ನಕಲಿ ಕ್ರೀಡಾ ಪರಿಕರ ಮಾರಾಟ ಅಂಗಡಿಗಳಿಗೆ ಪೊಲೀಸರ ದಾಳಿ, ವಸ್ತುಗಳು ವಶಕ್ಕೆ

ಮಂಗಳೂರು: ನಕಲಿ‌ ಕ್ರೀಡಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿದ ಪೊಲೀಸರು ಕ್ರೀಡಾ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ನಕಲಿ ಕ್ರೀಡಾ ಸಾಮಗ್ರಿಗಳು ಮಾರಟವಾಗುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿ. ನ ದಕ್ಷಿಣ ಭಾರತದ ಪ್ರಾದೇಶಿಕ ಮುಖ್ಯಸ್ಥರಾದ ಸ್ಟೀಫನ್ ರಾಜ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಆ. 18 ಮತ್ತು 19 ರಂದು ಸ್ಪೋರ್ಟ್ಸ್ ವಿನ್ನರ್ ಅಂಗಡಿ, ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದೇವ […]

ನಕಲಿ ಕ್ರೀಡಾ ಪರಿಕರ ಮಾರಾಟ ಅಂಗಡಿಗಳಿಗೆ ಪೊಲೀಸರ ದಾಳಿ, ವಸ್ತುಗಳು ವಶಕ್ಕೆ Read More »

ಅಡಿಕೆ ಕೊಳೆರೋಗ ವ್ಯಾಪಕವಾಗಿದೆ | ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ |  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಮೀಕ್ಷೆ |  ಸೂಕ್ತ ಪರಿಹಾರಕ್ಕೆ ಒತ್ತಾಯ

ಈ ಬಾರಿಯ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗ ವ್ಯಾಪಕವಾಗಿದೆ. ಆದರೆ ಎಷ್ಟು ನಷ್ಟವಾಗಿದೆ ಹಾಗೂ ಅಡಿಕೆ ಹಾನಿಗೆ ಕಾರಣವೇನು ಎಂಬುದರ ಬಗ್ಗೆ “ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ” ವು ಕೊಳೆರೋಗದ ಸಮೀಕ್ಷೆ ಆನ್‌ಲೈನ್‌ ಮೂಲಕ ನಡೆಸಿತ್ತು. ಈ ವರದಿಯ ಪ್ರಕಾರ ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದಲ್ಲಿ ಅಡಿಕೆ ನಷ್ಟವಾಗಿದೆ. ಹೀಗಾಗಿ ಸರ್ಕಾರವು ಈ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ

ಅಡಿಕೆ ಕೊಳೆರೋಗ ವ್ಯಾಪಕವಾಗಿದೆ | ಈ ಬಾರಿ ಶೇ.50 ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ |  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಮೀಕ್ಷೆ |  ಸೂಕ್ತ ಪರಿಹಾರಕ್ಕೆ ಒತ್ತಾಯ Read More »

ಧರ್ಮಸ್ಥಳ ಪ್ರಕರಣ: ಹೇಳಿಕೆ ನೀಡದಂತೆ ಸಂಪುಟ ಸಹೊದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಹೇದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ವೈಯಕ್ತಿಕ ಅಭಿಪ್ರಾಯ ಮತ್ತು ಸಚಿವರ ಅಭಿಪ್ರಾಯದ ನಡುವೆ ವ್ಯತ್ಯಾಸವಿದೆ ಎನ್ನುವುದು ಗಮನದಲ್ಲಿ ಇರಬೇಕು. ಸರ್ಕಾರದ ನಿಲುವಿನ ಬಗ್ಗೆ ವಿಧಾನಸೌಧದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಗೃಹ ಸಚಿವ ಪರಮೇಶ್ವರ್ ಈ ಬಗ್ಗೆ ಉತ್ತರ ನೀಡಬೇಕು. ಉಳಿದ ಸಚಿವರು ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.

ಧರ್ಮಸ್ಥಳ ಪ್ರಕರಣ: ಹೇಳಿಕೆ ನೀಡದಂತೆ ಸಂಪುಟ ಸಹೊದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ Read More »

ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಸಹಾಯಧನ ಹಸ್ತಾಂತರ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಪುತ್ತೂರು ಬಜೆತ್ತೂರು ನಿವಾಸಿ ರೇಷ್ಮಾ ಅವರ ಗಂಡ ಕಳೆದ ಹಲವಾರು ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ವತಿಯಿಂದ ಆರ್ಥಿಕ ಧನಸಹಾಯ ವಿತರಿಸಲಾಯಿತು. ಪುತ್ತಿಲ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಧನಸಹಾಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ,  ಗೌರವಾಧ್ಯಕ್ಷ ಚಂದಪ್ಪ ಮೂಲ್ಯ, ಅಧ್ಯಕ್ಷ ಮಹೇಂದ್ರವರ್ಮ, ನಿಯೋಜಿತ ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ,

ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಸಹಾಯಧನ ಹಸ್ತಾಂತರ Read More »

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ

ಬೆಂಗಳೂರು: ಶಾಲೆಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯನ್ನು ಕೈಬಿಡಬೇಕು ‌ಎಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘಗಳು, ಪೋಷಕರ ಗುಂಪುಗಳು, ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ‌. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ AI ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಘೋಷಿಸಿದೆ. ಆದರೆ ಇದು ದುರುಪಯೋಗವಾಗುವ ಸಾಧ್ಯತೆ

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ Read More »

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ?

ನವದೆಹಲಿ: ಸೆ. 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್‌ನ ‌ಮಾಜಿ ಜಡ್ಜ್ ಜಸ್ಟೀಸ್ ಬಿ. ಸುದರ್ಶನ್ ರೆಡ್ಡಿ ಅವರನ್ನು ವಿಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಎನ್.ಡಿ.ಎ. ಯು ತಮಿಳುನಾಡಿನ ಬಿಜೆಪಿ ಮಾಜಿ ಅಧ್ಯಕ್ಷ, ಮಹಾರಾಷ್ಟ್ರ ಗವರ್ನರ್ ಸಿ.ಪಿ.‌ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ವಿಪಕ್ಷಗಳು ‌ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿರುವುದಾಗಿದೆ. ಆಗಸ್ಟ್ 21 ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ ಬಳಿಕ ನಾಮ ಪತ್ರ ಪರಿಶೀಲನೆ,

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಾರು ಗೊತ್ತಾ? Read More »

ಕರಾವಳಿಯಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಸರ್ಕಾರದ ನಿರ್ಲಕ್ಷ್ಯ – ವಿಧಾನ ಪರಿಷತ್ತಿನಲ್ಲಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

ಬೆಂಗಳೂರು: ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ತಮ್ಮ ಚುಕ್ಕಿ ಗುರುತಿನ ಪ್ರಶ್ನೆಯಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಗೃಹ ಸಚಿವರಿಗೆ ಪ್ರಶ್ನೆ ಕೇಳಿದರು. ಕರಾವಳಿಯಲ್ಲಿ ನಡೆಯುತ್ತಿರುವ ಕೋಮು ಅಶಾಂತಿ ಪ್ರಕರಣಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತೋರಿಸುತ್ತಿರುವ ನಿರ್ಲಕ್ಷ್ಯವನ್ನು ಅವರು ತೀವ್ರವಾಗಿ ಟೀಕಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕರಾವಳಿಯಲ್ಲಿ ಕೋಮು ಸೌಹಾರ್ದತೆ ಬೇಕು ಎನ್ನುವ ಆಸಕ್ತಿ ಏಕಿಲ್ಲ ಎನ್ನುವುದು ವಿಪರ್ಯಾಸವಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಹತ್ತಾರು ಜನರು ಸುತ್ತುವರಿದು

ಕರಾವಳಿಯಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಸರ್ಕಾರದ ನಿರ್ಲಕ್ಷ್ಯ – ವಿಧಾನ ಪರಿಷತ್ತಿನಲ್ಲಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ Read More »

ನಾರಾಯಣ ಗುರುಗಳನ್ನು ಅವಮಾನಿಸಲು ಮಹಮ್ಮದಾಲಿ ಯಾರು ? ಪತ್ರಿಕಾಗೋಷ್ಠಿಯಲ್ಲಿ ಆರ್.ಸಿ.ನಾರಾಯಣ್

ಪುತ್ತೂರು: ಪುತ್ತೂರು: ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಖಂಡಿಸುವ ಭರದಲ್ಲಿ ಪುತ್ತೂರಿನ ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಉಲ್ಲೇಖಿಸಿ ಅವಮಾನಕರ ರೀತಿಯ ಮಾತುಗಳನ್ನಾಡಿದ್ದಾರೆ. ಇದು ಖಂಡನೀಯ. ಸರ್ವ ಧರ್ಮಗಳನ್ನೂ ಗೌರವಿಸುತ್ತಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ವಿವಾದದ ಮಧ್ಯೆ ಎಳೆದು ತರುವುದು ತಪ್ಪು ಎಂದು ಬಿಜೆಪಿ ಹೇಳಿಕೆ. ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನಾರ್ದನ ಪೂಜಾರಿ ಅವರು

ನಾರಾಯಣ ಗುರುಗಳನ್ನು ಅವಮಾನಿಸಲು ಮಹಮ್ಮದಾಲಿ ಯಾರು ? ಪತ್ರಿಕಾಗೋಷ್ಠಿಯಲ್ಲಿ ಆರ್.ಸಿ.ನಾರಾಯಣ್ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌”

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ|ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು. ಸುಗಿಪು-ದುನಿಪು ವಿಶೇಷ ಕಾರ್ಯಕ್ರಮದಲ್ಲಿ ತುಳು ಮಹಾಕಾವ್ಯ ಮಂದಾರ ರಾಮಾಯಣದ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” Read More »

ಬಿ.ಎಲ್‌.ಸಂತೋಷ್‌ ನಿಂದನೆ : ತಿಮರೋಡಿ ವಿರುದ್ಧ ದೂರು ದಾಖಲು

ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ವಾಚಾಮಗೋಚರವಾಗಿ ನಿಂದಿಸಿದ ಮಹೇಶ್‌ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಫೇಸ್‌ಬುಕ್‌ ವೀಡಿಯೊದಲ್ಲಿ ಮಹೇಶ್‌ ತಿಮರೋಡಿ ಎಂಬ ವ್ಯಕ್ತಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಹಿರಿಯ ಹಿಂದೂ ನಾಯಕರಾಗಿರುವ ಬಿ.ಎಲ್‌.ಸಂತೋಷ್‌ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ ತೇಜೋವಧೆ ಮಾಡಿದ್ದಾರೆ. ಈ ಮೂಲಕ ವಿಭಿನ್ನ ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲೆ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್‌ ಕುಲಾಲ್‌ ಎಂಬವರು

ಬಿ.ಎಲ್‌.ಸಂತೋಷ್‌ ನಿಂದನೆ : ತಿಮರೋಡಿ ವಿರುದ್ಧ ದೂರು ದಾಖಲು Read More »

error: Content is protected !!
Scroll to Top