ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ | ಸಮುದಾಯ ಭವನಕ್ಕೆ ಅನುದಾನ ಒದಗಿಸುವ ಭರವಸೆ

ಕಡಬ: ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಮಂಗಳೂರು ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಒಕ್ಕಲಿಗ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಒಕ್ಕಲಿಗ ಗೌಡ ಸೇವಾ ಸಂಘದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ಮಾತನಾಡಿ, ಸಮುದಾಯ ಭವನಕ್ಕೆ ಸರಕಾರದಿಂದ ಅನುದಾನ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಗೌಡ ಪುಯಿಲ, […]

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ | ಸಮುದಾಯ ಭವನಕ್ಕೆ ಅನುದಾನ ಒದಗಿಸುವ ಭರವಸೆ Read More »

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ

ಪುತ್ತೂರು: ಭಾರತದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಮತ್ತು ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ ಹಮ್ಮಿಕೊಂಡಿದ್ದು, ಸೆ.15 ರಂದು ಪುತ್ತೂರಿಗೆ ಆಗಮಿಸುವ ರಥವನ್ನು ಪುತ್ತೂರಿನಲ್ಲಿ ಸ್ವಾಗತಿಸಲಾಗುವುದು ಎಂದು ಎಬಿವಿಪಿ ಪುತ್ತೂರು ಜಿಲ್ಲಾ ಸಂಚಾಲಕ ಸಮನ್ವಿತ್ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ವೀರ ರಾಣಿ

ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ | ಸೆ.15 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ನಿಂದ ಅಬ್ಬಕ್ಕ ರಾಣಿ ರಥಕ್ಕೆ ಸ್ವಾಗತ, ಸಭಾ ಕಾರ್ಯಕ್ರಮ Read More »

ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವಿಭಾಗ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಂಬಿಕಾ ಪದವಿಪೂರ್ವ ವಿದ್ಯಾಲಯ: ಅಶ್ವಿನ್ ಪಿ.ಎಸ್., ರಂಜನ್ ವಿ. ಅವರು ಚಿಕ್ಕಬಳ್ಳಾಪುರದ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟ ಹಾಗೂ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಕ್ಟೋಬರ್ 8 ರಂದು ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಟೂರ್ನಮೆಂಟಲ್ಲಿ ಸ್ಪರ್ಧಿಸಲಿದ್ದಾರೆ. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ:

ಚದುರಂಗ ಸ್ಪರ್ಧೆಯಲ್ಲಿ ಅಂಬಿಕಾದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ : ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ | ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ಪರಿಹರಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳು ಕೇವಲ ಪಠ್ಯೇತರ ಚಟುವಟಿಕೆಗಳಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಉಜಿರೆ ಎಸ್ ಡಿಎಂ ಕಾಲೇಜಿನ ಉಪನ್ಯಾಸಕ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಹೇಳಿದರು. ಅವರು ಶುಕ್ರವಾರ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಿನ್ಸಿಪಾಲ್ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ಮಾನವಕುಲಕ್ಕೆ

ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ : ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ | ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ Read More »

ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ

ನವದೆಹಲಿ: ಬಿಹಾರದ ಕಾಂಗ್ರೆಸ್ ಪಕ್ಷ ತನ್ನ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರ ತಾಯಿ ದಿ. ಹೀರಾಬೆನ್ ಅವರ ಎಐ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಸುಮಾರು 36 ಸೆಕೆಂಡ್‌ಗಳ ವಿಡಿಯೋ ಇದಾಗಿದ್ದು, ಬಿಹಾರದ ಚುನಾವಣೆಗೂ ಮೊದಲು ವೈಯಕ್ತಿಕ ನೆಲೆಯಲ್ಲಿ ದಾಳಿ ಮಾಡುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಂಡಿದೆ ಎಂದು ಬಿಜೆಪಿ ಆಕ್ರೋಶ ತೋರಿಸಿದೆ. ಆದರೆ ಇದರಲ್ಲಿ ಯಾರಿಗೂ ಅವಮಾನ ಮಾಡಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ವಿಡಿಯೋವನ್ನು ಪ್ರಧಾನಿ

ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ Read More »

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಜಿಲ್ಲೆ ಮಂಗಳೂರು ಆಶ್ರಯದಲ್ಲಿ ಸೆ.10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ. ಪೂ ಕಾಲೇಜಿನಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಇಂದು : ರೋಟರಿ ಕ್ಲಬ್‍, ಇನ್ನರ್ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಇನ್ನರ್‍ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಇಂದು (ಶುಕ್ರವಾರ) ಸಂಜೆ 5.30 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ನಿಯೋಜಿತ ಜಿಲ್ಲಾ ಗವರ್ನರ್‍ ಯಶಸ್ವಿ ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೋಟರಿ ಅಧ್ಯಕ್ಷ ಡಾ.ಶ್ರೀಪ್ರಕಾಶ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು : ರೋಟರಿ ಕ್ಲಬ್‍, ಇನ್ನರ್ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ Read More »

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ

ಪುತ್ತೂರು: ಸಂತ  ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಬೋಟನಿ ವಿಭಾಗದ ವಿದ್ಯಾರ್ಥಿಗಳಾದ ದಿಶಾ, ದೀಕ್ಷಿತಾ, ಗ್ರೀಷ್ಮಾ, ಸಂಬ್ರಮ್ ಹಾಗೂ ತೇಜಸ್ ರೈ ಅವರು ಪ್ರಸಿದ್ಧ ನಾಟಿ ವೈದ್ಯರಾದ ನಾರಣಪ್ಪ ಸಾಲಿಯನ್ ಅವರ ಮನೆಗೆ ಶೈಕ್ಷಣಿಕ ಭೇಟಿ ನೀಡಿದರು. ವಿದ್ಯಾರ್ಥಿಗಳು ಔಷಧಿ ಸಸ್ಯಶಾಸ್ತ್ರ (Medicinal Botany) ಎಂಬ ಮುಕ್ತ ಆಯ್ಕೆ ವಿಷಯವನ್ನು ಆರಿಸಿಕೊಂಡಿದ್ದು, ಔಷಧಿ ಸಸ್ಯಗಳ ಬಗ್ಗೆ ತಿಳಿಯುವ ಆಸಕ್ತಿಯಿಂದ ಈ ಭೇಟಿಯಲ್ಲಿ ಭಾಗವಹಿಸಿದರು. ಭೇಟಿಯ ಸಂದರ್ಭದಲ್ಲಿ ನಾರಣಪ್ಪ ಸಾಲಿಯನ್ ಅವರು ಔಷಧಿ ಸಸ್ಯಗಳ ಕುರಿತು ತಮ್ಮ ಅಪಾರ ಜ್ಞಾನವನ್ನು

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ Read More »

ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಇಂದು ಪದಗ್ರಹಣ

ಹಲವು ಮುಖ್ಯಮಂತ್ರಿಗಳ ಸಹಿತ ಗಣ್ಯರು ಭಾಗಿಯಾಗುವ ನಿರೀಕ್ಷೆ ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಶುಕ್ರವಾರ ಬೆಳಗ್ಗೆ 10 ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕರ್ನಾಟಕ

ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಇಂದು ಪದಗ್ರಹಣ Read More »

ಉಡುಪಿ : ಟ್ರಕ್‌ನಲ್ಲಿ ಸಾಗಿಸುತ್ತಿದ್ದ 65 ಕೆ.ಜಿ.ಗಾಂಜಾ ವಶ, ಇಬ್ಬರ ಬಂಧನ

ಟ್ರಕ್‌ ಸಹಿತ 72 ಲ.ರೂ. ಮೌಲ್ಯದ ಸೊತ್ತು ವಶ ಉಡುಪಿ: ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಸುಮಾರು 65 ಕೆಜಿ ಗಾಂಜಾವನ್ನು ಉಡುಪಿ ಸಮೀಪ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ, ಸೆನ್ ವಿಭಾಗದ ಇನ್‌ಸ್ಪೆಕ್ಟರ್ ನಿತ್ಯಾನಂದ ನಾಯಕ್ ಟ್ರಕ್ ಅಡ್ಡ ಹಾಕಿ ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ. ಉಡುಪಿಯ ಕಿನ್ನಿಮೂಲ್ಕಿ ಜಂಕ್ಷನ್‌ನಲ್ಲಿ ಲಾರಿಯನ್ನು ಅಡ್ಡ ಹಾಕಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಗೋಣಿಯಲ್ಲಿ

ಉಡುಪಿ : ಟ್ರಕ್‌ನಲ್ಲಿ ಸಾಗಿಸುತ್ತಿದ್ದ 65 ಕೆ.ಜಿ.ಗಾಂಜಾ ವಶ, ಇಬ್ಬರ ಬಂಧನ Read More »

error: Content is protected !!
Scroll to Top