ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ

ಕಡಬ : ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಜ.10ರಂದು ನಡೆಯಲಿದೆ. ಕೆಮ್ಮಿoಜೆ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಒರುಬಾoಲು ಶ್ರೀ ಉಮಾಮಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳ್ಳಿಗೆ 7.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹೋಮ, ಪಂಚವಿoಶತಿ  ನಡೆಯಲಿದೆ. ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಲಿದೆ. ಬಳಿಕ ಬೆಳಿಗ್ಗೆ 11.00 ಗಂಟೆಗೆ ಶ್ರೀ ದೇವರಿಗೆ ಕಳಶಾಭಿಷೇಕ, ನಾಗ ದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ […]

ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ Read More »

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ

ಮಹಾರಾಷ್ಟ್ರದ ಹಳ್ಳಿಗಳಲ್ಲಿ ಕಾಣಿಸಿಕೊಂಡ ವಿಚಿತ್ರ ಸಮಸ್ಯೆ ಮುಂಬಯಿ : ಮಹಾರಾಷ್ಟ್ರದ ಬುಲ್ಢಾನ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ಕಳೆದ ಸುಮಾರು ಎರಡು ವಾರದಿಂದ ಜನರು ವಿಚಿತ್ರವಾದ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮಕ್ಕಳು, ವಯಸ್ಕರು, ಪುರುಷರು, ಮಹಿಳೆಯರು, ವೃದ್ಧರೆನ್ನದೆ ಈ ಹಳ್ಳಿಗಳಲ್ಲಿ ಜನರು ಹಠಾತ್‌ ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು 50 ಜನ ಈಗಾಗಲೇ ಕೂದಲು ಉದುರಿ ಹೋಗಿ ಬೊಕ್ಕ ತಲೆಯವರಾಗಿದ್ದಾರೆ. ವಿಶೇಷ ಎಂದರೆ ಕೆಲವು ಮಕ್ಕಳ ತಲೆಕೂದಲು ಕೂಡ ಉದುರಿ ಹೋಗಿದೆ. ಕೆಲವು ಯುವಕರ ಗಡ್ಡ ಉದುರುತ್ತಿದೆ.

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ Read More »

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ

ಸುಳ್ಯ: ತಾಯಿಯೊಬ್ಬಳು ತನ್ನ  ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಾವೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಹಿನ್ನಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ತಾಯಿ ಕಾವ್ಯಶ್ರೀ ಎಂದು ಗುರುತಿಸಲಾಗಿದೆ. ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿ ತಾಯಿಯೋರ್ವಳು ಬಿಸಿ ಹಾಲಿನ ಪಾತ್ರೆಯಿಂದ ತನ್ನ ಐದು ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟಿರುವಂತದ್ದು ಆ.16  2022ರಂದು ನಡೆದಿದೆ.  ಈ ಕುರಿತು ತಾಯಿ ಕಾವ್ಯಶ್ರೀ ವಿರುದ್ಧ ಮಹಿಳಾ ಮತ್ತು

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ Read More »

ಮೂರನೇ ದಿನಕ್ಕೆ ಕಾಲಿರಿಸಿದ ಆಶಾ ಕಾರ್ಯಕರ್ತೆಯರ ಮುಷ್ಕರ

ಆರೋಗ್ಯ ಸಚಿವರ ಸಂಧಾನ ವಿಫಲ; ಕೊರೆವ ಚಳಿಯಲ್ಲೂ ಅಹೋರಾತ್ರಿ ಧರಣಿ ಬೆಂಗಳೂರು: ಗೌರವ ಧನ ಏರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿರಿಸಿದ್ದು, ನಗರದ ಕೊರೆವ ಚಳಿಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಮಕ್ಕಳೊಂದಿಗೆ ಧರಣಿ ಕುಳಿತಿದ್ದಾರೆ. ಗೌರವ ಧನ ಏರಿಕೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಮಾಸಿಕ

ಮೂರನೇ ದಿನಕ್ಕೆ ಕಾಲಿರಿಸಿದ ಆಶಾ ಕಾರ್ಯಕರ್ತೆಯರ ಮುಷ್ಕರ Read More »

ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ

ಪುತ್ತೂರು: ಶಾಲೆ ಹಾಗೂ ದೇವಸ್ಥಾನಗಳಲ್ಲಿ ರಾಜಕೀಯ ಮಾಡಬಾರದು, ಈ ಎರಡು ಕ್ಷೇತ್ರದಲ್ಲಿ ರಾಜಕೀಯ ಮಾಡಿದ್ರೆ ಅದು ಎಂದೂ ಉದ್ದಾರ ಆಗಲು ಸಾಧ್ಯವಿಲ್ಲ. ಇದನ್ನು ಶಾಸಕನಾಗಿ ನಾನು ಸಹಿಸುವುದೇ ಇಲ್ಲ, ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ರಾಜಕೀಯ ಮಾಡಿ ಮಕ್ಕಳ ಭವಿಷ್ಯವನ್ನು ಹಾಳುಮಾಡಬೇಡಿ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಲ್ಲಿ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಣಿಕ್ಕರ ಶಾಲೆ ಒಂದು

ಮಣಿಕ್ಕರ ಸರಕಾರಿ ಹಿ ಪ್ರಾ ಶಾಲಾ ನೂತನ ಕೊಠಡಿ ಉದ್ಘಾಟನೆ, ವಾರ್ಷಿಕೋತ್ಸವ Read More »

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ

ಬಾಟಲಿಗೆ 20-50 ರೂ. ತನಕ ಏರಿಕೆ; ಜ.20ರಿಂದ ಜಾರಿ ಬೆಂಗಳೂರು: ಮದ್ಯಪ್ರಿಯರಿಗೆ ಸರಕಾರ ಮತ್ತೊಮ್ಮೆ ಬರೆ ಎಳೆದಿದೆ. ಬಿಯರ್‌ ಬೆಲೆಯನ್ನು ಏರಿಸಲು ತೀರ್ಮಾನಿಸಿದ್ದು, ಬಜೆಟ್‌ ಮಂಡನೆಗೂ ಮುಂಚಿತವಾಗಿ ಈ ಏರಿಕೆ ಜಾರಿಯಾಗಲಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್‌ ದರ ಏರಿಕೆ ಮಾಡಿದೆ. ಜ.20ರಿಂದಲೇ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ.ಕಾಂಗ್ರೆಸ್‌ ಸರಕಾರ ಬಂದ ಮೇಲೆ ಗ್ಯಾರಂಟಿ ಕೊಡುಗೆಗಳಿಗೆ ಹಣ ಹೊಂದಿಸುವ ಸಲುವಾಗಿ ಪದೇಪದೆ

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ Read More »

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ಗಳನ್ನು ಹಾಕಿ ವರ್ಷದಿಂದ ಕಿರುಕುಳ ತಿರುವನಂತಪುರಂ: ಮಲಯಾಳಂ ನಟಿ ಹನಿರೋಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ವಯನಾಡಿನಿಂದ ಚೆಮ್ಮನೂರ್‌ ಅವರನ್ನು ಬಂಧಿಸಿ ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ

ನಟಿಗೆ ಕಿರುಕುಳ : ಖ್ಯಾತ ಉದ್ಯಮಿ ಬಂಧನ Read More »

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ

ವೈಕುಂಠ ಏಕಾದಶಿ ಟೋಕನ್‌ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್‌ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ Read More »

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ನರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಜಾಬಿರ್ (32) ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ ಐಎ ನ್ಯಾಯಾಲಯ 2023ರ ಫೆ.9 ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‍ ಕುಮಾರ್, ಮತ್ತು

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ Read More »

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಸಮುದ್ರದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದು ನೀರಿಗೆ ಇಳಿದ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ುಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಹೊರಟು ಇಂದು ಮಧ್ಯಾಹ್ನ 12.30 ಕ್ಕೆ ಹೊಸಬೆಟ್ಟು ಬಳಿ ಇರುವ ಬೀಚ್ ಗೆ ಪ್ರವಾಸ ನಿಟ್ಟಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು Read More »

error: Content is protected !!
Scroll to Top