ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ

ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ರಬ್ಬರ್‌ ತೋಟದೊಳಗಿದ್ದ ಕಸಾಯಿಖಾನೆ ಬೆಳ್ತಂಗಡಿ : ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್‌ನೊಳಗೆ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 91 ಕೆಜಿ ಗೋಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟುವಿನ ಅಬ್ದುಲ್ ನಝೀರ್ (36) ಮತ್ತು ಮಿತ್ತಬಾಗಿಲು ಗ್ರಾಮದ ಝಕಾರಿಯಾ (36) ಎಂದು ಗುರುತಿಸಲಾಗಿದೆ.ನಿರೀಕ್ಷಕ ಸುಬ್ಬಪುರಮಠ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ […]

ಕಸಾಯಿಖಾನೆಗೆ ದಾಳಿ : ಇಬ್ಬರ ಬಂಧನ; 91 ಕೆಜಿ ಗೋಮಾಂಸ ವಶ Read More »

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ

ಹಫ್ತಾ ಹಣ ಕೊಡದ ಕಾರಣಕ್ಕೆ ಗುಂಡಿಕ್ಕಿ ಕೊಲೆ ಒಟ್ಟಾವ: ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೆನಡಾದಲ್ಲಿ ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರನ್ನು ಹತ್ಯೆ ಮಾಡಿದೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ ಧಿಲ್ಲೋನ್, ಭಾರತೀಯ ಮೂಲದ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಸಹಸಿ

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ Read More »

ನಟ ರಜನೀಕಾಂತ್‌ ಮನೆಗೆ ಬಾಂಬ್‌ ಬೆದರಿಕೆ

ಪೊಲೀಸ್ ಮಹಾನಿರ್ದೇಶಕರಿಗೆ ಬಂದಿತ್ತು ಬಾಂಬ್‌ ಬೆದರಿಕೆಯ ಇ-ಮೇಲ್‌ ಚೆನ್ನೈ : ತಮಿಳಿನ ಖ್ಯಾತ ನಟರಾದ ರಜನಿಕಾಂತ್ ಹಾಗೂ ಧನುಷ್ ಅವರ ಮನೆಗೆ ಬಾಂಬ್ ಇಟ್ಟಿರುವ ಬಗ್ಗೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ ಇ-ಮೇಲ್​ ಸಂದೇಶ ಬಂದ ಬಳಿಕ ಕೊಂಚ ಹೊತ್ತು ಆತಂಕದ ಪರಿಸ್ಥಿತಿ ಉಂಟಾಗಿತ್ತು. ಬಾಂಬ್ ಸ್ಕ್ವಾಡ್ ನಟರ ಮನೆಗೆ ತೆರಳಿ ತಪಾಸಣೆ ನಡೆಸಿದ್ದು, ಯಾವುದೇ ಬಾಂಬ್ ಸ್ಫೋಟಕ ಪತ್ತೆ ಆಗಿಲ್ಲ. ಇದು ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ. ನಟ ರಜನಿಕಾಂತ್, ಧನುಷ್ ಹಾಗೂ ತಮಿಳು ನಾಡು

ನಟ ರಜನೀಕಾಂತ್‌ ಮನೆಗೆ ಬಾಂಬ್‌ ಬೆದರಿಕೆ Read More »

ಪುಂಜಾಲಕಟ್ಟೆಯಲ್ಲಿ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ

ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಅರ್ಥಪೂರ್ಣವಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಇದರ ನಿರ್ದೇಶಕರಾದ ಪ್ರೊ. ಸೀತಾರಾಮ ಕೇವಳ ಇವರು ಮಾತನಾಡಿ “ಮಕ್ಕಳ ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ” ಹಾಗೂ “ಸಹಕಾರದಿಂದಲೇ ಸಾಧನೆ” ಎಂದು ಪೋಷಕರ ಮನಮುಟ್ಟುವ ಪ್ರೇರಣಾದಾಯಿ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಪ್ರೊ. ಮಾಧವ ಅವರು ಕಾಲೇಜಿನ ಅಭಿವೃದ್ಧಿಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಹಕಾರವನ್ನು ಉಲ್ಲೇಖಿಸಿ, ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸ್ವಾಗತಿಸಿದರು.

ಪುಂಜಾಲಕಟ್ಟೆಯಲ್ಲಿ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ Read More »

ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್‌

ಅಕ್ರಮವಾಗಿ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಪ್ರಕರಣ ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ‌ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟುಮಾಡಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಸೌಜನ್ಯ ಪರ ಹೋರಾಟಗಾರರಾದ ಅನಿಲ್ ಅಂತರ, ಪ್ರಸನ್ನ ರವಿ ಸೇರಿದಂತೆ 20ಮಂದಿ ಹಾಗೂ ಇತರರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎ.ಎಸ್.ಐ. ದುರ್ಗಾದಾಸ್ ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅ.27ರಂದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ

ಧರ್ಮಸ್ಥಳ ಪ್ರಕರಣ : ಸೌಜನ್ಯಾ ತಾಯಿ ಸಹಿತ 20 ಮಂದಿ ವಿರುದ್ಧ ಕೇಸ್‌ Read More »

ಕದನ ವಿರಾಮ ಉಲ್ಲಂಘಿಸಿದ ಹಮಾಸ್‌ : ಇಸ್ರೇಲ್‌ ದಾಳಿಯಲ್ಲಿ 30 ಮಂದಿ ಬಲಿ

ಮೃತದೇಹ ಹಸ್ತಾಂತರದಲ್ಲಿ ಕಳ್ಳಾಟವಾಡಿದ್ದಕ್ಕೆ ಪ್ರತೀಕಾರವಾಗಿ ಗಾಜಾಪಟ್ಟಿ ಮೇಲೆ ಭೀಕರ ದಾಳಿ ಟೆಲ್‌ ಅವೀವ್‌: ಹಮಾಸ್‌ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್‌ ನಡೆಸಿದ ಭೀಕರ ದಾಳಿಗೆ ಗಾಜಾಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಇಸ್ರೇಲ್‌ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್‌ ವಾಯು ದಾಳಿ ನಡೆಸಿದೆ. ಮಧ್ಯ ಗಾಜಾಪಟ್ಟಿಯಲ್ಲಿರುವ ಬುರೈಜ್ ನಿರಾಶ್ರಿತರ ಶಿಬಿರದಲ್ಲಿ ಮನೆ ಮೇಲೆ ದಾಳಿ ನಡೆಸಿದ ಐದು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ, ಮತ್ತೊಂದು ದಾಳಿಯಲ್ಲಿ ಇಬ್ಬರು ಮಕ್ಕಳು ಮತ್ತು

ಕದನ ವಿರಾಮ ಉಲ್ಲಂಘಿಸಿದ ಹಮಾಸ್‌ : ಇಸ್ರೇಲ್‌ ದಾಳಿಯಲ್ಲಿ 30 ಮಂದಿ ಬಲಿ Read More »

ಸ್ಪೀಕರ್‌ ಯು.ಟಿ.ಖಾದರ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಿಜೆಪಿ

ನವೀಕರಣ, ಪುಸ್ತಕ ಮೇಳದಲ್ಲಿ ಅವ್ಯವಹಾರ, ನಿಯಮ ಮೀರಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ಆರೋಪ ಮಂಗಳೂರು: ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ನಿನ್ನೆ ಬಿಜೆಪಿ ಶಾಸಕ ಡಾಸ. ಭರತ್‌ ಶೆಟ್ಟಿ ಸುದ್ದಿಗೋಷ್ಠಿ ಕರೆದು ಸ್ಪೀಕರ್‌ ಕಚೇರಿ ನವೀಕರಣ ಮತ್ತಿತರ ವ್ಯವಹಾರಗಳಲ್ಲಿ ಭ್ರಷ್ಟಾಚಾರ ನಡೆದಿರುವುದಾಗಿ ಆರೋಪಿಸಿದ್ದರು. ಅದೇ ರೀತಿ ಬೆಂಗಳೂರು ಮತ್ತಿತರೆಡೆಗಳಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿಗಳಲ್ಲಿ ಖಾದರ್‌ ವಿರುದ್ಧ ಅವ್ಯವಹಾರದ ಆರೋಪ ಹೊರಿಸಿ ಖಾದರ್‌

ಸ್ಪೀಕರ್‌ ಯು.ಟಿ.ಖಾದರ್‌ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಬಿಜೆಪಿ Read More »

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ : ಹೈಕೋರ್ಟ್‌ ತಡೆಯಾಜ್ಞೆ ವಿರುದ್ಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ

ಪಥಸಂಚಲನಕ್ಕೆ ಲಗಾಮು ಹಾಕಲು ಮುಂದಾಗಿದ್ದ ಸರ್ಕಾರಕ್ಕೆ ಕೋರ್ಟ್‌ ತೀರ್ಪಿನಿಂದ ಹಿನ್ನಡೆ ಬೆಂಗಳೂರು: ಆರ್‌ಎಸ್‌ಎಸ್‌ನ್ನು ಗುರಿಮಾಡಿಕೊಂಡು ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯಗೊಳಿಸುವ ನಿಯಮಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ನೀಡರುವ ತಡೆಯಾಜ್ಞೆ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ, ತಡೆಯಾಜ್ಞೆ ತೆರವಿಗೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರ

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ : ಹೈಕೋರ್ಟ್‌ ತಡೆಯಾಜ್ಞೆ ವಿರುದ್ಧ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ Read More »

ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ : ಆರೋಪಿ ಸೆರೆ

ಕಟ್ಟಿಹಾಕಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಭಗ್ನಪ್ರೇಮಿ ಯುವಕ ಬೆಂಗಳೂರು: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ ಆಘಾತಕಾರಿ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಂಗಳವಾರ ಸಂಭವಿಸಿದೆ. ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಈ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ. ಶಿಕ್ಷಕಿಯ

ಸರ್ಕಾರಿ ಶಾಲೆ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ : ಆರೋಪಿ ಸೆರೆ Read More »

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ

ಕೆ ಪಿ ಎಸ್ ಕೆಯ್ಯೂರಿನಲ್ಲಿ ನಡೆದ ಪುತ್ತೂರು ತಾಲೂಕಿನ ಸವಣೂರು ವಲಯಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಹಿಸಾಂ ಗುಂಡೆಸತ ಸ್ಪಧೆ೯ಯಲ್ಲಿ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಆಳ್ವ ಅಭಿನಂದಿಸಿದರು. ದೈಹಿಕಶಿಕ್ಷಕರಾದ ಶಿವಪ್ರಸಾದ್ ಆಳ್ವ ತರಬೇತಿ ನೀಡಿರುತ್ತಾರೆ.

ವಿದ್ಯಾರಶ್ಮಿ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top