿ ಹತ್ತಿಕೊಂಡಿದೆ. ಗುಜರಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯ ಒಳಗಿದ್ದ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಲಾರಿಯಲ್ಲಿ ತುಂಬಿಸಿದ್ದ ಗುಜರಿ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬಂಟ್ವಾಳ : ಗುಜರಿ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ Read More »

ಬೆಳ್ತಂಗಡಿ : ಬೈಕ್‌ಗೆ ಕಾರು ಗುದ್ದಿ ಮಹಿಳೆ ಸಾವು

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ. ಬಳಂಜದ ಪ್ರಸಿದ್ಧ ಅನಿಲ್ ಫಾರ್ಮ್‌ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಸಾವೀಗೀಡಾದ ಮಹಿಳೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್‌ನ ಮಾಲಕ ಪ್ರಗತಿಪರ ಕೃಷಿಕ ಅನಿಲ್ ಭಟ್ (45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದು, ಅನಿಲ್ ಭಟ್ ಅವರು ಗಾಯಗೊಂಡಿದ್ದಾರೆ.

ಬೆಳ್ತಂಗಡಿ : ಬೈಕ್‌ಗೆ ಕಾರು ಗುದ್ದಿ ಮಹಿಳೆ ಸಾವು Read More »

ಅಪಘಾತದಲ್ಲಿ ಕೊಲ್ಲೂರಿಗೆ ಬಂದ ಭಕ್ತರಿಬ್ಬರು ಸಾವು

ಜೀಪಿಗೆ ಮೀನು ಸಾಗಿಸುವ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತ ಉಡುಪಿ: ಮೀನು ಸಾಗಾಟದ ಲಾರಿ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ಕೊಲ್ಲೂರಿನ ಕೊಡಚಾದ್ರಿಯ ದಳಿ ಎಂಬಲ್ಲಿ ನಡೆದಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಿ(35) ಮತ್ತು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆರ್ಯ ಅನೂಪ್ (28) ಮೃತಪಟ್ಟಿದ್ದಾರೆ. ಜೀಪಿನಲ್ಲಿದ್ದ ಮೂವರು ಮಕ್ಕಳು, ಸ್ಥಳೀಯ ಜೀಪ್ ಚಾಲಕ ಸೇರಿ ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಕೊಲ್ಲೂರಿಗೆ

ಅಪಘಾತದಲ್ಲಿ ಕೊಲ್ಲೂರಿಗೆ ಬಂದ ಭಕ್ತರಿಬ್ಬರು ಸಾವು Read More »

ಯುವ ಕಾಂಗ್ರೆಸ್‌ ಪದಾಧಿಕಾರಿಗಳ ದಿಢೀರ್‌ ವಜಾ

​ಕರ್ತವ್ಯ ಲೋಪದ ಕಾರಣಕ್ಕೆ ವಜಾ ಮಾಡಿದ ಹೈಕಮಾಂಡ್‌ ಬೆಂಗಳೂರು : ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು

ಯುವ ಕಾಂಗ್ರೆಸ್‌ ಪದಾಧಿಕಾರಿಗಳ ದಿಢೀರ್‌ ವಜಾ Read More »

ಔಷಧಗಳ ಬೆಲೆ ಶೇ.15ರಷ್ಟು ಹೆಚ್ಚಳ

ಯುದ್ಧದಿಂದಾಗಿ ಪೆಟ್ರೋಕೆಮಿಕಲ್ಸ್‌ ಪೂರೈಕೆಯಿಲ್ಲದೆ ಫಾರ್ಮಾ ಕಂಪನಿಗಳಿಗೆ ಸಂಕಷ್ಟ ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಹೊಡೆತ ಬಿದ್ದ ಕಾರಣ ಔಷಧಗಳ ದರ ಸರಾಸರಿ ಶೇ.15ರಷ್ಟು ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ ಮಾತ್ರೆಗಳ ಬೆಲೆ ಹೆಚ್ಚಳವಾಗಿದೆ. ಪ್ಯಾರಸಿಟಮಲ್, ಕಾರ್ಡಿಯಾಕ್ ಡ್ರಗ್ಸ್, ಡಯಾಬಿಟಿಸ್ ಡ್ರಗ್ಸ್, ಗ್ಯಾಸ್ಟ್ರಿಕ್‌ ಟ್ಯಾಬ್ಲೆಟ್, ಕಾಫ್ ಸಿರಪ್, ಐರನ್ ಟಾನಿಕ್ಸ್ ಸೇರಿ

ಔಷಧಗಳ ಬೆಲೆ ಶೇ.15ರಷ್ಟು ಹೆಚ್ಚಳ Read More »

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭೀಕರ ಬೆಂಕಿ ಅವಘಡ : ಪ್ರಯಾಣಿಕರು ಪಾರು

ತಿರುವನಂತಪುರಂನಿಂದ ದೆಹಲಿಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ನವದೆಹಲಿ: ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ರಾಜಸ್ಥಾನದ ಕೋಟಾದ ವಿಕ್ರಮ್‌ಗಢ ಅಲೋಟ್ ರೈಲು ನಿಲ್ದಾಣದ ಬಳಿ ಬಿ-1 ಕೋಚ್‌ನಲ್ಲಿ ಮುಂಜಾನೆ 5.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೋಗಿಯಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ ಅವರ ಲಗ್ಗೇಜ್‌ಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಈ ಕೋಚ್‌ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಕ್ಷಣ ಬೆಂಕಿ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭೀಕರ ಬೆಂಕಿ ಅವಘಡ : ಪ್ರಯಾಣಿಕರು ಪಾರು Read More »

ಸಿಎನ್‌ಜಿ ದರ ಮತ್ತೆ ಕೆಜಿಗೆ 1 ರೂ. ಏರಿಕೆ

ಎರಡು ದಿನಗಳ ಅಂತರದಲ್ಲಿ ಎರಡನೇ ಏರಿಕೆ ನವದೆಹಲಿ : ಆಟೋ, ಟ್ಯಾಕ್ಸಿ​ ಚಾಲಕರಿಗೆ ಕೇಂದ್ರ ಸರ್ಕಾರ ಮತ್ತೆ ಸಿಎನ್‌ಜಿ ದರ ಏರಿಕೆ ಶಾಕ್ ನೀಡಿದ್ದು, ಬೆಲೆ ಮತ್ತೆ 1 ರೂಪಾಯಿ ಏರಿಕೆಯಾಗಿದೆ. 2 ದಿನಗಳ ಹಿಂದಷ್ಟೇ ಕೆಜಿ ಸಿಎನ್‌ಜಿ ದರ 2 ರೂಪಾಯಿ ಏರಿಕೆ ಮಾಡಿತ್ತು. ಆ ಬೆನ್ನಲ್ಲೇ 48 ಗಂಟೆಗಳಲ್ಲಿ 2ನೇ ಬಾರಿಗೆ ಸಿಎನ್‌ಜಿ ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಆ ಮೂಲಕ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್​​ಜಿ ದರ 80.09 ರೂಪಾಯಿಗಳಿಗೆ ತಲುಪಿದೆ.

ಸಿಎನ್‌ಜಿ ದರ ಮತ್ತೆ ಕೆಜಿಗೆ 1 ರೂ. ಏರಿಕೆ Read More »

ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌

ಬೆಂಜನಪದವು ಕೊರಗಜ್ಜ ಸನ್ನಿಧಿಗೆ ಭೇಟಿ ಬಂಟ್ವಾಳ : ಕನ್ನಡದ ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ‌ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಸೂಪರ್‌ಸ್ಟಾರ್ ನಟರ

ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌ Read More »

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ

ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಬಳಿ

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ Read More »

error: Content is protected !!
Scroll to Top