ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ 415 ಕೋ. ರೂ. ದಂಡ!

ಸ್ಟಾರ್‌ಬಕ್ಸ್‌ ಕಂಪನಿ ವಿರುದ್ಧ ತೀರ್ಪು ನೀಡಿದ ನ್ಯಾಯಾಲಯ ಕ್ಯಾಲಿಫೋರ್ನಿಯಾ : ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ ಸ್ಟಾರ್‌ಬಕ್ಸ್‌ ಭಾರಿ ಬೆಲೆಯನ್ನೇ ತೆರಬೇಕಾಗಿ ಬಂದಿದೆ. ಸ್ಟಾರ್‌ಬಕ್ಸ್‌ನ ಬಿಸಿ ಕಾಫಿ ತೊಡೆ ಭಾಗದ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಗೆ 50 ಮಿಲಿಯನ್‌ ಡಾಲರ್‌ ಅಂದರೆ ಸುಮಾರು 415 ಕೋಟಿ ರೂ. ಪರಿಹಾರ ನೀಡಬೇಕೆಂದು ಸ್ಟಾರ್‌ಬಕ್ಸ್‌ಗೆ ಕೋರ್ಟ್ ಆದೇಶ ನೀಡಿದೆ. ಕಾಫಿ ಮುಚ್ಚಳವನ್ನು ಸರಿಯಾಗಿ ಮುಚ್ಚದೆ ಕೊಟ್ಟಿದ್ದರಿಂದ ಬಿಸಿ ಕಾಫಿ ತೊಡೆ ಮೇಲೆ ಬಿದ್ದಿದ್ದು, ಪರಿಣಾಮ ಆ ವ್ಯಕ್ತಿಯ ಜನನಾಂಗಕ್ಕೂ ಗಾಯಗಳಾಗಿದ್ದವು. […]

ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ 415 ಕೋ. ರೂ. ದಂಡ! Read More »

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು

ಯತ್ನಾಳ್‌ ಹೇಳಿಕೆಯಿಂದ ಇಡೀ ದೇಶದ ಗಮನ ಇಂದಿನ ಕಲಾಪದತ್ತ ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರನ್ನು ಸೋಮವಾರ ಸದನದಲ್ಲೇ ಹೇಳುವುದಾಗಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿರುವುದು ಭಾರಿ ಕುತೂಹಲ ಹುಟ್ಟಿಸಿದೆ.ವಿಜಯಪುರದಲ್ಲಿ ಭಾನುವಾರ ಈ ವಿಚಾರವಾಗಿ ಮಾತನಾಡಿರುವ ಅವರು, ರನ್ಯಾ ರಾವ್‌ಗೆ ಪ್ರೊಟೊಕಾಲ್ ನೀಡಿದವರ ಮಾಹಿತಿ ಸಂಗ್ರಹಿಸಲಾಗಿದೆ. ಚಿನ್ನ ಎಲ್ಲಿಂದ ತಂದರು, ಎಲ್ಲಿಟ್ಟು ತಂದರು ಎಂಬುದು ಗೊತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಸಚಿವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 17 (ನಾಳೆ) ರಂದು ಸಂಜೆ 7:15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಕಿನ್ನಿಗೋಳಿಯ ಉಳವಾಡಿಯಲ್ಲಿ ಚಿರತೆಯ ಶವ ಪತ್ತೆ

ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ (ಮಾ.೧೬) ಕಿನ್ನಿಗೋಳಿ ಸಮೀಪದ ಉಳವಾಡಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ ಹಲವು ಬಾರಿ ಚಿರತೆ ಕಂಡು ಬಂದಿದ್ದು, ಸಾಕು ನಾಯಿಗಳು ಚಿರತೆಗೆ ಆಹಾರವಾಗಿವೆ ಎನ್ನಲಾಗಿದೆ. ಚಿರತೆ ಓಡಾಡುವ ದೃಶ್ಯಗಳು ಸಿ.ಸಿ. ಟಿವಿಯಲ್ಲಿ ಸೆರೆಯಾಗಿದ್ದು, ಕೆಲ ತಿಂಗಳ ಹಿಂದೆ ಮೂಲ್ಕಿಯಲ್ಲಿ ಮನೆಯೊಳಗೆ ಚಿರತೆ ನುಗ್ಗಿದೆ ಎಂದು ತಿಳಿದು ಬಂದಿದೆ.

ಕಿನ್ನಿಗೋಳಿಯ ಉಳವಾಡಿಯಲ್ಲಿ ಚಿರತೆಯ ಶವ ಪತ್ತೆ Read More »

ಕೆರೆಗೆ ಸ್ನಾನಕ್ಕೆಂದು ತೆರಳಿದ ಬಾಲಕ ಮೃತ್ಯು

ಗದಗ: ಹೋಳಿ ಹಬ್ಬದ ಸಂದರ್ಭದಲ್ಲಿ ಗ್ರಾಮದ ತುಂಬೆಲ್ಲಾ ರಂಗುರಂಗಿನ ಹೋಳಿ ಆಟವಾಡಿ ಕೆರೆಯಲ್ಲಿ ಸ್ನಾನಕ್ಕೆ ಹೋದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ದೇವೇಂದ್ರ ರಾಚನಗೌಡ (16) ಎಂದು ಪತ್ತೆ ಹಚ್ಚಲಾಗಿದೆ. ದೇವೇಂದ್ರ ಬೆಳಗ್ಗೆಯಿಂದ ಸ್ನೇಹಿತರೊಂದಿಗೆ ಊರಲ್ಲಿ ಬಣ್ಣದ ಹೋಳಿ ಆಟವಾಡಿದ್ದಾನೆ. ನಂತರ ನಾಲ್ಕು ಜನ ಸ್ನೇಹಿತರು ಒಟ್ಟಾಗಿ ಕೆರೆಗೆ ಈಜಲು ಹೋಗಿದ್ದರು.  ಮೂರು ಜನ ದಡದಲ್ಲಿ ಸ್ನಾನ ಮಾಡಿದ್ದು,

ಕೆರೆಗೆ ಸ್ನಾನಕ್ಕೆಂದು ತೆರಳಿದ ಬಾಲಕ ಮೃತ್ಯು Read More »

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025

ಪುತ್ತೂರು:  ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ  ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು  IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.  2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ 2 ಸಲ ನ್ಯಾಷನಲ್ ಅವಾರ್ಡ್, 2023ರಲ್ಲಿ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿ, 2023ರಲ್ಲಿ ಕರ್ನಾಟಕ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025 Read More »

ವಿದ್ಯಾ ಭಾರತಿ ಜಿಲ್ಲಾ ಸಮೀಕ್ಷಾ ಯೋಜನೆಯ ವಾರ್ಷಿಕ ಸಭೆ

 ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮೀಕ್ಷಾ ಯೋಜನೆಯ ವಾರ್ಷಿಕ ಸಬೆ  ಬೈಠಕ್ ಮುಂಡ್ಕಿನ ಜೆಡ್ಡು   ಆರ್. ಕೆ .ಪಾಟ್ಕರ್ ಹಿರಿಯ ಪ್ರಾಥಮಿಕ ಶಾಲೆ ಚೇರ್ಕಾಡಿಯಲ್ಲಿ ನಡೆಯಿತು. ವಿದ್ಯಾ ಭಾರತಿ ಜಿಲ್ಲಾ ಸಮೀಕ್ಷಾ ಯೋಜನೆಯ ವಾರ್ಷಿಕ ಸಭೆ ಉಡುಪಿ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಪೈ ಸಿದ್ದಾಪುರ  ಅಧ್ಯಕ್ಷತೆಯಲ್ಲಿ  ಜರಗಿತು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಸಂಘಟನ ಕಾರ್ಯದರ್ಶಿ ಉಮೇಶ ಎಮ್ .ಸರಸ್ವತಿ ವಂದನೆಯ ಮೂಲಕ ದೀಪ ಬೆಳಗಿಸಿ ಬೈಠಕ್ ಗೆ ಚಾಲನೆ ನೀಡಿದರು.  ಆರಂಭದಲ್ಲಿ ಸಂಯೋಜಿತ ಶಿಕ್ಷಣ ಸಂಸ್ಥೆಗಳ ವಾರ್ಷಿಕ

ವಿದ್ಯಾ ಭಾರತಿ ಜಿಲ್ಲಾ ಸಮೀಕ್ಷಾ ಯೋಜನೆಯ ವಾರ್ಷಿಕ ಸಭೆ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶನಿವಾರ ಹಾಗೂ ಭಾನುವಾರ ನಡೆಯಿತು. ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾಮೃತ್ಯುಂಜಯ ಹೋಮ, ಮಧ್ಯಾಹ್ನ ರಕ್ತಶ್ವರಿ, ಗುಳಿಗ ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಅನ್ನಸಂತರ್ಪಣೆ, ಸುಡುಮದ್ದು ಪ್ರದರ್ಶನ, ವಸಂತ ಕಟ್ಟೆ ಪೂಜೆ ನಡೆಯಿತು. ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಅರ್ಚಕರು, ನೌಕರರು, ಭಕ್ತಾದಿಗಳು ಉಪಸ್ಥಿತರಿದ್ದರು. ಇಂದು

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ Read More »

75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ

ಬೆಂಗಳೂರಿನಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ವಶಪಡಿಸಿಕೊಂಡು ಇಬ್ಬರು ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ. ಇದು ಕರ್ನಾಟಕದ ಇತಿಹಾಸದಲ್ಲಿ ಅತಿದೊಡ್ಡ ಡ್ರಗ್ಸ್ ವಶ ಕಾರ್ಯಾಚರಣೆ ಎನ್ನಲಾಗಿದೆ. ಸಿಸಿಬಿ ಪೊಲೀಸರು ಕಳೆದ ಐದು ತಿಂಗಳಿಂದ ಈ ಡ್ರಗ್ಸ್‌ ಜಾಲದ ಬೆನ್ನುಹತ್ತಿದ್ದರು.ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್​ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ

75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ Read More »

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚೆನ್ನೈ : ಆಸ್ಕರ್ ಪ್ರಶಸ್ತಿ ವಿಜೇತ ಪ್ರಸಿದ್ಧ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್‌ಗೆ ದಿಢೀರ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎ.ಆರ್ ರೆಹಮಾನ್ ಅವರಿಗೆ ಇಂದು ಬೆಳಗ್ಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈಯ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ 7.30ಕ್ಕೆ ಎಆರ್ ರೆಹಮಾನ್ ಆಸ್ಪತ್ರೆಗೆ ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎ.ಆರ್ ರೆಹಮಾನ್ ಅವರಿಗೆ ಇಸಿಜಿ ಸೇರಿದಂತೆ ಹಲವು ಬೇರೆ ಬೇರೆ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಅವರ ಹೃದಯನಾಳದ ಕೆಲವೆಡೆ

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top