ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ

ನಿಶಾನ್-ಎ-ಪಾಕಿಸ್ಥಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಕಿಡಿಕಾರಿದ ಆರ್‌.ಅಶೋಕ್‌ ಬೆಂಗಳೂರು: ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ಥಾನದ ಮಾಧ್ಯಮಗಳು ಪ್ರಮುಖ ಸುದ್ದಿಯಾಗಿ ಪ್ರಕಟಿಸಿವೆ. ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದಾಗ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ನಡೆಸಿದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು, ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದರೆ ಸಾಕು. ಉಗ್ರರ ದಾಳಿಗೆ ಕೇಂದ್ರ ಸರಕಾರದ ವೈಫಲ್ಯ ಕಾರಣ ಎಂದು ಹೇಳಿದ್ದರು. […]

ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ Read More »

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ

ಕೋಲ್ಕತ್ತಾ: ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ಪ್ರವಾಸಿಗರನ್ನು ಸಾಯಿಸಿದ ಕೃತ್ಯದ ಬಳಿಕ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ಧರ್ಮ ತ್ಯಜಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗೆ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ Read More »

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆ : ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಜಾಥಾ

ಪುತ್ತೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಅಮಾಯಕ ಹಿಂದೂ ಪ್ರವಾಸಿಗರ ಮೇಲೆ ಧರ್ಮಾಂಧರು ನಡೆಸಿದ ಗುಂಡಿನ ದಾಳಿಯನ್ನು ಪ್ರತಿಭಟಿಸಿ ವಿವೇಕಾನಂದ ವಿಧ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಇಂಜಿನಿಯರಿಂಗ್ ಕಾಲೇಜಿನ ಎಬಿವಿಪಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು. ಕಾಲೇಜಿನ ವಿಧ್ಯಾರ್ಥಿಗಳು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ಅವರ ಮುಂದಾಳುತ್ವದಲ್ಲಿ ಕಾಲೇಜು ಆವರಣದಿಂದ ನೆಹರೂ ನಗರದ ವರೆಗೆ ಘಟನೆಯನ್ನು ಖಂಡಿಸುವ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನೆಹರೂ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಘಟನೆ : ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಜಾಥಾ Read More »

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ

ಸ್ಫೋಟಕದ ಮೂಲಕ ಮನೆಗಳನ್ನು ನಾಶ ಮಾಡಿದ ಸೇನೆ ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದ ಭಯೋತ್ಪಾದಕ ಕೃತ್ಯದ ಬಳಿಕ ಉಗ್ರರ ಮನೆಗಳನ್ನು ಭದ್ರತಾ ಪಡೆ ನಾಶ ಮಾಡುತ್ತಿದೆ. ನಿನ್ನೆ ರಾತ್ರಿ ಐಇಡಿ ಸ್ಫೋಟಿಸಿ ಮತ್ತು ಬುಲ್‌ಡೋಜರ್‌ ಮೂಲಕ ಇಬ್ಬರು ಉಗ್ರರ ಮನೆಯನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಲಷ್ಕರ್ ಎ ತೊಯ್ಬಾದ ಉಗ್ರ ಸಂಘಟನೆಯ ಉಗ್ರ ಫಾರೂಕ್ ಎಂಬಾತನ ಮನೆಯನ್ನು ಸೇನೆ ಧ್ವಂಸಗೊಳಿಸಿದೆ. ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಫಾರೂಕ್ ಮನೆಯನ್ನು ಐಇಡಿ ಸ್ಫೋಟಿಸಿ

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ Read More »

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಎನ್.ಎಸ್.ಎಸ್ ಘಟಕ ಮತ್ತು ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ  ಕಛೇರಿ ಜಂಟಿಯಾಗಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವನ್ನು ಏ.25 ಶುಕ್ರವಾರದಂದು  ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯಾದ ಡಾ. ತ್ರಿಮೂರ್ತಿ ಅವರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ  ಶಿಕ್ಷಣ ಅಧಿಕಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಲೇರಿಯಾ ರೋಗವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಹೆಲ್ತ್ ಇನ್ಸ್‍ಪೆಕ್ಟರ್ ಉಮರ್ ಖಾನ್ ಮತ್ತು

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ Read More »

ಮೇ1 : ಕೆಂಪು ಕೇಪುಲಾಜೆ  ಬೆಮ್ಮೆರೆ ಗುಂಡ ಮತ್ತು ಶ್ರೀ ಮೊಗೇರ ದೈವಸ್ಥಾನ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ

ಪುತ್ತೂರು: ಕೆಂಪು ಕೇಪುಲಾಜೆ  ಬೆಮ್ಮೆರೆ ಗುಂಡ ಮತ್ತು ಶ್ರೀ ಮೊಗೇರ ದೈವಸ್ಥಾನ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮೇ1 ರಂದು ನಿಡ್ಪಳ್ಳಿಯ ಬ್ರಹ್ಮರ ಗುಂಡದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 300 ವರ್ಷಗಳ ಇತಿಹಾಸವಿರುವ ಬೆಮ್ಮೆರಗುಂಡ ಮೂಲಸ್ಥಾನ ಇದುವರೆಗೆ ತಿಳಿದು ಬಂದಿಲ್ಲವಿತ್ತು. ಈ ನಿಟ್ಟಿನಲ್ಲಿ ಆಲಂಕಾರು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸಾಂಸ್ಕೃತಿಕ ಅಧ್ಯಯನ ಟ್ರಸ್ಟ್ ಕಳೆದ ಹಲವಾರು ವರ್ಷಗಳಿಂದ ಅಧ್ಯಯನ ನಿರತವಾಗಿತ್ತು. ಇದೀಗ ಮೂಲಸ್ಥಾನ

ಮೇ1 : ಕೆಂಪು ಕೇಪುಲಾಜೆ  ಬೆಮ್ಮೆರೆ ಗುಂಡ ಮತ್ತು ಶ್ರೀ ಮೊಗೇರ ದೈವಸ್ಥಾನ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಗೆ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ನೇಮಕ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಯಲ್ಲಿ ಕಳೆದ 1 ವರ್ಷಗಳಿಂದ ಕರ್ತವ್ಯ ಸಲ್ಲಿಸಿರುವ  ಯೋಜನಾಧಿಕಾರಿ ರಮೇಶ್ ರವರು  ಬೆಳ್ತಂಗಡಿ ಸಿ ಆರ್ ಇ ಗೆ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡಿದ್ದಾರೆ. ಮುಂದಕ್ಕೆ ನೂತನ ಯೋಜನಾಧಿಕಾರಿ ಯಾಗಿ ನೇಮಕಗೊಂಡ ಸುರೇಶ್ ಗೌಡ ರವರಿಗೆ  ವಿಟ್ಲ ಯೋಜನಾ  ಕಚೇರಿಯಲ್ಲಿ  ಅಧಿಕಾರ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಗೆ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ನೇಮಕ Read More »

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ

ಬಂಟ್ವಾಳ: ತಾಲೂಕಿನ ಬರಿಮಾರು ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ ಶುಕ್ರವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶುಕ್ರವಾರ ಬೆಳಿಗ್ಗೆ ಗಣಹೋಮ, ನಾಗತಂಬಿಲ, ಮುಡಿಪು ಕಟ್ಟುವುದು, ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ಭಂಡಾರ ಇಳಿದು ರಾತ್ರಿ ಅನ್ನಸಂತರ್ಪಣೆ ಜರಗಿತು. ಬಳಿಕ ಸತ್ಯದೇವತೆ ಕಲ್ಲುರ್ಟಿ ಪಂಜುರ್ಲಿ, ಚಾಮುಂಡಿ-ಗುಳಿಗ ರಾಹು-ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರು, ಸ್ಥಳೀಯರು ಉಪಸ್ಥಿತರಿದ್ದರು. ಇಂದು ರಾತ್ರಿ ದೈವಗಳಿಗೆ ವರ್ಷಾವಧಿ ಅಗೇಲು

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ Read More »

 “ಫ್ರಮ್ ಆಲ್ಜಿಬ್ರಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ, ಗಣಿತಶಾಸ್ತ್ರ ವಿಭಾಗ (ಯುಜಿ ಮತ್ತು ಪಿಜಿ) ಗಣಿತ ಹಾಗೂ ಕೃತಕ ಬುದ್ಧಿಮತ್ತೆ ನಡುವಿನ ಅಂತರ ಸಂಬಂಧವನ್ನು ಅರ್ಥೈಸುವ “ಫ್ರಮ್ ಆಲ್ಜಿಬ್ರ ಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸವನ್ನು ವಿದ್ಯಾರ್ಥಿಗಳಿಗೆ ಆಯೋಜಿಸಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಾಮಂಜೂರು ಸಂತ ಜೋಸೆಫ್‍ ಇಂಜಿನಿಯರಿಂಗ್‍ ಕಾಲೇಜು ಪ್ರಾಧ್ಯಾಪಕ ಡಾ ರಮಾನಂದ ಎಚ್.ಎಸ್ ಉಪನ್ಯಾಸ ನೀಡಿ, ಹೇಗೆ ಕೃತಕ ಬುದ್ಧಿಮತ್ತೆ ನಮ್ಮ ದೈನಂದಿನ ಜೀವನದಲ್ಲಿ ತಿಳಿದೋ ತಿಳಿಯದೆಯೋ ಒಳಗೊಂಡಿದೆ ಎಂಬುದನ್ನು

 “ಫ್ರಮ್ ಆಲ್ಜಿಬ್ರಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸ Read More »

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೇಲೆ ಅನುಚಿತ ವರ್ತನೆ ಹಾಗೂ ಹಲ್ಲೆಗೆ ಯತ್ನಿಸಿದ ಯುವಕನನ್ನು ಇಂದು ಸಂಜೆ 6 ಗಂಟೆ ಒಳಗೆ ಬಂಧಿಸದಿದ್ದಲ್ಲಿ ತಾಲೂಕಿನ ಎಲ್ಲಾ ಆಸ್ಪತ್ರೆಗಳು ಬಂದ್‍ ಆಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖ ಎಚ್ಚರಿಕೆ ನೀಡಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮೇಲೆ ವ್ಯಕ್ತಿಯೋರ್ವ ಅನುಚಿತ ವರ್ತನೆ, ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ನಿಟ್ಟಿನಲ್ಲಿ ವೈದ್ಯರು ಹಾಗೂ ಬಿಜೆಪಿ ಮುಖಂಡರು

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ Read More »

error: Content is protected !!
Scroll to Top