ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌

ಪ್ರಣಾಳಿಕೆ ಸಿದ್ಧಪಡಿಸಿದ್ದು ನೀವೇ ಎಂದ ಶಿವಕುಮಾರ್‌ ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅಧಿಕಾರ ಹಿಡಿಯಲು ಘೋಷಿಸಿದ ಗ್ಯಾರಂಟಿ ಯೋಜನೆಗಳು ಬೊಕ್ಕಸಕ್ಕೆ ಹೊರೆಯಾಗುತ್ತಿವೆ ಎಂಬುದನ್ನು ಈಗ ಕಾಂಗ್ರೆಸ್‌ ಸಚಿವರೇ ಹೇಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದಿದ್ದಾರೆ. ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರೂ […]

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌ Read More »

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಮೃತಪಟ್ಟವರು ಲೇಖಿರಾಜ್ (29) ಎನ್ನಲಾಗಿದೆ. ಮೃತರು ಲೇಖಿರಾಜ್ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು ತಿಳಿದು ಬಂದಿದೆ. ಘಟನೆಗೆ ಸಂಬಂಧ ಪಟ್ಟಂತೆ ನಿಖರ ಕಾರಣ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಬಿಟ್‌ ಕಾಯಿನ್‌ ಹಗರಣ : 60 ಕಡೆ ಸಿಬಿಐ ದಾಳಿ

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಬಿಟ್ ಕಾಯಿನ್, ಕ್ರಿಪ್ಟೋ ಕರೆನ್ಸಿ ಹಗರಣ ಸಂಬಂಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ದೊಡ್ಡಮಟ್ಟದ

ಬಿಟ್‌ ಕಾಯಿನ್‌ ಹಗರಣ : 60 ಕಡೆ ಸಿಬಿಐ ದಾಳಿ Read More »

ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ನಿಧನ

ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53) ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಒಳಮೊಗ್ರು ಗ್ರಾಮದ ಶಾಂತಿವನ ನಾರಾಯಣ ಎಂ.ಎಸ್ ಮತ್ತು ಪ್ರೇಮ ಅವರ ಪುತ್ರರಾಗಿರುವ ಚಂದ್ರಕಾಂತ್ ಶಾಂತಿವನರವರು ಧಾರ್ಮಿಕ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರರನ್ನು ಅಗಲಿದ್ದಾರೆ.

ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ನಿಧನ Read More »

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ

ಹೀಗಿದೆ ರೈಲಿನ ಹೊಸ ವೇಳಾಪಟ್ಟಿ ಮಂಗಳೂರು: ಮೂರು ದಶಕಗಳ ಬೇಡಿಕೆಯಾಗಿದ್ದ ಮಂಗಳೂರು-ಕಬಕ ಪ್ಯಾಸೆಂಜರ್‌ ರೈಲು ಸೇವೆಯನ್ನು ಸುಬ್ರಹ್ಮಣ್ಯದ ತನಕ ವಿಸ್ತರಿಸಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರೈಲು ಸೇವೆಯನ್ನು ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಬಹಳಷ್ಟು ಪ್ರಯತ್ನಪಟ್ಟಿದ್ದರು. ರೈಲು ವಿಸ್ತರಣೆಯಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮಾತ್ರವಲ್ಲದೆ ನಿತ್ಯ ಮಂಗಳೂರಿಗೆ ಬಂದು ಹೋಗುವವರಿಗೆ ತುಂಬ ಅನುಕೂಲ ಆಗಲಿದೆ. ೀ ಭಾಗದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎನ್ನಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ Read More »

ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ಸ್ಕೂಟರ್ ಡಿಕ್ಕಿ : ಮೃತ್ಯು

ಉಪ್ಪಿನಂಗಡಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಕೆ.ಸದಾರಾಮ ಎಂಬವರ ಪತ್ನಿ ಸರಸ್ವತಿ (50) ಮೃತಪಟ್ಟವರು. ಸೋಮವಾರ ಬೆಳಗ್ಗೆ ಎಲೈಸಿ ಕಚೇರಿಯಲ್ಲಿ ಕೆಲಸ ಮುಗಿಸಿ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ತುಂಬೆಯಲ್ಲಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾತ್ರಿ ವೇಳೆ ಚಿಕಿತ್ಸೆಗೆ

ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಗೆ ಸ್ಕೂಟರ್ ಡಿಕ್ಕಿ : ಮೃತ್ಯು Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ

ವಾರ್ಷಿಕ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತವಾಗಿ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ Read More »

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ

ಇದುವರೆಗೆ ಸುಮಾರು 64 ಕೋಟಿ ಜನರಿಂದ ಪುಣ್ಯಸ್ನಾನ ಪ್ರಯಾಗರಾಜ್: ಮಹಾಶಿವರಾತ್ರಿ ಪವಿತ್ರ ದಿನವಾದ ಇಂದು ಮಹಾಕುಂಭಮೇಳದಲ್ಲಿ ಕೊನೆಯ ಪುಣ್ಯಸ್ನಾನ ನಡೆಯಲಿದ್ದು, ಇದರೊಂದಿಗೆ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮುಕ್ತಾಯವಾಗಲಿದೆ. ಫೆಬ್ರವರಿ 25ರಂದು ರಾತ್ರಿ 8 ಗಂಟೆಯವರೆಗೆ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ 1.24 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು. ಇದರೊಂದಿಗೆ ಜನವರಿ 13ರಿಂದ ಮಹಾಕುಂಭದಲ್ಲಿ ಸ್ನಾನ ಮಾಡಿದ ಒಟ್ಟು ಭಕ್ತರ ಸಂಖ್ಯೆ 64 ಕೋಟಿ ಮೀರಿದೆ.ಇಂದು ನಡೆಯಲಿರುವ ಮಹಾಶಿವರಾತ್ರಿಯ

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ Read More »

ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್‍ ದರೋಡೆ | ಮತ್ತೆ ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ:  ತಾಲ್ಲೂಕಿನ ಕೋಟಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕನ್ಯಾನದ ಭಾಸ್ಕರ್ ಬೆಳ್ಳವಾಡ ಅಲಿಯಾಸ್ ಶಶಿ ಥೇವರ್ (69) ಹಾಗೂ ಉಳ್ಳಾಲ ತಾಲ್ಲೂಕಿನ ಕೆ.ಸಿ.ರೋಡ್‌ನ ಮಹಮ್ಮದ್ ನಜೀರ್ (65) ಬಂಧಿತ ಆರೋಪಿಗಳು. ಈ ಮೂಲಕ ಪ್ರಕರಣದಲ್ಲಿ, ಒಟ್ಟಾರೆ ಆರು ಜನರನ್ನುಈ ವರೆಗೆ ಬಂಧಿಸಲಾಗಿದೆ. ಮುಂಬೈನ ದರೋಡೆಕೋರರ ತಂಡಕ್ಕೆ ಈ

ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್‍ ದರೋಡೆ | ಮತ್ತೆ ಇಬ್ಬರು ಆರೋಪಿಗಳ ಬಂಧನ Read More »

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್‍ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆ

ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಭಾಸ್ಕರ ಗೌಡ ಅವರು ಈ ಬಾರಿ ಮೊದಲ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಕಳೆದ ಬಾರಿ ನಿರ್ದೇಶಕರಾಗಿದ್ದ ಪ್ರವೀಣ್ ರೈ ಪಂಜೊಟ್ಟು ಅವರನ್ನು ಆಯ್ಕೆ ಮಾಡಲಾಯಿತು. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್‍ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆ Read More »

error: Content is protected !!
Scroll to Top