ನಾಳೆ (ಫೆ.16) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕುರಿತು ತಾಂಬೂಲ ಪ್ರಶ್ನೆ ಫೆ.16 ರಂದು ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ಬೆಳಿಗ್ಗೆ 9 ರಿಂದ ಸಂಜೆ ಗಂಟೆ 5 ರ ತನಕ ತಾಂಬೂಲ ಪ್ರಶ್ನೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಫೆ.16) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ Read More »

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ತಡರಾತ್ರಿ ಹಬ್ಬ ಮುಗಿಸಿ ಹೋಗುವಾಗ ಕಲ್ಲು ತೂರಿ ಘೋಷಣೆ ಕೂಗಿದ ಕಿಡಿಗೇಡಿಗಳು ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.ಮಹೇಶ್ ಎನ್ನುವರ ಮನೆ ಮೇಲೆ

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ Read More »

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ

ಹೊಸದಿಲ್ಲಿ : ಇಷ್ಟಪಟ್ಟವರಿಗೆ ಉಡುಗೊರೆ ಕೊಡುವುದರಲ್ಲೇನೂ ವಿಶೇಷವಿಲ್ಲ. ಅದರಲ್ಲೂ ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್‌ ಡೇಯಂದು ಉಡುಗೊರೆ ವಿನಿಮಯ ಮಾಡಿಕೊಳ್ಳುವುದು ಮಾಮೂಲು. ಆದರೆ ಉಡುಗೊರೆಯನ್ನು ಸೇಡು ತೀರಿಸಿಕೊಳ್ಳಲು ಕೂಡ ಬಳಸಿಕೊಳ್ಳಬಹುದು ಎಂಬುದನ್ನು ಗುರುಗ್ರಾಮದ ಯುವತಿಯೊಬ್ಬಳು ತೋರಿಸಿಕೊಟ್ಟಿದ್ದಾಳೆ. ಈಕೆ ಕೊಟ್ಟ ಉಡುಗೊರೆಯಿಂದ ಕೈಕೊಟ್ಟ ಪ್ರೇಮಿ ಸುಸ್ತಾಗಿ ಹೋಗಿದ್ದಾನೆ. 24 ವರ್ಷದ ಆಯುಷಿ ರಾವತ್ ಎಂಬ ಯುವತಿ ಪ್ರೇಮಿಗಳ ದಿನದಂದು ತನ್ನ ಮಾಜಿ ಗೆಳೆಯನ ಮನೆಗೆ ಬರೋಬ್ಬರಿ 100 ಪಿಜ್ಜಾಗಳನ್ನು ಆರ್ಡರ್ ಮಾಡಿದ್ದಾಳೆ. ಹಣ ಪಾವತಿ ಮಾಡಿಲ್ಲ. ಡೆಲಿವರಿ ವೇಳೆ ಕ್ಯಾಶ್

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ Read More »

ಶ್ರೀ ಸಂತ ಸೇವಾಲಾಲ್‍ 286ನೇ ಜಯಂತಿ ಆಚರಣೆ | ಹಲವಾರು ಮಹಾನ್ ನಾಯಕರ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ : ಪುರಂದರ ಹೆಗ್ಡೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಸಂತ ಸೇವಾಲಾಲ್‍ ರ 286ನೇ ಜಯಂತಿಯನ್ನು ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು.. ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ, ಪ್ರತೀ ವರ್ಷ ವಿವಿಧ ಮಹಾನ್ ನಾಯಕ್ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ. ಹಾಗೆಯೇ ಬಂಜಾರ ಸಮುದಾಯದ ಮಹಾನ್ ನಾಯಕ್‍ ಸಂತ ಸೇವಾಲಾಲ್ ಅವರ ಆದರ್ಶ, ವ್ಯಕ್ತಿತ್ವ,, ತತ್ವಾದರ್ಶಗಳನ್ನು ನಮ್ಮ

ಶ್ರೀ ಸಂತ ಸೇವಾಲಾಲ್‍ 286ನೇ ಜಯಂತಿ ಆಚರಣೆ | ಹಲವಾರು ಮಹಾನ್ ನಾಯಕರ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ : ಪುರಂದರ ಹೆಗ್ಡೆ Read More »

ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೂರಿ  ತಂದೆ | ಪ್ರಕರಣ ದಾಖಲು

ಸುಳ್ಯ : ಸ್ವಂತ ಅಪ್ಪನೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ಆರೋಪ ಕೇಳಿ ಬಂದಿದೆ. ಘಟನಾನುಸಾರವಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ 17 ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೂರಿ  ತಂದೆ | ಪ್ರಕರಣ ದಾಖಲು Read More »

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು.  – ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು.

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ Read More »

ಮಂಗಳೂರಿನ ಜುಗಾರಿ ಅಡ್ಡೆಯಲ್ಲಿ ಪೋಲಿಸರ ದಿಢೀರ್ ದಾಳಿ | ಇಸ್ಪೀಟ್ ಆಟವಾಡುತ್ತಿದ್ದ 12 ಮಂದಿಯ ಬಂಧನ  

ಮಂಗಳೂರು : ಮಂಗಳೂರಿನ ಕಾರ್‌ಸ್ಟ್ರೀಟ್ ಬಳಿ ಕಾರ್ಯಾಚರಿಸುತ್ತಿದ್ದ ಜುಗಾರಿ ಅಡ್ಡೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದ 12 ಮಂದಿಯನ್ನು ಬಂಧಿಸಿರುವ ಘಟನೆ ನಿನ್ನೆ ನಡೆದಿದೆ. ಆರೋಪಿಗಳನ್ನು ವಿಠೋಭ ದೇವಸ್ಥಾನದ ಬಳಿಯ ನಾಗರಾಜ್ ಭಂಡಾರಿ ಹಾಗೂ ಆತನ ನಿಕಟವರ್ತಿಗಳು ಎಂದು ಎನ್ನಲಾಗಿದೆ. ಜೂಜಾಟದಲ್ಲಿ ಸುಮಾರು 10ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿಂದ ಪೊಲೀಸರು ದಿಢೀರ್‍ ದಾಳಿ ನಡೆಸಿ, ಆರೋಪಿಗಳಿಂದ ನಗದು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನ ಜುಗಾರಿ ಅಡ್ಡೆಯಲ್ಲಿ ಪೋಲಿಸರ ದಿಢೀರ್ ದಾಳಿ | ಇಸ್ಪೀಟ್ ಆಟವಾಡುತ್ತಿದ್ದ 12 ಮಂದಿಯ ಬಂಧನ   Read More »

ಚಾರ್ಮಾಡಿಯಲ್ಲಿ ಮೃತಪಟ್ಟ ಕಾಡಾನೆಯನ್ನು ದಫನ ಮಾಡಿದ ಅರಣ್ಯ ಇಲಾಖೆ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಧರ್ಮಸ್ಥಳ ಮುಂಡಾಜೆ ಮೀಸಲು ಅರಣ್ಯದ ಅನಾರು ಪ್ರದೇಶದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ರಾತ್ರಿ 11 ಗಂಟೆಗೆ ಸಾವನ್ನಪ್ಪಿದ್ದು, ಶುಕ್ರವಾರ ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ದಫನ ಮಾಡಿದರು. 25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು, ಕಳೆದ ಎರಡು ತಿಂಗಳಿಂದ ಸರಿಯಾದ ಆಹಾರ ಸೇವಿಸುತ್ತಿರಲ್ಲಿಲ್ಲ ಎನ್ನಲಾಗಿದೆ. ಆನೆಯ ದೇಹದ ಹೊರಗಡೆ ಯಾವುದೇ ಗಾಯವಿಲ್ಲ, ದೇಹದ ಒಳಗೆ ಬಹು ಅಂಗಾಂಗ ವೈಫಲ್ಯ ಇರುವುದು

ಚಾರ್ಮಾಡಿಯಲ್ಲಿ ಮೃತಪಟ್ಟ ಕಾಡಾನೆಯನ್ನು ದಫನ ಮಾಡಿದ ಅರಣ್ಯ ಇಲಾಖೆ Read More »

ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರ ಒಳಜಗಳ | ಪೋಷಕರಿಂದ ಅಧಿಕಾರಿಗಳ ಮುಂದೆ ಆಕ್ರೋಶ

ವಿಟ್ಲ : ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರಿಬ್ಬರ ಒಳಜಗಳದಿಂದಾಗಿ ಕನ್ಯಾನ ಗ್ರಾಮದ ಕಣಿಯೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ  ಸರ್ಕಾರಿ ಹಿರಿಯ  ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಂತಾಗಿದೆ. 46 ವಿದ್ಯಾರ್ಥಿಗಳಿರುವ ಕಣಿಯೂರು ಸರ್ಕಾರಿ ಶಾಲೆಯಲ್ಲಿ ಮೂವರು ಶಿಕ್ಷಕಿಯರಿದ್ದಾರೆ. 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ಈಗ ಮುಖ್ಯ ಶಿಕ್ಷಕಿಯಾಗಿದ್ದಾರೆ. ಏಳೆಂಟು ವರ್ಷಗಳಿಂದ ಇನ್ನೋರ್ವರು  ಸಹಾಯಕ ಶಿಕ್ಷಕಿಯಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಹಾಸನ ಮೂಲದವರು ಒಬ್ಬರು ಇದೇ ಕಣಿಯೂರು ಶಾಲೆಗೆ ಶಿಕ್ಷಕಿಯಾಗಿ ಕರ್ತವ್ಯಕ್ಕೆ ಬಂದಿದ್ದಾರೆ. ಕಳೆದ ಏಳು ತಿಂಗಳ

ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರ ಒಳಜಗಳ | ಪೋಷಕರಿಂದ ಅಧಿಕಾರಿಗಳ ಮುಂದೆ ಆಕ್ರೋಶ Read More »

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು

ಪ್ರಯಾಗ್‌ರಾಜ್‌: ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದು 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು Read More »

error: Content is protected !!
Scroll to Top