ತೋಡಿನಲ್ಲಿ ಮಹಿಳೆಯ ಶವ ಪತ್ತೆ

ಪುತ್ತೂರು : ತಾಲೂಕಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ(35) ಎಂದು ಗರುತಿಸಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೋಲಿಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸ್ಥಳೀಯರು ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಪೋಲಿಸರ ತನಿಖೆಯ ಬಳಿಕವಷ್ಟೇ ನಿಖರ ಮಾಹಿತಿ ತಿಳಿಯಬೇಕಾಗಿದೆ.

ತೋಡಿನಲ್ಲಿ ಮಹಿಳೆಯ ಶವ ಪತ್ತೆ Read More »

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟ ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ನಡೆದಿದ್ದು, ಪುತ್ತೂರಿನ ನರೇಂದ್ರ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ತರುಣ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೃತಿ ಎಚ್., ಸಿಂಚನಾ ಎಸ್. ಎಮ್.,ಶೀಲಾ ಎಸ್. ,ಶಷ್ಟಿಕಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ,

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಕಾಡಾನೆ ದಾಳಿಗೆ ವೃದ್ಧ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಬುಧವಾರ ತಡರಾತ್ರಿ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ ವ್ಯಕ್ತಿ. ಶಿವಪ್ಪ ಅವರು ಬುಧವಾರ ರಾತ್ರಿ ಸುಮಾರು 10.30 ರ ಸಮಯ ಮನೆ ಬಳಿಯ ತೋಟದಲ್ಲಿ ನಾಯಿ ಬೊಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭ ಆನೆ ತುಳಿದಿದೆ. ತಕ್ಷಣ ಅವರನ್ನು ಮನೆಯವರು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಡಾನೆ ದಾಳಿಗೆ ವೃದ್ಧ ಬಲಿ Read More »

ಆ.16 : ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ

ಪುತ್ತೂರು: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 15ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಇದರ ಜೊತೆಗೆ ಆ.9ರಂದು ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ, ಆ.10ಕ್ಕೆ ಕೃಷ್ಣವೇಷ, ಶಂಖನಾದ ಸ್ಪರ್ಧೆ, ಆ.16ಕ್ಕೆ ಬೆಳಗ್ಗಿನಿಂದಲೇ ವಿವಿಧ ಸ್ಪರ್ಧೆಗಳು ಜರುಗಲಿದೆ ಎಂದು ವಿಶ್ವಹಿಂದು

ಆ.16 : ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ Read More »

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌

ಖಾಸಗಿ ವಾಹಿನಿ ವರದಿಗಾರರ ಮೇಲೆ ಹಲ್ಲೆ ಮಾಡಿದ ಕೇಸ್‌ ದಾಖಲು ಮಂಗಳೂರು: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣನವರ್‌ , ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್‌ (ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್‌ ಸಮೀರ್‌(ಎ3),

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ

ಮೂರು ವರ್ಷದ ಹಿಂದೆ ಆಟೋರಿಕ್ಷಾದಲ್ಲಿ ಬಾಂಬ್‌ ಸ್ಫೋಟಗೊಂಡ ಪ್ರಕರಣ ಮಂಗಳೂರು : ಮಂಗಳೂರಿನ ಕಂಕನವಾಡಿ ಬಳಿ 2022ರಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಗೆ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ. ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಸೈಯದ್ ಯಾಸೀನ್​ನ ಬ್ಯಾಂಕ್​ ಖಾತೆಯನ್ನು ಜಪ್ತಿ ಮಾಡಲಾಗಿದೆ. ಉಗ್ರ ಸಂಘಟನೆಯನ್ನು ಭಾರತದಾದ್ಯಂತ ವಿಸ್ತರಿಸುವುದು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ Read More »

ಗಂಧದ ಮರ ಕಳ್ಳತನ : ಮೂವರು ಬಂಧನ

ರಾತ್ರಿ ಹೊತ್ತು ತೋಟದಲ್ಲಿದ್ದ 9 ಗಂಧದ ಮರ ಕಡಿದು ಸಾಗಿಸಿದ್ದ ಆರೋಪಿಗಳು ಕಾರ್ಕಳ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಜೂನ್ 16ರಂದು ರಾತ್ರಿ ಕಳ್ಳತನ ಮಾಡಿಕೊಂಡು ಹೋಗಿದ್ದ ಬಂಟ್ವಾಳದ ಓರ್ವನ ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕಳವು ಮಾಡಲಾದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ 2023 ಕಲಂ 86,87 ಕರ್ನಾಟಕ ಅರಣ್ಯ ಕಾಯ್ದೆ1963ರಂತೆ

ಗಂಧದ ಮರ ಕಳ್ಳತನ : ಮೂವರು ಬಂಧನ Read More »

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ

ಕ್ಷೇತ್ರಕ್ಕೆ ಅವಮಾನ ಮಾಡುತ್ತಿರುವವರ ವಿರುದ್ಧ ಸಿಡಿದ ಧರ್ಮಸ್ಥಳ ಗ್ರಾಮಸ್ಥರು ಮಂಗಳೂರು: ಬುಧವಾರ ನಡೆದ ಹಲ್ಲೆ, ಘರ್ಷಣೆಯ ಅಹಿತಕರ ಘಟನೆಯ ಬಳಿಕ ಧರ್ಮಸ್ಥಳದ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಇದರ ನಡುವೆಯೇ ಇಂದು ಅತಿ ಮಹತ್ವದ್ದು ಎನ್ನಲಾಗಿರುವ 13ನೇ ಪಾಯಿಂಟ್‌ನಲ್ಲಿ ಅಗೆತ ಕಾರ್ಯಾಚರಣೆ ನಡೆಯಲಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ನಡುವೆ ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ ಕಗ್ಗಂಟಾಗಿದೆ. ದೂರುದಾರ ಮುಸುಕುಧಾರಿ ತೋರಿಸಿದ

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ Read More »

ಟ್ರಂಪ್‌ ಸುಂಕ ಡಬ್ಬಲ್‌

ಭಾರತದ ಮೇಲೆ ಮತ್ತೆ ಶೇ.25 ಸುಂಖ ವಿಧಿಸಿದ ಅಮೆರಿಕ ಅಧ್ಯಕ್ಷ ನವದೆಹಲಿ : ರಷ್ಯಾದಿಂದ ತೈಲ ಖರೀದಿಸುತ್ತಿರುವುದರ ವಿರುದ್ದ ಭಾರತದ ಮೇಲೆ ಕೆಂಡ ಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಮತ್ತೆ ಶೇ.25 ವ್ಯಾಪಾರ ಸುಂಕ ವಿಧಿಸಿದ್ದಾರೆ. ಇದರೊಂದಿಗೆ ಭಾರತದ ಮೇಲೆ ಟ್ರಂಪ್‌ ಶುಲ್ಕ ಶೇ.50ಕ್ಕೇರಿದಂತಾಗಿದೆ.ಮಂಗಳವಾರವಷ್ಟೇ 24 ಗಂಟೆಯೊಳಗೆ ಭಾರತದ ಮೇಲಿನ ಸುಂಕವನ್ನು ಗಣನೀಯವಾಗಿ ಹೆಚ್ಚಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಟ್ರಂಪ್‌ ಹೇಳಿದಂತೆ ಮಾಡಿ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕ ವಿಧಿಸಿದ್ದಾರೆ. ಈ ಮೂಲಕ

ಟ್ರಂಪ್‌ ಸುಂಕ ಡಬ್ಬಲ್‌ Read More »

ಧರ್ಮಸ್ಥಳ: ಯೂಟ್ಯೂಬರ್ಸ್ ಮೇಲೆ ಹಲ್ಲೆ, ಪೊಲೀಸರಿಂದ ಲಘು ಲಾಠಿ ಚಾರ್ಜ್

ಧರ್ಮಸ್ಥಳ: ಈಗಾಗಲೇ ದೇಶದೆಲ್ಲೆಡೆ ಸದ್ದು ಮಾಡಿರುವ ಧರ್ಮಸ್ಥಳ ಪ್ರಕರಣದಲ್ಲಿ ಅನಾಮಿಕ ದೂರುದಾರ ಗುರುತಿ ಮಾಡಿದ ಸ್ಥಳಗಳಲ್ಲಿ SIT ಶೋಧ ಕಾರ್ಯ ನಡೆಸುತ್ತಿದೆ. ಅದೇ ಪರಿಸರದಲ್ಲಿ ಇಂದು ಸಂಜೆ ಅಹಿತಕರ ಘಟನೆಯೊಂದು ಸದ್ದು ಮಾಡಿದೆ. ಸೌಜನ್ಯ ಪರ ಎಂದು ಹೇಳಿಕೊಂಡು ವಿಡಿಯೋಗಳನ್ನು ಮಾಡುತ್ತಿದ್ದ ಮೂವರು ಯೂಟ್ಯೂಬರ್ಸ್‌ ಮೇಲೆ ನೇತ್ರಾವತಿ ನದಿ ತೀರದ ಪಾಂಗಳ ಪರಿಸರದಲ್ಲಿ ಹಲ್ಲೆ ನಡೆದಿದೆ. ಯೂಟ್ಯೂಬರ್ಸ್ ಹಾಗು ಮತ್ತೊಂದು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು, ಹಲ್ಲೆಯ ವರೆಗೆ ತಲುಪಿದೆ. ಅಶಾಂತಿ ಸೃಷ್ಟಿಯಾಗುವ ಪರಿಸರ ನಿರ್ಮಾಣವಾದ

ಧರ್ಮಸ್ಥಳ: ಯೂಟ್ಯೂಬರ್ಸ್ ಮೇಲೆ ಹಲ್ಲೆ, ಪೊಲೀಸರಿಂದ ಲಘು ಲಾಠಿ ಚಾರ್ಜ್ Read More »

error: Content is protected !!
Scroll to Top