ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನ | ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಅವರಿಂದ ಭವನ ನಿರ್ಮಾಣ ಕಾರ್ಯ ವೀಕ್ಷಣೆ

ಕಡಬ : ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ, ಶಿಕ್ಷಣ ಕ್ರಾಂತಿಯ ಹರಿಕಾರರಾದ ದಿ. ಕುರುಂಜಿ ವೆಂಕಟರಮಣ ಗೌಡ ಅವರ ಸುಪುತ್ರರಾದ ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಆಗಮಿಸಿ, ಸಮುದಾಯ ಭವನ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಕೆ.ವಿ.ಜಿ ಕುಟುಂಬದ ಹೆಸರು ನಮ್ಮ ಸಮುದಾಯ ಭವನದಲ್ಲಿ ಅಚ್ಚಳಿಯದೆ ಉಳಿಯುವಂತಹ, ನಮ್ಮ  ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಬೇಡಿಕೆಯನ್ನು ನೆರೆವೇರಿಸುವ ಸಂಪೂರ್ಣ ಭರವಸೆ ಈ […]

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನ | ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ ಅವರಿಂದ ಭವನ ನಿರ್ಮಾಣ ಕಾರ್ಯ ವೀಕ್ಷಣೆ Read More »

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍.

ಪುತ್ತೂರು: ಹಿಟ್ ಆಂಡ್ ರನ್‌ ನಲ್ಲಿ ಅರಿಯಡ್ಕ ಗ್ರಾ. ಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್.ರವರು ಗಾಯಗೊಂಡ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 275 ರ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ. ಸವಿತಾರವರು ಚಲಾಯಿಸುತ್ತಿದ್ದ ಸ್ಕೂಟರ್‌ ಶೇಖಮಲೆ ಮಸೀದಿ ಹತ್ತಿರ ಟೆಂಪೋ ಟ್ರಾವೆಲ್ಲರ್‌ ವೊಂದು ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಪಲ್ಟಿಯಾಗಿದ್ದು ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಾಯಾಳುವನ್ನು ತಕ್ಷಣವೇ ಕುಂಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕ

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍. Read More »

ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ರಾಜ್ಯ ಸರಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ಖಂಡನೀಯವಾಗಿದ್ದು, ದಿನೇಶ್ ಗುಂಡೂರಾವ್ ಅವರ ಹೇಳಿಕೆ ದುರದೃಷ್ಟಕರ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಿಂದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ಜನೌಷಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಪ್ರಭುತ್ವ ಯೋಜನೆಯಾಗಿದ್ದು, ಲಕ್ಷಾಂತರ ಬಡ ಜನರಿಗೆ ಕಡಿಮೆ ಬೆಲೆಯ, ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಒದಗಿಸುತ್ತಿತ್ತು. ಎಷ್ಟೋ

ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ನಿರ್ಧಾರ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು Read More »

ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿಯಲ್ಲಿ  26 ನಕ್ಸಲೀಯರ ಹತ್ಯೆ

ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ರಾಜ್ಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ. ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗ ಮೃತಪಟ್ಟಿದ್ದಾರೆ ಮತ್ತು ಒಬ್ಬರು

ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿಯಲ್ಲಿ  26 ನಕ್ಸಲೀಯರ ಹತ್ಯೆ Read More »

 ಬಪ್ಪಳಿಗೆ ಬಿ. ಅಬ್ದುಲ್ ರಹಿಮಾನ್ ನಿಧನ

ಪುತ್ತೂರು : ಪುತ್ತೂರು ಕೇಂದ್ರ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ ಪುತ್ತೂರಿನ ಬಪ್ಪಳಿಗೆ ಮಸ್ಜಿದುನ್ನೂರು ಜುಮಾ ಮಸೀದಿಯ ಆಡಳಿತ ಸಮಿತಿ ಮಾಜಿ ಅಧ್ಯಕ್ಷರಾದ  ಬನ್ನೂರು ನಿವಾಸಿ ಅಬ್ದುಲ್‍ ರಹಿಮಾನ್‍ ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು ಪುರಸಭೆಯ ಮಾಜಿ ಕೌನ್ಸಿಲರ್ ಮತ್ತು ಪುತ್ತೂರು ಪುರಸಭೆಯ ಸ್ಥಾಯೀ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು. ಮೃತರಿಗೆ ಪುತ್ರ ಹಾಗೂ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.

 ಬಪ್ಪಳಿಗೆ ಬಿ. ಅಬ್ದುಲ್ ರಹಿಮಾನ್ ನಿಧನ Read More »

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ

ಪುತ್ತೂರು : ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ  ಸುಧಾಕರ ಬನ್ನಂಜೆ ಕಥೆ- ಚಿತ್ರಕಥೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ ‘ಗಂಟ್ ಕಲ್ವೆರ್’ ಚಿತ್ರ ಮೇ 28 ರಂದು ತುಳುನಾಡನಾದ್ಯಂತ ಬಿಡುಗಡೆ ಯಾಗಲಿದೆ ಎಂದು ಸಿನೆಮಾ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ, ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ  ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್

ಮೇ 28 : ಕರಾವಳಿಯಾದ್ಯಂತ ‘ಗಂಟ್ ಕಲ್ವೆರ್’ ತುಳು ಸಿನೆಮಾ ಬಿಡುಗಡೆ Read More »

ಮೇ 25 : ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ | ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸಹಯೋಗದಲ್ಲಿ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕದ ಜಂಟಿ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಮೇ 25 ಭಾನುವಾರ ಸುದಾನ ವಸತಿಯುತ ಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಕಾರ್ಯಕ್ರಮ ಸಂಚಾಲಕ ಪ್ರಭಾಕರ ಸಾಲ್ಯಾನ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸೇರಿದಂತೆ ಸುಮಾರು

ಮೇ 25 : ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ | ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸಹಯೋಗದಲ್ಲಿ Read More »

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧ ಇದೆ ಎಂಬ ಗುಸುಗುಸು ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್‌ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ Read More »

ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ

ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಏರೋಸ್ಪೇಸ್ ಉದ್ಯೋಗಿ ಬೆಳ್ತಂಗಡಿ: ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಆಕಾಂಕ್ಷಾ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್‌ಗೆ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತರಲಾಯಿತು. ಮನೆಯಲ್ಲಿ ತಂದೆ ತಾಯಿಯರ ಆಕ್ರಂದನ ಮುಗಿಲು ಮುಟ್ಟಿದ್ದು ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ

ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ Read More »

ಭೀಕರ ಅಪಘಾತ : ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಆರು ಮಂದಿ ಸಾವು

ಡಿವೈಡರ್‌ ಹಾರಿದ ಕಾರಿನಿಂದಾಗಿ ಸಂಭವಿಸಿದ ಸರಣಿ ಅಪಘಾತ ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಕೂಡ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಕಾರು, ಕಂಟೇನರ್​ ಮತ್ತು ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದತ್ತ ಹೋಗುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ

ಭೀಕರ ಅಪಘಾತ : ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಆರು ಮಂದಿ ಸಾವು Read More »

error: Content is protected !!
Scroll to Top