ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ

ಅಪಘಾತದ ನಿಖರ ಕಾರಣ ತಿಳಿಯುವ ಸಾಧ್ಯತೆ ಅಹಮದಾಬಾದ್‌: ಕಳೆದ ಗುರುವಾರ ಮಧ್ಯಾಹ್ನ ಟೇಕಾಫ್‌ ಆದ ಬೆನ್ನಲ್ಲೇ ವಿಮಾನ ನಿಲ್ದಾಣದ ಬಳಿಯಿರುವ ಮೇಘನಿನಗರದ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏ‌ರ್ ಇಂಡಿಯಾ ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ. ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ […]

ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ Read More »

ಇರಾನ್‌ನ ಪರಮೋಚ್ಚ ನಾಯಕ ಖಮೇನಿಯ ಹತ್ಯೆ ಯೋಜನೆಗೆ ಅಮೆರಿಕ ತಡೆ

ಇರಾನ್‌ನ 230, ಇಸ್ರೇಲ್‌ನಲ್ಲಿ 10 ಮಂದಿ ಯುದ್ಧಕ್ಕೆ ಬಲಿ; ಮಿಲಿಟರಿ ನೆಲೆಗಳು, ಉನ್ನತ ನಾಯಕರು ಗುರಿ ಟೆಲ್‌ ಅವೀವ್‌ : ಇಸ್ರೇಲ್‌ ಮತ್ತು ಇರಾನ್‌ ಯುದ್ಧ ನಾಲ್ಕನೇ ದಿನ ಪ್ರವೇಶಿಸಿದ್ದು, ನಾಲ್ಕು ದಿನಗಳಲ್ಲಿ ಇರಾನ್‌ನ 230 ಮಂದಿ ಹತರಾಗಿದ್ದಾರೆ. ಈ ಪೈಕಿ ಶೆ.90 ಮಂದಿ ಇರಾನ್‌ ನಾಗರಿಕರು ಎಂದು ಅಲ್ಲಿನ ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಇಸ್ರೇಲ್‌ನಲ್ಲಿ 10 ನಾಗರಿಕರು ಇರಾನ್‌ ದಾಳಿಯಿಂದಾಗಿ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿಯೂ ಉಭಯ ದೇಶಗಳ ನಡುವೆ ತೀವ್ರ ಸಮರ ನಡೆದಿದೆ. ಇರಾನ್‌ನ ತೀರ

ಇರಾನ್‌ನ ಪರಮೋಚ್ಚ ನಾಯಕ ಖಮೇನಿಯ ಹತ್ಯೆ ಯೋಜನೆಗೆ ಅಮೆರಿಕ ತಡೆ Read More »

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು

ಹೂಡಿಕೆ ಮಾಡಿದರೆ ಲಾಭ, ನಿವೇಶನ ನೀಡುವ ನೆಪವೊಡ್ಡಿ ಭಾರಿ ಮೋಸ ನವದೆಹಲಿ:‌ ‘ಧೋಲೇರಾ ಸ್ಮಾರ್ಟ್ ಸಿಟಿ’ ಯೋಜನೆ ಹೆಸರಿನಲ್ಲಿ 70,000 ಜನರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 2,676 ಕೋಟಿ ರೂ. ವಂಚಿಸಿದ ರಾಜಸ್ಥಾನದ ಖತರ್ನಾಕ್‌ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಭಾಷ್ ಬಿಜಾರಾನಿ ಮತ್ತು ರಣವೀರ್ ಬಿಜಾರಾನಿ ಎಂದು ಗುರುತಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ತಲೆಮರೆಸಿಕೊಂಡಿದ್ದರು. ಆದರೆ ಪೊಲೀಸರು ಇಬ್ಬರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ರಣವೀರ್ ಬಿಜಾರಾನಿ 2014ರಲ್ಲಿ ಮೊದಲ

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು Read More »

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ತನಕ ಇಂದು ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್‍ಘೋಷಣೆಯಾಗಿದೆ. ದ.ಕ. ಜಿಳ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ತನಕ ಇಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ನಾ:ಳೆ (ಜೂ.16) ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಣೆಯಾಗಿದ್ದು, ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ. ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು ಮೂಲ್ಕಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ನಾ:ಳೆ (ಜೂ.16) ರಜೆ ಘೋಷಣೆ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾ ಮುಂದಿನ ಶೈಕ್ಷಣಿಕ ಚಟುವಟಿಕೆಗಳು, ಶಾಲಾ ನೀತಿ, ನಿಯಮಗಳ ಕುರಿತು ಚರ್ಚಿಸಲಾಯಿತು. ಮುಖ್ಯ ಅತಿಥಿಯಾಗಿ ಧಾರ್ಮಿಕ ಉಪನ್ಯಾಸಕ ದಾಮೋದರ ಶರ್ಮ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಸಂಚಾಲಕ ಭಾಸ್ಕರ ಆಚಾರ್ಯ ಹಿಂದಾರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರಾಕೇಶ್‍ ರೈ ಕೆಡೆಂಜಿ, ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ, ಸದಸ್ಯ ಹರೀಶ್‍  ಮುಖ್ಯ ಶಿಕ್ಷಕ ಪ್ರಸನ್ನ, ಕೆ.,

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ಸಭೆ | ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಿಸಲು ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ತೀರ್ಮಾನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವಠಾರದಲ್ಲಿರುವ ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಗೊಳಿಸುವ ಬಗ್ಗೆ ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ಆ ಪ್ರಕಾರ ತೀರ್ಮಾನ ಕೈಗೊಳ್ಳಲು ಶನಿವಾರ ಸಂಜೆ ನಡೆದ ದೇವಸ್ಥಾನದ ಕುರಿತ ಅಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಯ್ಯಪ್ಪ ಗುಡಿ ಇರುವ ಸ್ಥಳದಲ್ಲಿ ರಥ ನಿಲುಗಡೆ ಆಗಬೇಕು ಅನ್ನುವ ಅಂಶ ಕಂಡು ಬಂದಿದೆ. ಜತೆಗೆ ಅಲ್ಲಿರುವ ನಾಗನ ಸಾನಿಧ್ಯವನ್ನು ದೇವಾಲಯದ ಗದ್ದೆಯಲ್ಲಿರುವ ಮೂಲ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ಸಭೆ | ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಿಸಲು ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ತೀರ್ಮಾನ Read More »

ವಾಹನ ಅಪಘಾತದಲ್ಲಿ ಮೃತಪಟ್ಟ ಸರ್ಪ | ಸ್ಥಳೀಯರಿಂದ ಸರ್ಪ ಸಂಸ್ಕಾರ ಕಾರ್ಯ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರ್ಪವೊಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದು, ಈ ಕುರಿತು ಸರ್ಪ ಸಂಸ್ಕಾರ ಕಾರ್ಯ ಭಾನುವಾರ ಬೈಪಾಸ್ ರಸ್ತೆಯಲ್ಲಿರುವ ಅಪೂರ್ವ ಸೆಂಟರ್‍ ಬಳಿ ಇರುವ ಸತೀಶ್‍ ರೈ ಎಂಬವರ ಮನೆಯಲ್ಲಿ  ನಡೆಯಿತು. ಕೆಮ್ಮಿಂಜೆ ವೇ.ಮೂ. ಶ್ರೀಕೃಷ್ಣ ಕಲ್ಲೂರಾಯ ಅವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ವಾಹನ ಅಪಘಾತದಲ್ಲಿ ಮೃತಪಟ್ಟ ಸರ್ಪ | ಸ್ಥಳೀಯರಿಂದ ಸರ್ಪ ಸಂಸ್ಕಾರ ಕಾರ್ಯ Read More »

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ

ಬೆಳ್ತಂಗಡಿ : ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‍ ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಶನಿವಾರ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದ್ದು. ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49) ಮತ್ತು

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ನವೀಕೃತ ಕಚೇರಿ ’ಹಿಂದವಿ’ ಉದ್ಘಾಟನೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿವತಿಯಿಂದ ನವೆಂಬರ್ ತಿಂಗಳಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು 100 ಮಂದಿ ಜೋಡಿಯ ಸಾಮೂಹಿಕ ವಿವಾಹದ ಕಾರ್ಯಾಲಯವನ್ನು ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಹಿಂದವಿ ಕಚೇರಿಯಲ್ಲಿ ಶನಿವಾರ ಉದ್ಘಾಟಿಸಲಾಯಿತು. ಪೂಂಜಾಲಕಟ್ಟೆ ಸ್ವಸ್ತಿಕ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ, ಹಲವಾರು ಸಾಮೂಹಿಕ ವಿವಾಹ ನಡೆಸುತ್ತಿರುವ ತುಂಗಪ್ಪ ಬಂಗೇರ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ಕಾರ್ಯಕ್ರಮವಾಗಿ ಸಾಮೂಹಿಕ ವಿವಾಹ ಅಷ್ಟು ಸುಲಭದ ಕೆಲಸವಲ್ಲ. ಇಲ್ಲಿ ಹಣ ಮುಖ್ಯವಲ್ಲ. ಕಾರ್ಯಕರ್ತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ನವೀಕೃತ ಕಚೇರಿ ’ಹಿಂದವಿ’ ಉದ್ಘಾಟನೆ Read More »

error: Content is protected !!
Scroll to Top