ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು

ನೆಲ್ಯಾಡಿ : ಕೆಲ ದಿನದ ಹಿಂದೆ ತೆಂಗಿನಮರದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿ ಗ್ರಾಮದ ತೋಟ ನಿವಾಸಿ ಧನಂಜಯ ಗೌಡ (43) ಅವರು ಮೇ 16ರಂದು ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಧನಂಜಯ ಗೌಡ ಅವರು ಮೇ.11ರಂದು ನೆರೆಮನೆಯ ಚಂದ್ರ ಬಿರುವಳಿಕೆ ಎಂಬವರ ಮನೆಗೆ ಕೃಷಿ ಕೆಲಸಕ್ಕೆ ಹೋಗಿದ್ದು ಅಲ್ಲಿ ಸಂಜೆ 6 ಗಂಟೆ ವೇಳೆಗೆ ತೆಂಗಿನ ಮರದಿಂದ ಕಾಯಿ ಕೀಳುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರನ್ನು […]

ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು Read More »

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಬೆನ್ನಲ್ಲೇ ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಹೈದರಾಬಾದ್ ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ Read More »

ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಉತ್ಸಾಹದ ಚಿಲುಮೆಗಳಾಗಿರಬೇಕು. ದೇಶವನ್ನು ಮುಂದುವರಿಸುವ ಜವಾಬ್ದಾರಿ ವಿದ್ಯಾರ್ಥಿಗಳದ್ದು. ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಹಾಗೂ ನೈತಿಕತೆ ಇರಬೇಕು. ಯಶಸ್ಸು ಒಂದು ದಿನದಲ್ಲಿ ಬರುವಂತಹದ್ದಲ್ಲ. ಹಂತ ಹಂತವಾಗಿ ತಾಳ್ಮೆಯಿಂದ ಮುನ್ನಡೆದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದರ್ಶಿ ಅತಿ ವಂ. ಆ್ಯಂಟನಿ ಮೈಕೆಲ್ ಶೆರಾ ಅಧ್ಯಕ್ಷತೆ

ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಪತ್ರಿಕಾಗೋಷ್ಠಿ ವಿಚಾರ ಮುಂದಿಟ್ಟು ಮಾಜಿ ಶಾಸಕರಿಗೆ ಜೀವಬೆದರಿಕೆ | ಬಿಜೆಪಿ ವತಿಯಿಂದ ನಾಳೆ ತುರ್ತು ಸಭೆ

ಪುತ್ತೂರು: ಪತ್ರಿಕಾಗೋಷ್ಠಿ ವಿಚಾರವನ್ನು ಮುಂದಿಟ್ಟುಕೊಂಡು ಮಾಜಿ ಶಾಸಕರ ಕುರಿತು ಅವಹೇಳನಕಾರಿಯಾಗಿ ಸಾನಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಾಗೂ ಫೋನ್ ಮೂಲಕ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲು ಮೇ 18 ರಂದು ಸಭೆ ಕರೆಯಲಾಗಿದೆ. ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿರಬೇಕೆಂದು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ಪ್ರಕಟಣೆಯಲ್ಲಿ ತಿಳಿಸಿದೆ. ಮೇ 17 ಶುಕ್ರವಾರ ಮಾಜಿ ಶಾಸಕ ಸಂಜೀವ ಮಠಂದೂರು

ಪತ್ರಿಕಾಗೋಷ್ಠಿ ವಿಚಾರ ಮುಂದಿಟ್ಟು ಮಾಜಿ ಶಾಸಕರಿಗೆ ಜೀವಬೆದರಿಕೆ | ಬಿಜೆಪಿ ವತಿಯಿಂದ ನಾಳೆ ತುರ್ತು ಸಭೆ Read More »

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಕಾವು ಶ್ರೀ ವಿಶ್ವಕರ್ಮ ಪೂಜಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಪೂಜೆ ಮೇ 19 ಭಾನುವಾರ ಬೆಳಿಗ್ಗೆ 8.30 ರಿಂದ ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ರಿಂದ ಭಜನೆ, 9.30 ರಿಂದ ಶ್ರೀ ವಿಶ್ವಕರ್ಮ ಪೂಜೆ ಆರಂಭಗೊಳ್ಳಲಿದೆ. ಬೆಳಿಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲದ ಅಧ್ಯಕ್ಷ ವಿ.ಪುರುಷೋತ್ತಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪಡುಕುತ್ಯಾರು ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವೇ|

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ 1 ರಿಂದ ನಾಪತ್ತೆಯಾಗಿರುವ ಹೋರಿಗಳ ಪತ್ತೆಗಾಗಿ ಬಜರಂಗ ದಳದವರು ದೈವದ ಮೊರೆ ಹೋಗಿದ್ದಾರೆ. ದೇವಸ್ಥಾನದ ವಠಾರದಲ್ಲೇ ಸುತ್ತುತ್ತಿದ್ದ ಎರಡು ಹೋರಿಗಳು ಕಳ್ಳತನವಾಗಿರುವ ಶಂಕೆ ವ್ಯಕ್ತಪಡಿಸಿರುವ ಬಜರಂಗದಳ ಪುತ್ತೂರು ಘಟಕ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಹೋರಿ ಅಡ್ಯನಡ್ಕ ಸಮೀಪವಿರುವ ಸಾಧ್ಯತೆ ಕಂಡು ಬಂದಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಹೋರಿ ಬದುಕಿರುವ ಬಗ್ಗೆ ಮಾಹಿತಿ ದೊರಕಿದೆ. ಹೋರಿಯನ್ನು ಮಾಂಸಕ್ಕಾಗಿ ಕೊಂಡು ಹೋಗಿರುವ ಸಾಧ್ಯತೆ ಎಂದು ಪ್ರಶ್ನಾಚಿಂತನೆಯಲ್ಲಿ ಸೂಚನೆ ದೊರಕಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ Read More »

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯು ವಿಧಾನಸೌಧದಲ್ಲಿ ನಡೆದಿದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ 20 ಗ್ರೇಸ್‌ ಮಾರ್ಕ್‌ ನೀಡಿದ್ದರ ಕುರಿತು, ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್‌ ಮಾರ್ಕ್‌ ನೀಡಲಾಗಿದ. ಈ ಕುರಿತು ತರಾಟೆ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ಈ ಸಂದರ್ಭದಲ್ಲಿ ಕೋವಿಡ್‌ ಸಂದರ್ಭದಲ್ಲಿ 5-10 ಗ್ರೇಸ್‌ ಮಾರ್ಕ್ಸ್‌ ನೀಡಿದ್ದಾಗಿಯೂ, ಈಗ ಅದನ್ನು ಹೆಚ್ಚಳ

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ Read More »

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ. ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮಟ್ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ Read More »

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ ‘ವಿವೇಕ ಚೇತನ-2024’

ಪುತ್ತೂರು: ಇಂದು ಇಡೀ ವಿಶ್ವದಲ್ಲಿಯೇ  ಭಾರತ ಅದ್ಭುತ ಸ್ಥಾನಕ್ಕೆ ಏರುತಿದೆ. ಹೀಗಿರುವಾಗ ಮಾಧ್ಯಮಗಳಿಗೆ ದೇಶದಲ್ಲಿ ಕಂಡುಬರುವ ಎಲ್ಲಾ ಒಳ್ಳೆಯ ವಿಚಾರಗಳನ್ನು ಜಗತ್ತಿಗೆ ಪರಿಚಯಿಸಿ ರಾಷ್ಟ್ರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಇದೆ. ಪತ್ರಕರ್ತರು ಯಾರ ಪರವಾಗಿಯೂ ನಿಲ್ಲದೆ, ಸತ್ಯದ ಪರ, ರಾಷ್ಟ್ರದ ಪರ ನಿಲ್ಲಬೇಕು. ಸಮಾಜದಲ್ಲಿ ಕಂಡುಬರುವ ಒಳ್ಳೆತನವನ್ನು ಗಮನಿಸಿ ಅವುಗಳನ್ನು ಗುರುತಿಸುವ ಜವಾಬ್ದಾರಿ ಪತ್ರಕರ್ತರಿಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ ‘ವಿವೇಕ ಚೇತನ-2024’ Read More »

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರ, ಮಹಿಳೆಯರ ಕಗ್ಗೊಲೆ, ಹಿಂದೂಗಳ ದಮನ ನೀತಿ ರಾಜ್ಯ ಸರಕಾರದ ಒಂದು ವರ್ಷದ ಸಾಧನೆಯಾಗಿದ್ದು, ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಒಂದು ವರ್ಷದಲ್ಲಿ ಒಂದೇ ಒಂದು ಶೌಚಾಲಯ ಕಟ್ಟಲು, ಅಂಗಡಿವಾಡಿಗಳಿಗೆ ಅನುದಾನ ಬಿಡಿ ದುರಸ್ತಿ ಕಾರ್ಯವನ್ನೂ ಮಾಡಲು ಆಗದ ಸರಕಾರಕ್ಕೆ ಇಚ್ಛಾಶಕ್ತಿಯ ಕೊರೆತ ಎದ್ದು ಕಾಣುತ್ತಿದೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

error: Content is protected !!
Scroll to Top