ಋತುಚಕ್ರ ರಜೆ ಆದೇಶ : ಹೈಕೋರ್ಟಿನಲ್ಲಿ ಸರ್ಕಾರ ಸಮರ್ಥನೆ

ಮಹಿಳಾ ನೌಕರರ ಆರೋಗ್ಯ ದೃಷ್ಟಿಯಿಂದ ಆದೇಶ ಎಂದು ವಾದ ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರದ ರಜೆ ನೀಡುವ ನೀತಿಯನ್ನು ಸರ್ಕಾಸರ ಹೈಕೋರ್ಟ್‌ನಲ್ಲಿ ಬಲಕವಾಗಿ ಸಮರ್ಥಿಸಿಕೊಂಡಿದ್ದು, ಸಂವಿಧಾನದ 162ನೇ ವಿಧಿಯ ಅಡಿಯಲ್ಲಿ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಲು ರಾಜ್ಯಕ್ಕೆ ಅಧಿಕಾರ ನೀಡುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಬುಧವಾರ ಉಲ್ಲೇಖಿಸಿದೆ. 18ರಿಂದ 52 ವರ್ಷದೊಳಗಿನ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಮುಟ್ಟಿನ ರಜೆ ನೀಡುವ ಅಧಿಸೂಚನೆಯನ್ನು ಸರ್ಕಾರ ನವೆಂಬರ್ 20 ರಂದು ಹೊರಡಿಸಿತ್ತು. ಈ ಅಧಿಸೂಚನೆಯನ್ನು ಪ್ರಶ್ನಿಸಿ […]

ಋತುಚಕ್ರ ರಜೆ ಆದೇಶ : ಹೈಕೋರ್ಟಿನಲ್ಲಿ ಸರ್ಕಾರ ಸಮರ್ಥನೆ Read More »

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ : ಇಬ್ಬರು ಮಾಲೀಕರ ಬಂಧನ

ದುರಂತ ಸಂಭವಿಸಿದ ದಿನವೇ ಥೈಲ್ಯಾಂಡ್‌ಗೆ ಪರಾರಿಯಾಗಿದ್ದ ಮಾಲೀಕರು ಪಣಜಿ : ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡಕ್ಕೆ 25 ಮಂದಿ ಬಲಿಯಾದ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ಮಾಲೀಕರನ್ನು ಪೊಲೀಸರು ಬಂದಿಸಿದ್ದಾರೆ. ದುರಂತ ಸಂಭವಿಸುತ್ತಿದ್ದಂತೆ ಇಬ್ಬರು ಮಾಲೀಕರು ಥೈಲ್ಯಾಂಡ್‌ಗೆ ಪರಾರಿಯಾಗಿದ್ದರು. ಮಾಲೀಕರನ್ನು ಬಂಧಿಸಲಾಗಿದೆ. ಈ ಘಟನೆಯನ್ನು ಗೋವಾದ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ : ಇಬ್ಬರು ಮಾಲೀಕರ ಬಂಧನ Read More »

ಧರ್ಮಸ್ಥಳ ಷಡ್ಯಂತ್ರದ ಹಿಂದೆ ಅರ್ಬನ್‌ ನಕ್ಸಲರ ಕೈವಾಡ : ಬಿಜೆಪಿ ಆರೋಪ

ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲು ಒತ್ತಾಯ ಬೆಳಗಾವಿ : ಧರ್ಮಸ್ಥಳ ಪ್ರಕರಣ ಹಿಂದೆ ಷಡ್ಯಂತ್ರವಿದೆ ಎಂದು ನಾವು ಮೊದಲೇ ಹೇಳಿದ್ದೆವು. ಅದು ಈಗ ನಿಜವಾಗಿದ್ದು, ಸತ್ಯಕ್ಕೆ ಜಯವಾಗಿದೆ. ಈ ಬುರುಡೆ ಗ್ಯಾಂಗ್ ಹಿಂದೆ ಯಾರಿದ್ದಾರೆ ಎಂಬುದು ಹೊರಬರಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಧರ್ಮಸ್ಥಳ ವಿಚಾರದಲ್ಲಿ ಅರ್ಬನ್ ನಕ್ಸಲ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಆರು ಜನ ಸೇರಿ ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ

ಧರ್ಮಸ್ಥಳ ಷಡ್ಯಂತ್ರದ ಹಿಂದೆ ಅರ್ಬನ್‌ ನಕ್ಸಲರ ಕೈವಾಡ : ಬಿಜೆಪಿ ಆರೋಪ Read More »

ದ್ವೇಷ ಭಾಷಣ ಪ್ರಕರಣ : ಡಾ.ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿದ ನ್ಯಾಯಾಲಯ

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ ಭಾಷಣ ಮಾಡಿದ ಆರೋಪ ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಪ್ರಕರಣದಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಡಾ.ಪ್ರಭಾಕರ ಭಟ್‌ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ಉಪ್ಪಳಿಗೆಯಲ್ಲಿ

ದ್ವೇಷ ಭಾಷಣ ಪ್ರಕರಣ : ಡಾ.ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿದ ನ್ಯಾಯಾಲಯ Read More »

ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ

ಒಂದೇ ಕುಟುಂಬದ ನಾಲ್ವರನ್ನು ಸಾಯಿಸಿದ್ದ ಪಾತಕಿ ಮಡಿಕೇರಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ. ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಗಲ್ಲು ಶಿಕ್ಷೆ ವಿಧಿಸಿದ ಮೊದಲ ತೀರ್ಪು ಇದು ಎನ್ನಲಾಗಿದೆ. ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. 2024ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ

ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ Read More »

ಚಂಡೀಗಢದಲ್ಲಿ ಇಂದು ಭಾರತ-ದಕ್ಷಿಣ ಅಫ್ರಿಕಾ ಎರಡನೇ ಟಿ20 ಪಂದ್ಯ

ಮೊದಲ ಪಂದ್ಯದ ಅಮೋಘ ಗೆಲುವಿನ ಆತ್ಮವಿಶ್ವಾಸದಲ್ಲಿರುವ ಟೀಮ್‌ ಇಂಡಿಯಾ ಚಂಡೀಗಢ : ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದಿರುವ ಭಾರತ ಇಂದು ಚಂಡೀಗಢದಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಹೀನಾಯವಾಗಿ ಸೋಲಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 101 ರನ್‌ಗಳ ಅಮೋಘ ಗೆಲುವಿನ ಜೊತೆಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ಈ ಪಂದ್ಯದಲ್ಲಿ ಭಾರತ ತನ್ನದಾಗಿಸಿಕೊಂಡಿದೆ. ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ

ಚಂಡೀಗಢದಲ್ಲಿ ಇಂದು ಭಾರತ-ದಕ್ಷಿಣ ಅಫ್ರಿಕಾ ಎರಡನೇ ಟಿ20 ಪಂದ್ಯ Read More »

ದೇವಸ್ಥಾನದ ಎದುರು ದಫ್‌ ಪ್ರದರ್ಶನಕ್ಕೆ ವಿರೋಧ

ಹಿಂದೂ ಸಂಘಟನೆಗಳ ಆಕ್ರೋಶದ ಬಳಿಕ ಕಾರ್ಯಕ್ರಮ ಕೈಬಿಟ್ಟ ಆಯೋಜಕರು ಸುಳ್ಯ: ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರಿ ವಿರೋಧ ವ್ಯಕ್ತವಾದ ಬಳಿಕ ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಆಯೋಜಕರು ದಫ್ ಪ್ರದರ್ಶನವನ್ನು ಕೈಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಇವರ

ದೇವಸ್ಥಾನದ ಎದುರು ದಫ್‌ ಪ್ರದರ್ಶನಕ್ಕೆ ವಿರೋಧ Read More »

ದೀಪಾವಳಿಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ: ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬವನ್ನು ಸೇರ್ಪಡೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ದೀಪಾವಳಿ ನಮ್ಮ ಸಂಸ್ಕೃತಿ ಮತ್ತು ನೀತಿಯ ಜೊತೆಗೆ ನಿಕಟ ಸಂಪರ್ಕ ಹೊಂದಿದೆ. ಇದು ನಾಗರೀಕತೆಯ ಆತ್ಮವಾಗಿದೆ. ಸದಾಚಾರ ಮತ್ತು ಜ್ಞಾನೋದಯವನ್ನು ಬಿಂಬಿಸುತ್ತದೆ. ಈ ವಿಚಾರ ಭಾರತ ಮತ್ತು ವಿಶ್ವದ ಜನರನ್ನು ರೋಮಾಂಚನಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಯುನೆಸ್ಕೋ ಪಟ್ಟಿಗೆ ಸೇರಿರುವ ಕಾರಣ

ದೀಪಾವಳಿಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ Read More »

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ

ಸುಳ್ಯ: ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ತೀರ್ಪುಗಾರರ ಮೌಲ್ಯಮಾಪನದ ಆಧಾರದ ಮೇಲೆ ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಧಾನಕರ ಬಹುಮಾನದೊಂದಿಗೆ ವಿಜೇತ ತಂಡಗಳನ್ನು ಆಯ್ಕೆಮಾಡಲಾಯಿತು.

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.) ಸುಳ್ಯ: ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ Read More »

4 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸ. ಸಂಘ (ನಿ.) ಕಾಣಿಯೂರು ಶಾಖೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ (ನಿ.) ದ ಕಾಣಿಯೂರು ಶಾಖೆಯು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಡಿ. 12 ರಂದು ರಂದು ಸಂಸ್ಥೆಯಲ್ಲಿ ಗಣ ಹೋಮ ಮತ್ತು ಲಕ್ಷ್ಮೀ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸದಸ್ಯರು ಮತ್ತು ಗ್ರಾಹಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಸ್ಥೆಗೆ ಮತ್ತಷ್ಟು ಬೆಂಬಲ ಸೂಚಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

4 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸ. ಸಂಘ (ನಿ.) ಕಾಣಿಯೂರು ಶಾಖೆ Read More »

error: Content is protected !!
Scroll to Top