ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ

ಬೆಂಗಳೂರಿನಲ್ಲಿ ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ ಬೆಂಗಳೂರು: ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧದಿಂದಾಗಿ ಒಂದು ವಾರ‌ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಕ್ರಿಕೆಟ್‌ ಪಂದ್ಯಗಳು ಇಂದಿನಿಂದ ಪುನರಾರಂಭವಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕೆಕೆಆರ್‌-ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ವಿರಾಟ್‌ ಕೊಹ್ಲಿಯ ಆಟ ನೋಡಲು ಜನ ಉತ್ಸುಕರಾಗಿದ್ದಾರೆ. ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್‌ ಪಾಟಿದಾರ್‌ ಸಾರಥ್ಯದ ಆರ್‌ಸಿಬಿ, +0.482 ನೆಟ್‌ ರನ್‌ರೇಟ್‌ನೊಂದಿಗೆ […]

ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ Read More »

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ

ಗಂಭೀರ ಗಾಯಗೊಂಡ ಪೈಂಟರ್‌ ಆಸ್ಪತ್ರೆಗೆ ದಾಖಲು ಬಂಟ್ವಾಳ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಕೃತ್ಯದಿಂದ ಉದ್ವಿಗ್ನಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಇನ್ನೊಂದು ಹತ್ಯಾ ಯತ್ನ ನಡೆದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರುಗಳಿಂದ ದಾಳಿ ಮಾಡಲಾಗಿದೆ. ಅಕ್ಕರಂಗಡಿ ನಿವಾಸಿ ಹಮೀದ್ (38) ಎಂಬವರಿಗೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಅಕ್ಕರಂಗಡಿಯ ಪೈಂಟಿಂಗ್ ಕೆಲಸ

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ Read More »

ಇಂದು (ಮೇ 17) : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ

ಕಡಬ:  ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಇಂದು (ಮೇ 17)  ಹೊಸಮಠ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ. ಬೆಳಿಗ್ಗೆ 9.30 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಎಲ್ಲಾ ಸಮುದಾಯದ  ಪ್ರಸ್ತುತ ಸಾಲಿನ ಪ್ರೌಢ ಶಿಕ್ಷಣದಲ್ಲಿ 9 ನೇ ತರಗತಿ, 10 ನೇ ತರಗತಿ ಮತ್ತು 10 ನೇ ತರಗತಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ  ಹಾಗೂ ದ್ವಿತೀಯ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.  ಮುಂದಿನ ಶಿಕ್ಷಣ ಮತ್ತು ಉದ್ಯೋಗವಕಾಶಗಳು, ಉದ್ಯಮಶೀಲತೆ & ಕೌಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು (ಮೇ 17) : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ Read More »

ಪಾಣೆಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ

ಬಂಟ್ವಾಳ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸದಲ್ಲಿರುವ ಸಂದರ್ಭದಲ್ಲಿಯೇ ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ಚಾಕು ಇರಿತ ನಡೆದಿದೆ. ಪೈಂಟಿಂಗ್ ವೃತ್ತಿಯಲ್ಲಿದ್ದ  ಹಮೀದ್ ಯಾನೆ ಎಂಬಾತನಿಗೆ ಇರಿತವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ 9ರ ಸುಮಾರಿಗೆ ಬಿ.ಸಿ. ರೋಡ್ ಬಳಿಯ ಹಳೆಯ ಸೇತುವೆ ಬಳಿಯಲ್ಲಿ ಹಮೀದ್ ತನ್ನ ರಿಕ್ಷಾದಲ್ಲಿ ಕುಳಿತುಕೊಂಡಿದ್ದಾಗ ಅಲ್ಲಿಗೆ ಬಂದ ಕಿರಾತಕರು ಆತನ ಕೈಗೆ ಇರಿದಿದ್ದರು. ಮುಖ ಮುಚ್ಚಿಕೊಂಡಿದ್ದ ದಾಳಿಕೋರರ ಗುರುತು ಪತ್ತೆ ಸಾಧ್ಯವಾಗಿಲ್ಲ. ಪೊಲೀಸರ

ಪಾಣೆಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ Read More »

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’

ಪುತ್ತೂರು: ಯೋಗ, ಮನುಷ್ಯ ಹಾಗೂ ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ. ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗವನ್ನು ಅಭ್ಯಾಸ ಮಾಡಿದರೆ ದೇಹದ ಜಡತ್ವವು ನಿವಾರಣೆಯಾಗಿ ಸೂಕ್ಷ್ಮ ಹಾಗೂ ಕ್ರಿಯಾಶೀಲವಾದ ಮನಸ್ಸಿನೊಡನೆ ಸ್ಪಂದಿಸಲು ಸಿದ್ಧಗೊಳ್ಳುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ಶರಾವತಿ ರವಿನಾರಾಯಣ ಹೇಳಿದರು. ಅವರು ಶುಕ್ರವಾರ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಮೂರು ದಿನಗಳ ಯೋಗ ಶಿಬಿರ ’ಮೇಧಾ ಯೋಗ’ ದಲ್ಲಿ 

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ತಂಡ ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್ Read More »

ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನ

ಭಾರತ-ಪಾಕಿಸ್ತಾನಗಳ ನಡುವಿನ ಉದ್ವಿಗ್ನತೆಯ ನಡುವೆ ಬಲೂಚಿಸ್ತಾನವು ಪಾಕಿಸ್ತಾನದಿಂದ ಬೇರ್ಪಟ್ಟು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದೆ. ತನಗೆ ಸ್ವತಂತ್ರ ರಾಷ್ಟ್ರದ ಸ್ಥಾನಮಾನ ನೀಡಬೇಕೆಂದು ವಿಶ್ವಸಂಸ್ಥೆಯ ಎದುರು ತನ್ನ ಅಹವಾಲನ್ನು ಮಂಡಿಸಿದೆ. ಬಲೂಚಿಸ್ತಾನವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಇರಾನ್ ದೇಶಗಳ ವ್ಯಾಪ್ತಿಯಲ್ಲಿ ಹರಡಿಕೊಂಡಿದೆ.ಅನೇಕ ದಶಕಗಳಿಂದ ಉಗ್ರವಾದ ಮತ್ತು ಹಿಂಸಾಚಾರಗಳಿಂದ ಬೆಂದಿರುವ ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ತವಾಕಿಸುತ್ತಿದೆ. ಬಲೂಚಿ ರಾಷ್ಟ್ರೀಯ ನಾಯಕರು ತಮ್ಮ ದೇಶಕ್ಕಾಗಿ ಪ್ರತ್ಯೇಕ ಬಾವುಟ ಮತ್ತು ಭೂಪಟಗಳನ್ನು ರಚಿಸಿಕೊಂಡಿದ್ದು ಅವುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೇಗವಾಗಿ ಹಬ್ಬುತ್ತಿವೆ. ಹೊಸದಾಗಿ ರಚನೆಯಾಗಲಿರುವ ತಮ್ಮ

ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನ Read More »

ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವನ್ನು ಮರು ತೆಗೆದುಕೊಳ್ಳುವ ಕಾರ್ಯ ಶುಕ್ರವಾರದಿಂದ ಮುಂದುವರಿದಿದೆ. ಶುಕ್ರವಾರ ಪುತ್ತೂರಿನ ನೆಲ್ಲಿಕಟ್ಟೆ ಬಳಿ ಬೇರೆಯವರಲ್ಲಿ ಬಾಡಿಗೆಗೆ ಇದ್ದ ಜಾಗದ ಕಂಪೌಂಡ್‍ ನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಸ್ವಾಧೀನ ಪಡೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ ಮಾತನಾಡಿ, ನೆಲ್ಲಿಕಟ್ಟೆ ಪರಿಸರದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಸುಮಾರು ಒಂದೂಕಾಲು ಎಕ್ರೆ ಜಾಗವಿದೆ. ಇದೀಗ 30-40 ವರ್ಷಗಳಿಂದ ರುಕ್ಕಾಂ ಆದಂ ಹಾಜಿ ಅವರ ಬಾಡಿಗೆಗಿದ್ದ 123/5 ಸರ್ವೆ

ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ Read More »

ಕೆಎಸ್ಎಸ್ ಕಾಲೇಜಿನಲ್ಲಿ  ತರಗತಿವಾರು ಕ್ರಿಕೆಟ್  ಪಂದ್ಯಾಟ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ   ಮತ್ತು ಆಂತರಿಕ‌ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಿದ್ಯಾರ್ಥಿ ಪರಿಷತ್ ವತಿಯಿಂದ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ಮೇ 13 ರಂದು ನಡೆಸಲಾಯಿತು. ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ತೆಂಗಿನ ಕಾಯಿ ಒಡೆಯುವುದರ ಮೂಲಕ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು. ಒಟ್ಟು 10 ತಂಡಗಳು ಭಾಗವಹಿಸಿದ್ದವು . ಪಂದ್ಯಾಟದ ತೀರ್ಪುಗಾರರಾಗಿ ಕಾರ್ತಿಕ್ ಬಿಳಿನೆಲೆ ಸಹಕರಿಸಿದರು.   ಪಂದ್ಯದಲ್ಲಿ ದ್ವಿತೀಯ ಬಿಕಾಂ (ಎ) ತಂಡವು ಪ್ರಥಮ ಸ್ಥಾನ, ದ್ವಿತೀಯ

ಕೆಎಸ್ಎಸ್ ಕಾಲೇಜಿನಲ್ಲಿ  ತರಗತಿವಾರು ಕ್ರಿಕೆಟ್  ಪಂದ್ಯಾಟ Read More »

ಬೂಟಾಟಿಕೆಗೆ ನಾಲ್ಕು ಫ್ಲೈಟ್‌ ಕಳಿಸಿದ್ದಾರಷ್ಟೆ

ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್‌ ಶಾಸಕ ಲೇವಡಿ ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ಆಪರೇಷನ್‌ ಸಿಂಧೂರ ಕುರಿತು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಲೇವಡಿ ಮಾಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಸಾಮಾನ್ಯ ಪ್ರಜೆಗಳ ಮೇಲೆ ಯುದ್ಧ ಮಾಡೋದಕ್ಕೆ ನಮ್ಮ ವಿರೋಧವಿದೆ. ಆದರೆ ನಮ್ಮ ದೇಶದೊಳಗೆ ಬಂದು

ಬೂಟಾಟಿಕೆಗೆ ನಾಲ್ಕು ಫ್ಲೈಟ್‌ ಕಳಿಸಿದ್ದಾರಷ್ಟೆ Read More »

error: Content is protected !!
Scroll to Top