ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ “ಪಿನ್ಯಾಕಲ್‌” ಗೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಪಿನ್ಯಾಕಲ್‌ ಐಟಿಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ ಪಿನ್ಯಾಕಲ್‌-25 ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಸೋಷಿಯಲ್‌ ಮೀಡಿಯಾ ಇನ್‌ ಪ್ಲುಎನ್ಸರ್‌ ಹಾಗೂ ತುಳು ಕಂಟೆಂಟ್‌ ಕ್ರಿಯೇಟರ್‌ ಶರಣ್‌ ಚಿಲಿಂಬಿ ದೀಪ ಬೆಳಗಿಸುವುದರ ಮೂಲಕ ಐಟಿ ಫೆಸ್ಟ್‌ ನ್ನು ಉದ್ಘಾಟಿಸಿ ಮಾತನಾಡಿ, “ಪಾಠಗಳಿಂದ ಮಾತ್ರವಲ್ಲದೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಬಹಳಷ್ಟು ಕಲಿಯಲು ಸಾಧ್ಯವಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಹೆಚ್ಚು ಮುಖ್ಯ. ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಜನರು ಇತರರಿಗಿಂತ ಒಂದು ಹೆಜ್ಜೆ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ “ಪಿನ್ಯಾಕಲ್‌” ಗೆ ಚಾಲನೆ Read More »

ನಾಳೆ (ಏ.5) ವಿವಿಧೆಡೆ ಕರೆಂಟಿಲ್ಲ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು ವಾಟರ್ ಸಪ್ಲೈ ಫೀಡರ್ ನಲ್ಲಿ ಏ.5ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಬಜತ್ತೂರು, ಕೊಲ, ದಾರಂದಕುಕ್ಕು, ಸೇಡಿಯಾಪು ಮತ್ತು ಕೋಡಿಂಬಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅದರಂತೆ 110/33/11

ನಾಳೆ (ಏ.5) ವಿವಿಧೆಡೆ ಕರೆಂಟಿಲ್ಲ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ ಪಟ್ಟೆ ಅಧಿಕಾರ ಸ್ವೀಕರಿಸಿದರು. ಇಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರು ನೂತನ ಮುಖ್ಯೋಪಾಧ್ಯಾಯರಿಗೆ ನೇಮಕಾತಿ ಆದೇಶ ಪತ್ರ ಮತ್ತು ಶಾಲಾ ಕಡತಗಳನ್ನು ನೀಡಿ ಶಾಲು ಹೊದಿಸಿ ಶುಭ ಹಾರೈಸಿದರು. ಸಂಚಾಲಕರಾದ ಎ.ವಿ. ನಾರಾಯಣ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ನೂತನ ಪ್ರಾಂಶುಪಾಲರನ್ನು ಪರಿಚಯಿಸಿದರು. ನಿರ್ದೇಶಕರಾದ ಸೀತಾರಾಮ ಕೇವಳ ಮಾತನಾಡಿ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು. ಆಡಳಿತಾಧಿಕಾರಿ ಗುಡ್ಡಪ್ಪ

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು

12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್‌ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು

ನೀರಕಟ್ಟೆಯಲ್ಲಿ ಬಸ್‌ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು Read More »

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು

ಸ್ವಚ್ಛಗೊಳಿಸಲು ಇಳಿದವರು ವಿಷಾನಿಲ ಸೇವಿಸಿ ಮೃತ್ಯು ಹೊಸದಿಲ್ಲಿ: ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವಿಗೀಡಾದ ದಾರುಣ ಘಟನೆ ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸಂಭವಿಸಿದೆ. ಛಾಯ್‌ಗಾಂವ್‌ ಮಖಾನ ಎಂಬಲ್ಲಿ ಊರಿನ ಉತ್ಸವದ ವಿಗ್ರಹ ವಿಸರ್ಜನೆಗೆ ಮುಂಚಿತವಾಗಿ ಬಾವಿಯ ನೀರನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದ್ದಾಗ ಬಾವಿಯಲ್ಲಿದ್ದವರು ವಿಷಾನಿಲದಿಂದಾಗಿ ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ. ಮೊದಲು ಓರ್ವ ಕಾರ್ಮಿಕ ಬಾವಿಗಿಳಿದಿದ್ದು, ಅತ ಉಸಿರುಕಟ್ಟಿ ಒದ್ದಾಡುವುದನ್ನು ನೋಡಿ ಉಳಿದವರು ಅವನನ್ನು ರಕ್ಷಿಸಲು ಇಳಿದಿದ್ದರು. ಆದರೆ ಎಲ್ಲರೂ ಉಸಿರುಕಟ್ಟಿ ಮೇಲೆ ಬರಲಾಗದೆ ಸಾವಿಗೀಡಾಗಿದ್ದಾರೆ. ಈ ಬಾವಿ

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು Read More »

ಮರದ ಗೆಲ್ಲು ಕಡಿಯುತ್ತಿದ್ದಾಗ ವಿದ್ಯುತ್‍ ಶಾಕ್‍ ಹೊಡೆದು ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಮರದ ಗೆಲ್ಲು ಕಡಿಯುತ್ತಿದ್ದಾಗ ವಿದ್ಯುತ್‍ ಶಾಕ್‍ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಪುಂಡಿಕ್ಕು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ನಿವಾಸಿ ಚನನ ಗೌಡ (69) ಮೃತಪಟ್ಟವರು. ಚನನ ಗೌಡರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ 11ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ.

ಮರದ ಗೆಲ್ಲು ಕಡಿಯುತ್ತಿದ್ದಾಗ ವಿದ್ಯುತ್‍ ಶಾಕ್‍ ಹೊಡೆದು ಕಾರ್ಮಿಕ ಮೃತ್ಯು Read More »

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ

ರಾಷ್ಟ್ರಪ್ರೇಮದ ಚಿತ್ರಗಳಿಂದ ಪ್ರಸಿದ್ಧರಾಗಿದ್ದ ಮನೋಜ್‌ ಕುಮಾರ್‌ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ ಇಂದು ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಾ ಇದ್ದರು. ಅವರು ರಾಷ್ಟ್ರಪ್ರೇಮದ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾರತ್ ಕುಮಾರ್’ ಎಂಬ ಹೆಸರು ಇತ್ತು.ಮನೋಜ್ ಕುಮಾರ್ ಅವರನ್ನು ಕೆಲ ವಾರಗಳ ಹಿಂದೆ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ Read More »

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಪ್ರಯಾಣಿಕನೋರ್ವ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರು, ಯಡಿಯೂರು ನಿವಾಸಿ ಹರ್ಷ (24) ಮೃತಪಟ್ಟವರು. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ Read More »

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ

ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ Read More »

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಎಂಬಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ಏ.4ರಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಜತ್ತೂರು ಸಮೀಪ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತಡೆಯಾಗಿಲ್ಲ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸನ್ನು ಕ್ರೇನ್‌ ಸಹಾಯದಿಂದ ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನೀರಕಟ್ಟೆಯಲ್ಲಿ ಬಸ್‌ ಪಲ್ಟಿ : ಓರ್ವ ಪ್ರಯಾಣಿಕ ಸಾವು Read More »

error: Content is protected !!
Scroll to Top