ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ

ವಿಟ್ಲ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತವಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಕಾಂತಡ್ಕದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಿಂದ ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನ್ ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು   ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ಪ್ರಯಾಣಿಕರನ್ನು ದಾಖಲಿಸಲಾಗಿದೆ.

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ Read More »

ಗೇರುಕಟ್ಟೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಗೇರುಕಟ್ಟೆ : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಕಳಿಯ ಸಹಯೋಗದಲ್ಲಿ  ಗೇರುಕಟ್ಟೆ ಅರಿವು ಗ್ರಂಥಾಲಯ ಕೇಂದ್ರದಲ್ಲಿ ಐದು ದಿನಗಳ  ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ನಡೆಯುತ್ತಿದೆ.  ದಿನಪತ್ರಿಕೆ ವಾಚನ, ಪುಸ್ತಕ ಓದುವುದು, ನೀತಿ ಕಥೆಗಳು, ಕವನ ರಚನೆ, ಪತ್ರ ಬರೆಯುವುದು, ಭಾಷಣಕಲೆ, ಊರಿನ ಇತಿಹಾಸ ತಿಳಿಯುವುದು ಮತ್ತು ವ್ಯಕ್ತಿತ್ವ ವಿಕಸನ ಸಂಬಂಧಿ ಚಟುವಟಿಕೆಗಳನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಡುತ್ತಿದ್ದಾರೆ. ಶಾಲಾ ರಜಾ ದಿನಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿಸುವ ಈ ಶಿಬಿರವು ಗ್ರಾಮೀಣ ಪ್ರದೇಶದ

ಗೇರುಕಟ್ಟೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ನರೇಂದ್ರ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ. ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ. ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ. ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ಎಂದು ಆದಾಯ ತೆರಿಗೆ ಕಛೇರಿಯ ಟ್ಯಾಕ್ಸ್ ಅಸಿಸ್ಟೆಂಟ್ ತೇಜಸ್ವಿ ಮಕಿನ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಮಾರ್ಗಸೂಚಿಗಳು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ರಹಸ್ಯವು

ನರೇಂದ್ರ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು

ಬಂದಾರು : ಮಹಿಳೆಯೊಬ್ಬರು ವಾಂತಿ ಭೇದಿಯಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಮದುವೆ ಊಟದ ನಂತರ ತುಂಬಾ ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಅನೇಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 5 ಮಂದಿ ದಾಖಲಾಗಿದ್ದಾರೆ ಎನ್ನಲಾಗಿದ್ದು, ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಂದಾರು ಗ್ರಾಮದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದವರಿಗೆಲ್ಲರಿಗು ವಾಂತಿ,

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು Read More »

ಮದ್ಯ ಪರವಾನಗಿ ಶುಲ್ಕ ಇಮ್ಮಡಿಗೊಳಿಸಲು ಚಿಂತನೆ

ಮದ್ಯಪ್ರಿಯರಿಗೆ ಇನ್ನೊಂದು ಬರೆ ಎಳೆಯಲು ಮುಂದಾದ ಸರಕಾರ ಬೆಂಗಳೂರು: ಕಳೆದ ಎರಡು ವರ್ಷದ ಅಧಿಕಾರಾವಧಿಯಲ್ಲಿ ಮೂರು ಬಾರಿ ಮದ್ಯದ ಬೆಲೆಯನ್ನು ಹೆಚ್ಚಿಸಿದ ಕಾಂಗ್ರೆಸ್‌ ಸರ್ಕಾರ ಈಗ ಡಿಸ್ಟಿಲರಿಗಳು, ಬ್ರೂವರೀಸ್, ಮದ್ಯದ ಅಂಗಡಿಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮತ್ತು ಮದ್ಯ ಪೂರೈಸುವ ಕ್ಲಬ್‌ಗಳ ವಾರ್ಷಿಕ ಪರವಾನಗಿ ನವೀಕರಣ ಶುಲ್ಕವನ್ನು ಶೇಕಡ 100ರಷ್ಟು ಹೆಚ್ಚಿಸಲು ಮುಂದಾಗಿದೆ. ಪ್ರಸ್ತುತ ವಾರ್ಷಿಕ ಶುಲ್ಕದ ಮೂಲಕ ರೂ. 700 ಕೋಟಿ ಸಂಗ್ರಹಿಸುತ್ತಿರುವ ಸರ್ಕಾರ ಸುಮಾರು 12,000 ವಿವಿಧ ರೀತಿಯ ಪರವಾನಗಿಗಳಿಂದ ರೂ.1,400 ಕೋಟಿ ಸಂಗ್ರಹಿಸಲಿದೆ.

ಮದ್ಯ ಪರವಾನಗಿ ಶುಲ್ಕ ಇಮ್ಮಡಿಗೊಳಿಸಲು ಚಿಂತನೆ Read More »

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ

ಐಸಿಸ್‌ ಪರವಾಗಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಉಗ್ರರು ನವದೆಹಲಿ: ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಎಂಬವರನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ರವಾನಿಸಲಾಗಿದ್ದು, ಮುಂಬಯಿಯಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ಐಇಡಿ ಸ್ಫೋಟದ ಕಾರ್ಯಾಗಾರಗಳನ್ನು ಆಯೋಜಿಸುವುದು,

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ Read More »

ಆಪರೇಷನ್ ಸಿಂದೂರ ಬೂಟಾಟಿಕೆ ಎಂದ ಕಾಂಗ್ರೆಸ್‌ ಶಾಸಕನ ವಿರುದ್ಧ ದೂರು

ಸಿದ್ದರಾಮಯ್ಯ ಮಾದರಿಯಲ್ಲಿ ಪಾಕಿಸ್ಥಾನದ ಮಾಧ್ಯಮಗಳಲ್ಲಿ ಸ್ಟಾರ್ ಆಗಲು ಉತ್ಸುಕ ಎಂದು ಟೀಕೆ ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಬೂಟಾಟಿಕೆ ಎಂದ ಕೋಲಾರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲಾಗಿದೆ. ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಶಾಸಕನ ವಿರುದ್ಧ ದೂರು ಸಲ್ಲಿಸಿದ್ದಾರೆ. ಕೋಲಾರ ಎಸ್ಪಿ ಬಿ ನಿಖಿಲ್ ಅವರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಆಪರೇಷನ್ ಸಿಂದೂರ ಬೂಟಾಟಿಕೆ ಎಂದ ಕಾಂಗ್ರೆಸ್‌ ಶಾಸಕನ ವಿರುದ್ಧ ದೂರು Read More »

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

ನಡುರಾತ್ರಿ ಸೇನಾ ಮುಖ್ಯಸ್ಥ ಫೋನ್‌ ಮಾಡಿ ದಾಳಿಯಾದ ವಿಚಾರ ತಿಳಿಸಿದರು ಎಂದ ಶಹಬಾಝ್ ಷರೀಫ್ ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಕ್ಷಿಪಣಿ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ವಿವಿಧ ವಾಯುನೆಲೆಗಳ ಮೇಲೆ ನಿಖರ ದಾಳಿ ನಡೆಸಿದ್ದನ್ನು ಇದೇ ಮೊದಲ ಬಾರಿಗೆ ಪಾಕಿಸ್ಥಾನದ ಪ್ರಧಾನಿ ಶಹಬಾಝ್ ಷರೀಫ್ ಒಪ್ಪಿಕೊಂಡಿದ್ದಾರೆ. ಮೇ 9 ಮತ್ತು 10ರ ನಡುವಿನ ರಾತ್ರಿ 2.30ಕ್ಕೆ ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ನನ್ನನ್ನು ಎಬ್ಬಿಸಿ ಭಾರತ

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ Read More »

ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ

ಟರ್ಕಿ, ಚೀನ ನಿರ್ಮಿತ ಡ್ರೋನ್‌ಗಳೆಲ್ಲ ಆಕಾಶದಲ್ಲೇ ಉಡೀಸ್‌ ನವದೆಹಲಿ: ಆಪರೇಷನ್‌ ಸಿಂಧೂರ ಬಳಿಕ ಶುರುವಾದ ಯುದ್ಧದಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಬರೋಬ್ಬರಿ 600 ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಸುಧಾರಿತ ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತ ಎಲ್ಲ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಯುದ್ಧದ ಕೆಲವೊಂದು ಮಾಹಿತಿಗಳು ಈಗ ಬಹಿರಂಗವಾಗಿದ್ದು, ಪಾಕಿಸ್ಥಾನಕ್ಕೆ ಟರ್ಕಿ ಪೂರ್ಣ ನೆರವು ನೀಡಿದ್ದು ಜಗಜ್ಜಾಹೀರಾಗಿದೆ. ಭಾರತದ ವಿರುದ್ಧ ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್‌ ದಾಳಿ ಮಾಡಿತು. ಟರ್ಕಿ ನಿರ್ಮಿತ ಡ್ರೋನ್‌ಗಳಿಂದ ದಾಳಿಯಾಗಿತ್ತು. ಲೇಹ್‌ನಿಂದ ಸರ್‌ ಕ್ರೀಕ್‌ವರೆಗೆ 36

ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ Read More »

ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಕಾಮಗಾರಿ | ರೈಲು ಸಂಚಾರ ತಾತ್ಕಾಲಿಕ ಬಂದ್‍

ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೇ ರಸ್ತೆಯಲ್ಲಿ ಕಾಮಗಾರಿ ಪ್ರಯುಕ್ತ ಜೂ.1 ರಿಂದ ನವೆಂಬರ್ 1 ರ ವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ವಿದ್ಯುದೀಕರಣ ಕಾಮಗಾರಿ ನಡೆಯುವ  ಈ ಮಾರ್ಗದಲ್ಲಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ಹಾಗೂ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸಪ್ರೆಸ್  ರದ್ದಾಗಲಿದೆ. ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ ಎಕ್ಸ್‍ ಪ್ರೆಸ್ ರೈಲು, ಜೂನ್ 2 ರಿಂದ

ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಕಾಮಗಾರಿ | ರೈಲು ಸಂಚಾರ ತಾತ್ಕಾಲಿಕ ಬಂದ್‍ Read More »

error: Content is protected !!
Scroll to Top