ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ ಈಗಾಗಲೇ ತೀರ್ಮಾನವನ್ನು ಕೈಗೊಳ್ಳಲಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಭಕ್ತರು ಈ ದೇವಸ್ಥಾನಕ್ಕೆ ಆಗಮಿಸುತ್ತಿದ್ದು ,ದೇವಸ್ಥಾನ ಅಭಿವೃದ್ದಿಪಡಿಸುವ ಮೂಲಕ ಭಕ್ತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆಯನ್ನು ಸಿದ್ದಪಡಿಸಲಾಗಿದೆ. ಸರಕಾರ ಈ ಹಿಂದೆ ಘೋಷಣೆ ಮಾಡಿರುವ ಅನುದಾನ […]










