ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡುವುದಿಲ್ಲ ಎನ್ನುವ ಮೂಲಕ ಶಾಸಕ ಮತ್ತು ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಈ ಸಂಬಂಧ ಎದ್ದಿದ್ದ ಎಲ್ಲಾ ರೀತಿಯ ಊಹಾಪೋಹಗಳಿಗೆ ಮುಕ್ತಾಯ ಹಾಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಬೆಳಗಾವಿ ಹಾಲು ಒಕ್ಕೂಟದಿಂದ ಕರ್ನಾಟಕ ಹಾಲು ಮಹಾಮಂಡಳಿಗೆ ನಿರ್ದೇಶಕನಾಗಿ ಆಯ್ಕೆಯಾಗುತ್ತೇನೆ ಎಂ ದವರು ಹೇಳಿದ್ದಾರೆ. ಕಳೆದ ಮೂರು ವರ್ಷಗಳ ಕಾಲ ಕೆಎಂಎಫ್ ಅಧ್ಯಕ್ಷನಾಗಿ ಹೈನುಗಾರರಿಗೆ ಸಾಕಷ್ಟು ಪ್ರಯೋಜನ ಮಾಡಿಕೊಟ್ಟಿದ್ದೇನೆ. ನನ್ನ ಅವಧಿಯಲ್ಲಿ […]

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ : ಬಾಲಚಂದ್ರ ಜಾರಕಿಹೊಳಿ Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ವ್ಯಾಪಕ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ | ಬೆಲೆ ಏರಿಕೆಯೊಂದೇ ಕಾಂಗ್ರೆಸ್‌ ಸರ್ಕಾರದ 2 ವರ್ಷದ ಸಾಧನೆ : ಕಿಶೋರ್‌ ಕುಮಾರ್‌ ಪುತ್ತೂರು

ಮಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಬಿಜೆಪಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವತಿಯಿಂದ ಆಯೋಜಿಸಿದ ವಿವಿಧ ಗ್ರಾಮ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಮತ್ತು ಪುರಸಭೆ ಕಚೇರಿಗಳ ಎದುರು ನಡೆದ  ಪ್ರತಿಭಟನೆಗಳಲ್ಲಿ ಭಾಗವಹಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನಿರ್ಧಾರಗಳು, ಬೆಲೆ ಏರಿಕೆ ಹಾಗೂ ನಿರ್ಲಕ್ಷ್ಯ ನೀತಿಯ ವಿರುದ್ಧ ಸ್ಥಳೀಯ ಬಿಜೆಪಿ ಘಟಕಗಳು ಸಂಘಟಿತ ಧರಣಿ ಮತ್ತು ಪ್ರತಿಭಟನೆಯನ್ನು ಆಯೋಜಿಸಿತ್ತು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ವ್ಯಾಪಕ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ | ಬೆಲೆ ಏರಿಕೆಯೊಂದೇ ಕಾಂಗ್ರೆಸ್‌ ಸರ್ಕಾರದ 2 ವರ್ಷದ ಸಾಧನೆ : ಕಿಶೋರ್‌ ಕುಮಾರ್‌ ಪುತ್ತೂರು Read More »

ಐಶ್ವರ್ಯಾ ಗೌಡ ವಂಚನೆ ಕೇಸ್ : ಡಿ.ಕೆ. ಸುರೇಶ್ ED ವಿಚಾರಣೆಗೆ ಹಾಜರ್

ಬೆಂಗಳೂರು: ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರು ಬಳಸಿ ಐಶ್ವರ್ಯಾ ಗೌಡ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ED ವಿಚಾರಣೆಗೆ ಡಿ. ಕೆ. ಸುರೇಶ್ ಇಂದು ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಡಿ‌.ಕೆ. ಸುರೇಶ್‌ಗೆ ED ಅಧಿಕಾರಿಗಳು ಈ ಹಿಂದೆಯೇ ನೊಟೀಸ್ ಜಾರಿ ಮಾಡಿದ್ದರು. ಕಾಲಾವಕಾಶ ಕೇಳಿದ್ದ ಅವರು ಇಂದು ವಿಚಾರಣೆಗೆ ಹಾಜರಾಗಿರುವುದಾಗಿದೆ. ಶಾಂತಿನಗರದ ED ಕಚೇರಿಯಲ್ಲಿ ಈ ವಿಚಾರಣೆ ನಡೆದಿದೆ. ಈ ಸಂದರ್ಭದಲ್ಲಿ ಕಚೇರಿಯ ಪರಿಸರದಲ್ಲಿ ಭದ್ರತಾ ದೃಷ್ಟಿಯಿಂದ 100 ಪೋಲೀಸರನ್ನು

ಐಶ್ವರ್ಯಾ ಗೌಡ ವಂಚನೆ ಕೇಸ್ : ಡಿ.ಕೆ. ಸುರೇಶ್ ED ವಿಚಾರಣೆಗೆ ಹಾಜರ್ Read More »

ಹಸು ಕಳ್ಳತನ, ಗೋಮಾಂಸ ಮಾರಾಟಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ

ಕಾರ್ಕಳ: ಮುಡಾರಿನ ಅಹಿಂಸಾ ಅನಿಮಲ್ ಕೇರ್‌ ನಿಂದ ಮೂರು ದನಗಳನ್ನು ಕದ್ದ ಮೂವರು ಕಳ್ಳರ ಪೈಕಿ ಓರ್ವ ಪೊಲೀಸರ ವಶವಾಗಿದ್ದಾನೆ. ಬಂಧಿತ ಆರೋಪಿಯನ್ನು ಸಲೀಂ(38) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಕೆ ಮಾಡಿದ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಗಂಗೊಳ್ಳಿ ಸಮೀಪ ಸ್ಕೂಟರಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ರಹೀಮ್ (35) ಎಂಬವನೇ ಬಂಧಿತ ಆರೋಪಿ. ಈತನಿಂದ 25 ಕೆಜಿ ಗೋಮಾಂಸ ಮತ್ತು ಕೃತ್ಯಕ್ಕೆ

ಹಸು ಕಳ್ಳತನ, ಗೋಮಾಂಸ ಮಾರಾಟಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ Read More »

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಕೊಳ್ತಿಗೆ ಗ್ರಾಮ ಪಂಚಾಯತ್ ಎದುರು ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು ರಾಜ್ಯ ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ವತಿಯಿಂದ ಕೊಳ್ತಿಗೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸತ್ಯಪ್ರಕಾಶ್ ಕುಂಟಿಕಾನ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತೀರ್ಥನಂದ ಗೌಡ ದುಗ್ಗಳ, ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಸತೀಶ್ ಪಾಂಬಾರು, ಬಿಜೆಪಿ ತಾಲೂಕು ಉಪಾಧ್ಯಕ್ಷ ಯತಿಂದ್ರ ಕೊಚ್ಚಿ, ಶಿವರಾಮ್ ಭಟ್ ಭೀರ್ನಕಜೆ, ಗಣೇಶ್ ಭಟ್

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಕೊಳ್ತಿಗೆ ಗ್ರಾಮ ಪಂಚಾಯತ್ ಎದುರು ಬಿಜೆಪಿಯಿಂದ ಪ್ರತಿಭಟನೆ Read More »

ಅಕ್ಷಯ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಹೇಮ ಚಂದ್ರಹಾಸ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಮಾತನಾಡಿ, ಯೋಗವನ್ನು ಪ್ರತಿದಿನ ಅಭ್ಯಾಸ ಮಾಡಿದರೆ ದೇಹ ಮತ್ತು ಮನಸ್ಸು ಒತ್ತಡಮುಕ್ತವಾಗುತ್ತದೆ. ಅನೇಕ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್‍ ಪಕ್ಕಳ ಅಧ್ಯಕ್ಷತೆ ವಹಿಸಿ ಮಾತನಾಡಿ,  ಯೋಗದ ಮೂಲಕ ದೇಹದ ಆರೋಗ್ಯ ಹಾಗೂ ಮನಸ್ಸಿನ ಸಮತೋಲನ ವೃದ್ಧಿ

ಅಕ್ಷಯ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

ಭಾರತದ ಸೇನಾ ಬತ್ತಳಿಕೆಗೆ 6 ಪಿನಾಕ ರಾಕೆಟ್ ಶೀಘ್ರವೇ ಸೇರ್ಪಡೆ

ನವದೆಹಲಿ: ಜಗತ್ತಿನಲ್ಲಿ ಯುದ್ಧದ ಪರಿಸ್ಥಿತಿ ಹೆಚ್ಚಾಗುತ್ತಿದೆ. ಶತ್ರು ರಾಷ್ಟ್ರ ಪಾಕಿಸ್ತಾನ ಭಾರತದ ಮೇಲೆ ಆಗಾಗ್ಗೆ ಭಯೋತ್ಪಾದಕ ದಾಳಿಗಳನ್ನು ಮಾಡುತ್ತಿದೆ. ಚೀನಾ ಸಹ ತನ್ನ ಗಡಿ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಕುತಂತ್ರಗಳನ್ನು ಮಾಡುತ್ತಿದೆ. ಈ ಎಲ್ಲಾ ಕಾರಣಗಳಿಗಾಗಿ ಭಾರತ ತನ್ನ ಸೇನಾ ಬಲ, ಶಸ್ತ್ರಾಸ್ತ್ರಗಳ ಬಲವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ಪ್ರಸ್ತುತ ಭಾರತೀಯ ಸೇನೆಗೆ ಪಿನಾಕ ಎಂಬ ಪ್ರಬಲ 6 ರಾಕೆಟ್ ಅಸ್ತ್ರಗಳನ್ನು ಸೇರ್ಪಡೆ ಮಾಡಿಕೊಳ್ಳುತ್ತಿದೆ. 2026 ರ ವೇಳೆಗೆ ಈ ರಾಕೆಟ್‌ಗಳ ಲಾಂಚರ್‌ಗಳು ಆರು

ಭಾರತದ ಸೇನಾ ಬತ್ತಳಿಕೆಗೆ 6 ಪಿನಾಕ ರಾಕೆಟ್ ಶೀಘ್ರವೇ ಸೇರ್ಪಡೆ Read More »

ಜಗತ್ತಿನಲ್ಲಿ ಭಾರತ, ಪ್ರಧಾನಿ ಮೋದಿಯವರ ಖ್ಯಾತಿ ಹೆಚ್ಚಾಗಿದೆ : ದೆಹಲಿ ಸಿಎಂ ರೇಖಾ ಗುಪ್ತಾ

ನವದೆಹಲಿ: ಪ್ರಧಾನಿ ಸ್ಥಾನವನ್ನು ಮೋದಿ ಅವರು ಅಲಂಕರಿಸುವ ಮೊದಲು ಭಾರತವನ್ನು ಜಗತ್ತಿನಲ್ಲೇ ಅಭಿವೃದ್ಧಿ ಹೊಂದದ ಮತ್ತು ಹಿಂದುಳಿದ ರಾಷ್ಟ್ರ ಎಂದು ಪರಿಗಣಿಸಲಾಗಿತ್ತು. ಆದರೆ ಈಗ ಪ್ರಧಾನಿ ಮೋದಿ ಮತ್ತು ಭಾರತದ ಖ್ಯಾತಿ ವಿಶ್ವದಲ್ಲಿ ಹೆಚ್ಚಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಹೇಳಿದ್ದಾರೆ. ಪ್ರಸ್ತುತ ವಿದೇಶಗಳಲ್ಲಿ ಭಾರತೀಯರನ್ನು ಶುಭಾಶಯ, ನಮಸ್ಕಾರಗಳ ಜೊತೆಗೆ ಸ್ವಾಗತ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಅವರು ದೇಶವನ್ನು ಸ್ವಾವಲಂಬಿ ರಾಷ್ಚ್ರವನ್ನಾಗಿಸಲು ಮತ್ತು ಸಮೃದ್ಧವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದಾರೆ. ದೆಹಲಿಯಲ್ಲೂ ತ್ರಿಬಲ್ ಎಂಜಿನ್ ಬಿಜೆಪಿ ಆಡಳಿತ

ಜಗತ್ತಿನಲ್ಲಿ ಭಾರತ, ಪ್ರಧಾನಿ ಮೋದಿಯವರ ಖ್ಯಾತಿ ಹೆಚ್ಚಾಗಿದೆ : ದೆಹಲಿ ಸಿಎಂ ರೇಖಾ ಗುಪ್ತಾ Read More »

ರಾಜ್ಯ ಸರಕಾರ ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ : ಕ್ಯಾ.ಗಣೇಶ್‍ ಕಾರ್ಣಿಕ್‍ | ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು: ಬಡವರಿಗೆ ಸರ್ಕಾರದ ಮನೆ ಸಿಗಬೇಕಾದರೆ ಲಂಚ ನೀಡಬೇಕಾದ ಪರಿಸ್ಥಿತಿ ಪ್ರಸ್ತುತ ಒದಗಿ ಬಂದಿದೆ. ರಾಜ್ಯ ಸರಕಾರ ಅಧಿಕಾರ ಬಳಸಿಕೊಂಡು ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದರು. ಅವರು ಸೋಮವಾರ ಅಮರ್ ಜವಾನ್ ಜ್ಯೋತಿ ಬಳಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ನಗರ ಸಭೆಯ ವ್ಯಾಪ್ತಿಯಲ್ಲಿ ನಡೆದ

ರಾಜ್ಯ ಸರಕಾರ ರಾಜ್ಯವನ್ನು ಲೂಟಿ ಮಾಡುವ ಕಾರ್ಯ ಮಾಡುತ್ತಿದೆ : ಕ್ಯಾ.ಗಣೇಶ್‍ ಕಾರ್ಣಿಕ್‍ | ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ Read More »

ಕಚ್ಚಾತೈಲ ಬೆಲೆ ದಿಢೀರ್‌ ಏರಿಕೆ : ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಆತಂಕ

ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮುಚ್ಚಿದರೆ ಕಚ್ಚಾತೈಲ ಪೂರೈಕೆ ವ್ಯತ್ಯಯ ನವದೆಹಲಿ: ಇಸ್ರೇಲ್‌-ಇರಾನ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ ಇರಾನ್‌ ಅಣ್ವಸ್ತ್ರ ನೆಲೆಗಳ ಮೇಲೆ ದಾಳಿ ಮಾಡಿದ ಬಳಿಕ ಪರಿಸ್ಥಿತಿ ಗಂಭೀರವಾಗಿದ್ದು, ಅಮೆರಿಕದ ದಾಳಿಗೆ ಪ್ರತಿಯಾಗಿ ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಇರಾನ್‌ ಘೋಷಣೆ ಮಾಡಿದ ಬೆನ್ನಲ್ಲೆ ಕಚ್ಚಾತೈಲದ ದರ 5 ತಿಂಗಳ ನಂತರ ಭಾರಿ ಏರಿಕೆಯಾಗಿದೆ. ಇದರಿಂದಾಗಿ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಏರಿಕೆ ಆತಂಕ ತಲೆದೋರಿದೆ. ಸದ್ಯಕ್ಕೆ ಬೆಲೆ ಏರಿಕೆಯಗದು ಎಂದು ಕೇಂದ್ರ ಸರ್ಕಾರ

ಕಚ್ಚಾತೈಲ ಬೆಲೆ ದಿಢೀರ್‌ ಏರಿಕೆ : ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಆತಂಕ Read More »

error: Content is protected !!
Scroll to Top