ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ

ಪುತ್ತೂರು: ನಗರದ ಪಡೀಲ್‌ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿ.ಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಜಿಂದಗಿ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೆ, ಮನೆಗೂ […]

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ Read More »

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ

ಫ್ರಾಂಚೈಸಿ ಕೊಡುವ ನೆಪದಲ್ಲಿ ಉದ್ಯಮಿಗೆ ವಂಚಿದ್ದ ಚೋರರು ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000 ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಪಾಟ್ನಾ ಜಿಲ್ಲೆಯ ದೇವ್ ಹರ್ಷ(20) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(29) ಬಂಧಿತ ಆರೋಪಿಗಳು. ಇವರಿಂದ 97 ಸಾವಿರ ರೂ. ಮೌಲ್ಯದ 10 ಮೊಬೈಲ್ ಫೋನ್, 68,000 ರೂ. ಮೌಲ್ಯದ

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ Read More »

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ

ಬಂಟ್ವಾಳ : ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಇಡ್ಕಿದು ನಿವಾಸಿ ಉಮೇಶ (38), ಅನಂತಾಡಿ ನಿವಾಸಿ ಅಣ್ಣು (38), ವೀರಕಂಭ ನಿವಾಸಿ ಉಮೇಶ್ (30) ಎಂಬವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಅಕ್ರಮವಾಗಿ ಕೋಳಿಅಂಕದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಬಿ.ಎಸ್ ನಾಯಕ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ Read More »

ದೈವದ ಅಣಕ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ದೈವಾರಾಧಕರ ಆಕ್ರೋಶ

ಹೊಗಳುವ ಭರದಲ್ಲಿ ಅಣಕಿಸಿ ವಿವಾದ ಮೈಮೇಲೆ ಎಳೆದುಕೊಂಡ ನಟ ಮಂಗಳೂರು: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ – ಚಾಪ್ಟರ್‌ 1 ಸಿನೆಮಾವನ್ನು ಹೊಗಳುವ ಭರದಲ್ಲಿ ದೈವವನ್ನು ದೆವ್ವ ಎಂದು ಕರೆದಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಕರಾವಳಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಕೆಲವರು ಇದಕ್ಕೆಲ್ಲ ಅವಕಾಶ ಮಾಡಿಕೊಟ್ಟದ್ದು ರಿಷಬ್‌ ಶೆಟ್ಟಿ ಎಂದು ದೂಷಿಸುತ್ತಿದ್ದಾರೆ. ವೇದಿಕೆಯಲ್ಲಿ ದೈವಗಳನ್ನು ವಿಕೃತವಾಗಿ ಅನುಕರಣೆ ಮಾಡಿದ ನಟ ರಣ್‍ವೀರ್ ಸಿಂಗ್ ವಿರುದ್ಧ ದೈವಾರಾಧಕರು

ದೈವದ ಅಣಕ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ದೈವಾರಾಧಕರ ಆಕ್ರೋಶ Read More »

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್‌ ಬಿರುಗಾಳಿ ಎಬ್ಬಿಸುವ ನಿರೀಕ್ಷೆ

10 ಮಸೂದೆ ಮಂಡನೆಗೆ ಸರ್ಕಾರ ಸಜ್ಜು; ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮತದಾರರ ಪಟ್ಟಿಗೆ ವಿಶೇಷ ತಿದ್ದುಪಡಿಗಳನ್ನು ಸೂಚಿಸುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ಸರ್ಕಾರವನ್ನು ಸಿಲುಕಿಸಲು ವಿರೋಧ ಪಕ್ಷಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಎಸ್​ಐಆರ್ ಕುರಿತು ಚರ್ಚಿಸದಿದ್ದರೆ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿರೋಧ ಪಕ್ಷಗಳು ಹೇಳಿವೆ. ಈ ವಿಷಯದ ಬಗ್ಗೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ವರ್ತಿಸುತ್ತಿರುವಂತೆ ಮೇಲ್ನೋಟಕ್ಕೆ

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್‌ ಬಿರುಗಾಳಿ ಎಬ್ಬಿಸುವ ನಿರೀಕ್ಷೆ Read More »

ಕೊಹ್ಲಿ ದಾಖಲೆಯ ಶತಕದಿಂದ ಭಾರತಕ್ಕೆ ಕೊನೆಯ ಓವರ್‌ನಲ್ಲಿ ದಕ್ಕಿದ ಗೆಲುವು

ಕೊನೆಯ ಓವರ್‌ ತನಕ ತುದಿಗಾಲಲ್ಲಿ ನಿಲ್ಲಿಸಿದ ರಾಂಚಿ ಏಕದಿನ ರಾಂಚಿ: ವಿರಾಟ್‌ ಕೊಹ್ಲಿ ಶತಕ, ರೋಹಿತ್‌ ಮತ್ತು ನಾಯಕ ಕೆಎಲ್‌ ರಾಹುಲ್‌ ಅವರ ಅರ್ಧಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಭಾರತ 17 ರನ್‌ಗಳಿಂದ ಗೆದ್ದಿದೆ. ಈ ಮೂಲಕ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹಿರಿಯರಾದ ಕೊಹ್ಲಿ ಮತ್ತು ರೋಹಿತ್‌ ಶರ್ಮ ಅವರ ಬಿರುಸಿನ ಆಟ ಈ ಪಂದ್ಯದ ಹೈಲೈಟ್‌ ಆಗಿತ್ತು. ಇಬ್ಬರೂ ಈ ಮೂಲಕ ತಮ್ಮ ಟೀಕಾಕಾರರಿಗೆ

ಕೊಹ್ಲಿ ದಾಖಲೆಯ ಶತಕದಿಂದ ಭಾರತಕ್ಕೆ ಕೊನೆಯ ಓವರ್‌ನಲ್ಲಿ ದಕ್ಕಿದ ಗೆಲುವು Read More »

ಮೈಸೂರಿನಲ್ಲಿ ಮಿಂಚಿದ ಪುತ್ತೂರಿನ ಬಾಲಪ್ರತಿಭೆ – ಸೋನಿಕಾ ಜನಾರ್ದನ್

ಮೈಸೂರು: ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಮೈಸೂರು ವಕೀಲರ ಸಂಘ(ರಿ )ದ ವತಿಯಿಂದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಕನ್ನಡ ಗೀತೆಯನ್ನು ಹಾಡುವುದರ ಮೂಲಕ ನೆರೆದವರ ವಿಶೇಷ ಮೆಚ್ಚುಗೆಗೆ ಪಾತ್ರಳಾದಳು. ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಉಷಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರ್ ನಾಥ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಲೋಕೇಶ್, ಹಿರಿಯ ಸಮಿತಿ ಸದಸ್ಯ

ಮೈಸೂರಿನಲ್ಲಿ ಮಿಂಚಿದ ಪುತ್ತೂರಿನ ಬಾಲಪ್ರತಿಭೆ – ಸೋನಿಕಾ ಜನಾರ್ದನ್ Read More »

ಜಮೀರ್‌ ಸೋಷಿಯಲ್‌ ಮೀಡಿಯಾ ಖಾತೆ ಸೌದಿಯಿಂದ ನಿರ್ವಹಣೆ : ಕುಟುಕಿದ ಬಿಜೆಪಿ

ಸಚಿವಾಲಯವನ್ನು ನಿಯಂತ್ರಿಸುವುದು ಟರ್ಕಿಯೋ, ಪ್ಯಾಲೇಸ್ತೀನೋ? ಎಂದು ಪ್ರಶ್ನೆ ಬೆಂಗಳೂರು: ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರ ಸೋಷಿಯಲ್‌ ಮೀಡಿಯಾ ಖಾತೆಗಳ ಮೂಲ ವಿದೇಶಗಳಲ್ಲಿರುವುದು ಬಹಿರಂಗವಾದ ಬೆನ್ನಿಗೆ ಇದೀಗ ರಾಜ್ಯದ ಪ್ರಭಾವಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕೂಡ ಇದೇ ಆರೋಪಕ್ಕೆ ಸಿಲುಕಿದ್ದಾರೆ. ಜಮೀರ್‌ ಅಹ್ಮದ್‌ ಖಾನ್‌ ಅವರ ಸೋಷಿಯಲ್‌ ಮೀಡಿಯಾ ಖಾತೆಗಳು ಸೌದಿಯಿಂದ ನಿರ್ವಹಣೆಯಾಗುತ್ತಿರುವುದು ಈಗ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಜಮೀರ್‌ ಅವರನ್ನು ಕುಟುಕಿರುವ ಬಿಜೆಪಿ ಸೋಷಿಯಲ್‌ ಮೀಡಿಯಾ ಖಾತೆ ವಿದೇಶದಿಂದ ನಿರ್ವಹಣೆಯಾಗುತ್ತಿರುವದು ಲೋಕಸತ್ಯ, ಜಮೀರ್‌ ನಿರ್ವಹಿಸುವ ಸಚಿವಾಲಯವನ್ನು

ಜಮೀರ್‌ ಸೋಷಿಯಲ್‌ ಮೀಡಿಯಾ ಖಾತೆ ಸೌದಿಯಿಂದ ನಿರ್ವಹಣೆ : ಕುಟುಕಿದ ಬಿಜೆಪಿ Read More »

ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ದ. ಕ. ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ

ಪುತ್ತೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಡಯಟ್ ಮಂಗಳೂರು ಮತ್ತು ಪುತ್ತೂರು ಕೊಂಬೆಟ್ಟಿನ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ದ.ಕ. ಜಿಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ವಿಜ್ಞಾನ ಮಾದರಿ ಜರಗಿತು. ವಿದ್ಯಾರ್ಥಿಗಳ ವೈಯಕ್ತಿಕ ಮತ್ತು ಗುಂಪು ವಿಭಾಗದಲ್ಲಿ ತಲಾ 14 ಮಾದರಿಗಳ ಮತ್ತು ಶಿಕ್ಷಕರ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಫಲಿತಾಂಶದ ವಿವರ: ವೈಯಕ್ತಿಕ ವಿಭಾಗದಲ್ಲಿ ಮಂಗಳೂರು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆಯ ಸೋನಲ್ ಶನಾ ಅಂಚನ್ (ಪ್ರಥಮ), ಮೂಡಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ

ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ದ. ಕ. ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ Read More »

ಧ.ಗ್ರಾ.ಯೋ. ಪೆರ್ನೆ ವಲಯದ ಕರ್ವೇಲು ಕಾರ್ಯಕ್ಷೇತ್ರದ ಒಕ್ಕೂಟೋತ್ಸವ

ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ) ವಿಟ್ಲ ತಾಲೂಕು ಪೆರ್ನೆ ವಲಯದ ಕರ್ವೇಲು ಕಾರ್ಯಕ್ಷೇತ್ರದ ಒಕ್ಕೂಟೋತ್ಸವ ಕಾರ್ಯಕ್ರಮ ಶ್ರೀ ರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಮಹೇಶ್ ಪಡಿವಾಳ್ ಒಕ್ಕೂಟದ ಅಧ್ಯಕ್ಷರು ವಹಿಸಿದ್ದರು. ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಕಿ ವಂದನಾ ರೈ ಮುದಲಾಜೆ ನೆರವೇರಿಸಿದರು. ಮುಖ್ಯ ಅತಿಥಿ ಧನ್ಯಕುಮಾರ್ ರೈ ಬಿಳಿಯೂರು ಗುತ್ತು ಭಾಗವಹಿಸಿ ಗ್ರಾಮದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದಿಂದಾದ ಬದಲಾವಣೆಗಳನ್ನು ನೆನಪಿಸಿ ಇತಿಹಾಸವನ್ನು ಎಂದಿಗೂ ಮರೆಯದೇ ಇನ್ನು ಮುಂದೆಯೂ ಕ್ಷೇತ್ರದ ಕಾರ್ಯಕ್ರಮಗಳನ್ನು ಅನುಷ್ಠಾನಿಸಿ ಬೆಳೆಸಿಕೊಂಡು ಹೋಗಬೇಕೆಂದು

ಧ.ಗ್ರಾ.ಯೋ. ಪೆರ್ನೆ ವಲಯದ ಕರ್ವೇಲು ಕಾರ್ಯಕ್ಷೇತ್ರದ ಒಕ್ಕೂಟೋತ್ಸವ Read More »

error: Content is protected !!
Scroll to Top