ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ 250 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ | ಸಂಘದ ಮಹಾಸಭೆ

ಪುತ್ತೂರು: ಒಂದು ಸಂಸ್ಥೆ 250 ಮಂದಿ ವಿದ್ಯಾರ್ಥಿಗಳನ್ನು ಗುರುತಿಸಿ 31 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡುವುದು ಸುಲಭದ ಕೆಲಸವಲ್ಲ. ಇಂದಿನ ದಿನಗಳಲ್ಲಿ ವ್ಯವಹಾರ ಮಾಡುವುದು ಎಷ್ಟು ಕಷ್ಟ, ಅದರಲ್ಲಿ ಎಷ್ಟು ಮಂದಿಯ ಶ್ರಮವಿದೆ, ರಾಜ್ಯದಲ್ಲಿ ಇಂತಹ ಕೆಲಸವನ್ನು ಎಷ್ಟು ಸಂಸ್ಥೆಗಳು ಮಾಡುತ್ತಿವೆ ಎಂಬುವುದನ್ನು ಹೆತ್ತವರು ತಿಳಿದುಕೊಳ್ಳಬೇಕು. ಇಷ್ಟೊಂದು ಮಂದಿ ಮಕ್ಕಳಿಗೆ ಸಹಾಯಧನ ನೀಡಿ ಶಿಕ್ಷಣವನ್ನು ಪ್ರೋತ್ಸಾಹಿಸುತ್ತಿರುವುದು ಸವಣೂರು ಸೀತಾರಾಮ ರೈ ಅವರಿಗೆ ಪರಿಸರದ ಮಕ್ಕಳ ಮೇಲಿರುವ ಅಭಿಮಾನವನ್ನು ತೋರಿಸುತ್ತದೆ ಎಂದು ಮಂಗಳೂರಿನ ಶ್ರೀರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ […]

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ 250 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ | ಸಂಘದ ಮಹಾಸಭೆ Read More »

ಡ್ರಗ್ಸ್‌ ಮಾರಾಟಗಾರರ ಜೊತೆ ಕೈಜೋಡಿಸಿದ್ದ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರ ಅಮಾನತು

ತಿಂಗಳಿಗೆ 1ರಿಂದ 1.5 ಲ.ರೂ. ಕಮಿಷನ್‌ ಪಡೆಯುತ್ತಿದ್ದ ಪೊಲೀಸರು ಬೆಂಗಳೂರು: ಪೊಲೀಸರೇ ಡ್ರಗ್‌ ಪೆಡ್ಲರ್​ಗಳೊಂದಿಗೆ ಕೈಜೋಡಿಸಿರುವ ಆಘಾತಕಾರಿ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಓರ್ವ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ. ಆರೋಪಿಗಳ ಜೊತೆ ಸೇರಿ ಡ್ರಗ್ಸ್​ ಮಾಫಿಯಾದಲ್ಲಿ ಭಾಗಿಯಾಗಿದ್ದ, ಡ್ರಗ್‌ ಪೆಡ್ಲರ್ಸ್ ಜೊತೆಗೆ ನಂಟು ಆರೋಪದ ಮೇಲೆ ಬೆಂಗಳೂರಿನ ಚಾಮರಾಜಪೇಟೆ ಠಾಣೆಯ ಇನ್‌ಸ್ಪೆಕ್ಟರ್‌ ಟಿ.ಮಂಜಣ್ಣ ಸೇರಿ ಚಾಮರಾಜಪೇಟೆ ಮತ್ತು ಜೆಜೆ ನಗರ ಠಾಣೆಯ 10 ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಡ್ರಗ್ಸ್‌ ಮಾರಾಟಗಾರರ ಜೊತೆ ಕೈಜೋಡಿಸಿದ್ದ ಇನ್‌ಸ್ಪೆಕ್ಟರ್‌ ಸಹಿತ 10 ಪೊಲೀಸರ ಅಮಾನತು Read More »

ಉಡುಪಿಯಲ್ಲಿ ಇಂದು-ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಇಂದು ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ, ನಾಳೆ ಲೀಲೋತ್ಸವ ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಭಾನುವಾರ ಮತ್ತು ಸೋಮವಾರ (ಸೆ.14-15)ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ. ಇದಕ್ಕಾಗಿ ವ್ಯಾಪಕ ತಯಾರಿ ಮಾಡಲಾಗಿದೆ. ದೇಶದ ಉಳಿದ ಭಾಗಗಳಲ್ಲಿ ಕೃಷ್ಣಾಷ್ಟಮಿ ಚಂದ್ರಮಾನ ಕ್ಯಾಲೆಂಡರ್ ಪ್ರಕಾರ ಆಚರಣೆಯಾಗುವುದಾದರೆ ಉಡುಪಿಯಲ್ಲಿ ಜನ್ಮಾಷ್ಟಮಿಯನ್ನು ಸೌರಮಾನ ಕ್ಯಾಲೆಂಡರ್ (ಸೌರಮಾನ) ಪ್ರಕಾರ ಆಚರಿಸಲಾಗುತ್ತದೆ. ಸೌರಮಾನ ಪದ್ಧತಿಯ ಪ್ರಕಾರ ಸೆಪ್ಟೆಂಬರ್ 14ರಂದು ಅರ್ಘ್ಯ ಪ್ರದಾನ (ಶ್ರೀಕೃಷ್ಣನಿಗೆ ಮಧ್ಯರಾತ್ರಿಯ ಹೊತ್ತಿಗೆ ಅರ್ಪಣೆ) ನಡೆಯಲಿದೆ, ನಂತರ ಸೆಪ್ಟೆಂಬರ್15 ರಂದು ಲೀಲೋತ್ಸವ (ವಿಟ್ಲಪಿಂಡಿ)

ಉಡುಪಿಯಲ್ಲಿ ಇಂದು-ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ Read More »

ಏಷ್ಯಾಕಪ್‌ : ಭಾರಿ ವಿರೋಧದ ನಡುವೆ ಇಂದು ಭಾರತ-ಪಾಕಿಸ್ತಾನ ಪಂದ್ಯ

ಪಹಲ್ಗಾಮ್‌ ಉಗ್ರ ದಾಳಿಯ ಕರಿನೆರಳಲ್ಲಿ ನಡೆಯುವ ಪಂದ್ಯಕ್ಕೆ ಭಾರತದಲ್ಲಿ ಆಕ್ಷೇಪ ನವದೆಹಲಿ : ಭಾರತೀಯರ ಭಾರಿ ವಿರೋಧದ ನಡುವೆ ಭಾರತ-ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಇಂದು ದುಬೈಯಲ್ಲಿ ಮುಖಾಮುಖಿಯಾಗಲಿವೆ.2025ರ ಏಷ್ಯಾಕಪ್‌ನ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನವನ್ನು ಎದುರಿಸಲಿದೆ. ಗ್ರೂಪ್ ಎ ನಲ್ಲಿರುವ ಈ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಿ 9 ವಿಕೆಟ್‌ಗಳಿಂದ

ಏಷ್ಯಾಕಪ್‌ : ಭಾರಿ ವಿರೋಧದ ನಡುವೆ ಇಂದು ಭಾರತ-ಪಾಕಿಸ್ತಾನ ಪಂದ್ಯ Read More »

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರು ಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ” ಎಂದು ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »

ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ

ಪುತ್ತೂರು: ಅಕ್ಟೋಬರ್ 24ರಂದು ತೆರೆ ಕಾಣಲಿರುವ ಕನ್ನಡ ಕಿರುಚಿತ್ರ ತಿನ್ಕಾಯಿಮಲೆಯ ಹಾಡು ಮತ್ತು ಟ್ರೈಲರ್ ಸೆ.12ರಂದು ಪುತ್ತೂರಿನ ಜಿ.ಎಲ್. ಮಾಲ್ ನಲ್ಲಿ ಬಿಡುಗಡೆಗೊಂಡಿದೆ‌. ಕಾರ್ಯಕ್ರಮದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಮನ್ಮಥ ಶೆಟ್ಟಿ, ಧರ್ಮ ಚಾವಡಿ ಚಿತ್ರದ ನಿರ್ಮಾಪಕ ಜಗದೀಶ್ ಅಮೀನ್ ನಡುಬೈಲು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ಅಧ್ಯಕ್ಷ ರಘು ಶೆಟ್ಟಿ, ಸುಶಾಂತ್ ಮರೀಲು ಹಾಡು ಮತ್ತು

ತೆನ್ಕಾಯಿ ಮಲೆ ಕಿರುಚಿತ್ರದ ಹಾಡು, ಟ್ರೈಲರ್ ಬಿಡುಗಡೆ Read More »

ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ

ನವದೆಹಲಿ: ಹಾಸನ ತಾಲೂಕಿನ ಮೊಸಳೆಹಳ್ಳಿ ಸಮೀಪ ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಹೃದಯವಿದ್ರಾವಕ. ಮೃತರ ಕುಟುಂಬಗಳ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬರೆದಿದ್ದಾರೆ. ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ

ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ Read More »

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಸಾರ್ವಜನಿಕವಾಗಿ ಆಚರಣೆ ಮಾಡುವ ಯಾವುದೇ ಹಬ್ಬಗಳಿಗೆ, ಮೆರವಣಿಗೆಗಳಿಗೆ ಪೊಲೀಸ್ ಇಲಾಖೆ ಅಡ್ಡಿ ಮಾಡಿಲ್ಲ. ಬೇರೆಯವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ‘ಶಬ್ದದ ಮಿತಿ’ ನಿಗದಿ ಮಾಡಲಾಗಿದ್ದು, ಅದನ್ನು ಅನುಸರಿಸಿಕೊಂಡು ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಗಣೇಶೋತ್ಸವ ಮೆರವಣಿಗೆಗಳು ತಂಡ ರಾತ್ರಿಯ ವರೆಗೆ ನಡೆದಿದ್ದು, ಅಲ್ಲಿ ಯಾವ ಸಮಸ್ಯೆಯೂ ಆಗಿಲ್ಲ. ಪೊಲೀಸರು ಸಮಸ್ಯೆ ಮಾಡಿಲ್ಲ. ಆದರೆ ಶಬ್ದ ಮಿತಿಯನ್ನು ಮಾತ್ರ ಹಾಕಲಾಗಿತ್ತು ಎಂದು ತಿಳಿಸಿದ್ದಾರೆ.

ಹಬ್ಬ, ಉತ್ಸವಗಳಿಗೆ ಪೊಲೀಸ್ ಇಲಾಖೆಯಿಂದ ಸಮಸ್ಯೆ ಆಗಿಲ್ಲ: ಸುಧೀರ್ ಕುಮಾರ್ ರೆಡ್ಡಿ Read More »

ಇಂದು ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

2023ರಿಂದೀಚೆಗೆ ಹಿಂಸಾಚಾರದಿಂದ ನಲುಗಿರುವ ಮಣಿಪುರ ನವದೆಹಲಿ : 2023ರಿಂದೀಚೆಗೆ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ. ಹಿಂಸಾಚಾರದಲ್ಲಿ 260ಕ್ಕೂ ಹೆಚ್ಚು ಜನರ ಹತ್ಯೆಯಾಗಿದೆ. ಸಾಮೂಹಿಕ ಅತ್ಯಾಚಾರಗಳು ನಡೆದಿವೆ. ಜನಾಂಗೀಯ ಹಿಂಸಾಚರಕ್ಕೆ ಕಣಿವೆ ರಾಜ್ಯ ಮಣಿಪುರ ಸಂಪೂರ್ಣ ನಲುಗಿಹೋಗಿದೆ. ಇದರ ನಡುವೆ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಇಂದು ಭೇಟಿ ನೀಡುತ್ತಿದ್ದಾರೆ. ಆ ಮೂಲಕ ಮಣಿಪುರಕ್ಕೆ ಪ್ರಧಾನಿ ಮೋದಿ ಏಕೆ

ಇಂದು ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ Read More »

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ

ಬೈಕ್‌ನಲ್ಲಿ ಬಂದು 4 ಸುತ್ತು ಗುಂಡು ಹಾರಿಸಿ ಪಲಾಯನ ಮಾಡಿರುವ ದುಷ್ಕರ್ಮಿಗಳು ಮುಂಬಯಿ : ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಗಿನ ಜಾವ ಉತ್ತರ ಪ್ರದೇಶದ ಬರೇಲಿಯಲ್ಲಿರುವ ಮನೆ ಮುಂದೆ 3.30ರ ಸುಮಾರಿಗೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆಗೆ ಗುಂಡು ಹಾರಾಟ Read More »

error: Content is protected !!
Scroll to Top