ಅಸಭ್ಯ ವೀಡಿಯೊ ವೈರಲ್ : ಕಾಲೇಜು ವಿದ್ಯಾರ್ಥಿ ಬಂಧನ
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೇನೆಪೊಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯು ವಿವಿಧ ಯುವತಿಯರೊಂದಿಗೆ ಚಕ್ಕಂದವಾಡಿ ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. […]
ಅಸಭ್ಯ ವೀಡಿಯೊ ವೈರಲ್ : ಕಾಲೇಜು ವಿದ್ಯಾರ್ಥಿ ಬಂಧನ Read More »










