ಪುತ್ತೂರು ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ
ಪುತ್ತೂರು: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಲಕ್ಷ್ಮೀ ದೇವಿ ಬೆಟ್ಟದಲ್ಲಿ ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಶುಕ್ರವಾರ ಶ್ರೀ ಮಹಾಲಕ್ಷ್ಮೀಗೆ ವಿಶೇಷ ಅಲಂಕಾರ, ಮಹಾಪೂಜೆ ಜರಗಿತು.ಬಳಿಕ ಶ್ರೀಕೃಷ್ಣ ಉಪಾಧ್ಯಾಯ ಅವರ ಪುರೋಹಿತ್ಯದಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಎನ್. ಐತ್ತಪ್ಪ ಸಪಲ್ಯರವರು ಮುತ್ತೈದೆಯರಿಗೆ ಬಳೆ, ರವಿಕೆ ಕಣ, ಹೂವು, ದಾರ ನೀಡುವುದರ ಮೂಲಕ ವಾಯನ ದಾನ ಮಾಡಿದರು.ಭಕ್ತಾದಿಗಳಿಗೆ ಸುಖ, ಶಾಂತಿ, ನೆಮ್ಮದಿ, ಸಕಲ ಐಶ್ವರ್ಯವನ್ನು ನೀಡಲಿ ಎಂದು ಹಾರೈಸಿದರು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ಪುತ್ತೂರು ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »










