ಪುತ್ತೂರು : ವಿದ್ಯುತ್‌ ತಂತಿ ಕಡಿದು ಬಿದ್ದು 900 ಅಡಿಕೆ ಗಿಡ ಬೆಂಕಿಗಾಹುತಿ

ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್‌ ತಂತಿ ಕಡಿದು ಬಿದ್ದು ಅನಾಹುತ ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಬೂಡಿಯಾರಿನಲ್ಲಿ ತೋಟದ ಮಧ್ಯೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಮುರಿದು ಬಿದ್ದ ಪರಿಣಾಮವಾಗಿ ತೋಟಕ್ಕೆ ಬೆಂಕಿ ಹತ್ತಿಕೊಂಡು 900ಕ್ಕೂ ಅಧಿಕ ಅಡಿಕೆ ಗಿಡಗಳು ಸುಟ್ಟು ಕರಕಲಾದ ಘಟನೆ ಮಂಗಳವಾರ ಸಂಭವಿಸಿದೆ. ಬೂಡಿಯಾರಿನ ಗಣೇಶ್‌ ರೈ ಎಂಬವರ ತೋಟ ಪೂರ್ತಿಯಾಗಿ ಬೆಂಕಿಗಾಹುತಿಯಾಗಿದೆ. ಒಂದು ವರ್ಷದ ಹಿಂದಷ್ಟೇ ನೆಟ್ಟ ಅಡಿಕೆ ಗಿಡಗಳು ಉತ್ತಮವಾಗಿ ಬೆಳೆದು ನಿಂತಿದ್ದವು. ಮಂಗಳವಾರ ಮಧ್ಯಾಹ್ನದ ಹೊತ್ತು ವಿದ್ಯುತ್‌ ತಂತಿ […]

ಪುತ್ತೂರು : ವಿದ್ಯುತ್‌ ತಂತಿ ಕಡಿದು ಬಿದ್ದು 900 ಅಡಿಕೆ ಗಿಡ ಬೆಂಕಿಗಾಹುತಿ Read More »

ದೆಹಲಿಯಲ್ಲಿ ಮಧ್ಯರಾತ್ರಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ : ಘರ್ಷಣೆಯಲ್ಲಿ ಐವರು ಪೊಲೀಸರಿಗೆ ಗಾಯ

ಮಸೀದಿ ಪಕ್ಕ ಅಕ್ರಮವಾಗಿ ನಿರ್ಮಿಸಿದ್ದ ಹಾಲ್‌, ಮಳಿಗೆಗಳು ನೆಲಸಮ ನವದೆಹಲಿ: ಇತ್ತೀಚೆಗಷ್ಟೇ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ನಡೆದಿದ್ದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಬೃಹತ್‌ ಬುಲ್ಡೋಜರ್‌ ಕಾರ್ಯಾಚರಣೆ ನಡೆದಿದೆ. ರಾತ್ರಿ 1 ಗಂಟೆ ಸುಮಾರಿಗೆ ದೆಹಲಿಯ ತುರ್ಕಮನ್‌ ಗೇಟ್‌ನಲ್ಲಿರುವ ಫೈಜ್-ಎ-ಇಲಾಹಿ ಮಸೀದಿ ಬಳಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದಿದೆ. ದೆಹಲಿ ಹೈಕೋರ್ಟ್‌ ಆದೇಶದಂತೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಮಸೀದಿ ಮತ್ತು ಸುತ್ತಮುತ್ತಲಿನ ಕಟ್ಟಡಗಳನ್ನ

ದೆಹಲಿಯಲ್ಲಿ ಮಧ್ಯರಾತ್ರಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ : ಘರ್ಷಣೆಯಲ್ಲಿ ಐವರು ಪೊಲೀಸರಿಗೆ ಗಾಯ Read More »

ಉಡುಪಿ ಪರ್ಯಾಯದ ಹೊರೆಕಾಣಿಕೆ ಬಗ್ಗೆ ಕಮೆಂಟ್‌ ಹಾಕಿದ ಯುವಕ ಸೆರೆ

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿದ ಪೊಲೀಸರು ಕಾರ್ಕಳ: ಈ ಬಾರಿಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಅಂಬಡೆಕಲ್ಲು

ಉಡುಪಿ ಪರ್ಯಾಯದ ಹೊರೆಕಾಣಿಕೆ ಬಗ್ಗೆ ಕಮೆಂಟ್‌ ಹಾಕಿದ ಯುವಕ ಸೆರೆ Read More »

ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರ ಹೆಸರು ಡಿಲೀಟ್‌

ಎಸ್‌ಐಆರ್‌ ವೇಳೆ 2.89 ಕೋಟಿ ಹೆಚ್ಚುವರಿ ಮತದಾರರು ಪತ್ತೆ ಲಖನೌ: ಚುನಾವಣಾ ಆಯೋಗ ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ನಂತರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 2.89 ಕೋಟಿ ಮತದಾರರ ಹೆಸರುಗಳನ್ನು ಡಿಲೀಟ್‌ ಮಾಡಿದೆ. ರಾಜ್ಯದಲ್ಲಿ ಒಟ್ಟು 2.89 ಕೋಟಿ ಮತದಾರರ ಹೆಸರಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಅವರ ಪೈಕಿ 46 ಲಕ್ಷ ಮತದಾರರು ಮೃತಪಟ್ಟಿದ್ದಾರೆ. ದೇಶದ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ಪಟ್ಟಿ ಪರಿಷ್ಕರಣೆಯು ಮೂರು ಬಾರಿ

ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರ ಹೆಸರು ಡಿಲೀಟ್‌ Read More »

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ

ಶವ ಹೂಳುವ ಸಂಪ್ರದಾಯದವರು ದಹನ ಮಾಡಿದ್ದು ಏಕೆ ಎಂದು ಶ್ರೀರಾಮುಲು ಪ್ರಶ್ನೆ ಬಳ್ಳಾರಿ: ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅಂತ್ಯ ಸಂಸ್ಕಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ರಾಜಶೇಖರ ಮೃತದೇಹ ಸುಟ್ಟು ಹಾಕಿದ್ದಾರೆ ಎಂದಿರುವ ಶ್ರೀರಾಮುಲು ಹೆಚ್ಚುವರಿ ಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ರೆಡ್ಡಿ ಸಮುದಾಯದಲ್ಲಿ ಮೃತದೇಹ ಸುಡುವುದಿಲ್ಲ ಬದಲಾಗಿ ಹೂಳುವ ಸಂಪ್ರದಾಯವಿದೆ. ಆದರೆ ರಾಜಶೇಖರ್‌ ರೆಡ್ಡಿ ಶವವನ್ನು ಸುಟ್ಟಿರುವುದು ಅನುಮಾನಕ್ಕೆಡೆ ಮಾಡಿದೆ ಎಂದು ಹೇಳಿದ್ದಾರೆ.

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ Read More »

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಾರು ಚಾಲಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು

ಬೆಳಗಾವಿ: ಸಚಿವೆ ‌ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಿಗೆ ಹಾಡು ಹಗಲೇ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಇರಿತಕ್ಕೊಳಗಾದವರನ್ನು ಬೆಳಗುಂದಿ ಗ್ರಾಮದ ಬಸವಂತ ಗಣಪತ ಕಡೋಲಕರ ಎಂದು ಗುರುತಿಸಲಾಗಿದೆ. ಅವರ ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಹಲ್ಲೆ

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಾರು ಚಾಲಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು Read More »

ಶಾಲೆಯ ಅಡುಗೆ ಸಿಬ್ಬಂದಿ ಬೆಂಕಿ ತಗುಲಿ‌ ಸಾವು

ಕಾಸರಗೋಡು: ಬಂಗ್ರ ಮಂಜೇಶ್ವರ ಸರ್ಕಾರಿ ಪ್ರೌಢಶಾಲೆಯ ಅಡುಗೆ ಕೆಲಸಗಾರ್ತಿ ಬೆಂಕಿ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಾವರ ಮಾಡ ನಿವಾಸಿ ಜಯಾ (56) ಎಂಬವರೇ ‌ಮೃತ ದುರ್ದೈವಿ. ಶಾಲೆಯಲ್ಲಿ ಮಧ್ಯಾಹ್ನದ ಆಹಾರ ತಯಾರಿಸುವ ವೇಳೆ ಸ್ಟವ್‌ನಿಂದ ಬೆಂಕಿ ತಗುಲಿದೆ. ಅವರ ಚೀರಾಟ ಕೇಳಿ ಅಧ್ಯಾಪಕರುಗಳು ಓಡಿ ಬಂದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ. ಕಳೆದ 20 ವರ್ಷಗಳಿಂದ ಅವರು ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಶಾಲೆಯ ಅಡುಗೆ ಸಿಬ್ಬಂದಿ ಬೆಂಕಿ ತಗುಲಿ‌ ಸಾವು Read More »

ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಮತ್ತು ಮೋರ್ಲ ಕುಟುಂಬ ಸ್ವರ ಸಹಯೋಗದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್ ಅವರನ್ನು ಚಂದ್ರಹಾಸ ಶೆಟ್ಟಿ ಮೋರ್ಲ ಅವರ ಸ್ವಗೃಹದಲ್ಲಿ ‌ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚಂದ್ರಹಾಸ ಶೆಟ್ಟಿ ಮೋರ್ಲ, ಜಯಶ್ರೀ ಸಿ. ಶೆಟ್ಟಿ, ರತ್ನಾಕರ ಶೆಟ್ಟಿ ಮೋರ್ಲ, ಮುರಳಿಧರ ಶೆಟ್ಟಿ ಮೋರ್ಲ, ಶೈಲಜಾ ಶೆಟ್ಟಿ, ಸೀನಿಯರ್ ಚೇಂಬ‌ರ್ ಇಂಟರ್ನ್ಯಾಷನಲ್ ಅಧ್ಯಕ್ಷೆ ಮಲ್ಲಿಕಾ ಜೆ. ರೈ ಗುಂಡ್ಯಡ್ಕ ಮೊದಲಾದವರು ಉಪಸ್ಥಿತರಿದ್ದರು.

ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ Read More »

ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನ: ಆರೋಪಿಯ ವಿರುದ್ದ ದೂರು ದಾಖಲು

ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಕಟ್ಟೆಮಜಲಿನಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಪ್ರಯತ್ನ ನಡೆಸಿದ ಆರೋಪದಲ್ಲಿ ‌ಚಂದ್ರಶೇಖರ್ ಎಂಬವರ ‌ವಿರುದ್ಧ ಉಪ್ಪಿನಂಗಡಿ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿರುವುದಾಗಿದೆ. ನೇಮೋತ್ಸವ ಒಂದಕ್ಕೆ ಹೋಗಿದ್ದ ವೇಳೆ ಬಾಲಕಿಯ ಕೈ ಹಿಡಿದು ಆರೋಪಿ ಮಾನಭಂಗ ಮಾಡಲು ಪ್ರಯತ್ನ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನ: ಆರೋಪಿಯ ವಿರುದ್ದ ದೂರು ದಾಖಲು Read More »

ಜ್ಯೂಸ್ ಸೆಂಟರ್ ಸಿಬ್ಬಂದಿ ಮೇಲೆ ಹಲ್ಲೆ, ಬೆದರಿಕೆ: ನ್ಯಾಯಾಲಯದ ಆದೇಶದನ್ವಯ ಆರೋಪಿಗಳ ಮೇಲೆ ದೂರು ದಾಖಲು

ಉಪ್ಪಿನಂಗಡಿ: ಕೆಲ ಸಮಯದ ಹಿಂದೆ ನಗರದ ಜ್ಯೂಸ್ ಸೆಂಟರ್ ಒಂದಕ್ಕೆ ನುಗ್ಗಿ ಅಲ್ಲಿನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಐವರು ಆರೋಪಿಗಳ ಮೇಲೆ ನ್ಯಾಯಾಲಯದ ಆದೇಶದ ಅನ್ವಯ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಆರೋಪಿಗಳನ್ನು ಯಾಹ್ಯಾ, ಸಿರಾಜ್, ಖಾದರ್, ತಾಹಿರಾ, ತಸ್ಮಿಯಾ ಎಂದು ಗುರುತಿಸಲಾಗಿದೆ. ದೂರುದಾರ ಪೆರಿಯಡ್ಕದ ನೌಫ್ ಅವರು ನೀಡಿರುವ ದೂರಿನಲ್ಲಿ, ತಾವು ಉಪ್ಪಿನಂಗಡಿಯ ಜ್ಯೂಸ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಗೆ ಆಗಮಿಸಿದ ತಾಹಿರ ಮತ್ತು ತಸ್ಮಿಯಾ ಪೆರಿಯಡ್ಕದಲ್ಲಿ

ಜ್ಯೂಸ್ ಸೆಂಟರ್ ಸಿಬ್ಬಂದಿ ಮೇಲೆ ಹಲ್ಲೆ, ಬೆದರಿಕೆ: ನ್ಯಾಯಾಲಯದ ಆದೇಶದನ್ವಯ ಆರೋಪಿಗಳ ಮೇಲೆ ದೂರು ದಾಖಲು Read More »

error: Content is protected !!
Scroll to Top