ಬಿಎಸ್‌ಎಫ್‌ನ 16 ಯೋಧರಿಗೆ ಶೌರ್ಯ ಪ್ರಶಸ್ತಿ

ನವದೆಹಲಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಅಸಾಧಾರಣ ಶೌರ್ಯ ಮೆರೆದ 16 ಮಂದಿ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಕೇಂದ್ರ ಸರ್ಕಾರ ಶೌರ್ಯ ಪ್ರಶಸ್ತಿ ಘೋಷಿಸಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅಚಲ ಪರಾಕ್ರಮ ತೋರಿದ ಸಾಹಸಿ ಬಿಎಸ್‌ಎಫ್ ಯೋಧರಿಗೆ ಶೌರ್ಯ ಪ್ರಶಸ್ತಿ ಘೋಷಿಸಲಾಗಿದ್ದು, ಸ್ವಾತಂತ್ರ್ಯ ದಿನದಂದು ಪುರಸ್ಕಾರ ಪ್ರಧಾನ‌ ನಡೆಯಲಿದೆ. ಈ ಸಂಬಂಧ ಬಿಎಸ್‌ಎಫ್ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದು, ಈ ಪುರಸ್ಕಾರಗಳು ಗಡಿ ಭದ್ರತಾ ಪಡೆಯ ಮೇಲೆ ದೇಶ ಇರಿಸಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು […]

ಬಿಎಸ್‌ಎಫ್‌ನ 16 ಯೋಧರಿಗೆ ಶೌರ್ಯ ಪ್ರಶಸ್ತಿ Read More »

ಕೋಲಾರ: ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಪೊಲೀಸ್ ವಶಕ್ಕೆ

ಕೋಲಾರ: ಮೂರು ಮಂದಿ ಮಕ್ಕಳು ಸೇರಿದಂತೆ ಒಟ್ಟು ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಶ್ರೀನಿವಾಸಪುರ ಪಟ್ಟಣ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸಪುರ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು ಅವರು ನೀಡಿದ ಮಾಹಿತಿಯನ್ವಯ ಪೊಲೀಸರು ಕಾರ್ಯಾಚರಣೆ ನಡೆಸಿರುವುದಾಗಿದೆ. ಬೆಂಗಳೂರು ಗ್ರಾಮಾಂತರದ ನಂದಿಗುಡಿ ‌ಸಮೀಪ ನಾಲ್ಕು ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ವಶಕ್ಕೆ ಪಡೆದಿರುವುದಾಗಿದೆ.

ಕೋಲಾರ: ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಪೊಲೀಸ್ ವಶಕ್ಕೆ Read More »

ಮರದ ಗೆಲ್ಲು ಬಿದ್ದು ಲಾರಿ ಚಾಲಕ ಸಾವು

ಬಂಟ್ವಾಳ: ಮರದ ಗೆಲ್ಲು ಮೈಮೇಲೆ ಬಿದ್ದು ಲಾರಿ ಚಾಲಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪೆರಾಜೆ ಗ್ರಾಮದ ಕುಡೋಲು ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ. ಮೃತರು ಮೂಡಬಿದ್ರೆಯ ಫೀಡ್ ತಯಾರಿಕಾ ಸಂಸ್ಥೆಯಲ್ಲಿ ಲಾರಿ ಚಾಲಕರಾಗಿದ್ದು, ಕಾಸರಗೋಡು ಕಡೆಗೆ ಫೀಡ್ ಲೋಡ್ ಮಾಡಿ ಕೊಂಡು ಹೋಗುತ್ತಿದ್ದಾಗ ಬದಿಯಡ್ಕ ಸಮೀಪದಲ್ಲಿ ಮರದ ಗೆಲ್ಲು ಇವರ ಮೇಲೆ ಬಿದ್ದಿತ್ತು. ರಸ್ತೆ ಬದಿಯಲ್ಲಿ ಬಿದ್ದಿದ್ದ ಮರದ ಗೆಲ್ಲನ್ನು ‌ಸರಿಸುವ ವೇಳೆ ಅವರ ಮೇಲೆ ಇನ್ನೊಂದು ಗೆಲ್ಲು ಬಿದ್ದು ಗಂಭೀರ ಗಾಯಗೊಂಡಿದ್ದರು.

ಮರದ ಗೆಲ್ಲು ಬಿದ್ದು ಲಾರಿ ಚಾಲಕ ಸಾವು Read More »

ಧರ್ಮಸ್ಥಳ ಪ್ರಕರಣ: 17 ನೇ ಪಾಯಿಂಟ್‌ನಲ್ಲೂ ಸಿಕ್ಕಿಲ್ಲ ಶವದ ಕುರುಹು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ದೂರುದಾರ ಅನಾಮಿಕ ಗುರುತಿಸಿದ 17 ನೇ ಸ್ಥಳದಲ್ಲಿ SIT ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ರೀತಿಯ ಶವದ ಕುರುಹು ಲಭ್ಯವಾಗಿಲ್ಲ ಎನ್ನಲಾಗಿದೆ. ಕನ್ಯಾಡಿಯ ದ್ವಾರಕಾಶ್ರಮದ ಗೇಟ್ ಒಳಗಿನ ಸರ್ಕಾರಿ ಜಾಗದಲ್ಲಿ 17 ನೇ ಪಾಯಿಂಟ್ ಇದ್ದು, ಅಲ್ಲಿ ಕಾರ್ಯಾಚರಣೆ ನಡೆಸಲು ದೂರುದಾರನ ಜೊತೆಗೆ SIT ಆಗಮಿಸಿದೆ. ಈ ಸ್ಥಳಕ್ಕೆ ಖಾಸಗಿ ಗೇಟ್ ಒಂದನ್ನು ಹಾದು ಹೋಗಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ವ್ಯಕ್ತಿಯನ್ನು ಕರೆಸಿ ಗೇಟ್ ಬೀಗ

ಧರ್ಮಸ್ಥಳ ಪ್ರಕರಣ: 17 ನೇ ಪಾಯಿಂಟ್‌ನಲ್ಲೂ ಸಿಕ್ಕಿಲ್ಲ ಶವದ ಕುರುಹು Read More »

79 ನೇ ಸ್ವಾತಂತ್ರ್ಯ ದಿನಕ್ಕೆ ಸಜ್ಜಾದ ಕೆಂಪುಕೋಟೆ

ನವದೆಹಲಿ: ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಾಳೆ 79 ನೇರ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಧ್ವಜಾರೋಹಣ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪು ಕೋಟೆ ಸರ್ವ ರೀತಿಯಲ್ಲಿ ಸಜ್ಜಾಗಿದೆ. ಸ್ವಾತಂತ್ರ್ಯ ದಿನದ ಬೆಳಗ್ಗೆ 9 ಗಂಟೆಗೆ ಕೆಂಪು ಕೋಟೆಯಲ್ಲಿ ಸಶಸ್ತ್ರ ಪಡೆಗಳು ಮತ್ತು ದೆಹಲಿ ಪೊಲೀಸರಿಂದ ಗೌರವ ವಂದನೆಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜ ಹಾರಿಸಲಿದ್ದಾರೆ. ನಂತರ ರಾಷ್ಟ್ರಗೀತೆ ಹಾಡಲಾಗುವುದು. 21 ಗುಂಡುಗಳ ಗೌರವ ವಂದನೆ ಮತ್ತು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳಿಂದ ಹೂವಿನ

79 ನೇ ಸ್ವಾತಂತ್ರ್ಯ ದಿನಕ್ಕೆ ಸಜ್ಜಾದ ಕೆಂಪುಕೋಟೆ Read More »

ದರ್ಶನ್ ಜಾಮೀನು ರದ್ದು: ಸಂತಸ ವ್ಯಕ್ತಪಡಿಸಿದ ರೇಣುಕಾಸ್ವಾಮಿ ಕುಟುಂಬ

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ್, ಪವಿತ್ರ ಗೌಡ ಮತ್ತು ಇತರ ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮೃತನ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಮಾತನಾಡಿ, ತಮ್ಮ ಮಗನ ಸಾವಿಗೆ ನ್ಯಾಯ ಒದಗಿಸುವ ಭರವಸೆ ಇದೆ ಎಂದು ಹೇಳಿದ್ದಾರೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು. ನಮ್ಮ ಮನೆಯವರು ಪೂಜೆಗೆ ಕುಳಿತ ಸಮಯದಲ್ಲೇ ಸುಪ್ರೀಂ ಕೋರ್ಟ್ ಆದೇಶ ಬಂದಿದೆ‌. ಈ ತೀರ್ಪಿನಿಂದ ಸಂತೋಷವಾಗಿದ್ದು, ನನ್ನ ಪತಿ

ದರ್ಶನ್ ಜಾಮೀನು ರದ್ದು: ಸಂತಸ ವ್ಯಕ್ತಪಡಿಸಿದ ರೇಣುಕಾಸ್ವಾಮಿ ಕುಟುಂಬ Read More »

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಘಟಕ (ಐಕ್ಯೂಎಸಿ) ಸಹಯೋಗದೊಂದಿಗೆ ಆಯೋಜಿಸಲಾದ ಎನ್‌ ಎಸ್‌ ಎಸ್‌ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 12, 2025ರಂದು ಕಾಲೇಜು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು “ಎನ್‌ ಎಸ್‌ ಎಸ್ ಕೇವಲ ಒಂದು ಘಟಕವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠಶಾಲೆ. ಇಲ್ಲಿ

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ Read More »

ದರ್ಶನ್ ಜಾಮೀನು ರದ್ದು: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, ಈ ಹಿನ್ನೆಲೆ‌ಯಲ್ಲಿ ನಟಿ ರಮ್ಯಾ ಅವರು ಇನ್ಸ್ಟಾಗ್ರಾಮ್‌ನಲ್ಲಿ ‌ಸ್ಟೋರಿ ಹಾಕಿಕೊಂಡಿದ್ದಾರೆ. ರೇಣುಕಾಸ್ವಾಮಿ ‌ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎನ್ನುವ ಬಲವಾದ ಸಂದೇಶವನ್ನು ರವಾನಿಸಿದೆ. ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ ಎಂದು ನಾನು ಉಳಿದವರಿಗೂ ಹೇಳಲು ಬಯಸುತ್ತೇನೆ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಡಿ. ಈ ಪ್ರಯಾಣ ಧೀರ್ಘ ಮತ್ತು ಕಠಿಣ.

ದರ್ಶನ್ ಜಾಮೀನು ರದ್ದು: ನಟಿ ರಮ್ಯಾ ಹೇಳಿದ್ದೇನು ಗೊತ್ತಾ? Read More »

ಆ. 16 – 18: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಆಗಸ್ಟ್ 16, 17 ಮತ್ತು 18 ರಂದು ಒಟ್ಟು ಮೂರು ದಿನಗಳು ರಾಜಭವನದ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜಭವನ ಮಾಹಿತಿ ನೀಡಿದೆ. ಸದರಿ ಮೂರು ದಿನಗಳು ಸಂಜೆ 6 ರಿಂದ 7:30 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ರಾಜಭವನದ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಸರ್ಕಾರದಿಂದ ವಿತರಿಸಿರುವ/ಸ್ಪಷ್ಟವಾಗಿ ಭಾವಚಿತ್ರವಿರುವ ಐ.ಡಿ. ಕಾರ್ಡ್ ಅನ್ನು ಕಡ್ಡಾಯವಾಗಿ ತರುವುದು. ರಾಜಭವನದ ಪ್ರವೇಶದ ಸಂದರ್ಭದಲ್ಲಿ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡುವುದು.

ಆ. 16 – 18: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ Read More »

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ಆರೋಪಿ ಎಷ್ಟೇ ದೊಡ್ಡವನಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ ಎಂದ ಕೋರ್ಟ್‌ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಮಾಡಿ ತೀರ್ಪತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ Read More »

error: Content is protected !!
Scroll to Top