ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ: ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ, ಆರೋಪಿಯಿಂದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ. ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.4ರಂದು  ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಆರೋಪಿಯನ್ನು […]

ಸರಗಳ್ಳತನ ಆರೋಪಿ ಬಂಧನ | ಸೊತ್ತುಗಳನ್ನು ವಶಪಡಿಸಿಕೊಂಡ ುಪ್ಪಿನಂಗಡಿ ಪೊಲೀಸರು Read More »

ಸುಜಾತ ಭಟ್‌ ತೋರಿಸಿದ ಫೋಟೊ ಅನನ್ಯಾಳದ್ದಲ್ಲ, ವಾಸಂತಿ ಎಂಬ ಮಹಿಳೆಯದ್ದು!

ಒಂದೇ ದಿನದಲ್ಲಿ ಬಹಿರಂಗವಾಯಿತು ಫೋಟೊ ಅಸಲಿಯತ್ತು ಬೆಂಗಳೂರು: ಧರ್ಮಸ್ಥಳ ಪ್ರಕರಣ ದಿನ ಕಳೆದಂತೆ ಜಟಿಲವಾಗುತ್ತಿದೆ. ನಿನ್ನೆ ಸುಜಾತ ಭಟ್‌ ಎಂಬ ವೃದ್ಧೆ ಧರ್ಮಸ್ಥಳದಲ್ಲಿ 40 ವರ್ಷದ ಹಿಂದೆ ನಾಪತ್ತೆಯಾಗಿರುವ ತನ್ನ ಪುತ್ರಿ ಅನನ್ಯಾ ಭಟ್‌ ಇವಳೇ ಎಂದು ಹೇಳಿ ತೋರಿಸಿದ್ದ ಕಲರ್‌ ಫೋಟ್‌ ಯಾರದ್ದು ಎನ್ನುವುದನ್ನು ಸುದ್ದಿವಾಹಿನಿಯೊಂದು ಪತ್ತೆ ಹಚ್ಚಿ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಆರೋಪಕ್ಕೆ ಇನ್ನೊಂದು ಪುರಾವೆ ಒದಗಿಸಿದೆ. 2007ರಲ್ಲಿ ಸಾವಿಗೀಡಾಗಿರುವ ಕೊಡಗು ಮೂಲದ ವಾಸಂತಿ ಎಂಬ ಯುವತಿಯ ಕಾಲೇಜು ದಿನಗಳ

ಸುಜಾತ ಭಟ್‌ ತೋರಿಸಿದ ಫೋಟೊ ಅನನ್ಯಾಳದ್ದಲ್ಲ, ವಾಸಂತಿ ಎಂಬ ಮಹಿಳೆಯದ್ದು! Read More »

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ

ಸುಳ್ಳು ಸುದ್ದಿ, ಭಾವನೆಗಳನ್ನು ಕೆರಳಿಸುವ ವೀಡಿಯೊ ಮಾಡದಂತೆ ಯೂಟ್ಯೂಬರ್‌ಗಳಿಗೆ ಖಡಕ್‌ ಎಚ್ಚರಿಕೆ ಮಂಗಳೂರು: ತಮಿಳುನಾಡಿನಲ್ಲಿದ್ದ ವೇಳೆ ಗುಂಪೊಂದು ತನ್ನನ್ನು ಸಂಪರ್ಕಿಸಿತ್ತು ಎಂದು ದೂರುದಾರ ಮುಸುಕುಧಾರಿ ವ್ಯಕ್ತಿ ಹೇಳಿಲ್ಲ ಎಂದು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೆ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ

ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ Read More »

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು

ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ ರವರಿಗೆ ಏಕವಚನದಲ್ಲಿ ಮಾತನಾಡಿರುವುದಲ್ಲದೆ ಹೆಣ್ಣು ಮಕ್ಕಳ ಬಗ್ಗೆ ಅವಮಾನ  ರೀತಿಯಲ್ಲಿ ಮಾತನಾಡಿ ಗುಂಪು ಘರ್ಷಣೆಗೆ ಪ್ರಚೋದನೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಮಹೇಶ್ ತಿಮರೋಡಿಯವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವ ಸಮಯದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಅವರನ್ನು ಅವಿವೇಕಿ, ಪಾಪಿ ಎಂದು ನಿಂಧಿಸಿದಲ್ಲದೆ ಶಿವಮೊಗ್ಗ, ಪುತ್ತೂರು, ಬೆಂಗಳೂರು, ದೆಹಲಿಯಲ್ಲಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‍.ಸಂತೋಷ್‍ ರವರಿಗೆ ಏಕವಚನದಲ್ಲಿ ಅವಮಾನ | ಮಹೇಶ್‍ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ನಗರ ಠಾಣೆಗೆ ದೂರು Read More »

ಸವಣೂರು : ಪ್ರಚಂಡ ವೇಗದ ಬಿರುಗಾಳಿಗೆ ಅಡಕೆ ಮರಗಳು, ವಿದ್ಯುತ್‌ ಕಂಬಗಳು ಧರಾಶಾಯಿ

ಹಾರಿಹೋದ ಮನೆಗಳ ಛಾವಣಿ; ಅಪಾರ ನಾಶನಷ್ಟ ಕಡಬ: ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಪ್ರಚಂಡ ವೇಗದ ಬಿರುಗಾಳಿ ಬೀಸಿ ಅಪಾರ ನಾಶನಷ್ಟ ಉಂಟಾಗಿದೆ. ಅಡಕೆ ಮರಗಳು, ವಿದ್ಯುತ್‌ ಕಂಬಗಳು ಧರಾಶಾಯಿಯಾಗಿದ್ದು, ಹಲವು ಮನೆಗಳ ಹೆಂಚು, ಶೀಟ್‌ಗಳು ಹಾರಿಹೋಗಿವೆ. ಸವಣೂರು ಮೆಸ್ಕಾಂ ಉಪವಿಭಾಗದ ಕೆಡೆಂಜಿ, ಅರೆಲ್ತಡಿ, ಕುದ್ಮನಮಜಲು, ಪಟ್ಟೆ, ಮಡಕೆ ಮತ್ತು ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಮುಂಜಾನೆ 5 ಗಂಟೆ ವೇಳೆಗೆ ಬೀಸಿದ ಬಿರುಗಾಳಿ ವ್ಯಾಪಕವಾಗಿ ನಾಶ ಉಂಟುಮಾಡಿದೆ. ಅರೇಲ್ತಡಿ ಕೊರಗಜ್ಜನ ಕಟ್ಟೆ, ದೈವಸ್ಥಾನದ

ಸವಣೂರು : ಪ್ರಚಂಡ ವೇಗದ ಬಿರುಗಾಳಿಗೆ ಅಡಕೆ ಮರಗಳು, ವಿದ್ಯುತ್‌ ಕಂಬಗಳು ಧರಾಶಾಯಿ Read More »

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ, ಅಪಪ್ರಚಾರ | ವಿಶ್ವಹಿಂದು ಪರಿಷತ್‌ ನಿಂದ ಪ್ರಾರ್ಥನೆ, ಶಿವ ಪಂಚಾಕ್ಷರಿ ಪಠಣ

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಿ, ಭಕ್ತರಲ್ಲಿ ಕ್ಷೇತ್ರದ ಮೇಲೆ ಶ್ರದ್ಧೆ, ಭಕ್ತಿ ವೃದ್ಧಿಯಾಗುವಂತೆ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ ಹಾಗೂ ಪರಿವಾರ ಸಂಘಟನೆಗಳಿಂದ ಸೋಮವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಶಿವ ಪಂಚಾಕ್ಷರಿ ಪಠಣ ನಡೆಸಲಾಯಿತು. ದೇವಾಲಯದಲ್ಲಿ ತುಪ್ಪದ ದೀಪ ಹಚ್ಚಿ, ಮಹಾಲಿಂಗೇಶ್ವರನ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ 108 ಸಾಮೂಹಿಕ ಶಿವ ಪಂಚಾಕ್ಷರಿ ಪಠಣ ಮಾಡಿದರು. ವೇದಮೂರ್ತಿ ವಿ.ಎಸ್. ಭಟ್

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ, ಅಪಪ್ರಚಾರ | ವಿಶ್ವಹಿಂದು ಪರಿಷತ್‌ ನಿಂದ ಪ್ರಾರ್ಥನೆ, ಶಿವ ಪಂಚಾಕ್ಷರಿ ಪಠಣ Read More »

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ

ಎರಡು ವರ್ಷದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26 ಏರಿಕೆ ಬೆಂಗಳೂರು: ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ ಸರ್ಕಾರವೇ ತಿಳಿಸಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಶೇ.26ರಷ್ಟು ಹೆಚ್ಚಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022ರಲ್ಲಿ 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024ರ ವೇಳೆಗೆ 4,064ಕ್ಕೆ ಏರಿಕೆಯಾಗಿದೆ. 2025ರಲ್ಲಿ ಈವರೆಗೆ 2,544 ಪ್ರಕರಣಗಳು ದಾಖಲಾಗಿವೆ. ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದರೂ,

ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಳ Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿಗೆ ಕಗ್ಗಂಟಾದ ಮುಸುಕುಧಾರಿ ಅನಾಮಿಕ

ತೀವ್ರ ವಿಚಾರಣೆ ನಡೆಸಿದರೂ ಬಾಯಿ ಬಿಡದ ಮುಸುಕುಧಾರಿ ನಡೆಯ ಬಗ್ಗೆ ಅನುಮಾನ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಶೋಧವನ್ನು ಸ್ಥಗಿತಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಅನಾಮಿಕ ಮುಸುಕುಧಾರಿಯ ವಿಚಾರಣೆ ಪ್ರಾರಂಭಿಸಿದ್ದಾರೆ. ಸೋಮವಾರವೂ ಸುಮಾರು ಆರು ತಾಸುಗಳ ಕಾಲ ಮುಸುಕುಧಾರಿಯನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಸುಕುಧಾರಿ ಹೇಳಿದ ಕಡೆಯಲೆಲ್ಲ ಅಗೆದರೂ ಶವಗಳ ಯಾವುದೇ ಕುರುಹು ಸಿಗದಿರುವ

ಧರ್ಮಸ್ಥಳ ಪ್ರಕರಣ : ಎಸ್‌ಐಟಿಗೆ ಕಗ್ಗಂಟಾದ ಮುಸುಕುಧಾರಿ ಅನಾಮಿಕ Read More »

N.D.A. ಉಪರಾಷ್ಟ್ರಪತಿ ಅಭ್ಯರ್ಥಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿ‌ಎ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಅವರನ್ನು ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಅವರನ್ನು ಭೇಟಿ ಮಾಡಿ ಪ್ರಧಾನಿ ಶುಭಾಶಯ ತಿಳಿಸಿದರು. ಈ ಬಗ್ಗೆ ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ, ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದಕ್ಕೆ ‌ಶುಭಾಶಯಗಳನ್ನು ತಿಳಿಸಲಾಯಿತು. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ

N.D.A. ಉಪರಾಷ್ಟ್ರಪತಿ ಅಭ್ಯರ್ಥಿಗೆ ಪ್ರಧಾನಿ ಮೋದಿ ಅಭಿನಂದನೆ Read More »

ವಿಶ್ವ ದಾಖಲೆ ಬರೆದ ರಾಜ್ಯ ಸರ್ಕಾರದ ಶಕ್ತಿ ಯೋಜನೆ

ಬೆಂಗಳೂರು: Golden Book Of World Record ನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯು ಸ್ಥಾನ ಪಡೆದಿದೆ. ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆ ಬರೆದಿದೆ. ಈ‌ ಸಾಧನೆಯನ್ನು ಕೆ.ಎಸ್.ಆರ್.ಟಿ.ಸಿ., ಬಿಎಂಟಿಸಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿ ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸಮರ್ಪಿಸಲಾಗಿದೆ.

ವಿಶ್ವ ದಾಖಲೆ ಬರೆದ ರಾಜ್ಯ ಸರ್ಕಾರದ ಶಕ್ತಿ ಯೋಜನೆ Read More »

error: Content is protected !!
Scroll to Top