ಖ್ಯಾತ ಸಾಹಿತಿ, ಚಿಂತಕ ಮೊಗಳ್ಳಿ ಗಣೇಶ್ ನಿಧನ
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ, ಚಿಂತಕ ಡಾ.ಮೊಗಳ್ಳಿ ಗಣೇಶ್(62) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. 1963ರ ಜುಲೈ 1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್ ಕನ್ನಡದ ಪ್ರಮುಖ ಕಥೆಗಾರ, ಪ್ರಬಂಧಕಾರ, ಕಾದಂಬರಿಕಾರ ಮತ್ತು ವೈಚಾರಿಕ ಚಿಂತಕರಾಗಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಜಾನಪದ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ಮೊಗಳ್ಳಿ ಕಥೆಗಳು, ದೇವರ […]
ಖ್ಯಾತ ಸಾಹಿತಿ, ಚಿಂತಕ ಮೊಗಳ್ಳಿ ಗಣೇಶ್ ನಿಧನ Read More »










