ಸುರತ್ಕಲ್‌ನಲ್ಲಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ
ಹೆದ್ದಾರಿ ಬಂದ್ ಮಾಡಿ ಸುರಕ್ಷತಾ ಕ್ರಮ ಕೈಗೊಂಡ ಅಧಿಕಾರಿಗಳು ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಜಂಕ್ಷನ್‌ನಲ್ಲಿ ಅಥರ್ವಾ ಆಸ್ಪತ್ರೆ ಬಳಿ ಸಿಎನ್‌ಜಿ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಒಂದರಲ್ಲಿ ಶುಕ್ರವಾರ ರಾತ್ರಿ ಸೋರಿಕೆ ಉಂಟಾಗಿ ಪರಿಸರದಲ್ಲಿ ಆತಂಕದ ಪರಿಸ್ಥಿತಿ ಉಂಟಾಯಿತು. ಕೂಡಲೇ ಸುರಕ್ಷತಾ ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಿಸಲಾಯಿತು. ಬೈಕಂಪಾಡಿ ಗೈಲ್ ಪಂಪ್‌ನಿಂದ ಸಿಎನ್‌ಜಿ ತುಂಬಿಸಿಕೊಂಡು ಉಡುಪಿ ಕಡೆ ಹೋಗುತ್ತಿದ್ದ ಟ್ಯಾಂಕರ್ ಸುರತ್ಕಲ್ ತಲುಪುತ್ತಿದ್ದಂತೆ ಸೋರಿಕೆ ಆರಂಭವಾಗಿತ್ತು. ಚಾಲಕ ತಕ್ಷಣ ಟ್ಯಾಂಕರನ್ನು ಹೆದ್ದಾರಿ ಬದಿ ನಿಲ್ಲಿಸಿ ಅಪಾಯದ ಮುನ್ಸೂಚನೆಯನ್ನು […]
ಸುರತ್ಕಲ್‌ನಲ್ಲಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ Read More »










