ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ

ಇನ್‌ಸ್ಟಾಗ್ರಾಂ ಗೆಳತಿಯನ್ನು ಕರೆದುಕೊಂಡು ಬಂದು ಕಾರಿನಲ್ಲಿ ದೌರ್ಜನ್ಯ ಮಂಗಳೂರು : ಉಳ್ಳಾಲ ಸಮೀಪ ಸೋಮೇಶ್ವರ ಬೀಚ್‌ನಲ್ಲಿ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹದಿಹರೆಯದ ಬಾಲಕಿಯನ್ನು ಸೋಮೇಶ್ವರ ಬೀಚ್ ಬಳಿ ಕರೆದುಕೊಂಡು ಬಂದ ಯುವಕ ಕಾರಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಬಂಧಿತ […]

ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ Read More »

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ

ಮಂಗಳೂರು ನಗರವೊಂದರಲ್ಲೇ ಹಲವು ಲಕ್ಷ ರೂಪಾಯಿ ಪಂಗನಾಮ ಮಂಗಳೂರು : ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರಚೋದಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ಮತ್ತೊಮ್ಮೆ ಕಳವಳಕಾರಿಯಾಗಿ ಹೆಚ್ಚುತ್ತಿವೆ. ಕಳೆದೊಂದು ವಾರದಲ್ಲೆ ಮಂಗಳೂರು ಸೈಬರ್‌ ಠಾಣೆಯಲ್ಲೇ ಇಂಥ ಹಲವು ಪ್ರಕರಣಗಳು ದಾಖಲಾಗಿದ್ದು, ಒಂದು ಕೋಟಿಗಟ್ಟಲೆ ಮೊತ್ತ ವಂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದು, ಜನರು ಇಂಥ ತ್ವರಿತ ಲಾಭದ ಹೂಡಿಕೆಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಎಚ್ಚರಿಸಿದ್ದಾರೆ. ವಂಚಕರು ನಕಲಿ ಹೂಡಿಕೆ ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ Read More »

ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಪ್ರೀತಿಸುವ ನಾಟಕವಾಡಿ ವಂಚಿಸಿದ್ದಾರೆ ಎಂದು ಆರೋಪಿಸಿದ ಯುವತಿ ಲಖನೌ: ಐಪಿಎಲ್​ನಲ್ಲಿ ಆರ್‌ಸಿಬಿ ಪರ ಆಡುತ್ತಿರುವ ಭಾರತದ ಯುವ ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೆ ಮನವಿ ಕೂಡ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸಿಎಂ ಹೆಲ್ಪ್‌ಲೈನ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದು,

ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ Read More »

ರಸ್ತೆಗೆ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಶಾಲಾ ಬಳಿ ಬೃಹತ್ ಮರವೊಂದು ಶನಿವಾರ ಸಂಜೆ ರಸ್ತೆಗಡ್ಡವಾಗಿ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು. ಮರ ರಸ್ತೆಗಡ್ಡವಾಗಿ ಬಿದ್ದಿದ್ದರಿಂದ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಪ್ಯದಿಂದಲೇ ವಾಹನಗಳು ಸರತಿ ಸಾಲಿನಲ್ಲಿ ತೆವಳುತ್ತಾ ಚಲಿಸುತ್ತಿದ್ದವು. ಬಳಿಕ ಜೆಸಿಬಿ ಮೂಲಕ ಮರವನ್ನು ತೆರವು ಮಾಡಲಾಯಿತು.

ರಸ್ತೆಗೆ ಬಿದ್ದ ಮರ : ಸಂಚಾರ ಅಸ್ತವ್ಯಸ್ತ Read More »

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

ಪುತ್ತೂರು: ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು, ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಶುಭವನ್ನು ಹಾರೈಸಿದರು. ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಭವಿಷ್ಯದ ಸೇನಾ ಯೋಧರಾಗುವ ನಿಟ್ಟಿನಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಲಾಯಿತು.

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ Read More »

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ

ಬೆಂಗಳೂರು: ನಾಡ ಹಬ್ಬ ದಸರಾವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ ‌ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ್ದು, ದಸರಾ ಆಚರಣೆಯಲ್ಲಿ ಪ್ರವಾಸಿಗರಿಗೆ ನೂಕುನುಗ್ಗಲು ಆಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ನಾಡ ಹಬ್ಬ ದಸರಾ ವೀಕ್ಷಣೆಗೆ ದೇಶ ವಿದೇಶಗಳಿಂದ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಪ್ರವಾಸಿಗರಿಗೆ ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಮೈಸೂರು ದಸರಾ : ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ‌ಸಿದ್ದರಾಮಯ್ಯ Read More »

ಪ್ರಧಾನಿ ಮೋದಿ ಅವರಿಗೆ ‘ಧರ್ಮ ಚಕ್ರವರ್ತಿ’ ಬಿರುದು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜೀ ಅವರ ಶತಮಾನೋತ್ಸವ ಸಮಾರಂಭದಲ್ಲಿ ‘ಧರ್ಮ ಚಕ್ರವರ್ತಿ’ ಬಿರುದು‌ ಪ್ರದಾನಿಸಿ ಗೌರವಿಸಲಾಯಿತು. ಈ ಸಂಬಂಧ ಮಾತನಾಡಿರುವ ಪ್ರಧಾನಿ ಮೋದಿ, ನೀವು ನನಗೆ ಧರ್ಮ ಚಕ್ರವರ್ತಿ ಬಿರುದು ನೀಡಿದ್ದೀರಿ‌. ಆದರೆ ನಾನಿದಕ್ಕೆ ‌ಸೂಕ್ತನೋ ಗೊತ್ತಿಲ್ಲ. ಸಂತರಿಂದ ಏನೇ ದೊರೆತರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ ವಿನಯಪೂರ್ವಕವಾಗಿ ‌ನಾನು ಇದನ್ನು ಸ್ವೀಕಾರ ಮಾಡುತ್ತೇನೆ. ಹಾಗೆಯೇ ಇದನ್ನು ತಾಯಿ ಭಾರತಿಗೆ ಅರ್ಪಿಸುತ್ತೇನೆ

ಪ್ರಧಾನಿ ಮೋದಿ ಅವರಿಗೆ ‘ಧರ್ಮ ಚಕ್ರವರ್ತಿ’ ಬಿರುದು Read More »

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್‍ ತಂತಿ ತಗುಲಿ ವ್ಯಕ್ತಿ ಮೃತ್ಯು

ನೆಲ್ಯಾಡಿ: ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್‍ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ಶನಿವಾರ ನಡೆದಿದೆ. ಉಡೈರೆ ನಿವಾಸಿ ಕೃಷ್ಣಪ್ಪ ಕುಲಾಲ್ (49) ವಿದ್ಯುತ್‍ ಶಾಕ್‍ ನಿಂದ ಮೃತಪಟ್ಟವರು. ತೋಟದಲ್ಲಿ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸುತ್ತಿರುವ ಸಂದರ್ಭ ದೋಟಿಗೆ ಎಚ್‌ಟಿಐ ಲೈನ್‌ಗೆ ಸ್ಪರ್ಶಿಸಿ ತಕ್ಷಣವೇ ವಿದ್ಯುತ್ ಶಾಕ್ ಆಗಿದ್ದಾರೆ. ಅವರನ್ನು ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ದುರದೃಷ್ಟವಶಾತ್ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ..

ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್‍ ತಂತಿ ತಗುಲಿ ವ್ಯಕ್ತಿ ಮೃತ್ಯು Read More »

ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 300 ಹಾಸಿಗೆಗಳನ್ನು ಒಳಗೊಂಡ ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಅಪಘಾತಕ್ಕೆ ಒಳಗಾದವರಿಗೆ ತುರ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮತ್ತು ಉತ್ತಮ ಆರೈಕೆಯ ಮೂಲಕ ಜೀವ ಉಳಿಸುವುದಕ್ಕೆ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ. ಸುಮಾರು 498 ಕೋಟಿ ರೂ. ವೆಚ್ಚದಲ್ಲಿ ಕ್ಯಾಲಸನಹಳ್ಳಿಯಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಮತ್ತು 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ

ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ Read More »

ಹಿಂದೂ ಕಾರ್ಯಕರ್ತ ಸುಹಾಸ್ ‌ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್?

ಮಂಗಳೂರು: ಜಿಹಾದಿಗಳ ಮಚ್ಚಿನೇಟಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ‌ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸದ್ಯ ಎನ್‌ಐ‌ಎ ತನಿಖೆಯಲ್ಲಿದ್ದು, ಸುಹಾಸ್ ಹತ್ಯೆಗೆ ವಿದೇಶಿ ಫಂಡಿಂಗ್ ಆಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳ ಬ್ಯಾಂಕ್ ಖಾತೆಗಳ ಪರಿಶೀಲನೆ ಸಹ ನಡೆಯುತ್ತಿದೆ. 12 ಆರೋಪಿಗಳ ಬೇರೆ ಬೇರೆ ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಯುತ್ತಿದ್ದು, ಸ್ಥಳೀಯ ವ್ಯಕ್ತಿಗಳಿಂದ ಹಣ ಫಂಡಿಂಗ್ ಆದ ಬಗೆಗೂ ತನಿಖೆ ನಡೆಸಲಾಗುತ್ತಿದೆ. ಈ ಕೊಲೆಯಲ್ಲಿ

ಹಿಂದೂ ಕಾರ್ಯಕರ್ತ ಸುಹಾಸ್ ‌ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್? Read More »

error: Content is protected !!
Scroll to Top