ಕನ್ನಡಿಗರನ್ನು ಅವಮಾನಿಸಿದ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಬಂಧನ

ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸುವ ಸಂದೇಶ ಪ್ರಕಟ ಬೆಂಗಳೂರು: ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರಿಗೆ ಅವಮಾನವಾಗುವಂಥ ಹೇಳಿಕೆ ಪ್ರಕಟಿಸಿದ ಬೆಂಗಳೂರಿನ ಕೋರಮಂಗಲದ ಜಿ.ಎಸ್​.ಸೂಟ್​ ಹೋಟೆಲ್‌ನ ಮ್ಯಾನೇಜರ್ ಸರ್ಫಜ್​​ ಎಂಬಾತನನ್ನು ಬಂಧಿಸಲಾಗಿದ್ದು, ಜಿ.ಎಸ್​.ಸೂಟ್​ ಹೋಟೆಲ್​​ ಸೀಜ್ ಮಾಡಲಾಗಿದೆ. ಹೋಟೆಲ್​​ ಮಾಲೀಕ ಜಮ್ಸದ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ನಗರದ ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದಲ್ಲಿರುವ ಈ ಹೋಟೆಲ್‌ನಲ್ಲಿ ನಿನ್ನೆ ಕನ್ನಡಿಗರಿಗೆ ಅಪಮಾನ ಮಾಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನಮ್ಮ‌ ನೆಲದ ಅನ್ನ ತಿಂದು ನಮ್ಮನ್ನೇ ಅವಮಾನಿಸುತ್ತಿದ್ದಾರೆ.‌ ಪದೇಪದೇ ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ ಎಂದು […]

ಕನ್ನಡಿಗರನ್ನು ಅವಮಾನಿಸಿದ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಬಂಧನ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ | ಸ್ವಚ್ಛ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜದ ನಿರ್ಮಾಣ: ಡಾ. ರಾಜೇಶ್ ಬೆಜ್ಜಂಗಳ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ,  ಪುತ್ತೂರು ನಗರ ಸಭೆ ವತಿಯಿಂದ, ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಹಯೋಗದಲ್ಲಿ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಸಂಯೋಜಕತ್ವದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ನಮ್ಮ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಹಾಗೂ ಅಚ್ಚುಕಟ್ಟಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ನೈತಿಕ ಜವಾಬ್ದಾರಿಯಾಗಿದೆ.

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ | ಸ್ವಚ್ಛ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜದ ನಿರ್ಮಾಣ: ಡಾ. ರಾಜೇಶ್ ಬೆಜ್ಜಂಗಳ Read More »

ಧರ್ಮಸ್ಥಳದ ಏರೋಸ್ಪೇಸ್‌ ಉದ್ಯೋಗಿ ಪಂಜಾಬಿನಲ್ಲಿ ನಿಗೂಢ ಸಾವು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಯುವತಿ ಪಂಜಾಬಿನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮೇ 17ರಂದು ನಡೆದಿದೆ. ಮೃತ ಯುವತಿಯನ್ನು ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಎಂದು ಗುರುತಿಸಲಾಗಿದೆ.ಪಂಜಾಬಿನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್‌ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್‌ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೆಟ್

ಧರ್ಮಸ್ಥಳದ ಏರೋಸ್ಪೇಸ್‌ ಉದ್ಯೋಗಿ ಪಂಜಾಬಿನಲ್ಲಿ ನಿಗೂಢ ಸಾವು Read More »

ಕಕ್ಷೆ ಸೇರಲು ವಿಫಲವಾದ ಇಸ್ರೋ ಉಪಗ್ರಹ

1,696 ಕಿಲೋಗ್ರಾಂ ತೂಕದ EOS-09 ರೆಡಾರ್ ಇಮೇಜಿಂಗ್ ಸ್ಯಾಟಲೈಟ್‌ ಅಮರಾವತಿ: ಇಂದು ನಸುಕಿನ ಹೊತ್ತು ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಇಸ್ರೋದ 101ನೇ ರಾಕೆಟ್ ಉಡಾವಣೆ ಇದಾಗಿದ್ದು, ಇಂದು ಬೆಳಗ್ಗೆ 5.59ರ ಸುಮಾರಿಗೆ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ EOS-09 ರೆಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೆಡಾರ್ ಇಮೇಜಿಂಗ್ ಉಪಗ್ರಹವು ಭೂಮಿಯ ಮೇಲ್ಮೈಯಿಂದ 500 ಕಿಲೋಮೀಟರ್‌ಗಳಿಗಿಂತ ಹೆಚ್ಚು ಎತ್ತರದಲ್ಲಿ ನೆಲೆಗೊಳ್ಳಬೇಕಿತ್ತು. ಆದರೆ 3ನೇ

ಕಕ್ಷೆ ಸೇರಲು ವಿಫಲವಾದ ಇಸ್ರೋ ಉಪಗ್ರಹ Read More »

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬ ತಾಲೂಕಿನ ಎಲ್ಲಾ ಸಮುದಾಯದ 8ನೇ, 10ನೇ ತರಗತಿ ಮತ್ತು  ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಹೊಸಮಠ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆಯಿತು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ Read More »

ಸುಳ್ಯ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ

ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ ಶನಿವಾರ ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶವನ್ನು ಉದ್ಘಾಟಿಸಿದರು. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಹಿರಿಯ ಸಹಕಾರಿ, ಕ್ಯಾಂಪೋ ಮಾಜಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ಎ. ವಿ. ವಿಕ್ರಮ್ ಅಡಂಗಾಯ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿನಯ

ಸುಳ್ಯ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ Read More »

ತರೂರ್‌ ಅಮೆರಿಕಕ್ಕೆ, ಕನಿಮೋಳಿ ಗ್ರೀಸ್‌ಗೆ : ಪಾಕಿಸ್ಥಾನದ ಉಗ್ರ ಮುಖವಾಡ ಜಗತ್ತಿನೆದುರು ಕಳಚಲು ಭಾರತ ತಂತ್ರ

7 ಸಂಸದರ ತಂಡಗಳಿಂದ ಜಗತ್ತಿನ ಪ್ರಮುಖ ದೇಶಗಳಿಗೆ ಭೇಟಿ ನವದೆಹಲಿ: ಪಹಲ್ಗಾಮ್ ನರಮೇಧಕ್ಕೆ ಪ್ರತಿಯಾಗಿ ಪಾಕಿಸ್ಥಾನದ ಉಗ್ರ ನೆಲೆ, ಸೇನಾ ನೆಲೆಗಳ ಮೇಲೆ ಆಪರೇಷನ್ ಸಿಂದೂರ ದಾಳಿ ನಡೆಸಿದ್ದ ಭಾರತ, ಈಗ ವಿವಿಧ ರಾಜಕೀಯ ಪಕ್ಷಗಳಿಗೆ ಸೇರಿದ 7 ನಾಯಕರ ನೇತೃತ್ವದಲ್ಲಿ ಸಂಸದರ ನಿಯೋಗವೊಂದನ್ನು ಹಲವು ದೇಶಗಳಿಗೆ ರವಾನಿಸುವ ಮೂಲಕ ಪಾಕಿಸ್ಥಾನದ ಉಗ್ರವಾದದ ಮುಖವಾಡ ಬಯಲು ಮಾಡುವ ದಾಳ ಉರುಳಿಸಿದೆ. ಅಚ್ಚರಿಯ ವಿಷಯವೆಂದರೆ ಈ ಹಿಂದೆ ಕರ್ನಾಟಕ ವಿಧಾನಸಭೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದ ಸಂಸದ

ತರೂರ್‌ ಅಮೆರಿಕಕ್ಕೆ, ಕನಿಮೋಳಿ ಗ್ರೀಸ್‌ಗೆ : ಪಾಕಿಸ್ಥಾನದ ಉಗ್ರ ಮುಖವಾಡ ಜಗತ್ತಿನೆದುರು ಕಳಚಲು ಭಾರತ ತಂತ್ರ Read More »

ಪಹಲ್ಗಾಮ್‌ಗೂ ಭೇಟಿ ನೀಡಿದ್ದ ಪಾಕ್‌ ಏಜೆಂಟ್‌ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರ

ಪಾಕಿಸ್ಥಾನದ ಪರ ಗೂಢಚಾರಿಕೆ ಮಾಡುತ್ತಿದ್ದ ಯೂಟ್ಯೂಬರ್‌ ಸೆರೆ ನವದೆಹಲಿ: ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಭಾರತದ ರಹಸ್ಯಗಳನ್ನು ರವಾನಿಸುತ್ತಿದ್ದ ಆರೋಪದಲ್ಲಿ ಸೆರೆಯಾಗಿರುವ ಹರ್ಯಾಣದ ಯೂಟ್ಯೂಬರ್‌ ಯುವತಿ ಜ್ಯೋತಿ ಮಲ್ಹೋತ್ರ ಕಾಶ್ಮೀರದ ಪಹಲ್ಗಾಮ್‌ಗೂ ಭೇಟಿ ನೀಡಿರುವ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ. ಜ್ಯೋತಿ ಇನ್‌ಸ್ಟಾಗ್ರಾಂನಲ್ಲಿ ಜನವರಿ ತಿಂಗಳಿನಲ್ಲಿ ಪಹಲ್ಗಾಮ್‌ಗೆ ತೆರಳಿದ್ದ ವಿಡಿಯೋ ಅಪ್ಲೋಡ್‌ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಜ್ಯೋತಿ ವಿಡಿಯೋಗಳು ಈಗ ವೈರಲ್‌ ಆಗಿವೆ. ಪಾಕಿಸ್ಥಾನದ ಪರವಾಗಿ ಗೂಢಚಾರಿಕೆ ನಡೆಸುತ್ತಿದ್ದ ಆರು ಮಂದಿಯನ್ನು ದೇಶದ ವಿವಿಧೆಡೆಯಿಂದ ಬಂಧಿಸಲಾಗಿದ್ದು, ಈ

ಪಹಲ್ಗಾಮ್‌ಗೂ ಭೇಟಿ ನೀಡಿದ್ದ ಪಾಕ್‌ ಏಜೆಂಟ್‌ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರ Read More »

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು

ತಾಯಿಯ ಜೊತೆ ನಿದ್ದೆ ಮಾತ್ರೆ ಸೇವಿಸಿದ್ದ ರಾಜ್ಯಮಟ್ಟದ ಕಲಾವಿದ ಬೆಳ್ತಂಗಡಿ : ತಾಯಿಯ ಜೊತೆಗೆ ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಚಿತ್ರ ಕಲಾ ಶಿಕ್ಷಕ, ರಾಜ್ಯಮಟ್ಟದ ಕಲಾವಿದ ಜಯರಾಮ್ ಕೆ (58) ಶುಕ್ರವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕೊನೆಯುಸಿರೆಳೆದಿದ್ದಾರೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಮೇ 10ರಂದು ಹಿಂದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಪತ್ರ ಬರೆದಿಟ್ಟು ತಾಯಿಯ ಒಡಗೂಡಿ ಅಪರಿಮಿತ

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು Read More »

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ

ಪುತ್ತೂರು: ಮಾಡೂರು ಗ್ರಾಮದ ಕೌಡಿಚಾರ್ನಲ್ಲಿ 2009 ರಲ್ಲಿ ಮನೆ ಕಳ್ಳತನ ಮಾಡಿದ ಆರೋಪಿ ಸುಮಾರು 16 ವರ್ಷಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ. ಘೋಷಿತ ಅಪರಾಧಿ (Proclaimed Offender) ಮಾಡಾ ಸ್ವಾಮಿ ಎಂಬವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿನ್ನು ತಮಿಳುನಾಡು ರಾಜ್ಯದ ತಿರುನಲ್ವೆ ಜಿಲ್ಲೆಯ ತಂಗಮಾಳಾಪುರಂ ನಿವಾಸಿಯಾದ ಮಾಡಾಸ್ವಾಮಿ(17ವ) ಬಂಧಿತ ಆರೋಪಿ ಎನ್ನಲಾಗಿದೆ.                                     ಪ್ರಕರಣದ ಹಿನ್ನೆಲೆ: ದಿ. ಜು 5 2009 ರಂದು ರಾತ್ರಿ ಕೌಡಿಚಾರ್ ನಿವಾಸಿ ಗಣಪಯ್ಯ ಎಂಬವರ ಮನೆಯ ಬೀಗವನ್ನು

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ Read More »

error: Content is protected !!
Scroll to Top