ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ

ಖರ್ಗೆ ಕುಟುಂಬದ ಒಡೆತನದ ಕಾಲೇಜಿನಲ್ಲಿ ನಡೆದ ಅಕ್ರಮ ಬೆಂಗಳೂರು: ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಎಂಬಾಕೆ ಪರೀಕ್ಷೆ ಬರೆದಿದ್ದಾಳೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ […]

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ Read More »

ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಕನ್ನಡ ಶಾಲೆಯಲ್ಲಿ ಚಟುವಟಿಕೆ ಆಧಾರಿತ ಕಲಿಕೆ ಸಂಬಂಧಿಸಿ ಪೋಷಕರಿಗೆ ಕಾರ್ಯಾಗಾರ ಗುರುವಾರ ನಡೆಯಿತು. ವಿದ್ಯಾಭಾರತಿ ಕ್ಷೇತ್ರೀಯ ಶಿಶುಶಿಕ್ಷಣ ಸಹಪ್ರಮುಖರಾದ ತಾರಾ ಕಾಳಿಚರಣ್ ಬೆಂಗಳೂರು ಶಾಲಾ ಪೂರ್ವ ಪ್ರಾಥಮಿಕ, ಒಂದನೇ ಹಾಗೂ 2ನೇ ತರಗತಿ ಪೋಷಕರೊಂದಿಗೆ ಮಾತನಾಡಿ, ಸೊನ್ನೆಯಿಂದ 9 ವರ್ಷದ ವರೆಗಿನ ಮಗುವಿನ ಬೆಳವಣಿಗೆಯಲ್ಲಿ ಮನೆ, ಶಾಲೆ, ಸಮಾಜ ಪ್ರಮುಖ ಪಾತ್ರ ವಹಿಸುತ್ತಿದ್ದು ಮನೆ ಮತ್ತು ಶಾಲೆ ಒಂದೇ ನಾಣ್ಯದ ಮುಖಗಳಂತೆ ಕಾರ್ಯನಿರ್ವಹಿಸಬೇಕು. ಈ ಸಂದರ್ಭ ಮಗು ನೋಡಿ ಕಲಿಯುವ ಸಂಗತಿಗಳೇ ಅತೀ ಹೆಚ್ಚಾಗಿರುವುದರಿಂದ

ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ Read More »

ಮನೆಯಲ್ಲಿದ್ದ ಬೈಕ್‍ ಕಳವು

ನಾರಾವಿ : ಕುತ್ತೂರು ಗ್ರಾಮದ ಸಮೃದ್ಧಿ ಮನೆ ನಿವಾಸಿ ಟಿ. ಎಸ್. ಸಲೀಂ ಎಂಬವರ ಬೈಕ್ ನ್ನು ಅವರ ಮನೆಯಿಂದ ಕದ್ದೊಯ್ದ ಘಟನೆ ನಡೆದಿದೆ. ಘಡನಾನುಸಾರವಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾ.4ರ ಬೆಳಗಿನ ಜಾವ 3ರಿಂದ 3.30ಗಂಟೆ ಮಧ್ಯೆ ಬೈಕ್ ಕಳ್ಳತನವಾಗಿದ್ದು, ಇಬ್ಬರು ವ್ಯಕ್ತಿಗಳು ಕಳ್ಳತನ ಮಾಡುವ ದೃಶ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕಳವಾದ ಬೈಕ್ ನ ಮೊತ್ತ ಸುಮಾರು  ರು. 60ಸಾವಿರ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಯಲ್ಲಿದ್ದ ಬೈಕ್‍ ಕಳವು Read More »

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮೇಲೆ ಖಲಿಸ್ಥಾನಿ ಉಗ್ರರಿಂದ ಹಲ್ಲೆ ಯತ್ನ

ವಾಹನಕ್ಕೆ ಕಟ್ಟಿದ್ದ ಭಾರತದ ಧ್ವಜವನ್ನು ಹರಿದು ಹಾಕಿದ ಉಗ್ರರು ಲಂಡನ್ : ಲಂಡನ್‌ಗೆ ಭೇಟಿ ನೀಡಿದ್ದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮೇಲೆ ಖಲಿಸ್ತಾನ್ ಉಗ್ರರ ಗುಂಪೊಂದು ದಾಳಿ ನಡೆಸಲು ಯತ್ನಿಸಿದ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ ಸಚಿವರು ಶೆವನಿಂಗ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಿಂದ ಹೊರಬಂದ ನಂತರ ಈ ಘಟನೆ ನಡೆದಿದೆ. ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಾಣಿಸುತ್ತಿದೆ. ಮತ್ತೊಂದು ವೀಡಿಯೊದಲ್ಲಿ ಖಾಲಿಸ್ಥಾನ್ ಉಗ್ರಗಾಮಿಗಳು ಹೊರಗೆ ಧ್ವಜಗಳನ್ನು

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮೇಲೆ ಖಲಿಸ್ಥಾನಿ ಉಗ್ರರಿಂದ ಹಲ್ಲೆ ಯತ್ನ Read More »

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಲ್ಲಿ ಸಹಕಾರ ಭಾರತಿಗೆ ಅಭೂತಪೂರ್ವ ಗೆಲುವು | ಪುತ್ತೂರು ಬಿಜೆಪಿ ವತಿಯಿಂದ ಅಭಿನಂದನೆ

ಕೊಳ್ತಿಗೆ : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಸಹಕಾರಿ ಭಾರತೀಯ ಎಲ್ಲಾ ನೂತನ ನಿರ್ದೇಶಕರುಗಳಿಗೆ ಭಾರತೀಯ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಮಾತನಾಡಿ, ಕೊಳ್ತಿಗೆ ಸಹಕಾರಿ ಸಂಘದಲ್ಲಿ ಈ ಹಿಂದೆ ಕಾಂಗ್ರೆಸ್ ಬೆಂಬಲಿತರು ಆಡಳಿತ ನಡೆಸುತ್ತಿದ್ದರು. ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನ

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಲ್ಲಿ ಸಹಕಾರ ಭಾರತಿಗೆ ಅಭೂತಪೂರ್ವ ಗೆಲುವು | ಪುತ್ತೂರು ಬಿಜೆಪಿ ವತಿಯಿಂದ ಅಭಿನಂದನೆ Read More »

ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಆಜೀಜ್ ನಿಧನ

ತೊಕ್ಕೊಟ್ಟು : ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಆರ್.ಕೆ.ಸಿ. ಅಬ್ದುಲ್ ಆಜೀಜ್ (42) ಹೃದಯಾಘಾತದಿಂದ ಬುಧವಾರ ಸಂಜೆ ನಿಧಾನರಾದರು.   ಮುಂಬಯಿಗೆ ತೆರಳಿದ್ದ ಅವರು ರೈಲಿನಲ್ಲಿ ವಾಪಾಸಾಗುತ್ತಿದ್ದಾಗ ಕುಮಟಾ ಬಳಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದರು. ಕುತ್ತಾರು ಮದನಿ ನಗರದ ನಿವಾಸಿಯಾಗಿದ್ದ ಅಬ್ದುಲ್ ಆಜೀಜ್ ರಸ್ತೆ ನಿರ್ಮಾಣ ಗುತ್ತಿಗೆ ಸಂಸ್ಥೆ ಆರ್ ಕೆ ಸಿ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲಕರ ಪುತ್ರರಾಗಿದ್ದ ಅವರು ಉದ್ಯಮಿಯಾಗಿ ಯುವಕರಿಗೆ  ಹೊಸ ಹೊಸ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಿದ್ದರು. ತನ್ನ ಮಾಲೀಕತ್ವದಲ್ಲಿದ್ದ ನಾಟೇಕಲ್ ಸಮೀಪದ

ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಆಜೀಜ್ ನಿಧನ Read More »

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ

ಕನ್ನಡದ ನಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗೆದಷ್ಟೂ ಆಳ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿ ಒಂದೆರಡು ಬಾರಿ ಅಲ್ಲ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು ನಾನು ಡಿಜಿಪಿ ಮಗಳು

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ Read More »

ರಾಷ್ಟ್ರೀಯ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆ | ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್

ಪುತ್ತೂರು: ರಾಷ್ಟ್ರೀಯ ಸಿಎಸ್‌ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್ ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ ರಾಜ್ಯದಿಂದ ಇಬ್ಬರು ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದು ಅದರಲ್ಲಿ ದ.ಕ ಜಿಲ್ಲೆಯಿಂದ ಸೃಜನ್ ಕೆ.ಪಿ.ಯರವರು ಓರ್ವರಾಗಿದ್ದಾರೆ. ಶೈಕ್ಷಣಿಕ ಕಾರ್ಯಕ್ಷಮತೆ ಸುಧಾರಿಸಲು ಜ್ಞಾನದ ಮಟ್ಟ ಮತ್ತು ಪರೀಕ್ಷೆಯ ಸಿದ್ಧತೆಯನ್ನು ಅಳೆಯಲು ಈ ಒಲಿಂಪಿಯಡ್ ಪರೀಕ್ಷೆ ಸಹಾಯಮಾಡುತ್ತದೆ.

ರಾಷ್ಟ್ರೀಯ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆ | ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಜಿಆರ್‌ಪಿಎ ಚೀಫ್‌ ಎಂಜಿನಿಯರ್ ನಂಜುಂಡಪ್ಪ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್‌‌ ಎಚ್‌.ಪಿ ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆದಿದೆ. ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇವರು ಈಗ ಬೆಂಗಳೂರಿನ ರಾಜಾಜಿನಗರದಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಂಬಂಧಿಕರೊಬ್ಬರ ಮನೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ Read More »

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ ಎನ್. ಪದ್ಮನಾಭ ಮಾಣಿಂಜ ನಿಧನ 

ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಿಧನರಾದರು. ಮಾಜಿ ಶಾಸಕ ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಅವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ ಎನ್. ಪದ್ಮನಾಭ ಮಾಣಿಂಜ ನಿಧನ  Read More »

error: Content is protected !!
Scroll to Top