ಉಗ್ರವಾದವನ್ನು ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕು: ಎಸ್. ಜೈಶಂಕರ್

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಪಹಲ್ಗಾನ್ ದಾಳಿಗೆ ಪ್ರತೀಕಾರವಾಗಿ ಭಾರತ ಉಗ್ರವಾದದ ‌ವಿರುದ್ಧ ಶೂನ್ಯ ಸಹಿಷ್ಣುತೆ ಸಾರಿದ್ದು, ಉಗ್ರರಿಗೆ ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ‌ವಿನಾಯಿತಿ ನೀಡಲಾಗದು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಭಯೇತ್ಪಾದನೆಯ ವಿರುದ್ಧ ಜಾಗತಿಕ ಸಮುದಾಯ ಒಗ್ಗೂಡಬೇಕು ಎಂದು ಅವರು ವಿಶ್ವಸಂಸ್ಥೆಯಲ್ಲಿ ಒತ್ತಾಯಿಸಿದ್ದಾರೆ. ‘ದಿ ಹ್ಯುಮನ್ ಕಾಸ್ಟ್ ಆಫ್ ಟೆರರಿಸಂ’ ಹೆಸರಿನಲ್ಲಿ ವಿಶ್ವದ ಹಲವೆಡೆ ನಡೆಯುತ್ತಿರುವ ಭಯೋತ್ಪಾದನಾ ದಾಳಿಯ ಬಗ್ಗೆ ವಿವರಣೆ ನೀಡಲಾಗಿದೆ. ಭಯೋತ್ಪಾದನೆಯನ್ನು ತಡೆಯಲು ಮಾಡಲಾಗುತ್ತಿರುವ ಪ್ರಯತ್ನಗಳನ್ನು ಸಹ ಇದರಲ್ಲಿ ಹೇಳಲಾಗಿದೆ. […]

ಉಗ್ರವಾದವನ್ನು ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕು: ಎಸ್. ಜೈಶಂಕರ್ Read More »

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಮಂಗಳೂರು: ಬಂಟ್ವಾಳದಲ್ಲಿ ಹಾಡಹಗಲೇ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿ ಶಿವಪ್ರಸಾದ್‌ನನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜು.3 ಕ್ಕೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭ ವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಅರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜಿ. ರಾವ್ (21) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ ಆತನ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತ ನೀಡಿದ್ದ ದೂರಿನ ಮೇರೆಗೆ ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜು.3 ಕ್ಕೆ Read More »

ತೆಲಂಗಾಣ ಕಾರ್ಖಾನೆ ಸ್ಫೋಟ : ಮೃತರ ಸಂಖ್ಯೆ 35ಕ್ಕೇರಿಕೆ

ಫಾರ್ಮಾ ಕಂಪನಿಯ ರಿಯಾಕ್ಟರ್‌ ಸ್ಫೋಟಿಸಿ ಭೀಕರ ದುರಂತ ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ. ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ನಿನ್ನೆ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ.

ತೆಲಂಗಾಣ ಕಾರ್ಖಾನೆ ಸ್ಫೋಟ : ಮೃತರ ಸಂಖ್ಯೆ 35ಕ್ಕೇರಿಕೆ Read More »

ಅಕ್ಷರ ದಾಸೋಹ ನೌಕರರ ಸಂಘದ  ತಾಲೂಕು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಂಜಿತ ಕೋಡಿಂಬಾಡಿ , ಪ್ರಧಾನ ಕಾರ್ಯದರ್ಶಿಯಾಗಿ ಲತಾ ಬನ್ನೂರು ಆಯ್ಕೆ

ಪುತ್ತೂರು: ಅಕ್ಷರ ದಾಸೋಹ ನೌಕರರ ಪುತ್ತೂರು ತಾಲೂಕು ಸಮಾವೇಶವು ಪುತ್ತೂರು ಮಾಜಿ ಸೈನಿಕರ ಭವನದಲ್ಲಿ  ನಡೆಯಿತು. ಸುಧಾ ಎಕ್ಕಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಡಬ ತಾಲೂಕು ಅಧ್ಯಕ್ಷ, ಸಂಘದ ಗೌರವಾಧ್ಯಕ್ಷ ಪಿ.ಕೆ ಸತೀಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನ್ಯಾಯವಾದಿ ಬಿ.ಎಂ.ಭಟ್‌ ಮಾತಾಡಿ, 2025  ಜುಲೈ 9 ರಂದು ಜೆಸಿಟಿಯು ನೇತೃತ್ವದಲ್ಲಿ ನಡೆಯುವ ಅಖಿಲ ಭಾರತ  ಮುಷ್ಕರದ ಬಗ್ಗೆ ವಿವರಣೆ ನೀಡಿದರು. ಇದರ ಅಂಗವಾಗಿ ಜುಲೈ 9 ರಂದು ಪುತ್ತೂರು ಮತ್ತು ಕಡಬ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಅಡುಗೆ

ಅಕ್ಷರ ದಾಸೋಹ ನೌಕರರ ಸಂಘದ  ತಾಲೂಕು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಂಜಿತ ಕೋಡಿಂಬಾಡಿ , ಪ್ರಧಾನ ಕಾರ್ಯದರ್ಶಿಯಾಗಿ ಲತಾ ಬನ್ನೂರು ಆಯ್ಕೆ Read More »

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು

ಡ್ಯೂಟಿ ಡಾಕ್ಟರ್‌ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ರೋಗಿಗಳು ಮತ್ತು ಸಿಬ್ಬಂದಿ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟ್ರರ್ ಬುಕ್, ಬೆಡ್ ಎಲ್ಲ ಸುಟ್ಟುಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು Read More »

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ

ಅಕ್ರಮವಾಗಿ ನುಸುಳಿ ಬರುವ ದುಸ್ಸಾಹಸ ಪ್ರಾಣಕ್ಕೆ ಎರವಾಯಿತು ಜೈಪುರ: ಪಾಕಿಸ್ತಾನ ಮೂಲದ ಹಿಂದೂ ಧರ್ಮದ ಯುವಕ ಮತ್ತು ಯುವತಿಯ ಮೃತದೇಹ ಭಾರತ-ಪಾಕ್‌ ಅಂತಾರಾಷ್ಟ್ರೀಯ ಗಡಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಪಕ್ಕದಲ್ಲಿ ಗುರುತಿನ ಚೀಟಿಯೂ ಕಂಡು ಬಂದಿದೆ. ಜೈಸಲ್ಮೇರ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಪತ್ತೆಯಾದ ಯುವಕ ಮತ್ತು ಅಪ್ರಾಪ್ತೆಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದವು. ಶವದ ಸ್ಥಿತಿ ನೋಡಿದರೆ ಇವರು ಮೃತಪಟ್ಟು ವಾರ ಕಳೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕುಡಿಯಲು

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ

ಗ್ರಾಹಕರಿಗೆ ದೊಡ್ಡ ರಿಲೀಫ್‌ ನೀಡಿದ ತೈಲ ಕಂಪನಿಗಳು ನವದೆಹಲಿ: ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 58.50 ರೂ.ಗಳಷ್ಟು ಕಡಿಮೆ ಮಾಡಿ ಗ್ರಾಹಕರಿಗೆ ಶುಭ ಸುದ್ದಿ ನೀಡಿವೆ. ಗೃಹಬಳಕೆಯ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ ಕಡಿಮೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಬಿಡುಗಡೆ ಮಾಡಿದ ಹೊಸ ದರ ಪಟ್ಟಿಯ ಪ್ರಕಾರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,665

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ Read More »

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ

ಗೋಮಾಂಸ ಸಾಗಿಸಲು ಬಳಸಿದ್ದ ಕಾರು, ಸ್ಕೂಟಿ ವಶ ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಕುಂಜಾಲು ರಾಮ ಮಂದಿರದ ಬಳಿ ಶನಿವಾರ ತಡರಾತ್ರಿ ಗೋವಿನ ರುಂಡ ಪತ್ತೆಯಾದ ಘಟನೆ ಜಿಲ್ಲೆಯಲ್ಲಿ ಭಾರಿ ಸಂಚಲನವುಂಟು ಮಾಡಿತ್ತು. ಹಿಂದು ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿದ

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ Read More »

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿದ ಪ್ರಕರಣ | ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ : ಪತ್ರಿಕಾಗೋಷ್ಠಿಯಲ್ಲಿ ಹೆಚ್‍.ಮಹಮ್ಮದಾಲಿ ಪ್ರಶ್ನೆ

ಪುತ್ತೂರು ಜೂನ್ 30: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ ಸಹಿತ ಯಾರೂ ಮಾತನಾಡುತ್ತಿಲ್ಲ. ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಈ ಪ್ರಕರಣವನ್ನು ಏನೂ ಅಲ್ಲ ಎಂದು ಬಿಂಬಿಸಲಾಗುತ್ತಿದೆ ಎಂದು ನಗರ ಕಾಂಗ್ರೆಸ್‍ಮುಖಂಡ ಹೆಚ್‍.ಮಹಮ್ಮದಾಲಿ ಆರೋಪಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪ್ರಕರಣದಲ್ಲಿ ಯಾರೆಲ್ಲಾ ಮಾತುಕತೆಗೆ ಪ್ರಯತ್ನಿಸಿದರೋ ಅವರಿಗೆ ಶಾಪ ತಟ್ಟಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸಣ್ಣ ವಿಚಾರಕ್ಕೆ ಸಂಬಂಧಿಸಿ ಹಿಂದುತ್ವದ

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿದ ಪ್ರಕರಣ | ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ : ಪತ್ರಿಕಾಗೋಷ್ಠಿಯಲ್ಲಿ ಹೆಚ್‍.ಮಹಮ್ಮದಾಲಿ ಪ್ರಶ್ನೆ Read More »

error: Content is protected !!
Scroll to Top