ದಲಿತ ಕುಟುಂಬಕ್ಕೆ ದಾರಿ ನೀಡದೆ ದೌರ್ಜನ್ಯ ಆರೋಪ | ಪುತ್ತೂರಿನಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಧರಣಿ
ಪುತ್ತೂರು: ದಲಿತ ಕುಟುಂಬಕ್ಕೆ ತೆರಳುವ ರಸ್ತೆಯನ್ನು ಬಂದ್ ಮಾಡಿದ್ದು, ತಕ್ಷಣವೇ ದಾರಿ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧ ಮುಂಬಾಗದಲ್ಲಿ ಧರಣಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪಿ. ಸುಂದರ್ ಪಾಟಾಜೆ, ಕೆಮ್ಮಿಂಜೆ ಗ್ರಾಮದ ಕುದ್ಕೋಳಿ ಎಂಬಲ್ಲಿ ನಾಲ್ಕು ದಲಿತ ಕುಟುಂಬಗಳ ಮನೆಗೆ ತೆರಳುವ ರಸ್ತೆಯನ್ನು ಖಾಸಗಿ ವ್ಯಕ್ತಿಯೋರ್ವರು ಬಂದ್ ಮಾಡಿದ್ದಾರೆ. ಅವರು ಈ ಪ್ರದೇಶದಲ್ಲಿನ ೪ ದಲಿತ […]










