ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಕರ್ನಾಟಕದ ಸಿಎಂ ‌ಸಿದ್ದರಾಮಯ್ಯ ಅವರಿಗೆ ರೈತರ ಮೇಲೆ ದ್ವೇಷ ಮತ್ತು ತಾತ್ಸಾರ ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ರೈತ ಮೋರ್ಚಾ‌ದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ನೀತಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಆಳ್ವಿಕೆಯಲ್ಲಿ ರೈತರು ಕಂಗಾಲಾಗಿದ್ದಾರೆ. ನಾಡಿಗೆ ಅನ್ನ ಕೊಡುವ ರೈತರ ಮೇಲೆ ಸಿದ್ದರಾಮಯ್ಯ ಸರ್ಕಾರಕ್ಕೆ ತಾತ್ಸಾರ ಯಾಕೆ ಎಂದು ಗುಡುಗಿದ್ದಾರೆ. ಕಾಂಗ್ರೆಸ್ ನಾಯಕರು ರೈತರ ಮೇಲೆ ಕಾಳಜಿ ಇದೆ ಎಂಬಂತೆ ನಾಟಕವಾಡಿ ಮೊಸಳೆ […]

ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ Read More »

ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು?

ನವದೆಹಲಿ: ಕೇರಳದ ನರ್ಸ್ ‌ನಿಮಿಷಾ ಪ್ರಿಯಾ ಅವರ ಮರಣ ದಂಡನೆ ಶಿಕ್ಷೆಯನ್ನು ಯೆಮನ್ ಸರ್ಕಾರ ರದ್ದು ಮಾಡಿಲ್ಲ ಬದಲಾಗಿ ಮುಂದೂಡಿದೆ‌ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ಇನ್ನೂ ದೃಢೀಕರಣವಾಗದ ‌ವಿಷಯದ ಬಗ್ಗೆ ಹರಡುತ್ತಿರುವ ವದಂತಿಯ ಕುರಿತು ಎಚ್ಚರಿಕೆ ವಹಿಸುವಂತೆ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯೆಮನ್ ಅಧಿಕಾರಿಗಳು ಮತ್ತು ಇತರ ಮಿತ್ರ ರಾಷ್ಚ್ರಗಳು ಭಾರತಕ್ಕೆ ಸಹಕರಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ. ಯೆಮನ್ ಸರ್ಕಾರದ ಜೊತೆಗೆ ಭಾರತ ನಿರಂತರ ಮಾತುಕತೆ ನಡೆಸಿದ್ದು,

ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು? Read More »

ಚು. ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಮತ್ತೆ ಕೆಂಡ ಕಾರಿದ್ದಾರೆ. ಮತಕಳ್ಳತನದಲ್ಲಿ ಚುನಾವಣಾ ಆಯೋಗ ಭಾಗಿಯಾಗಿದೆ ಎನ್ನುವ ಮೂಲಕ ಈ ಬಾರಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಇತ್ತೀಚಿನ ಚುನಾವಣೆಗಳಿಗೆ ಸಂಬಂಧಿಸಿದ ಹಾಗೆ ಚುನಾವಣಾ ಆಯೋಗದ ಗಂಭೀರ ದುಷ್ಕೃತ್ಯವನ್ನು ಸ್ವತಂತ್ರ ತನಿಖೆ ಬಹಿರಂಗ ಮಾಡಿದೆ. ಬಿಜೆಪಿ‌ಗೆ ಸಹಾಯವಾಗುವಂತೆ ದೊಡ್ಡ ಮಟ್ಟದ ಮತ ಕಳ್ಳತನದಲ್ಲಿ ಭಾಗಿಯಾಗಿದೆ ಎಂದು ಹೇಳಿದ್ದಾರೆ.

ಚು. ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ ರಾಹುಲ್ ಗಾಂಧಿ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : 13 ಕಡೆ ಎನ್‌ಐಎ ದಾಳಿ

ಬಜ್ಪೆ, ಸುರತ್ಕಲ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಅಧಿಕಾರಿಗಳಿಂದ ಪರಿಶೋಧನೆ ಮಂಗಳೂರು: ಸಂಘ ಪರಿವಾರದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : 13 ಕಡೆ ಎನ್‌ಐಎ ದಾಳಿ Read More »

ಆ. 3: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ಇದರ ಮಹಾಸಭೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರಿನ ವಾರ್ಷಿಕ ಮಹಾಸಭೆಯು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ಆಗಸ್ಟ್ 3 ಭಾನುವಾರ ಬೆಳಗ್ಗೆ ಗಂಟೆ 10 ಕ್ಕೆ ಸರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮುದಾಯ ಬಾಂಧವರು ಹಾಜರಿರುವಂತೆ ಪ್ರಕಟಣೆಯಲ್ಲಿ ‌ತಿಳಿಸಲಾಗಿದೆ.

ಆ. 3: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ಇದರ ಮಹಾಸಭೆ Read More »

ದಿ. ನೇಮಣ್ಣ ಗೌಡರ ಧರ್ಮಪತ್ನಿ ಗಿರಿಜಾ ನಿಧನ

ಪುತ್ತೂರು: ಕರ್ಮಲ, ಬೊಳ್ವಾರು ನಿವಾಸಿ ದಿ. ನೇಮಣ್ಣ ಗೌಡ ಇವರ ಧರ್ಮಪತ್ನಿ ಗಿರಿಜಾ ಅವರು ಆ. 2 ರಂದು ನಿಧನರಾದರು. ಅವರಿಗೆ 92 ವರ್ಷವಾಗಿದ್ದು ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಮೇರ್ಲದಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದರು. ಮೃತರು ಪುತ್ರರಾದ ಸುರೇಶ್ ಗೌಡ, ಸತೀಶ್ ಪಿ., ರಾಜೇಶ್ ಕುಮಾರ್, ಪುತ್ರಿಯರಾದ ಯಶೋಧ, ವಿನೋದ, ಸರೋಜ, ಸೊಸೆಯಂದಿರಾದ ವಿಲಾಸಿನಿ ‌ಸುಂದರ ಗೌಡ, ಉಷಾಕಿರಣ್, ಪ್ರತಿಮಾ ಸತೀಶ್, ಮಮತಾ ರಾಜೇಶ್ ಮತ್ತು ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು

ದಿ. ನೇಮಣ್ಣ ಗೌಡರ ಧರ್ಮಪತ್ನಿ ಗಿರಿಜಾ ನಿಧನ Read More »

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ

ಹಳಿಯ ಇಂಟರ್‌ಲಾಕ್‌ ಕಿತ್ತು ಹಾಕಿದ ಪರಿಣಾಮ ಭೀಕರ ಅಪಘಾತ ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಉದ್ದೇಶಿತ ದುಷ್ಕೃತ್ಯ. ಹಳಿ ಇಂಟರ್‌ಲಾಕ್ ತೆಗೆದು ದುಷ್ಕೃತ್ಯ ಎಸಗಿದ್ದಾರೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ಕುರಿತು ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತ ಎ.ಎಂ.ಚೌಧರಿ, ಕಳೆದ ವರ್ಷ ಅಕ್ಟೋಬರ್‌ 11ರಂದು ಚೆನ್ನೈ ಸಮೀಪದ ಕವರೈ ಪಟ್ಟಿ ರೈಲ್ವೆ

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ Read More »

ಎನ್‌ಕೌಂಟರ್‌ಗೆ ಇನ್ನೋರ್ವ ಉಗ್ರ ಬಲಿ

ರಾತ್ರಿಯಿಡೀ ನಡೆದ ಕಾರ್ಯಾಚರಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್‌ ಅಖಾಲ್‌ʼ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ʻಆಪರೇಷನ್‌ ಅಖಾಲ್‌ʼ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ ಭದ್ರತಾ

ಎನ್‌ಕೌಂಟರ್‌ಗೆ ಇನ್ನೋರ್ವ ಉಗ್ರ ಬಲಿ Read More »

ಧರ್ಮಸ್ಥಳ ಪ್ರಕರಣ : 15 ವರ್ಷಗಳ ಪೊಲೀಸ್‌ ದಾಖಲೆಗಳು ನಾಶ?

ಆರ್‌ಟಿಐ ಅಡಿ ಕೇಳಿದ ಮಾಹಿತಿಗೆ ದಾಖಲೆಗಳನ್ನು ಡಿಲೀಟ್‌ ಮಾಡಲಾಗಿದೆ ಎಂದು ಉತ್ತರಿಸಿದ ಪೊಲೀಸರು ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ಇಸವಿಯಿಂದ 2015ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳು(ಯುಡಿಆರ್‌) ಡಿಲೀಟ್ ಆಗಿದೆ ಎಂದು ಹೇಳಲಾಗಿದ್ದು, ಇದು ಹೊಸ ವಿವಾದ ಸೃಷ್ಟಿಸಿದೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಅನಾಮಿಕ ವ್ಯಕ್ತಿ ಆರೋಪಿಸಿದ್ದಾರೆ. 1998 ಮತ್ತು 2014ರ ನಡುವೆ ಲೈಂಗಿಕ

ಧರ್ಮಸ್ಥಳ ಪ್ರಕರಣ : 15 ವರ್ಷಗಳ ಪೊಲೀಸ್‌ ದಾಖಲೆಗಳು ನಾಶ? Read More »

ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಹೋಟೆಲ್‌ ಕೋಣೆಯಲ್ಲಿ ನಿಗೂಢವಾಗಿ ಸಾವು

ಶೂಟಿಂಗ್‌ ಮುಗಿಸಿ ಬಂದ ನಟ ಶವವಾಗಿ ಪತ್ತೆ ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಕಲಾಭವನ್ ನವಾಸ್ (51) ಶುಕ್ರವಾರ ರಾತ್ರಿ ಛೋಟಾನಿಕ್ಕರದಲ್ಲಿರುವ ಹೋಟೆಲ್ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ನವಾಸ್ ಮುಂದಿನ ‘ಪ್ರಕಂಬನಂʼ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಚಿತ್ರೀಕರಣ ಮುಗಿಸಿ ಹೋಟೆಲ್‌ನಿಂದ ಚೆಕ್‌ಔಟ್ ಮಾಡಬೇಕಿತ್ತು. ಆದರೆ, ಸಮಯಕ್ಕೆ ತಮ್ಮ ಕೋಣೆಯಿಂದ ನಿರ್ಗಮಿಸದ ಕಾರಣ ರೂಮ್ ಬಾಯ್ ಅವರು ಹೋಗಿ ನೋಡಿದಾಗ ನವಾಸ್ ಅವರು ಪ್ರಜ್ಞೆತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು,

ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಹೋಟೆಲ್‌ ಕೋಣೆಯಲ್ಲಿ ನಿಗೂಢವಾಗಿ ಸಾವು Read More »

error: Content is protected !!
Scroll to Top