ನಾಳೆ (ಫೆ.9) : ಬಾಂಧವ್ಯ ಫ್ರೆಂಡ್ಸ್, ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ

ಪುತ್ತೂರು : ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ ಅಂಡರ್ ಆರ್ಮ್ ಕ್ರಿಕೆಟ್ ಆಡಿಸಿರುವ ಹೆಗ್ಗಳಿಕೆ ಹೊಂದಿರುವ ಬಾಂಧವ್ಯ ಫ್ರೆಂಡ್ಸ್ ಈ ಬಾರಿ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ ಏರ್ಪಡಿಸಿದೆ. ಇದರೊಂದಿಗೆ ಕ್ರೀಡಾ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಸ್ಕರಿಯ ಎಂ.ಎ., ಫಾರೂಕ್ ಶೇಖ್ […]

ನಾಳೆ (ಫೆ.9) : ಬಾಂಧವ್ಯ ಫ್ರೆಂಡ್ಸ್, ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ Read More »

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಇದು ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಈ ವರ್ಷವೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ ಪಾದಯಾತ್ರಿಗಳು

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ Read More »

ಜುಬಿನ್ ಮೊಹಾಪಾತ್ರ ಅತ್ಯಂತ ಕ್ರಿಯಾಶೀಲ ಅಧಿಕಾರಿ : ಮುಲ್ಲೈ ಮುಗಿಲನ್ | ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ಬೀಳ್ಕೊಡುಗೆ

ಪುತ್ತೂರು: ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರು ಉತ್ತಮ ಮನುಷ್ಯತ್ವ ಹೊಂದಿರುವ ಒಳ್ಳೆಯ ದೃಷ್ಟಿಕೋನ ಹೊಂದಿರುವ, ಬಡವರ ಹಾಗೂ ಸಮಾಜದ ಕಾಳಜಿ ಹೊಂದಿರುವ ಅತ್ಯಂತ ಕ್ರಿಯಾಶೀಲ ಅಧಿಕಾರಿ. ಉದ್ದೇಶ ಸರಿ ಇದ್ದಾಗ ಉನ್ನತ ಅವಕಾಶಗಳೂ ಹುಡುಕಿಕೊಮಡು ಬರುತ್ತವೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ಪುತ್ತೂರು ಉಪವಿಭಾಗಾಧಿಕಾರಿಯಾಗಿ 13 ತಿಂಗಳು ಕರ್ತವ್ಯ ನಿರ್ವಹಿಸಿ ರಾಯಚೂರು ಮಹಾನಗರಪಾಲಿಕೆ ಡೆಪ್ಯೂಟಿ ಕಮಿಷನರ್ ಆಗಿ ವರ್ಗಾವಣೆಗೊಂಡಿರುವ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ನಗರದ ಸರಕಾರಿ ನೌಕರರ

ಜುಬಿನ್ ಮೊಹಾಪಾತ್ರ ಅತ್ಯಂತ ಕ್ರಿಯಾಶೀಲ ಅಧಿಕಾರಿ : ಮುಲ್ಲೈ ಮುಗಿಲನ್ | ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ಬೀಳ್ಕೊಡುಗೆ Read More »

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟರವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಹೇಶ್‍ ನಡುತೋಟ ಅವರು ಸುಬ್ರಹ್ಮಣ್ಯದ ಬಿಳಿನೆಲೆ ಗ್ರಾಮದ ಕೈಕಂಬದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿ ಯಾಗಿ ಕಳೆದ 15 ವರುಷದಿಂದ ನೆಲೆಸಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ. ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿ

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ Read More »

ಪುತ್ತೂರು ನಗರಸಭೆಯಲ್ಲಿ 3.55 ಕೋಟಿಯ ಮಿಗತೆ ಬಜೆಟ್ ಮಂಡನೆ

ಪುತ್ತೂರು: ಪುತ್ತೂರು ನಗರಸಭೆಯಲ್ಲಿ 2025-26ನೇ ಸಾಲಿನಲ್ಲಿ 3,55,20,214 ಕೋಟಿ ರೂ.ಗಳ ಮಿಗತೆಯ ಬಜೆಟ್ ಮಂಡಿಸಲಾಗಿದೆ. ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣ ನಾಯ್ಕ್ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಬಜೆಟ್‍ ಮಂಡಿಸಿದರು. 2025-26ನೇ ಸಾಲಿಗೆ ನಗರಸಭೆಯ ಪ್ರಮುಖ ಸ್ವಂತ ಆದಾಯಗಳಾದ ಆಸ್ತಿ ತೆರಿಗೆ, ಕಟ್ಟಡ ಪರವಾನಿಗೆ ಶುಲ್ಕ, ಅಂಗಡಿ ಬಾಡಿಗೆ, ಮಾರುಕಟ್ಟೆ ಶುಲ್ಕ ಮತ್ತು ಉದ್ದಿಮೆ ಪರವಾನಿಗೆ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣೆ ಇತ್ಯಾದಿಗಳಿಂದ ಒಟ್ಟು ಸ್ವಂತ ರಾಜಸ್ವ ಆದಾಯ 13.40.95.000 ಹಾಗೂ ರಾಜ್ಯ ಸರಕಾರದಿಂದ ಬಿಡುಗಡೆ ಆಗುವ ರಾಜಸ್ವ

ಪುತ್ತೂರು ನಗರಸಭೆಯಲ್ಲಿ 3.55 ಕೋಟಿಯ ಮಿಗತೆ ಬಜೆಟ್ ಮಂಡನೆ Read More »

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ

ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಆರಂಭದ ಕೆಲವು ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ 40, ಆಪ್‌ 29 ಮತ್ತು ಕಾಂಗ್ರೆಸ್‌ ಬರೀ 1 ಸ್ಥಾನದಲ್ಲಿ ಮುಂದಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ಆತಿಶಿ ಮರ್ಲೆನಾ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌, ಮಾಜಿ ಸಚಿವ ಮನೀಷ್‌ ಸಿಸೋದಿಯ ಅವರಂಥ ದಿಗ್ಗಜರೇ ಆರಂಭದ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ Read More »

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌

ದೌರ್ಜನ್ಯದ ದೂರು ಕೊಟ್ಟವರ ವಿರುದ್ಧವೇ ಕಿರುಕುಳ ನೀಡಿ ಸಾವಿಗೆ ಕಾರಣರಾದದ್ದಕ್ಕೆ ಆಕ್ರೋಶ ಬೆಂಗಳೂರು: ಪೊಲೀಸ್​ ಇನ್‌ಸ್ಪೆಕ್ಟರ್‌ ಒಬ್ಬರು ತನ್ನ ತಂದೆಯ ಶವವನ್ನೇ ಪೊಲೀಸ್‌ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗದ ಹಾರುಗೇರಿಯಲ್ಲಿ ಇಂದು ಮುಂಜಾನೆ ಹೊತ್ತು ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ಹಾರುಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದವರು. ಜನವರಿ10ರಂದು ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌ Read More »

ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರಂಟ್‌

ಕೋವಿಡ್‌ ಕಾಲದ ಆಪತ್ಬಾಂಧವ ಮಾಡಿದ ಅಪರಾಧ ಏನು ಗೊತ್ತೆ? ಮುಂಬಯಿ: ಬಾಲಿವುಡ್‌ನ ಜನಪ್ರಿಯ ವಿಲನ್‌ ಸೋನು ಸೂದ್‌ ವಿರುದ್ಧ ಪಂಜಾಬಿನ ನ್ಯಾಯಾಲಯ ಬಂಧನ ವಾರಂಟ್‌ ಜಾರಿಗೊಳಿಸಿದೆ. ಲೂಧಿಯಾನ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರಂಟ್ ಹೊರಡಿಸಿದ್ದಾರೆ. ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ 10 ಲಕ್ಷ ರೂ. ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ ವಂಚಿಸಿದ ಆರೋಪ ಮೋಹಿಲ್‌ ಶುಕ್ಲಾ ವಿರುದ್ಧ

ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರಂಟ್‌ Read More »

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ

ಬಂಡೆಗೆ ಬಡಿದು ಮುಳುಗಿ 50 ಲ.ರೂ. ನಷ್ಟ ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ದೋಣಿಯೊಂದು ಕಾರವಾರ ಸಮೀಪ ಅವಘಡಕ್ಕೀಡಾಗಿ ಮುಳುಗಿದೆ. ದೋಣಿಯಲ್ಲಿದ್ದ ಆರು ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿ ದಡಕ್ಕೆ ಸುರಕ್ಷಿತವಾಗಿ ಕರೆತಂದಿದ್ದಾರೆ. ಭಟ್ಕಳದ ಬಂದರು ಬಳಿ ಬೋಟ್ ಕಲ್ಲಿಗೆ ತಾಗಿ ಮುಳುಗಡೆಯಾಗಿದೆ ಎನ್ನಲಾಗಿದೆ. ಉಡುಪಿ ಸಮೀಪದ ಬ್ರಹ್ಮಾವರದ ಸುರೇಶ್ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು, ಕುಮಟಾ ಭಾಗದಲ್ಲಿ ಮೀನುಗಾರಿಕೆ ನಡೆಸಿ ಭಟ್ಕಳ ಬಂದರಿಗೆ ಬರುವಾಗ ಅವಘಡ ಸಂಭವಿಸಿದೆ. ಮೀನು ಇಳಿಸಲು ಬರುತ್ತಿದ್ದಾಗ ಭಟ್ಕಳ ಬಂದರು ಭಾಗದ

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ Read More »

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗಾಗಿ ವ್ಯಾಪಕ ತಯಾರಿ ಮಾಡಿಕೊಳ್ಳಲಾಗಿದ್ದು, 8 ಗಂಟೆ ಎಣಿಕೆ ಶುರುವಾಗಲಿದೆ. ಮೊದಲು ಅಂಚೆ ಮತಗಳನ್ನು ಎಣಿಸಿ ಬಳಿಕ ಮತಯಂತ್ರಗಳ ಮತಗಳನ್ನು ಎಣಿಸುವುದು ಸಂಪ್ರದಾಯ. ಫೆಬ್ರವರಿ 5ರಂದು ದಿಲ್ಲಿ ವಿಧಾನಸಭೆಯ 3ಲ್ಲ 70 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಶೇ. 60.54 ಮತದಾನವಾಗಿದೆ. ದಿಲ್ಲಿ ಮಟ್ಟಿಗೆ ಇದು ಉತ್ತಮ ಮತದಾನ ಪ್ರಮಾಣವಾಗಿರುವುದರಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಮತದಾನ ಮುಕ್ತಾಯವಾದ ಬೆನ್ನಿಗೆ ಪ್ರಕಟವಾದ ಬಹುತೇಕ

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ Read More »

error: Content is protected !!
Scroll to Top