ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌

ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿಯನ್ನು ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ ಮಂಗಳೂರು : ಹಿಂದೂಗಳ ಸಂಖ್ಯೆ ಹೆಚ್ಚಾಗದೆ ಇದ್ದರೆ ಭಾರತ ಮತ್ತೊಂದು ಪಾಕಿಸ್ತಾನ ಆಗಲಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿ ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ಸಂಘ ಪರಿವಾರ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸ ಅದೇ ಆಗಿದೆ ಎಂದಿದ್ದಾರೆ. […]

ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ದರೆ ಭಾರತ ಇನ್ನೊಂದು ಪಾಕಿಸ್ತಾನ ಆಗಲಿದೆ : ಕಲ್ಲಡ್ಕ ಪ್ರಭಾಕರ ಭಟ್‌ Read More »

ಸೆ. 7: ಪುತ್ತೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಜಯಂತಿ ಆಚರಣೆ

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ) ಪುತ್ತೂರು ವತಿಯಿಂದ ಬ್ರಹ್ಮಶ್ರೀ ‌ನಾರಾಯಣ ಗುರುಸ್ವಾಮಿ ಅವರ 171 ನೇ ಜನ್ಮ ದಿನಾಚರಣೆ ಸೆ. 7 ರಂದು ಪುತ್ತೂರಿನ ಬ್ರಹ್ಮಶ್ರೀ ‌ನಾರಾಯಣ ಗುರುಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ. ಗಣ ಹೋಮ, ಗುರು ಪೂಜೆ, ಭಜನೆ, ಸಭಾ ಕಾರ್ಯಕ್ರಮ ನಡೆಯಲಿದ್ದು, ಭಗೀರಥ ಜಿ. (ಅಧ್ಯಕ್ಷರು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿ. ಬೆಳ್ತಂಗಡಿ), ಸದಾನಂದ ಪೂಜಾರಿ (ಅಧ್ಯಕ್ಷರು ಸಂಸ್ಥಾಪಕರು, ನಂದಾದೀಪ ಫೌಂಡೇಶನ್ ಮತ್ತು ಬಿಲ್ಲವ ಬ್ರಿಗ್ರೇಡ್ (ರಿ.) ಕೇಂದ್ರಿಯ ಮಂಡಳಿ

ಸೆ. 7: ಪುತ್ತೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಜಯಂತಿ ಆಚರಣೆ Read More »

ಆಪರೇಷನ್ ಸಿಂಧೂರ್ ಬಗ್ಗೆ ಸೇನಾ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ?

ನವದೆಹಲಿ: ಪಾಕ್ ವಿರುದ್ಧ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕೇವಲ 3 ದಿನಕ್ಕೆ ಮುಗಿದಿರುವುದಲ್ಲ. ಧೀರ್ಘ ಕಾಲ ಮುಂದುವರೆದಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ದ್ವಿವೇದಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾಗಿತ್ತು. ಅದನ್ನು ಮೀರಿ ಎಲ್ಲವನ್ನೂ ನಮಗೆ ಹಂಚಿಕೊಳ್ಳಲು ಅಸಾಧ್ಯ ಎಂದಿದ್ದಾರೆ. ಈ ಕಾರ್ಯಾಚರಣೆಯ ಪರಿಣಾಮಗಳನ್ನು ಈಗಲೇ ಹೇಳುವುದು ಕಷ್ಟ. ಪಾಕ್ ಪ್ರೇರಿತ ಉಗ್ರರು ಗಡಿ ಪ್ರದೇಶದಲ್ಲಿ ದೇಶದೊಳಕ್ಕೆ ನುಗ್ಗಲು ಚಟುವಟಿಕೆಗಳನ್ನು ಇನ್ನೂ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಕಾರ್ಯಾಚರಣೆ

ಆಪರೇಷನ್ ಸಿಂಧೂರ್ ಬಗ್ಗೆ ಸೇನಾ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ? Read More »

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು?

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಮತ್ತೊಂದು ಮಹತ್ವದ ಟ್ವಿಸ್ಟ್ ದೊರೆತಿದೆ. ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚೆನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆ 25% ಗಳಷ್ಟು ಮಾತ್ರವೇ ಪೂರ್ಣವಾಗಿದ್ದು, ಇದು ಮತ್ತಷ್ಟು ಆಳವಾಗಿ, ಇನ್ನಷ್ಟು ದಿನಗಳ ವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಕೇರಳದ ಕಮ್ಯುನಿಸ್ಟ್ ಸಂಸದನ ಹೆಸರು? Read More »

ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಸಂಬಂಧ: ಜೈಶಂಕರ್ ‌ಹೇಳಿದ್ದೇನು?

ನವದೆಹಲಿ: ಅಮೆರಿಕಾ ಜೊತೆಗಿನ ಭಾರತದ ಸಂಬಂಧದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳಿಕೆಯ ಕುರಿತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾತನಾಡಿದ್ದಾರೆ. ಅಮೆರಿಕಾದೊಂದಿಗೆ ಭಾರತದ ಪಾಲುದಾರಿಕೆಯ ಬಗ್ಗೆ ಪ್ರಧಾನಿ ಮೋದಿ ಅವರು ಪ್ರಾಮುಖ್ಯತೆ ನೀಡುತ್ತಾರೆ. ಅಮೆರಿಕಾದ ಅಧ್ಯಕ್ಷ ಟ್ರಂಪ್ ಜೊತೆಗೆ ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ ಉತ್ತಮ ಸಮೀಕರಣ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರ ಭಾವನೆಗಳು ಮತ್ತು ದ್ವಿಪಕ್ಷೀಯ ಸಂಬಂಧಗಳ ಸಕಾರಾತ್ಮಕ ಮೌಲ್ಯಮಾಪನವನ್ನು ಅವರು ಆಳವಾಗಿ ಮೆಚ್ಚುತ್ತಾರೆ

ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಸಂಬಂಧ: ಜೈಶಂಕರ್ ‌ಹೇಳಿದ್ದೇನು? Read More »

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಹಾಗೆ ಸಿ ಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕ R. ಅಶೋಕ್ ಅವರು ಟೀಕೆ ಮಾಡಿದ್ದಾರೆ. ಸಚಿವ ಚೆಲುವರಾಯಸ್ವಾಮಿ ಅವರಿಗೆ ಅನುದಾನಕ್ಕೆ ಸಂಬಂಧಿಸಿದ ಹಾಗೆ ಸಿದ್ದರಾಮಯ್ಯ ಮನವಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೃಷಿ ಸಚಿವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡ ಕಾಲೋನಿಗಳ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿಗಾಗಿ ಸಿಎಂ ಬಳಿ

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್ Read More »

ಬೆದ್ರಾಳ ರಸ್ತೆ ಅವ್ಯವಸ್ಥೆ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಎಂಬಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದು ಸಂಪೂರ್ಣ ಕಳಪೆಯಾಗಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈ ರಸ್ತೆಯಲ್ಲಿ ಸುಮಾರು 40 ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು, 50% ಸಹ ಸಂಪೂರ್ಣವಾಗಿ ಕಾಮಗಾರಿ ನಡೆಯದೇ ಇದ್ದು, ವಾಹನ ಸಂಚಾರ ಆರಂಭವಾದ ಎರಡನೇ ದಿನದಲ್ಲಿ ಇಂಟರ್ಲಾಕ್ ಕಿತ್ತುಕೊಂಡು ಬರುತ್ತಿದೆ. ಇದರಿಂದ ವಾಹನ ಸವಾರರು ಪೇಚಾಡುವ ಪರಿಸ್ಥಿತಿ ಉಂಟಾಗಿದೆ. ಇದು ಕಳಪೆ ಕಾಮಗಾರಿ ಎನ್ನುವುದಕ್ಕೆ

ಬೆದ್ರಾಳ ರಸ್ತೆ ಅವ್ಯವಸ್ಥೆ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಅರುಣ್ ಕುಮಾರ್ ಪುತ್ತಿಲ Read More »

ಧರ್ಮಸ್ಥಳ ಪ್ರಕರಣ : ಬುರುಡೆ ಕೇಸ್‌ಗೆ ಕೇರಳದ ರಾಜ್ಯಸಭಾ ಸದಸ್ಯನ ಲಿಂಕ್‌

ಬುರುಡೆ ಗ್ಯಾಂಗ್‌ ಕಮ್ಯುನಿಸ್ಟ್‌ ಸಂಸದನ ನೆರವು ಕೋರಿದ ವಿಚಾರ ಬಹಿರಂಗ ಧರ್ಮಸ್ಥಳ : ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಕೇರಳದ ಯೂಟ್ಯೂಬರ್‌ ಮನಾಫ್‌ ಎಂಬವನ ಹೆಸರು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಕೇರಳದ ಕಮ್ಯುನಿಸ್ಟ್‌ ಸಂಸದರೊಬ್ಬರ ಹೆಸರು ಕೇಳಿಬಂದಿದೆ. ಕಮ್ಯೂನಿಸ್ಟ್ ಪಕ್ಷದ (ಸಿಪಿಐ) ರಾಜ್ಯಸಭಾ ಸದಸ್ಯ ಸಂತೋಷ್ ಕುಮಾರ್ ಎಂಬವರಿಗೆ ಬುರುಡೆ ಪ್ರಕರಣದ ಜೊತೆ ಲಿಂಕ್‌ ಇದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಬುರುಡೆ ಗ್ಯಾಂಗ್‌ ತಲೆಬುರುಡೆಯನ್ನು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ

ಧರ್ಮಸ್ಥಳ ಪ್ರಕರಣ : ಬುರುಡೆ ಕೇಸ್‌ಗೆ ಕೇರಳದ ರಾಜ್ಯಸಭಾ ಸದಸ್ಯನ ಲಿಂಕ್‌ Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ

136 ಶಾಸಕರು ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸಿ ಎಂದು ಸವಾಲು ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಯಂತ್ರಗಳ ಬದಲಾಗಿ ಹಿಂದಿನ ಕಾಲದ ಮತಪತ್ರಗಳನ್ನು ಬಳಸುವ ರಾಜ್ಯ ಸರ್ಕಾರದ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಇದು ನಮ್ಮ ಅನುಭವದ ಮೇಲೆ ಕೈಗೊಂಡ ನಿರ್ಧಾರ ಎಂದು ಸಮರ್ಥಿಸಿದ್ದರೂ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸಿದ್ದರಾಮಯ್ಯ ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ಬಿಜೆಪಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ Read More »

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಕಾನ್‌ಸ್ಟೆಬಲ್‌ ಬಂಧನ

ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿದ್ದ ಕಾನ್ಸ್‌ಸ್ಟೆಬಲ್‌ ಬೆಂಗಳೂರು: ವಕೀಲೆಯಾಗಿರುವ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಸ್‌ಎಎಫ್‌ನ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸಿದ್ದೇಗೌಡ ಅಲಿಯಾಸ್ ಸಿದ್ದು ಬಂಧಿತ ಕಾನ್‌ಸ್ಟೆಬಲ್‌ ಎಂದು ಗುರುತಿಸಲಾಗಿದೆ. ಸಿದ್ದೇಗೌಡ ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಕಾರ್ಯನಿರ್ವಹಿಸುತ್ತಿದ್ದ. ಬೆಂಗಳೂರಿನಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಕೀಲೆ ಬಸವೇಶ್ವರ ನಗರ ಪೊಲೀಸ್

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಕಾನ್‌ಸ್ಟೆಬಲ್‌ ಬಂಧನ Read More »

error: Content is protected !!
Scroll to Top