ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ

ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಳ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿದೆ.ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ […]

ಮುಡಾ ಹಗರಣ : ಸಿಬಿಐ ತನಿಖೆ ಕೋರಿದ ಅರ್ಜಿಯ ವಿಚಾರಣೆ ಮುಂದೂಡಿಕೆ Read More »

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ ” ಬಿ ” ರಿಪೋರ್ಟ್ ನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ವರ್ಷದ ಹಿಂದೆ ಪುತ್ತೂರಿನ ನಗರದಲ್ಲಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಯುವಕರ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ Read More »

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಕೆಲ ದಿನಗಳ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿದ್ದು,ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು  ನಿಧನ ಹೊಂದಿದ್ದಾರೆ ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು

ಕನ್ನಡ ಚಿತ್ರರಂಗ, ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ನಿಧನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ದಿನವಾದ ಮಂಗಳವಾರ ರಾತ್ರಿ ಬಲಿಮೂರ್ತಿಗೆ ಕನಕಾಭಿಷೇಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಮಂಗಳವಾರ ಬೆಳಿಗ್ಗೆ ಧನುರ್ಮಾಸದ ಪೂಜಾ ಕಾರ್ಯಗಳು ಸಂಪನ್ನಗೊಂಡಿದ್ದು, ರಾತ್ರಿ ಪೂಜೆಯ ಬಳಿಕ ಕನಕಾಭಿಷೇಕ ಜರಗಿತು. ಹರಿವಾಣದಲ್ಲಿ ವೀಳ್ಯದೆಲೆ, ಅಡಿಕೆ, ಕಾಳು ಮೆಣಸಿ, ಚಿನ್ನ, ಬೆಳ್ಳಿಯ ತುಣುಕುಗಳನ್ನು ಸುವಸ್ತುಗಳೊಂದಿಗೆ ಹಾಕಿ ದೇವಸ್ಥಾನದ ಒಳಾಂಗಣದಲ್ಲಿರುವ ಶ್ರೀ ಉಳ್ಳಾಲ್ತಿ ಅಮ್ಮನವರ ನಡೆಯ ಎದುರು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ವೈಭವದ ಕನಕಾಭಿಷೇಕ | ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆ Read More »

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ : ಹಿಟ್‌ & ರನ್‌ ಕೇಸ್‌ ದಾಖಲು

ಅನುಮಾನಕ್ಕೆ ಕಾರಣವಾದ ಚಾಲಕನ ದೂರು ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಲು ನಾಯಿಗಳು ಅಡ್ಡಬಂದದ್ದು ಕಾರಣ ಎನ್ನಲಾಗಿತ್ತು. ಕಾರಿನಲ್ಲೇ ಇದ್ದ ಸಚಿವೆಯ ಸಹೋದರ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಕೂಡ ಮಾಧ್ಯಮದವರ ಮುಂದೆ ನಾಯಿಗಳು ಅಡ್ಡಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಕಾರಿನ ಚಾಲಕ ಅಪರಿಚಿತ ಕಂಟೇನರ್‌ ಚಾಲಕನ ವಿರುದ್ಧ ಹಿಟ್‌ & ರನ್‌ ದೂರು ದಾಖಲಿಸಿರುವುದರಿಂದ ಈ ಅಪಘಾತದ

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ : ಹಿಟ್‌ & ರನ್‌ ಕೇಸ್‌ ದಾಖಲು Read More »

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು

ಬಂಟ್ವಾಳ : ಬೈಕ್ – ಬೈಕ್ ಗಳ ನಡುವೆ ಅಪಘಾತ ಸಂಭವಿಸಿರುವ   ಘಟನೆ ಇಂದು ರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ.           ಘಟನೆಯಿಂದ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ. ಬೈಕ್ ಚಾಲಕ ಬಾಲಕಿಯ ತಂದೆ ಅಬ್ದುಲ್ ರಹಮಾನಿಗೆ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ

ಬೈಕ್‍ ಅಪಘಾತದಲ್ಲಿ ಬಾಲಕಿ ಮೃತ್ಯು Read More »

ಮನು ಭಾಕರ್‌ ಪದಕ ಹಿಂಪಡೆಯಲು ಒಲಿಂಪಿಕ್ಸ್‌ ಸಮಿತಿ ನಿರ್ಧಾರ

ಭಾರತಕ್ಕೆ ಕೀರ್ತಿ ತಂದ ಕ್ರೀಡಾಪಟುವಿನ ಪದಕ ಹಿಂಪಡೆಯಲು ಕಾರಣ ಏನು ಗೊತ್ತೆ? ಹೊಸದಿಲ್ಲಿ : ಪ್ಯಾರಿಸ್ ಒಲಿಂಪಿಕ್ಸ್-2024ರ ಶೂಟಿಂಗ್​ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟು ಮನು ಭಾಕರ್‌ ಗೆದ್ದಿರುವ ಎರಡು ಕಂಚಿನ ಪದಕಗಳನ್ನು ಒಲಿಂಪಿಕ್ಸ್‌ ಸಮಿತಿ ಹಿಂಪಡೆಯಲಿದೆ. ಶೂಟಿಂಗ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಮನು ಭಾಕರ್ ಇತಿಹಾಸ ನಿರ್ಮಿಸಿದ್ದರು. ಭಾರತದ ಕೀರ್ತಿ ಪಾತಾಕೆ ಮುಗಿಲೆತ್ತರಕ್ಕೇರಲು ಕಾರಣವಾಗಿದ್ದ ಈ ಪದಕಗಳನ್ನು ಹಿಂಪಡೆಯಲು ಒಲಿಂಪಿಕ್ಸ್ ಆಯೋಜಕರು ನಿರ್ಧರಿಸಿದ್ದಾರೆ. ಹಾಗೆಂದು ಮನು ಭಾಕರ್‌ ಅವರಿಂದ ಏನೂ ತಪ್ಪು ಆಗಿಲ್ಲ, ಪದಕಗಳ

ಮನು ಭಾಕರ್‌ ಪದಕ ಹಿಂಪಡೆಯಲು ಒಲಿಂಪಿಕ್ಸ್‌ ಸಮಿತಿ ನಿರ್ಧಾರ Read More »

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌

ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ

ಪುತ್ತೂರು: ಧಾರ್ಮಿಕ ಶಿಕ್ಷಣ ತರಗತಿ ‘ಜ್ಞಾನ ಸಂಸ್ಕಾರ’ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು. ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ, ಕೆಮ್ಮಿಂಜೆ  ಧಾರ್ಮಿಕ ಶಿಕ್ಷಣ ತರಗತಿಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕ ಶಿಕ್ಷಣ ಮಹತ್ವಪೂರ್ಣ ಯೋಜನೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಲಿ ಎಂದು ಶುಭ ಹಾರೈಸಿದರು. ಡಾ ಸುಜಯ್ ಕೃಷ್ಣ ತಂತ್ರಿ ಕೆಮ್ಮಿಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೋಡಂಕಿರಿ ಪಾಲ್ಗೊಂಡು ಧರ್ಮ ಶಿಕ್ಷಣದ ಮಹತ್ವವನ್ನು

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜ್ಞಾನ ಸಂಸ್ಕಾರ’ ಧಾರ್ಮಿಕ ಶಿಕ್ಷಣ ತರಗತಿ ಉದ್ಘಾಟನೆ Read More »

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ

ಆಕಾಶದಿಂದ ಪುಷ್ಪವೃಷ್ಟಿ; ಸರಕಾರದ ಸಿದ್ಧತೆಗೆ ಬೇಷ್‌ ಎಂದ ಜನ ಪ್ರಯಾಗ್‌ರಾಜ್: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಸೋಮವಾರದಿಂದ ಕುಂಭಮೇಳ ಆರಂಭವಾಗಿದ್ದು ಮೊದಲ ದಿನವೇ ಸುಮಾರು 1.6 ಕೋಟಿ ಜನರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಮುಳೆಗೆದ್ದು ಸ್ನಾನ ಮಾಡಿದ್ದರು.ಮಕರ ಸಂಕ್ರಾಂತಿ ದಿನವಾದ ಮಂಗಳವಾರ 13 ಅಖಾಡದ ಮುಖ್ಯ ಸಂತರು ಸೇರಿದಂತೆ 3.5 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮುಳುಗಿ ಪ್ರಥಮ ಶಾಹಿ ಸ್ನಾನ ಮಾಡಿದ್ದಾರೆ. ಮೊದಲಿಗೆ ಶ್ರೀ

ಕುಂಭಮೇಳ : ಎರಡು ದಿನದಲ್ಲಿ 4.5 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ Read More »

error: Content is protected !!
Scroll to Top