ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ

ಕಾಣಿಯೂರು: ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರೋತ್ಸವವು ಫೆ24, 25ರಂದು ನಡೆಯಿತು. ಫೆ 25ರಂದು ಬೆಳಿಗ್ಗೆ ಬ್ರಹ್ಮಶ್ರೀ ನಿಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹವನ, ಜಂಬಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ನಾಗತಂಬಿಲ, ಕಲ್ಲುರ್ಟಿ ತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪರಾಧನೆ, ಮಹಾಪೂಜೆ, ರಾತ್ರಿ ಶ್ರೀ ದೇವರ ಬಲಿ ಉತ್ಸವ, ಕಟ್ಟೆ ಪೂಜೆ, ಬಟ್ಟಲು ಕಾಣಿಕೆ. ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಮಂಗಳೂರು […]

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ Read More »

ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ನಾಪತ್ತೆ

ಪುತ್ತೂರು: ಪುತ್ತೂರು ಸಂತೆಯಲ್ಲಿ ತಂದೆಯ ಜೊತೆ ತರಕಾರಿ ವ್ಯಾಪಾರ ನಡೆಸುತ್ತಿದ್ದ ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಯುವಕನೋರ್ವ ನಾಪತ್ತೆಯಾದ ಬಗ್ಗೆ ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್ (21 ನಾಪತ್ತೆಯಾದವರು. ನನ್ನ ಮಗ ಅಬೂಬಕ್ಕರ್ ಸಿದ್ಧಿಕ್ ನನ್ನೊಂದಿಗೆ ಸಂತೆಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದು, ಫೆ. 24 ಸೋವಾರದ ಸಂತೆಯಲ್ಲಿ ತರಕಾರಿ ವ್ಯಾಪಾರ ಮಾಡಿ ಮಧ್ಯಾಹ್ನ  12 ಗಂಟೆಗೆ ತಲೆನೋವೆಂದು ಮನೆಗೆ ಹೋದವನು ಅಲ್ಲಿ ತನ್ನ ಮೊಬೈಲ್ ಇಟ್ಟು

ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ನಾಪತ್ತೆ Read More »

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ | ಜಾನುವಾರುಗಳ ಮೇವು ಸಾಗಾಟದ ಟೆಂಪೋ

ಬೆಳ್ತಂಗಡಿ: ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ  ಘಟನೆ  ನಿನ್ನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ನಡೆದಿದೆ. ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ | ಜಾನುವಾರುಗಳ ಮೇವು ಸಾಗಾಟದ ಟೆಂಪೋ Read More »

ಮಂಗನಖಾಯಿಲೆಗೆ ಓರ್ವ ಮಹಿಳೆ ಬಲಿ

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದರು. ಈ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎನ್ನುವ ವಿಚಾರ  ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಕೊನೇರಿಪುರದ 55 ವರ್ಷದ ಮಹಿಳೆಗೆ ಜ.23ರಂದು ಕೆಎಫ್‌ಡಿ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜ.23ರಂದು ಮಹಿಳೆಗೆ ಕಎಫ್‌ಡಿ ಪಾಸಿಟಿವ್ ಬಂದಿದ್ದರಿಂದ ಶಿವಮೊಗ್ಗ ಮೆಗ್ಯಾನ್ ಆಸ್ಪತ್ರೆಗೆ ದಾಖಲಿಸಿ

ಮಂಗನಖಾಯಿಲೆಗೆ ಓರ್ವ ಮಹಿಳೆ ಬಲಿ Read More »

ವಿದ್ಯಾರ್ಥಿ ದಿಗಂತ್‍ ನಾಪತ್ತೆ | ಚಪ್ಪಲಿ, ಮೊಬೈಲ್‍ ರೈಲ್ವೇ ಹಳಿಯಲ್ಲಿ ಪತ್ತೆ

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್‍ ನಾಪತ್ತೆಯಾಗಿದ್ದು, ಆತನ ಚಪ್ಪಲಿ ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಆತ ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ. ಬಳಿಕ ಹುಡುಕಾಡಿದಾಗ

ವಿದ್ಯಾರ್ಥಿ ದಿಗಂತ್‍ ನಾಪತ್ತೆ | ಚಪ್ಪಲಿ, ಮೊಬೈಲ್‍ ರೈಲ್ವೇ ಹಳಿಯಲ್ಲಿ ಪತ್ತೆ Read More »

ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ

ಉಪ್ಪಿನಂಗಡಿ: ತನ್ನದೇ ಮನೆಯ ತೋಟದ ಕೆರೆಗೆ ಹಾರಿ ಯುವಕನೋರ್ವ  ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ. ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆ ಮಾಡಿಕೊಂಡ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು. ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ Read More »

ಡಾ. ಸುರೇಶ್‍ ಪುತ್ತೂರಾಯರಿಗೆ ಮಾತೃವಿಯೋಗ

ಪುತ್ತೂರು: ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು. ಸುನಂದಾರವರು ಕಿರಿಯ ಪುತ್ರ ಡಾ.ಸುರೇಶ್ ಪುತ್ತೂರಾಯ ರವರ ಮನೆಯಲ್ಲಿ ವಾಸವಿದ್ದು, ಕೆಲ ತಿಂಗಳ ಹಿಂದೆ ಮುಂಬಯಿಯಲ್ಲಿ ಇಂಜಿನಿಯರ್ ಆಗಿರುವ ಹಿರಿಯ ಪುತ್ರ ಗೋಪಾಲಕೃಷ್ಣರವರ ಮನೆಗೆ ತೆರಳಿದ್ದರು. ಮೃತರು ಪುತ್ರರಾದ ಗೋಪಾಲಕೃಷ್ಣಪುತ್ತೂರಾಯ. ಡಾ.ಸುರೇಶ್ ಪುತ್ತೂರಾಯ, ಪುತ್ರಿಯರಾದ ಶಶಿಕಲಾ ಸಾಮಗ ಉಡುಪಿ, ಧರ್ಮಸ್ಥಳ ಎಸ್‌.ಡಿ.ಎಂ ಕಾಲೇಜಿನ ಸಹ ಪ್ರಾಧ್ಯಾಪಕಿ ಹರಿಣಿ ಪುತ್ತೂರಾಯ,

ಡಾ. ಸುರೇಶ್‍ ಪುತ್ತೂರಾಯರಿಗೆ ಮಾತೃವಿಯೋಗ Read More »

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ | ನೆರವೇರಿದ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು | ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬೆಳಿಗ್ಗೆಯಿಂದಲೇ ಮಹಾಶಿವರಾತ್ರಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ | ನೆರವೇರಿದ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು | ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ Read More »

ಜಾಗ್ವಾರ್ ಯುದ್ದ ವಿಮಾನಕ್ಕೆ ಪೈಲಾಟ್ ಆಗಿ ಆಯ್ಕೆಯಾದ ಮಂಗಳೂರಿನ ತನುಷ್ಕಾ ಸಿಂಗ್  

ಮಂಗಳೂರು: ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸಲು ಮಹಿಳೆಯೋರ್ವಳಾದ ಪ್ಲೆಯಿಂಗ್ ಆಫೀಸರ್ ತನುಷ್ಕಾ ಸಿಂಗ್ ಆಯ್ಕೆಯಾಗಿದ್ದಾರೆ. ಇವರು ಜಾಗ್ವಾರ್ ಯುದ್ಧ ವಿಮಾನ ಸ್ಮಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಜಾಗ್ವಾರ್ ಯುದ್ಧ ವಿಮಾನ ಸ್ಮಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾದ ತನುಷ್ಕಾ ಸಿಂಗ್, ತಂದೆ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅಜಯ್ ಪ್ರತಾಪ್ ಸಿಂಗ್ ಅವರ ಪುತ್ರಿ. ಪ್ರಸ್ತುತ  ಇವರು ಎಂಆರ್‌ಪಿಎಲ್ ಸಂಸ್ಥೆಯ ಎಚ್‌ಎಸ್‌ಇ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಾಗ್ವಾರ್ ಯುದ್ದ ವಿಮಾನಕ್ಕೆ ಪೈಲಾಟ್ ಆಗಿ ಆಯ್ಕೆಯಾದ ಮಂಗಳೂರಿನ ತನುಷ್ಕಾ ಸಿಂಗ್   Read More »

ಅಕ್ಷಯ ಕಾಲೇಜು ಎನ್‌ಎಸ್‌ಎಸ್ ಶಿಬಿರ ಸಂಪನ್ನ

ಪುತ್ತೂರು : ಅಕ್ಷಯ ಕಾಲೇಜಿನ ರಾ.ಸೇ.ಯೋ.ಘಟಕಗಳ ವಾರ್ಷಿಕ ವಿಷೇಶ ಶಿಬಿರವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮೇಗಿನಪೇಟೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಸ್ವಚ್ಛತಾ ಅಭಿಯಾನ, ಗಿಡ ನೆಡುವ ಕಾರ್ಯಕ್ರಮ ಮತ್ತು ಆರೋಗ್ಯ ಜಾಗೃತಿ ಸೇರಿದಂತೆ ಹಲವು ಸಮಾಜಮುಖಿ ಚಟುವಟಿಕೆಗಳು ನಡೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಧ್ಯಕ್ಷರು ಜಯಂತ ನಡುಬೈಲು ಮಾತನಾಡಿ ನಮ್ಮ ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಅವರು ಜವಾಬ್ದಾರಿಯುತ ನಾಗರಿಕರಾಗಲು ಸಿದ್ಧಗೊಳ್ಳುತ್ತಾರೆ. ಶಿಬಿರದಲ್ಲಿ ಕಲಿತ ಪಾಠಗಳು ಮುಂದಿನ ಜೀವನದಲ್ಲಿಯೂ ಪ್ರೇರಣೆಯಾಗಿ ಉಳಿಯಬೇಕು, ಎಲ್ಲಾ

ಅಕ್ಷಯ ಕಾಲೇಜು ಎನ್‌ಎಸ್‌ಎಸ್ ಶಿಬಿರ ಸಂಪನ್ನ Read More »

error: Content is protected !!
Scroll to Top