ಲೆ| ಜ| ಎನ್‌.ಎಸ್‌.ಸುಬ್ರಮಣಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ

ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದರೊಂದಿಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನ ನೇಮಕ ಮಾಡಿದೆ. ಮೇ 30ರಂದು ಸಿಡಿಎಸ್‌ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ಜನರಲ್‌ ಅನಿಲ್‌ ಚೌಹಾಣ್‌ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ […]

ಲೆ| ಜ| ಎನ್‌.ಎಸ್‌.ಸುಬ್ರಮಣಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ Read More »

ತಮಿಳುನಾಡಲ್ಲಿ ಬಹುಮತದ ಕಣ್ಣಾಮುಚ್ಚಾಲೆ : ರಾತ್ರಿಯಿಡೀ ಬಿರುಸಿನ ರಾಜಕೀಯ ಚಟುವಟಿಕೆ

ಸರಳ ಬಹುಮತದ ಸ್ಥಾನಗಳನ್ನು ಒಗ್ಗೂಡಿಸುವಲ್ಲಿ ವಿಜಯ್‌ ವಿಫಲ ಚೆನ್ನೈ: ತಮಿಳುನಾಡಿನಲ್ಲಿ ಬಹುಮತದ ಕಣ್ಣಾಮುಚ್ಚಾಲೆ ಮುಂದುವರಿದಿದ್ದು, ತಡರಾತ್ರಿ ಸಂಭವಿಸಿದ ಬೆಳವಣಿಗೆಯಿಂದಾಗಿ ವಿಜಯ್‌ ನೇತೃತ್ವದ ಟಿವಿಕೆ ಇಂದು ಅಧಿಕಾರ ಗ್ರಹಣ ಮಾಡುವುದು ಅನುಮಾನ ಎನ್ನಲಾಗುತ್ತಿದೆ. ಬಹುಮತದ ಕೊರತೆ ಎದುರಿಸುತ್ತಿರುವ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ನಿನ್ನೆ ಹೇಳಲಾಗಿತ್ತು. ಆದರೆ ಇಷ್ಟರ ತನಕ ರಾಜ್ಯಪಾಲರು ಅವರಿಗೆ ಆಹ್ವಾನ ನೀಡಿಲ್ಲ. ಈ ನಡುವೆ ನಿನ್ನೆ ರಾತ್ರಿಯಿಡೀ ತಮಿಳುನಾಡು ರಾಜಕೀಯದಲ್ಲಿ ನಾನಾ ರೀತಿಯ ಬೆಳವಣೆಗೆಗಳು ನಡೆದಿವೆ. ದಳಪತಿ

ತಮಿಳುನಾಡಲ್ಲಿ ಬಹುಮತದ ಕಣ್ಣಾಮುಚ್ಚಾಲೆ : ರಾತ್ರಿಯಿಡೀ ಬಿರುಸಿನ ರಾಜಕೀಯ ಚಟುವಟಿಕೆ Read More »

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಸುಟ್ಟ ಗಾಯ

ತಡರಾತ್ರಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹತ್ತಿಕೊಂಡ ಬೆಂಕಿ ಬೆಂಗಳೂರು: ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಹೋಟೆಲ್‌ಗೆ ಬೆಂಕಿ ತಗುಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತ ಸಿಬ್ಬಂದಿಯನ್ನು ರಾಜ್‌ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ತಡರಾತ್ರಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್‌ನ ಮೇಲಿನ ಫ್ಲೋರ್‌ನಲ್ಲಿ ವಾಸವಿದ್ದರು. ಬೆಂಕಿಯ ಕೆನ್ನಾಲಿಗೆ ಮೇಲಿನ ಮಹಡಿಗೂ ಹಬ್ಬಿದ್ದು, ತಕ್ಷಣ ಅಲ್ಲಿದ್ದ

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಸುಟ್ಟ ಗಾಯ Read More »

ಪ್ರಾಣಕ್ಕೆ ಎರವಾದ ರಜೆಯ ಮೋಜು : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಯನಿಯರ ಸಾವು

ಮಂಗಳೂರು: ರಜೆಯ ಮೋಜು ಇಬ್ಬರು ವಿದ್ಯಾರ್ಥಿನಿಯರ ಪ್ರಾಣಕ್ಕೆ ಎರವಾದ ಘಟನೆ ಕಡಬದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ಎಂಬ ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ನಾಲ್ವರು ವಿದ್ಯಾರ್ಥಿನಿಯರು ಶಾಲೆ-ಕಾಲೇಜಿಗೆ ರಜೆ ಇರುವ ಕಾರಣ ಸಂಜೆ ಹೊತ್ತು ಈಜಾಡಲು ನದಿಗಿಳಿದಿದ್ದರು. ಈ ಪೈಕಿ ಸುನೀತಾ

ಪ್ರಾಣಕ್ಕೆ ಎರವಾದ ರಜೆಯ ಮೋಜು : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಯನಿಯರ ಸಾವು Read More »

ಶೃಂಗೇರಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಡಿ ರಾಜೇಗೌಡ

ಮುಗಿಯದ ಅಂಚೆ ಮತಗಳ ಮರು ಎಣಿಕೆ ತಕರಾರು ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್‌ನ ಟಿ.ಡಿ ರಾಜೇಗೌಡ ಸುಪ್ರೀಂ ಕೋರ್ಟ್​ ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಕಾನೂನು ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ವೇಳೆ ಜೀವರಾಜ್ ಗೆಲುವು ಸಾಧಿಸಿದ್ದಾರೆ.

ಶೃಂಗೇರಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಡಿ ರಾಜೇಗೌಡ Read More »

ಇಂದಿನಿಂದ ತಮಿಳುನಾಡಿನಲ್ಲಿ ವಿಜಯಪಥ

ಕೊನೆಗೂ ಬಹುಮತ ಒಗ್ಗೂಡಿಸುಲ್ಲಿ ಯಶಸ್ವಿಯಾದ ವಿಜಯ್‌ ಚೆನ್ನೈ : ತಮಿಳುನಾಡಿನಲ್ಲಿ ಇಂದಿನಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ಶನಿವಾರ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ

ಇಂದಿನಿಂದ ತಮಿಳುನಾಡಿನಲ್ಲಿ ವಿಜಯಪಥ Read More »

ಪಶ್ಚಿಮ ಬಂಗಾಳದ ಅಧಿಕಾರ ಸುವೇಂದು ಅಧಿಕಾರಿಗೆ : ಇಂದು ಪ್ರಮಾಣ ವಚನ ಸ್ವೀಕಾರ

ದೇಶದ ರಾಜಕೀಯ ಇತಿಹಾಸದಲ್ಲಿ ಬಿಜೆಪಿಯ ಮೈಲುಗಲ್ಲಾಗುವ ಸಾಧನೆಗೆ ಕ್ಷಣಗಣನೆ ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ ಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುತ್ತಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಂದಿಗ್ರಾಮದ ಹೋರಾಟದಿಂದ ಹಿಡಿದು ವಿಧಾನಸಭೆಯ ಅಂಗಳದವರೆಗೆ ಸುವೇಂದು ಅಧಿಕಾರಿ ನಡೆದು ಬಂದ ಹಾದಿ ಅತ್ಯಂತ ರೋಚಕವಾಗಿದೆ.

ಪಶ್ಚಿಮ ಬಂಗಾಳದ ಅಧಿಕಾರ ಸುವೇಂದು ಅಧಿಕಾರಿಗೆ : ಇಂದು ಪ್ರಮಾಣ ವಚನ ಸ್ವೀಕಾರ Read More »

ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು

ಕಡಬ: ಸುಬ್ರಹ್ಮಣ್ಯ ಗ್ರಾಮದ ಲಾಡ್ಜ್‌ ಒಂದರ ಎದುರು ರಸ್ತೆಯಲ್ಲಿ ನಿಂತಿದ್ದ ಗೋವನ್ನು ಅಪರಿಚಿತರು ಕದ್ದು, ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿದ ಘಟನೆ ನಡೆದಿದೆ. ಈ ಕುಕೃತ್ಯ ‌ಮೇ 6 ರಂದು ರಾತ್ರಿ ಸಮಯದಲ್ಲಿ ನಡೆದಿದ್ದು, ಇಬ್ಬರು ಖದೀಮರು ಗೋವನ್ನು ಕಳ್ಳತನ ಮಾಡಿ ಹಿಂಸಾತ್ಮಕ ರೀತಿಯಲ್ಲಿ ಕಾರೊಂದಕ್ಕೆ ತುಂಬುತ್ತಿರುವ ದೃಶ್ಯ ಅಂಗಡಿಯೊಂದರ ಸಿಸಿಟಿವಿ‌ಯಲ್ಲಿ ‌ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸುಬ್ರಹ್ಮಣ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು Read More »

ಖಾಸಗಿ ಬಸ್ಸಿಗೆ ‌ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು

ಪುತ್ತೂರು: ವಿವಾಹದ ದಿಬ್ಬಣ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಬಸ್ಸಿಗೆ ರಿಕ್ಷಾ ಅಡ್ಡವಿರಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಧುರ ಎಂಬಲ್ಲಿ ಮೇ 6 ರಂದು ನಡೆದಿದೆ. ಹಲ್ಲೆಗೊಳಗಾದ ಚಾಲಕನನ್ನು ಸಾಮೆತ್ತಡ್ಕದ ರಾಕೇಶ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಈ ಬಗ್ಗೆ ದೂರು ನೀಡಿರುವ ರಾಕೇಶ್, ವಿಟ್ಲದಿಂದ ಮಡಿಕೇರಿಗೆ ಮದುವೆ ದಿಬ್ಬಣವನ್ನು ಬಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಉರಿಮಜಲು ಸಮೀಪ ಬಸ್‌ನ ಎದುರಿನಿಂದ ಆಟೋ ರಿಕ್ಷಾವೊಂದು ಹೋಗುತ್ತಿದ್ದು, ಅದರ ಚಾಲಕನು ಒಮ್ಮೆಲೇ ಬ್ರೇಕ್ ಹಾಕಿ ನಿಲ್ಲಿಸಿ ಜನರನ್ನು ತುಂಬಿಸುತ್ತಿದ್ದ

ಖಾಸಗಿ ಬಸ್ಸಿಗೆ ‌ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು Read More »

ಚಲಿಸುತ್ತಿದ್ದ ಬಸ್‌ನ ಚಾಲಕ ಹೃದಯಾಘಾತದಿಂದ ಸಾವು: ಪ್ರಯಾಣಿಕರು ಅಪಾಯದಿಂದ ಪಾರು

ಅರಂತೋಡು: ಸುಳ್ಯ ಮಾರ್ಗವಾಗಿ ಬೆಂಗಳೂರಿನಿಂದ ಕುಕ್ಕೆಗೆ ಹೋಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ಹೃದಯಾಘಾತವಾಗಿ ನಿಧನ ಹೊಂದಿದ್ದು, ಬಸ್ಸು ಬರೆಗೆ ಗುದ್ದಿ ‌ನಿಂತ ಪರಿಣಾಮ ಅದೃಷ್ಟವಶಾತ್ ಪ್ರಯಾಣಿಕರು ಪಾರಾದ ಘಟನೆ ಕಾಟಕೇರಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತ ಚಾಲಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗುರುವಾರ ರಾತ್ರಿ ಈ ಬಸ್ಸು ಸುಳ್ಯದತ್ತ ಹೊರಟಿತ್ತು. ಶುಕ್ರವಾರ ಮುಂಜಾನೆ ವೇಳೆ ಮಡಿಕೇರಿ ಕಳೆದು ಕಾಟಕೇರಿಯ ತಿರುವಿನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಬಸ್ಸು ನಿಯಂತ್ರಣ ಕಳೆದುಕೊಂಡು

ಚಲಿಸುತ್ತಿದ್ದ ಬಸ್‌ನ ಚಾಲಕ ಹೃದಯಾಘಾತದಿಂದ ಸಾವು: ಪ್ರಯಾಣಿಕರು ಅಪಾಯದಿಂದ ಪಾರು Read More »

error: Content is protected !!
Scroll to Top