ನಾಳೆ (ಜೂ.11) : ಸವಣೂರು ಯುವಕ ಮಂಡಲ ಸಭಾಭವನದಲ್ಲಿ ಜನಸಂಪರ್ಕ ಸಭೆ

ಬೆಳ್ಳಾರೆ: ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಜನಸಂಪರ್ಕ ಸಭೆ ನಾಳೆ (ಜೂ.11) ಬೆಳಿಗ್ಗೆ ನಡೆಯಲಿದೆ. ಸವಣೂರು ಯುವಕ ಮಂಡಲ ಸಭಾಭವನದಲ್ಲಿ ಪುತ್ತೂರು ಉಪವಿಭಾಗದ DYSP ಯವರ ಉಪಸ್ಥಿತಿಯಲ್ಲಿ ಬೆಳಿಗ್ಗೆ 11.30 ಕ್ಕೆ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ. ಸವಣೂರಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಬೆಳ್ಳಾರೆ ಠಾಣಾ ಪೊಲೀಸ್‍ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜೂ.11) : ಸವಣೂರು ಯುವಕ ಮಂಡಲ ಸಭಾಭವನದಲ್ಲಿ ಜನಸಂಪರ್ಕ ಸಭೆ Read More »

ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ | ಠಾಣೆ ಮೆಟ್ಟಿಲೇರಿದ ಕೃಷಿಕರು

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ವಂಚನೆಗೆ ಒಳಗಾದ ಕೃಷಿಕರು ಹಣ ನೀಡದೆ ವಂಚಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು

ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ | ಠಾಣೆ ಮೆಟ್ಟಿಲೇರಿದ ಕೃಷಿಕರು Read More »

ಪೆಟ್ರೋಲ್‍ ಸುರಿದು ಕೊಲೆಗೆ ಯತ್ನ | ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಕಡಬ: ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್ ರೈಲು ಟ್ರ್ಯಾಕ್ ಸಮೀಪ ಜೂ.8 ರಂದು ಈ ಘಟನೆ ನಡೆದಿತ್ತು. ತಮ್ಮನ್ನೇ ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನಿಸಿದ್ದ. ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನುಮಪ್ಪ (42) ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಪೊಲೀಸರು

ಪೆಟ್ರೋಲ್‍ ಸುರಿದು ಕೊಲೆಗೆ ಯತ್ನ | ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು Read More »

ನಾಳೆ ಶುಭಾಂಶು ಶುಕ್ಲ ಗಗನ ಯಾತ್ರೆ

ರಾಕೇಶ್‌ ಶರ್ಮ ಬಳಿಕ 41 ವರ್ಷಗಳ ನಂತರ ಇತಿಹಾಸ ರಚಿಸಲಿರುವ ಭಾರತದ ಗಗನ ಯಾತ್ರಿ ನವದೆಹಲಿ: ಭಾರತೀಯ ಗಗನ ಯಾತ್ರಿ ಶುಭಾಂಶು ಶುಕ್ಲ ಜೂ.11ರಂದು ಗಗನಯಾತ್ರೆ ಕೈಗೊಳ್ಳಲಿದ್ದಾರೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9 (SpaceX’s Falcon-9) ಗಗನ ನೌಕೆ ಬುಧವಾರ ಸಂಜೆ ಉಡಾವಣೆಗೊಳ್ಳಲಿದ್ದು, ಇದರಲ್ಲಿ ಬಾಹ್ಯಾಕಾಶ ಯಾತ್ರೆ ಆರಂಭಿಸಲಿದ್ದಾರೆ. ಶುಕ್ಲ ಜೊತೆಗೆ ಇತರ ಮೂವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಸಿದ್ಧರಾಗಿದ್ದಾರೆ. 1984ರಲ್ಲಿ ಸೋವಿಯತ್ ರಷ್ಯಾದ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ

ನಾಳೆ ಶುಭಾಂಶು ಶುಕ್ಲ ಗಗನ ಯಾತ್ರೆ Read More »

ಹೊಸದಿಲ್ಲಿಯ ಫ್ರೆಂಡ್‌ಶಿಪ್ ಫೋರಂ ನೀಡುವ ಪ್ರತಿಷ್ಠಿತ ‘ಗ್ಲೋಬಲ್‌ ಅಚೀವರ್ಸ್’ ಪ್ರಶಸ್ತಿಗೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ

ಹೊಸದಿಲ್ಲಿಯ ಫ್ರೆಂಡ್‌ಶಿಪ್ ಫೋರಂ ನೀಡುವ ಪ್ರತಿಷ್ಠಿತ ‘ಗ್ಲೋಬಲ್‌ ಅಚೀವರ್ಸ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. ಸಹಕಾರ, ಬ್ಯಾಂಕಿಂಗ್‌ ಮತ್ತು ಸಮಾಜ ಸೇವೆಯಲ್ಲಿ ಅವರ ಅನುಪಮ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಡಾ. ರಾಜೇಂದ್ರ ಕುಮಾರ್ ಅವರು ಕಳೆದ 31 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಅವಧಿಯಲ್ಲಿ ಬ್ಯಾಂಕನ್ನು ರಾಷ್ಟ್ರೀಯ ಮಟ್ಟದ

ಹೊಸದಿಲ್ಲಿಯ ಫ್ರೆಂಡ್‌ಶಿಪ್ ಫೋರಂ ನೀಡುವ ಪ್ರತಿಷ್ಠಿತ ‘ಗ್ಲೋಬಲ್‌ ಅಚೀವರ್ಸ್’ ಪ್ರಶಸ್ತಿಗೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ Read More »

ಮಂಗಳೂರಿನ ಕದ್ರಿ ದೇವಸ್ಥಾನದ ಕೊಳದ ಬಳಿ ಬುದ್ಧನ ವಿಗ್ರಹ, ಗುಹೆ ಪತ್ತೆ

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪವಿತ್ರ ಕೊಳದ ಬಳಿ ಬುದ್ಧನ ಅಪರೂಪದ ಶಿಲ್ಪ ಮತ್ತು ಗುಹೆ ಪತ್ತೆಯಾಗಿದೆ. ದೇವಸ್ಥಾನದ ಅಧಿಕಾರಿಗಳ ಅನುಮತಿಯೊಂದಿಗೆ ಇತ್ತೀಚೆಗೆ ನಡೆಸಿದ ಪರಿಶೋಧನೆಯಲ್ಲಿ ಈ ಆವಿಷ್ಕಾರ ಮಾಡಲಾಗಿದೆ.ಕೊಳದಲ್ಲಿ ಮುಳುಗಿದ್ದ ಸ್ಥಿತಿಯಲ್ಲಿ ದೊರೆತ ಈ ಶಿಲ್ಪವು, ಪದ್ಮಾಸನದಲ್ಲಿ (ಧ್ಯಾನ ಮುದ್ರೆ) ಕುಳಿತಿರುವ ಬುದ್ಧನನ್ನು ಚಿತ್ರಿಸುತ್ತದೆ. ವಿಗ್ರಹದ ಬಲಗೈ ಸಂಪೂರ್ಣವಾಗಿ ಮುರಿದಿದ್ದು, ಎಡಗೈ ಇಟ್ಟ ಕಾಲುಗಳ ನಡುವೆ ಇದೆ. ಭಾಗಶಃ ಕಾಣುವ ಉತ್ತರೀಯ (ಮೇಲು ಹೊದಿಕೆ) ಎಡ ಭುಜ ಮತ್ತು ಎದೆಗೆ ಆವರಿಸಿದೆ. ಶಿಲ್ಪದ ತಲೆ

ಮಂಗಳೂರಿನ ಕದ್ರಿ ದೇವಸ್ಥಾನದ ಕೊಳದ ಬಳಿ ಬುದ್ಧನ ವಿಗ್ರಹ, ಗುಹೆ ಪತ್ತೆ Read More »

ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್‌ ವಿದ್ಯಾರ್ಥಿಗಳ ರಕ್ಷಣೆ

ಬಂಡಾಜೆ ಮಾರ್ಗವಾಗಿ ಚಾರಣ ಪ್ರಾರಂಭಿಸಿ ರಾತ್ರಿ ಕಾಡಿನಲ್ಲಿ ಕಳೆದು ಹೋದ 11 ಮಂದಿ ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೆ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು, 5 ಹುಡುಗಿಯರು ಟ್ರಕ್ಕಿಂಗ್ ಬಂದಿದ್ದು, ಡ್ರೈವರ್ ಸೇರಿ 11 ಜನ ಚಾರಣಕ್ಕೆ ಹೊರಟಿದ್ದರು. ಚಿಕ್ಕಮಗಳೂರಿನ ಬಲ್ಲಾಳರಾಯನ ದುರ್ಗಾದಲ್ಲಿ ಟಿಕೆಟ್ ಬುಕ್ ಮಾಡಿಸಿ ದಾರಿ ತಿಳಿಯದೆ ದಕ್ಷಿಣ

ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್‌ ವಿದ್ಯಾರ್ಥಿಗಳ ರಕ್ಷಣೆ Read More »

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ

ವಿಶೇಷ ಗೌರವಕ್ಕೆ ಪಾತ್ರರಾದ ಭಾರತದ 11ನೇ ಕ್ರಿಕೆಟಿಗ ಲಂಡನ್‌: ಭಾರತಕ್ಕೆ ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟ ದಿಗ್ಗಜ ಕ್ರಿಕೆಟಿಗ ಎಂ.ಎಸ್‌.ಧೋನಿ 2025ನೇ ಸಾಲಿನ ಹಾಲ್‌ ಆಫ್ ಫೇಮ್‌ ಗೌರವಕ್ಕೆ ಭಾಜನರಾಗಿದ್ದಾರೆ. ಅವರ ಜತೆಗೆ ಇತರ 6 ಕ್ರಿಕೆಟಿಗರು ಕೂಡ ಈ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಧೋನಿ ಐಸಿಸಿ ಹಾಲ್‌ ಆಫ್‌ ಫೇಮ್‌ ಸೇರ್ಪಡೆಗೊಂಡ ಭಾರತದ 11ನೇ ಕ್ರಿಕೆಟಿಗ ಎನಿಸಿಕೊಂಡರು. ಧೋನಿಗೂ ಮುನ್ನ ಸುನಿಲ್‌ ಗವಾಸ್ಕರ್‌, ಬಿಶನ್‌ ಸಿಂಗ್‌ ಬೇಡಿ, ಕಪಿಲ್‌ ದೇವ್‌, ಅನಿಲ್‌ ಕುಂಬ್ಳೆ, ರಾಹುಲ್‌

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ Read More »

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

ಪುತ್ತೂರು: ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋ?ಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ Read More »

ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು

ಹೈಕಮಾಂಡ್‌ಗೆ ವಿವರಣೆ ನೀಡಲು ಹೋದ ಸಿಎಂ, ಡಿಸಿಎಂ ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಘಟನೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಕುಂಭಮೇಳ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಸಂಭವಿಸಿದ ದುರ್ಘಟನೆಗಳಿಗೆ ಕೇಂದ್ರ ಸರ್ಕಾರವನ್ನು ಗುರಿ ಮಾಡಿಕೊಂಡು ಟೀಕಿಸುತ್ತಿದ್ದ ಕಾಂಗ್ರೆಸ್‌ಗೆ ಈಗ ತನ್ನದೇ ಆಡಳಿತವಿರುವ ರಾಜ್ಯದಲ್ಲಿ ಸಂಭವಿಸಿದ ಘೋರ ದುರಂತ ಮತ್ತು ಅದರಲ್ಲಿ ನೇರವಾಗಿ ಸರ್ಕಾರವೇ ಶಾಮೀಲಾಗಿರುವುದು ನುಂಗಲಾಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ

ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು Read More »

error: Content is protected !!
Scroll to Top