ಮುಂದಿನ 48 ಗಂಟೆಗಳಲ್ಲಿ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಜುಲೈ 22ರ ವರೆಗೆ  ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ, ಬೀದರ್ […]

ಮುಂದಿನ 48 ಗಂಟೆಗಳಲ್ಲಿ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ Read More »

ವಿವೇಕಾನಂದ ಕಾಲೇಜಿನಲ್ಲಿ ಲಘು ಉದ್ಯೋಗ ಭಾರತಿಯೊಂದಿಗೆ ಒಡಂಬಡಿಕೆ ಕಾರ್‍ಯಕ್ರಮ

ಪುತ್ತೂರು: ದೇಶದ ಆರ್ಥಿಕತೆಗೆ ಹೆಚ್ಚಿನ ಆದಾಯವನ್ನು ಸಣ್ಣ ಕೈಗಾರಿಕೆ ನೀಡುತ್ತಿದ್ದು ಇದರ ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರವು ಮುಖ್ಯವಾಗಿದೆ. ಈ ಸಣ್ಣ ಕೈಗಾರಿಕೆಯು ಹೆಚ್ಚು ಉದ್ಯೋಗಾವಕಾಶವನ್ನು ಸೃಷ್ಟಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸುವುದರಲ್ಲಿ ಈ ರೀತಿಯ ಸಂಸ್ಥೆಗಳ ನಡುವಿನ ಒಪ್ಪಂದ ಬಹುಮುಖ್ಯ ಪಾತ್ರವಹಿಸುತ್ತದೆ ಎಂದು ಲಘು ಉದ್ಯೋಗ ಭಾರತಿ-ಕರ್ನಾಟಕದ ಅಧ್ಯಕ್ಷ ನಾರಾಯಣ್ ಪ್ರಸನ್ನ.ಕೆ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ನಡೆದ ಲಘು ಉದ್ಯೋಗ ಭಾರತಿ-ಕರ್ನಾಟಕ

ವಿವೇಕಾನಂದ ಕಾಲೇಜಿನಲ್ಲಿ ಲಘು ಉದ್ಯೋಗ ಭಾರತಿಯೊಂದಿಗೆ ಒಡಂಬಡಿಕೆ ಕಾರ್‍ಯಕ್ರಮ Read More »

ಭೂಮಿಗೆ ಮರಳಿದ ಶುಭಾಂಶು ಶುಕ್ಲಾ : ಪ್ರಧಾನಿ ಮೋದಿ ಹರ್ಷ

ನವದೆಹಲಿ: ಬಾಹ್ಯಾಶಕ್ಕೆ ಕಳೆದ ಜು. 25 ರಂದು ತೆರಳಿದ್ದ ‌ಭಾರತದ ಶುಭಾಂಶು ಶುಕ್ಲಾ ಅವರನ್ನೊಳಗೊಂಡ ನಾಲ್ವರ ‌ತಂಡ ಇಂದು ಅಪರಾಹ್ನ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್‌ಡೌನ್ ಆಗಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಐತಿಹಾಸಿಕ ಬಾಹ್ಯಾಕಾಶ ಯಾನದಿಂದ ಭೂಮಿಗೆ ಮರಳುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ನಾನು ಇಡೀ ದೇಶದೊಂದಿಗೆ ಸೇರುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ

ಭೂಮಿಗೆ ಮರಳಿದ ಶುಭಾಂಶು ಶುಕ್ಲಾ : ಪ್ರಧಾನಿ ಮೋದಿ ಹರ್ಷ Read More »

ರೈತರ ಹೋರಾಟಕ್ಕೆ ಜಯ: ದೇವನಹಳ್ಳಿ ಭೂ ಸ್ವಾಧೀನ ಫೈನಲ್ ನೋಟಿಫಿಕೇಶನ್ ರದ್ದು ಮಾಡಿದ ಸಿಎಂ ಸಿದ್ದು

ಬೆಂಗಳೂರು: ದೇವನಹಳ್ಳಿಯ ರೈತಾಪಿ ವರ್ಗದ ಹೋರಾಟಕ್ಕೆ ಜಯ ದೊರೆತಿದ್ದು, ದೇವನಹಳ್ಳಿ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಸೌಧದಲ್ಲಿ ರೈತರ ಜೊತೆಗೆ ಸಭೆ ನಡೆಸಿದ ಬಳಿಕ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್ ಅನ್ನು ರದ್ದು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈ ಜಮೀನಿಗೆ ಸಂಬಂಧಿಸಿದ ಹಾಗೆ ರೈತರು ಇತ್ತೀಚೆಗಷ್ಟೇ ತಾವು ಬೆಳೆದ ಬೆಳೆಯ ಸಮೇತ ವಿಧಾನಸೌಧಕ್ಕೆ ಬಂದು ಸಿಎಂ ‌ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಸದ್ಯ

ರೈತರ ಹೋರಾಟಕ್ಕೆ ಜಯ: ದೇವನಹಳ್ಳಿ ಭೂ ಸ್ವಾಧೀನ ಫೈನಲ್ ನೋಟಿಫಿಕೇಶನ್ ರದ್ದು ಮಾಡಿದ ಸಿಎಂ ಸಿದ್ದು Read More »

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ

ಸಂತ್ರಸ್ತೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಬೆಂಗಳೂರು: ವಿದ್ಯಾರ್ಥಿನ್ಯೊಬ್ಬಳ ಮೇಲೆ ಮೂಡುಬಿದ್ರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮಾರತಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಮತ್ತು ಅವರ ಸ್ನೇಹಿತ ಅನೂಪ್ ಎಂದು ಗುರುತಿಸಲಾಗಿದೆ. ಆರೋಪಿ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿದ್ದಾನೆ. ಆಕೆ ಬೆಂಗಳೂರಿಗೆ ತೆರಳಿದ ನಂತರವೂ ಆಕೆಯ ಜೊತೆ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ Read More »

ಯೆಮನ್ ಪ್ರಜೆ ಹತ್ಯೆ ಪ್ರಕರಣ: ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ?

ಸನಾ: ಯೆಮನ್ ಪ್ರಜೆಯನ್ನು ಹತ್ಯೆಗೈದ ಆರೋಪದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷ ಪ್ರಿಯ ಅವರ ಶಿಕ್ಷೆ ಮುಂದೂಡಪಟ್ಟಿದೆ. ಜುಲೈ 16 ರಂದು ನಿಮಿಷಾಗೆ ಯೆಮನ್‌ನಲ್ಲಿ ಗಲ್ಲು ಶಿಕ್ಷೆ ನಿಗದಿಯಾಗಿತ್ತು. ಆದರೆ ಭಾರತದ ನಿರಂತರ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದ್ದು ನಿಮಿಷಾ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿದೆ. ಈ ಪ್ರಕರಣದ ಕುರಿತು ಪ್ರಸಿದ್ಧ ಸೂಫಿ ವಿದ್ವಾಂಸ ಶೇಕ್ ಹಬೀಬ್ ಉಮರ್ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆದಿತ್ತು. ಈ ಸಭೆಯಲ್ಲಿ ಸರ್ಕಾರದ ಪ್ರತಿನಿಧಿಗಳು, ನ್ಯಾಯಮೂರ್ತಿಗಳು ಮತ್ತು ಮೃತನ ಕುಟುಂಬಸ್ಥರು

ಯೆಮನ್ ಪ್ರಜೆ ಹತ್ಯೆ ಪ್ರಕರಣ: ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ? Read More »

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ

ಜಲಂಧರ್: ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಜಲಂಧರ್‌ನ ತಮ್ಮ ಮನೆಯ ಸಮೀಪ ಸೋಮವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ಕಾರೊಂದು ಫೌಜಾ ಸಿಂಗ್ ಅವರಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದಿಂತ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿದೆ. ಸಿಂಗ್ ಅವರು 2000 ನೇ ಇಸವಿಯಲ್ಲಿ ಮ್ಯಾರಥಾನ್ ಪಯಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್‌ಗಳಲ್ಲಿ ಅವರು ಭಾಗವಹಿಸಿದ್ದರು. ಟೊರೆಂಟೋ ಮ್ಯಾರಥಾನ್‌ನಲ್ಲಿ 2011 ರಲ್ಲಿ ಭಾಗವಹಿಸಿದ

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ Read More »

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು. ಕನ್ನಡದ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಯಕ್ಷಗಾನ ಪ್ರೇಮಿಯೂ ಆಗಿದ್ದರು. ದಿ. ಚಿದಾನಂದ ಕಾಮತ್ ಕಾಸರಗೋಡು ಅವರ ಸಾಂಸ್ಕೃತಿಕ ಕಲಾಕೇಂದ್ರದ ಎಲ್ಲಾ ಕನ್ನಡ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿದ್ದರು. ಮೃತರರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಹೆಗಡೆ, ಉಪಾಧ್ಯಕ್ಷರಾಗಿ ಎಸ್‍.ಚಿದಾನಂದ ರೈ, ಕಾರ್ಯದರ್ಶಿಯಾಗಿ ಅಮರ್‍ ನಾಥ್‍ ಆಯ್ಕೆ ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ನಡೆಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸೌಮ್ಯ ಶ್ರೀ ಹೆಗಡೆ  ಪುನರ್ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಎಸ್. ಚಿದಾನಂದ ರೈ, ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕ ಅಮರ್ ನಾಥ್ ಬಿ.ಪಿ.ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ರಶ್ಮಿ, ನಯನ, ನವೀನ್, ಅನುಪಮಾ, ದಿವ್ಯಶ್ರೀ ಹೆಗಡೆ, ಸವಿತಾ, ಶೇಖರ ಮತ್ತು ಶಿಕ್ಷಕರ ಪ್ರತಿನಿಧಿಯಾಗಿ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ : ನಿತಿನ್ ಗಡ್ಕರಿ

ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆಯ ಆಹ್ವಾನದ ವಿಚಾರದಲ್ಲಿ ‌ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎನ್ನುವ ಸಿಎಂ ‌ಸಿದ್ದರಾಮಯ್ಯ ಅವರ ಆರೋಪಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗಡ್ಕರಿ, ಕಾರ್ಯಕ್ರಮದಲ್ಲಿ ಯಾವ ಶಿಷ್ಟಾಚಾರವೂ ಉಲ್ಲಂಘನೆ ಆಗಿಲ್ಲ. ಸಿದ್ದರಾಮಯ್ಯ ಅವರಿಗೆ ಜುಲೈ 11 ರಂದೇ ಅಧಿಕೃತ ಆಹ್ವಾನ ನೀಡಲಾಗಿದೆ. ಜುಲೈ 12 ರಂದು ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆಯಲಾಗಿದ್ದು, ಯಾವುದೇ ಪೂರ್ವಯೋಜಿತ ಕಾರ್ಯಕ್ರಮ ಇದ್ದರೂ ಸೇತುವೆ ಉದ್ಘಾಟನೆಗೆ ‌ವರ್ಚುವಲ್ ರೂಪದಲ್ಲಾದರೂ ಭಾಗಿಯಾಗಿ ಎಂದು

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ : ನಿತಿನ್ ಗಡ್ಕರಿ Read More »

error: Content is protected !!
Scroll to Top