ಕರಾವಳಿಯಲ್ಲಿ ಇಂದು ಬಕ್ರೀದ್‌ ಆಚರಣೆ

ವಿಶೇಷ ಪ್ರಾರ್ಥನೆ, ಹೊಸ ಉಡುಪು ಧರಿಸಿ ಸಂಭ್ರಮ ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇಂದು ಬಕ್ರೀದ್‌ ಹಬ್ಬ ಆಚರಿಸಲಾಗುತ್ತದೆ. ಮುಂಜಾನೆಯಿಂದಲೇ ಮುಸ್ಲಿಮರು ಈದುಲ್ ಅಝ್‌ಹಾ (ಬಕ್ರೀದ್) ಸಡಗರದಲ್ಲಿದ್ದಾರೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ನಾನಾ ಬಗೆಯ ತಿಂಡಿ-ತಿನಿಸು […]

ಕರಾವಳಿಯಲ್ಲಿ ಇಂದು ಬಕ್ರೀದ್‌ ಆಚರಣೆ Read More »

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡಿಂಗ್‌ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ವಿರುದ್ಧವೂ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ವಿರಾಟ್‌ ಕೊಹ್ಲಿ ವಿರುದ್ಧವೂ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಕೇಸ್‌ ದಾಖಲಾಗಿದೆ. ಆದರೆ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ Read More »

ಇಂದಿನಿಂದ ಗಡಾಯಿಕಲ್ಲು ಚಾರಣ ಮಾಡಬಹುದು

ಪ್ರವಾಸಿ ತಾಣಗಳ ಪ್ರವೇಶಕ್ಕಿದ್ದ ನಿರ್ಬಂಧ ತೆರವು ಬೆಳ್ತಂಗಡಿ : ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7ರಿಂದ ಎಂದಿನಂತೆ ಪ್ರವೇಶ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಅನುಮತಿ ನೀಡಿದೆ. ಮೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದ ಕಾರಣ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿತ್ತು. ನದಿ ಹಳ್ಳಗಳು ಉಕ್ಕಿ ಹರಿದು ಒಳ ಹರಿವು ಜಾಸ್ತಿ ಇದ್ದುದರಿಂದ ಪ್ರವಾಸಿಗರ ಚಾರಣಕ್ಕೆ ಮೇ 31ರಂದು ಮುಂದಿನ

ಇಂದಿನಿಂದ ಗಡಾಯಿಕಲ್ಲು ಚಾರಣ ಮಾಡಬಹುದು Read More »

ಪೂಜೆ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿ ವೃದ್ಧೆ ಮೃತ್ಯು

ಮಂಗಳೂರು: ಪೂಜೆ ಮಾಡುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ನಗರದ ಮೇರಿಹಿಲ್ ಸಮೀಪದ ಗುರುನಗರ ನಿವಾಸಿ ಸರೋಜಿನಿ (64) ಮೃತಪಟ್ಟವರು.  ಅವರನ್ನು ರಕ್ಷಿಸಲು ಮುಂದಾದ ಪುತ್ರ ಅಕ್ಷಯ್ (20)ಗೆ ಸುಟ್ಟ ಗಾಯವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಸರೋಜಿನಿಯ ಬಟ್ಟೆಗೆ ಬೆಂಕಿ ತಗುಲಿತ್ತು. ಈ ವೇಳೆ ಪುತ್ರ ಆಕೆಯನ್ನು ರಕ್ಷಿಸಲು ಮುಂದಾಗಿದ್ದು, ಆತನಿಗೂ ಬೆಂಕಿಯಿಂದ ಸುಟ್ಟಗಾಯವಾಗಿತ್ತು. ವಿಷಯ ತಿಳಿದ

ಪೂಜೆ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿ ವೃದ್ಧೆ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ ಪಲ್ಟಿ | ಹಲವರಿಗೆ ಗಾಯ

ಗುಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡು ಹಲವರು ಗಾಯಗೊಂಡ ಘಟನೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೂವರು ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಫಹದ್ (20) ಮೂಡಬಿದ್ರೆ, ರಂಝೀನ್(25) ಪರಂಗಿಪೇಟೆ, ಉಮ್ಮರ್ (53)ದೇರಳಕಟ್ಟೆ,

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ ಪಲ್ಟಿ | ಹಲವರಿಗೆ ಗಾಯ Read More »

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು

ಶೈಕ್ಷಣಿಕ ವರ್ಷದ 244 ದಿನ ವಿತರಿಸಲು ಇಲಾಖೆ ಆದೇಶ ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಾರದಲ್ಲಿ 2 ದಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ಮತ್ತು ಉಳಿದ ನಾಲ್ಕು ದಿನ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಪೌಷ್ಟಿಕ ಆಹಾರ ವಿತರಿಸಲಾಗುತ್ತದೆ. ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳು

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು Read More »

ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ.  2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ ‘ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ’ ಇದರಡಿಯಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಯಾವುದಕ್ಕೆ ಧನ ಸಹಾಯ? ಜೇನು ಪೆಟ್ಟಿಗೆ, ಜೇನು ಕುಟುಂಬ ಹಾಗೂ ಸ್ಟ್ಯಾಂಡ್ ಖರೀದಿಸಿದ್ದರ ಸಲುವಾಗಿ ಸಹಾಯ ಧನ ಪಡೆಯಬಹುದಾಗಿದೆ. ಜೇನು ಕೃಷಿಕರು ಏನು ಮಾಡಬೇಕು? ಮೊದಲಿಗೆ ಜೇನು ತರಬೇತಿ ಕಾರ್ಯಕ್ರಮಕ್ಕೆ ಆಸಕ್ತ ರೈತರು ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಬಳಿಕ ಜೇನು

ಜೇನು ಕೃಷಿಗೆ ಅರ್ಜಿ ಆಹ್ವಾನ Read More »

ದಿನೇಶ್‌ ಅಮೀನ್‌ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ

ವಿಧಾನಪರಿಷತ್‌ನ ನಾಲ್ಕು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ಮಾಡಿ ಶಿಫಾರಸ್ಸು ಬೆಂಗಳೂರು : ವಿಧಾನಪರಿಷತ್‌ನ ಖಾಲಿ ಇರುವ ನಾಲ್ಕು ನಾಮನಿರ್ದೇಶಿತ ಸ್ಥಾನಗಳನ್ನು ಭರ್ತಿ ಮಾಡುವ ಪಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ನೀಡಿದ್ದು, ದಿನೇಶ್‌ ಅಮಿನ್‌ ಮಟ್ಟು, ಆರತಿ ಕೃಷ್ಣ, ರಮೇಶ್‌ ಬಾಬು ಹಾಗೂ ಡಿ.ಜಿ.ಸಾಗರ್‌ ಅವರ ಹೆಸರು ಅಂತಿಮಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಿದೆ. ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಸದಸ್ಯರ ಪೈಕಿ ಯು.ಬಿ.ವೆಂಕಟೇಶ್‌, ಪ್ರಕಾಶ್‌ ರಾಥೋಡ್‌, ಸಿ.ಪಿ. ಯೋಗೇಶ್ವರ್‌ (ರಾಜೀನಾಮೆ) ಹಾಗೂ ತಿಪ್ಪೇಸ್ವಾಮಿ ಅವರ

ದಿನೇಶ್‌ ಅಮೀನ್‌ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ Read More »

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌

ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತು ಹಾಕಿದ ಸಿದ್ದರಾಮಯ್ಯ ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯ ಬಂಧನ ಆಗುತ್ತಿದ್ದಂತೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್‌ ಅವರನ್ನು ಬಿಟ್ಟು ಕಳಿಸುವಂತೆ ಪೊಲೀಸರಿಗೆ ಒತ್ತಡ ಹಾಕಿದ್ದರು ಎಂಬ ವಿಚಾರ ತಿಳಿದು ಬಂದಿದೆ. ಇದೇ ಕಾರಣಕ್ಕೆ ಗೋವಿಂದರಾಜ್‌ ಅವರನ್ನು ತಮ್ಮ‌ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಸಿದ್ದರಾಮಯ್ಯ ತೆಗೆದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗಿನ ಜಾವ ಆರ್‌ಸಿಬಿಯ ನಿಖಿಲ್‌ ಸೋಸಲೆ ಬಂಧನ

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌ Read More »

ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆ ಸಲ್ಲಿಸಲು ಪೊಲೀಸರಿಗೆ ಎಸಿ ಆದೇಶ | ವಿಚಾರಣೆ ಮುಂದೂಡಿಕೆ

ಪುತ್ತೂರು: ಅರುಣ್ ಪುತ್ತಿಲ ಗಡಿಪಾರು ನೋಟಿಸ್ ಸಂಬಂಧಪಟ್ಟಂತೆ ಪುತ್ತೂರು ಎಸಿ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಅರುಣ್ ಪುತ್ತಿಲ ಪರ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಭಾಗಿಯಾಗಿ ವಾದಿಸಿದ್ದರು. ಅರುಣ್ ಪುತ್ತಿಲ ಗಡಿಪಾರಿಗೆ ಪೊಲೀಸರು ಸೂಕ್ತ ಹಾಗೂ ಸಮರ್ಪಕ ದಾಖಲೆ ಸಲ್ಲಿಸದ ಕಾರಣ ಜೂ.27ಕ್ಕೆ ಮುಂದೂಡಿ ಸಮರ್ಪಕ ದಾಖಲೆ ಸಲ್ಲಿಸುವಂತೆ ಆದೇಶಿಸಿದರು.

ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆ ಸಲ್ಲಿಸಲು ಪೊಲೀಸರಿಗೆ ಎಸಿ ಆದೇಶ | ವಿಚಾರಣೆ ಮುಂದೂಡಿಕೆ Read More »

error: Content is protected !!
Scroll to Top