ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ

ಇಂದು ನ್ಯಾಯಾಲಯಕ್ಕೆ ಹಾಜರು ಬೆಂಗಳೂರು: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೊ ರವಿಯನ್ನು ಕರ್ನಾಟಕ ಪೊಲೀಸರು ಗುಜರಾತ್​ನಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಣ್ಣುತಪ್ಪಿಸಿ ರವಿಯನ್ನು ಪೊಲೀಸರು ಹೊರಗೆ ಕರೆದೊಯ್ದಿದ್ದಾರೆ. ನಿಲ್ದಾಣದ ಒಂದು ದ್ವಾರದಲ್ಲಿ ಎಲ್ಲರಿಗೂ ಕಾಣಿಸುವಂತೆ, ಮತ್ತೊಂದು ದ್ವಾರದಲ್ಲಿ ಗೌಪ್ಯವಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ವಿಮಾನ ನಿಲ್ದಾಣದ ಭದ್ರತಾಪಡೆಯ ಗೇಟ್‌ನಿಂದ ಹೊರಗೆ ಕರೆದೊಯ್ಯಲಾಗಿದೆ.ರಾಯಚೂರು, ಮಂಡ್ಯ ಹಾಗೂ ಮೈಸೂರು […]

ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ Read More »

ಮಹಿಳಾ ಕ್ರಿಕೆಟರ್‌ ಶವ ಕಾಡಿನಲ್ಲಿ ಪತ್ತೆ

ಸಾವಿನ ಸುತ್ತ ಹಲವು ಅನುಮಾನ ಭುವನೇಶ್ವರ: ಒಡಿಶಾದ ಉದಯೋನ್ಮುಖ ಕ್ರಿಕೆಟ್ ಆಟಗಾರ್ತಿಯೊಬ್ಬರ ಶವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ.ಕ್ರಿಕೆಟ್ ಆಟರ್ಗಾತಿ ರಾಜಶ್ರೀ ಸ್ವೈನಿ ಅವರ ಶವ ಕಟಕ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಜ.11ರಿಂದ ರಾಜಶ್ರೀ ನಾಪತ್ತೆಯಾಗಿದ್ದರು. ರಾಜಶ್ರೀ ಅವರ ತರಬೇತಿದಾರರು ಗುರುವಾರ ಕಟಕ್‌ನ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಗುರ್ಡಿ ಜಾಟಿಯಾ ಪೊಲೀಸ್ ಠಾಣೆಯಲ್ಲಿ ರಾಜಶ್ರೀ ಅವರ ಸಾವಿನ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

ಮಹಿಳಾ ಕ್ರಿಕೆಟರ್‌ ಶವ ಕಾಡಿನಲ್ಲಿ ಪತ್ತೆ Read More »

ಮೀಸಲಾತಿ ಎಂಬ ಜೇನುಗೂಡಿಗೆ ಕಲ್ಲು ಹೊಡೆದ ಬಳಿಕ…

ರಾಜಕೀಯ ಲಾಭಕ್ಕೆ ಅಸ್ತ್ರ ; ಸಂವಿಧಾನ ಆಶಯ ಬುಡಮೇಲು ಮೀಸಲಾತಿ ಸಂವಿಧಾನಿಕವಾಗಿ ಜಾರಿಯಾಗಿರುವ ಒಂದು ವ್ಯವಸ್ಥೆ. ಇದು ಕೆಳವರ್ಗದ ಜನರನ್ನು ಸಮಾಜದ ಎಲ್ಲ ರಂಗದಲ್ಲೂ ಪಾಲ್ಗೊಳ್ಳುವಂತೆ ಮಾಡಿ ತಾರತಮ್ಯ ಹೋಗಲಾಡಿಸುವ ಉದ್ದೇಶ ಹೊಂದಿದೆ. ಇದು ಸ್ವಲ್ಪಮಟ್ಟಿಗೆ ಯಶಸ್ವಿಯೂ ಆಗಿದೆ. ಆದರೆ ಇತ್ತೀಚೆಗೆ ಸರ್ಕಾರ ಈ ಮೀಸಲಾತಿ ಎಂಬ ಜೇನುಗೂಡನ್ನು ಕೆದಕಲು ಹೋಗಿ ಇರಲಾರದೆ ಇರುವೆ ಬಿಟ್ಟುಕೊಂಡಂತೆ ಆಗಿದೆ. ಇಂದು ಸಮಾಜದ ಹಲವಾರು ಪಂಗಡಗಳು ಮೀಸಲಾತಿ ವಿರುದ್ಧ ಧ್ವನಿ ಎತ್ತಲು ಶುರುಮಾಡಿವೆ.“ಮೀಸಲಾತಿ ಕುರಿತು ವೈಜ್ಞಾನಿಕವಾದ ಸ್ಪಷ್ಟ ನೀತಿ ರೂಪಿಸದ

ಮೀಸಲಾತಿ ಎಂಬ ಜೇನುಗೂಡಿಗೆ ಕಲ್ಲು ಹೊಡೆದ ಬಳಿಕ… Read More »

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ

ಪುತ್ತೂರು: ಜಲಸಿರಿ ಯೋಜನೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕಾಮಗಾರಿ ನಿರ್ವಹಿಸಬೇಕಾದ ಜವಾಬ್ದಾರಿ ಜಲಸಿರಿ ಯೋಜನೆಯ ಅಧಿಕಾರಿಗಳಿಗಿದೆ. ಕಾಮಗಾರಿ ನಡೆಸಿದಲ್ಲಿ ಹಿಂದಿನಂತೆ ರಸ್ತೆಯ ಪುನರ್‍ ನಿರ್ಮಾಣ, ಮುಂದೆ ಕಾಮಗಾರಿ ಆಗಬೇಕಾದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾಮಗಾರಿ ನಿರ್ವಹಿಸುವಂತೆ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದರು. ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ಜ. 13ರಂದು ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಒಟ್ಟು 62 ದೂರುಗಳು ಜಲಸಿರಿ ಯೋಜನೆಯ

ಜಲಸಿರಿ ಯೋಜನೆಯ ಕಾಮಗಾರಿ | ಶಾಸಕರ ನೇತೃತ್ವದಲ್ಲಿ ಪರಿಶೀಲನಾ ಸಭೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ

ಪುತ್ತೂರು: ಹಳೆಯ ಮನೆಗಳ ಭಿತ್ತಿಗಳಲ್ಲಿ ಅನೇಕಾನೇಕ ಮಾದರಿಯೆನಿಸುವ ವ್ಯಕ್ತಿಗಳ ಫೋಟೋಗಳಿರುತ್ತಿದ್ದವು. ಆದರೆ ಹೊಸ ಮನೆಗಳನ್ನು ಕಟ್ಟಿಕೊಂಡಂತೆಲ್ಲ ಗೋಡೆಗಳು ಖಾಲಿಯಾಗುತ್ತಿವೆ. ಅತಿಯಾದ ಮೊಬೈಲ್ ಬಳಕೆಯಿಂದ ಗ್ರಂಥಾಲಯಗಳು ಖಾಲಿಯಾಗುತ್ತಿವೆ. ಪರಿಣಾಮವಾಗಿ ನಮ್ಮ ಜ್ಞಾನವೂ ಖಾಲಿಯಾಗಿ ವ್ಯಕ್ತಿತ್ವಗಳೂ ಖಾಲಿಯೆನಿಸುತ್ತಿವೆ. ಹೀಗೆ ಖಾಲಿಯಾದ ವ್ಯಕ್ತಿತ್ವಗಳನ್ನು ತುಂಬಿಕೊಳ್ಳುವುದಕ್ಕೆ ಸ್ವಾಮಿ ವಿವೇಕಾನಂದರoತಹ ವ್ಯಕ್ತಿತ್ವಗಳ ಆದರ್ಶಗಳು ಬೇಕಾಗಿವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಗುರುವಾರ ಆಯೋಜಿಸಲಾದ ಸ್ವಾಮಿ ವಿವೇಕಾನಂದ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ Read More »

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ

ಪುತ್ತೂರು: ಸ್ತ್ರೀ ಸ್ವಾತಂತ್ರ್ಯದ  ಅರಿವಿನ ಕೊರತೆ ನಮ್ಮ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳಲ್ಲಿ ಒಂದಾಗಿದೆ. ಆದ್ದರಿಂದ ಈ ಬಗೆಗಿನ ಅರಿವನ್ನು ಹೆಣ್ಣುಮಕ್ಕಳಲ್ಲಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೊಜ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿಶ್ವ ಹಿಂದೂ ಪರಿಷತ್, ದುರ್ಗಾ ವಾಹಿನಿ ಪುತ್ತೂರು ಹಾಗೂ ಅಂಬಿಕಾ ವಿದ್ಯಾಲಯದ ಸಹಯೋಗದೊಂದಿಗೆ ನಡೆದ ಸ್ತ್ರೀ ಸಬಲೀಕರಣದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸನಾತನ ಸಂಸ್ಕೃತಿಯಲ್ಲಿ,

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ Read More »

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ ಜ. 14ರಂದು ನಡೆಯಲಿದೆ. ಹಿಂದೂ ಜಾಗರಣಾ ವೇದಿಕೆ, ಕೂಡುರಸ್ತೆ ದುರ್ಗಾ ಭಜನಾ ಮಂಡಳಿ, ವಿಕ್ರಂ ಯುವಕ ಮಂಡಲ, ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ Read More »

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಬೆಳಂದೂರು ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜ. 13ರಂದು ಧನುಪೂಜೆ, ಹೋಮ ಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 5ಕ್ಕೆ ಧನುಪೂಜೆ, 6ರಿಂದ ಶ್ರೀ ಗಣಪತಿ ಹೋಮ ಅಂಕುರ ಪೂಜೆ , ಪ್ರಾಯಶ್ಚಿತ  ಹೋಮ ನಡೆಯಿತು. ನಂತರ ಬೆಳಂದೂರು ವಿಷ್ಣು ಪ್ರಿಯ ಭಜನಾ ಮಂಡಳಿ. ಕಲ್ಲಮಾಡ ಶ್ರೀ ಉಳ್ಳಾಕುಲು ಯುವಕ ಮಂಡಲದಿಂದ ಭಜನೆ ಜರಗಿತು. ಮಧ್ಯಾಹ್ನ ಹೋಮ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಮಧ್ಯಾಹ್ನ 3ರಿಂದ ಕುದ್ಮಾರು ಶ್ರೀ ಪಂಚಲಿಂಗೇಶ್ವರ

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ ನೇತೃತ್ವದಲ್ಲಿ ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್. ಕಾರ್ಯಾಲಯ ಪಂಚವಟಿ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ನಗರಸಭೆ ವ್ಯಾಪ್ತಿಯಲ್ಲಿರುವ ಪಂಚವಟಿ ಸಂಪರ್ಕಿಸುವ ರಸ್ತೆ 7 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಯಿತು.ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು.

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ Read More »

ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬದುಕು ಕಟ್ಟಿಕೊಳ್ಳಿ | ಶ್ರೀರಾಮ್ ಫೈನಾನ್ಸ್‍ ಪ್ರಾಯೋಜಕತ್ವದ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಜಗತ್ತು ಸ್ಪರ್ಧೆಯ ಮೇಲೆ ನಿಂತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಧಿ ನೀಡುವ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾಗಿ ಬೆಳೆಸುವಂತಹ ಕಾರ್ಯವನ್ನು ಶ್ರೀ ರಾಮ್ ಫೈನಾನ್ಸ್ ಮಾಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‍ನ ಪುತ್ತೂರು ಶಾಖೆ ಆಶ್ರಯದಲ್ಲಿ ಪುತ್ತೂರು ಟೌನ್ ಬ್ಯಾಂಕ್ ಹಾಲ್‍ನಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಿಧಿ ವಿತರಿಸಿ ಮಾತನಾಡಿದರು. ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಇಂದೇ ತೀರ್ಮಾನ ಮಾಡಬೇಕು. ಹಾಗಾದಾಗ ಮಾತ್ರ ಭವಿಷ್ಯವನ್ನು ಸುಭದ್ರವಾಗಿ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು

ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬದುಕು ಕಟ್ಟಿಕೊಳ್ಳಿ | ಶ್ರೀರಾಮ್ ಫೈನಾನ್ಸ್‍ ಪ್ರಾಯೋಜಕತ್ವದ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top