ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ

ಕಾರ್ಕಳದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಕಾರ್ಕಳ : ಕಾರ್ಕಳ ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ನವೀನ್‌ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್‌ ಪೂಜಾರಿ ಕಾರ್ಕಳದಲ್ಲಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಸ್ಥಳೀಯವಾಗಿ ಅವರು ಬಡ್ಡಿ ನವೀನ ಎಂದು ಪರಿಚಿತರಾಗಿದ್ದರು. ಬಹಳ ಸಮಯದಿಂದ ಕಾರ್ಕಳದಲ್ಲೇ ವಾಸವಾಗಿದ್ದರು. ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ […]

ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ Read More »

ಮಂಗಳೂರು : ಕೆಎಸ್‌ಆರ್‌ಪಿ ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಮಂಗಳೂರು: ಕೊಣಾಜೆಯ ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್‌ಕಾನ್‌ಸ್ಟೆಬಲ್‌ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೂಲತಃ ಉತ್ತರ ಕರ್ನಾಟಕದ‌ ಸಂಜೀವ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟರ್ಸ್‌ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು : ಕೆಎಸ್‌ಆರ್‌ಪಿ ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ Read More »

ಆರ್‌ಎಸ್‌ಎಸ್‌ ಶತಮಾನೋತ್ಸವ ಸಂಭ್ರಮ : ಇಂದಿನಿಂದ ಉಪನ್ಯಾಸ ಸರಣಿ

ವರ್ಷವಿಡೀ ದೇಶಾದ್ಯಂತ ನಡೆಯಲಿದೆ ವಿಶೇಷ ಕಾರ್ಯಕ್ರಮ ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವದ ಸಂಭ್ರದಲ್ಲಿದ್ದು, ಇದರಂಗವಾಗಿ ದೇಶಾದ್ಯಂತ ಅನೇಕ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆಗಸ್ಟ್ 26ರಿಂದ 28 ರವರೆಗೆ ದೆಹಲಿಯಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ. “ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ: ಹೊಸ ದಿಗಂತಗಳು” ಎಂಬ ಶೀರ್ಷಿಕೆಯಲ್ಲಿ 3 ದಿನಗಳ ಉಪನ್ಯಾಸ ಸರಣಿ ಇಂದಿನಿಂದ 28ರ ವರೆಗೆ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾಧ್ಯಮ, ರಾಜತಾಂತ್ರಿಕತೆ, ಧರ್ಮ ಮತ್ತು ಶೈಕ್ಷಣಿಕ ಕ್ಷೇತ್ರಗಳಂತಹ 17 ಕ್ಷೇತ್ರಗಳ ಗಣ್ಯ ವ್ಯಕ್ತಿಗಳೊಂದಿಗೆ

ಆರ್‌ಎಸ್‌ಎಸ್‌ ಶತಮಾನೋತ್ಸವ ಸಂಭ್ರಮ : ಇಂದಿನಿಂದ ಉಪನ್ಯಾಸ ಸರಣಿ Read More »

ದಿನೇಶ್‌ ಅಮೀನ್‌ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್‌ ಸ್ಥಾನ

ಭಾರಿ ಹಗ್ಗ ಜಗ್ಗಾಟದ ಬಳಿಕ ನಾಲ್ವರ ನಾಮನಿರ್ದೇಶನಕ್ಕೆ ಹೈಕಮಾಂಡ್‌ ಒಪ್ಪಿಗೆ ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಹಲವು ತಿಂಗಳಿಂದ ಖಾಲಿ ಇದ್ದ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್‌ ಒಪ್ಪಿಗೆ ನೀಡಿದೆ. ಈ ಹಿಂದೆ ಫೈನಲ್ ಆಗಿದ್ದ ನಾಲ್ವರ ನಾಮನಿರ್ದೇಶನ ಪಟ್ಟಿ ಬದಲಾಗಿದ್ದು, ಇಬ್ಬರನ್ನು ಕೈಬಿಟ್ಟು ಅಚ್ಚರಿಯ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಕರಾವಳಿಯ ದಿನೇಶ್‌ ಅಮೀನ್‌ ಮಟ್ಟು ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದೆ. ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ

ದಿನೇಶ್‌ ಅಮೀನ್‌ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್‌ ಸ್ಥಾನ Read More »

ಭಾರತ – ಫಿಜಿ ಸ್ನೇಹ ಸಂಬಂಧ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ: ಭಾರತ ಮತ್ತು ಫಿಜಿ ದೇಶಗಳ ಆಕಾಂಕ್ಷೆಗಳು ಒಂದೇ ದೋಣಿಯಲ್ಲಿ ಸಾಗುತ್ತವೆ ಎಂದು ಉಭಯ ರಾಷ್ಟ್ರಗಳ ಸ್ನೇಹ ಸಂಬಂಧವನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ. ಫಿಜಿ ಪ್ರಧಾನಿ ಸಿತಿವೇನಿ ರಬುಕಾ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮಕ್ಕೆ ಸೇರಲು ಆಸಕ್ತಿ ವ್ಯಕ್ತಪಡಿಸಿದ ನಂತರ, ಪ್ರಧಾನ ಮಂತ್ರಿ ಮೋದಿ ಅವರು ದಕ್ಷಿಣ ಪೆಸಿಫಿಕ್ ಸಾಗರ ರಾಷ್ಟ್ರವನ್ನು ಭಾರತವು 2019 ರಲ್ಲಿ ಪ್ರಾರಂಭಿಸಿದ ಸಮಾನ ಮನಸ್ಕ ದೇಶಗಳೊಂದಿಗೆ ಕಡಲ ಪ್ರದೇಶವನ್ನು ನಿರ್ವಹಿಸಲು, ಸಂರಕ್ಷಿಸಲು ಮತ್ತು ಉಳಿಸಿಕೊಳ್ಳಲು ಬಯಸುವ ಪಾಲುದಾರಿಕೆಗೆ ಸೇರಲು ಸ್ವಾಗತಿಸಿದರು. “ನಾವು

ಭಾರತ – ಫಿಜಿ ಸ್ನೇಹ ಸಂಬಂಧ ಕೊಂಡಾಡಿದ ಪ್ರಧಾನಿ ಮೋದಿ Read More »

ಶಿವರಾಜ್ ಕುಮಾರ್ ಬಳಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಬೆಂಗಳೂರು: ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ನಟ ಮಡೆನೂರು ಮನು ಇಂದು ನಟ ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ನಟಿಗೆ ‌ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೈಲು ಸೇರಿದ್ದ ಸಂದರ್ಭದಲ್ಲಿ ಮನು ಅವರದ್ದು ಎನ್ನಲಾದ ಅಡಿಯೋ ಒಂದು ಸದ್ದು ಮಾಡಿತ್ತು. ಅದರಲ್ಲಿ ಶಿವರಾಜ್ ಕುಮಾರ್, ಧ್ರುವ ಸರ್ಜಾ, ದರ್ಶನ್ ಬಗ್ಗೆ ಕೆಟ್ಟದಾಗಿ ಮಾತುಗಳನ್ನಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮನು ಇಂದು ಶಿವರಾಜ್ ಕುಮಾರ್ ಅವರ ಕಾಲಿಗೆ ಬಿದ್ದು

ಶಿವರಾಜ್ ಕುಮಾರ್ ಬಳಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು Read More »

ಹಿಂದಿನ ಅವಧಿಯ ಅನುದಾನದಲ್ಲಿ ಆಗಿರುವ ಅಭಿವೃದ್ಧಿಯನ್ನು ತಮ್ಮದೆಂದು ಬಿಂಬಿಸುವುದನ್ನು ಹಾಲಿ ಶಾಸಕರು ನಿಲ್ಲಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ರಾಜೇಶ್‍ ಬನ್ನೂರು

ಪುತ್ತೂರು: ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃದ್ಧಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಆರೋಪಿಸಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಶಾಸಕರ ಉತ್ಸಾಹ ದೇವರ ಭಕ್ತರಾದ ನಮಗೆಲ್ಲಾ ಸಂತೋಷ. ಆದರೆ ದೇವಳದ ಸುತ್ತಮುತ್ತಲಿನ ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು

ಹಿಂದಿನ ಅವಧಿಯ ಅನುದಾನದಲ್ಲಿ ಆಗಿರುವ ಅಭಿವೃದ್ಧಿಯನ್ನು ತಮ್ಮದೆಂದು ಬಿಂಬಿಸುವುದನ್ನು ಹಾಲಿ ಶಾಸಕರು ನಿಲ್ಲಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ರಾಜೇಶ್‍ ಬನ್ನೂರು Read More »

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ – ಪುತ್ತೂರಿನಿಂದ ಹೋದ 150ಕ್ಕೂ ಹೆಚ್ಚು ವಾಹನ

ಪುತ್ತೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ, ವಿರೋಧ ಆಗುತ್ತಿರುವ ಸಂದರ್ಭ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ  ಮಧ್ಯಾಹ್ನ ಧರ್ಮ ಜಾಗೃತಿಯ ಬೃಹತ್ ಯಾತ್ರೆ ನಡೆಯಿತು. ಪುತ್ತೂರಿನಿಂದ 150ಕ್ಕೂ ಹೆಚ್ಚು ವಾಹನ ಧರ್ಮಸ್ಥಳಕ್ಕೆ ತೆರಳಿದೆ. ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಕೊನೆಯಲ್ಲಿ ಧರ್ಮ ಜಾಗೃತಿ ಯಾತ್ರೆಗೆ ತೆಂಗಿನ ಕಾಯಿ

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ – ಪುತ್ತೂರಿನಿಂದ ಹೋದ 150ಕ್ಕೂ ಹೆಚ್ಚು ವಾಹನ Read More »

ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ದಾಖಲಾದ ಪ್ರಕರಣ ಕ್ಕೆ ಸಂಬಂಧಿಸಿದ ವಿಚಾರಣೆಗೆ ತನ್ನ ವಕೀಲರ ಜೊತೆಗೆ ಎರಡನೇ ದಿನ ವಿಚಾರಣೆಗೆ ಹಾಜರಾಗಿದ್ದಾನೆ. ಆ. 24 ರಂದು ಮಧ್ಯಾನ 1.30 ರಿಂದ ಸಂಜೆ 6 ರ ವರೆಗೆ ಸಮೀರ್ ‌ವಿಚಾರಣೆ ನಡೆದಿದ್ದು, ಇಂದು ಸಹ ಮುಂದುವರೆದಿದೆ. ಇಂದು ಆತನಿಂದ ಕೆಲವು ದಾಖಲೆಗಳಿಗೆ ಸಹಿ ಹಾಕಿಸಿಕೊಂಡು ಕಳುಹಿಸಿದ್ದಾಗಿ ತಿಳಿದು ಬಂದಿದೆ.

ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ Read More »

ಧರ್ಮಸ್ಥಳ ಪ್ರಕರಣ NIA ಗೆ ವಹಿಸುವ ಅಗತ್ಯ ಇಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪೊಲೀಸರು ತನಿಖೆಗೆ ಅಗತ್ಯವಾದ ಎಲ್ಲವನ್ನೂ ಮಾಡುತ್ತಾರೆ. ಅದು ಮಾಡಿ, ಇದು ಮಾಡಿ ಎನ್ನಲು ನಾವು ಯಾರು? ಮಂಪರು ಪರೀಕ್ಷೆ ಬೇಕೋ ಬೇಡವೋ ಎನ್ನುವುದನ್ನು ನಾನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. SIT ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿದೆ. ಅದನ್ನು NIA ಗೆ ವಹಿಸುವ ಅಗತ್ಯ ಇಲ್ಲ. ಮೊದಲು ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ. ಅದರಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ಹಾಗೆಯೇ ತನಿಖೆಯನ್ನು ಮಾಡಲು ಸಮಯ ನಿಗದಿ ಮಾಡಲು

ಧರ್ಮಸ್ಥಳ ಪ್ರಕರಣ NIA ಗೆ ವಹಿಸುವ ಅಗತ್ಯ ಇಲ್ಲ: ಡಾ. ಜಿ. ಪರಮೇಶ್ವರ್ Read More »

error: Content is protected !!
Scroll to Top