ಪುತ್ತೂರು ಶಾಸಕ ಅಶೋಕ್ ರೈ ಅವರೊಂದಿಗೆ ಅನ್ಯೋನ್ಯತೆ ಬಿಜೆಪಿಯಲ್ಲಿದ್ದಾಗ ಮಾತ್ರ | ಸಾಮಾಜಿಕ ಜಾಲತಾಣದಲ್ಲಿ ಹಿಂಸೆ ನೀಡುವುದು ಸರಿಯಲ್ಲ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಚಂದಳಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ  ಭಾಷಣದಲ್ಲಿ ದಯಾನಂದರು ನನಗೆ ಮತ ಹಾಕಿದ್ದಾರೆಂದು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಹತ್ತು ವರ್ಷಗಳ ಹಿಂದೆ ಅವರು ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿದ್ದರು. ಆಗ ಅವರು ಬಿಜೆಪಿಯಲ್ಲಿ ಅನ್ಯೋನ್ಯತೆಯಲ್ಲಿದ್ದರು ಹೊರತು ಈಗಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ದಯಾನಂದರು ಅಶೋಕ್‌ ರೈ ಅವರ ಮಾತಿಗೆ ತಲೆ ಅಲ್ಲಾಡಿಸಿದ್ದಾರೆಂದು ಹಿಂಸೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, […]

ಪುತ್ತೂರು ಶಾಸಕ ಅಶೋಕ್ ರೈ ಅವರೊಂದಿಗೆ ಅನ್ಯೋನ್ಯತೆ ಬಿಜೆಪಿಯಲ್ಲಿದ್ದಾಗ ಮಾತ್ರ | ಸಾಮಾಜಿಕ ಜಾಲತಾಣದಲ್ಲಿ ಹಿಂಸೆ ನೀಡುವುದು ಸರಿಯಲ್ಲ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು Read More »

ಕಳಿಯ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಫೆ. 3ರಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಮೆದಿನರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಅವರು ಸ್ವಾಗತಿಸಿ ಸಭೆಯನ್ನು ಉದ್ದೇಶಸಿ ಮಾತನಾಡಿದರು. ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದ್ದು, ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ  ಆಗಬೇಕೆಂದು ಸಭೆಯ

ಕಳಿಯ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ Read More »

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ

ಪುತ್ತೂರು : ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ಜ.25ರಂದು ಚುನಾವಣೆ ನಡೆದಿತ್ತು. ಸಾಮಾನ್ಯ ಮೀಸಲು ಸ್ಥಾನದಿಂದ ಬ್ಯಾಂಕಿನ ಹಾಲಿ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ, ಸುದೇಂದ್ರ ಪ್ರಭು, ರಾಜು ಶೆಟ್ಟಿ, ಶ್ರೀಧರ ಗೌಡ ರಣಜಾಲು, ಶ್ರೀಧರ ಪಟ್ಲ, ರಾಮಚಂದ್ರ ಕಾಮತ್, ಮಹಿಳಾ ಮೀಸಲು ಸ್ಥಾನದಿಂದ ವೀಣಾ, ಸೀಮಾ,

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ Read More »

ವಿಜಯವಾಣಿ ಪತ್ರಿಕೆ ಉಪಸಂಪಾದಕ ಗಿರೀಶ್‍ ಕೆ.ಎಲ್‍. ನಿಧನ

ಮಂಗಳೂರು: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ. ಉದಯವಾಣಿ ಪತ್ರಿಕೆಗಳಲ್ಲಿ ಗಿರೀಶ್ ಕೆ.ಎಲ್ ಅವರು ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ವಿಜಯವಾಣಿ ಪತ್ರಿಕೆ ಉಪಸಂಪಾದಕ ಗಿರೀಶ್‍ ಕೆ.ಎಲ್‍. ನಿಧನ Read More »

ಬಸ್ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಸುಮ್ಮನಿರಲ್ಲ| ಕೆಎಸ್ಆರ್ಟಿಸಿ ಅಧಿಕಾರಿಗೆ ಶಾಸಕ ಅಶೋಕ್ ರೈ ಖಡಕ್ ವಾರ್ನಿಂಗ್

ಪುತ್ತೂರು: ರೂಟ್‍ ಗಳಿಗೆ ಸರಿಯಾಗಿ ಬಸ್ ಬರುತ್ತಿಲ್ಲ, ಒಂದು ದಿನ ಬಂದರೆ ಮಾರನೇ ದಿನ ಬರುವುದಿಲ್ಲ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್ಗಳ ಓಡಾಟ ಇಲ್ಲದೇ ಇರುವ ಕಾರಣ ತೊಂದರೆಯಲ್ಲಿದ್ದಾರೆ, ನಾನು ಪದೇ ಪದೇ ನಿಮಗೆ ಎಚ್ಚರಿಕೆ ಕೊಟ್ಟರೂ ಮತ್ತೆ ಅದೇ ಸಮಸ್ಯೆ ಮರುಕಳಿಸುತ್ತಿದೆ ಇದಕ್ಕೆ ಏನು ಕಾರಣ? ಬಸ್ ಇಲ್ಲವೇ? ಚಾಲಕರಿಲ್ಲವೇ? ಕಂಡಕ್ಟರ್ ಇಲ್ಲವೇ? ಅಥವಾ ನಿಮಗೆ ಖುಷಿ ಬಂದ ಹಾಗೆ ಬಸ್ ಓಡಾಟ ಮಾಡುತ್ತಿದ್ದೀರಾ ಹೀಗೇ ಕೆಎಸ್ಆರ್ಟಿಸಿ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡದ್ದು ಶಾಸಕ ಅಶೋಕ್ ರೈ.ಸೋಮವಾರ

ಬಸ್ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಸುಮ್ಮನಿರಲ್ಲ| ಕೆಎಸ್ಆರ್ಟಿಸಿ ಅಧಿಕಾರಿಗೆ ಶಾಸಕ ಅಶೋಕ್ ರೈ ಖಡಕ್ ವಾರ್ನಿಂಗ್ Read More »

180ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿ ಸೆರೆ

ನಟಿಯನ್ನು ಪ್ರೀತಿಸಿ 3 ಕೋ.ರೂ. ಮನೆ ಗಿಫ್ಟ್‌ ಕೊಟ್ಟಿದ್ದ ಬೆಂಗಳೂರು : ದೇಶಾದ್ಯಂತ 180ಕ್ಕೂ ಹೆಚ್ಚು ಕಳ್ಳತನ ನಡೆಸಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37) ಈ ಕುಖ್ಯಾತ ಕಳ್ಳ. ಈತ ಕದ್ದ ಹಣದಿಂದಲೇ ತನ್ನ ಪ್ರೇಯಸಿಗೆ ಸುಮಾರು 3 ಕೋ. ರೂ. ಬೆಲೆಬಾಳುವ ಮನೆ ಕಟ್ಟಿಸಿಕೊಟ್ಟಿದ್ದಾನಂತೆ. ಈತನ ಪ್ರೇಯಸಿ ಅಂತಿಂಥವಳಲ್ಲ ಖ್ಯಾತ ನಟಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಪಂಚಾಕ್ಷರಿ ಸ್ವಾಮಿಗೆ ಮದುವೆಯಾಗಿ ಮಗುವಿದ್ದರೂ ಬೇರೆ

180ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿ ಸೆರೆ Read More »

1 ನ್ನು ಒತ್ತಿದ್ರು..  2 ಲಕ್ಷ ಕಳ್ಕೊಂಡ್ರು..!

ಸಹಾಯವಾಣಿ ಹೆಸರಿನಲ್ಲಿ ಮಹಿಳೆಗೆ ದೋಖ ಬೆಂಗಳೂರು: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ ಕ್ರಮವನ್ನು ಸೈಬರ್ ವಂಚಕರು  ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ. ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ,

1 ನ್ನು ಒತ್ತಿದ್ರು..  2 ಲಕ್ಷ ಕಳ್ಕೊಂಡ್ರು..! Read More »

ಜಿಲ್ಲಾ ಗವರ್ನರ್ ವಿಕ್ರಂ ದತ್ತ ಬೇಟಿ ಸಂದರ್ಭ | ವಿಟ್ಲ ರೋಟರಿ ಕ್ಲಬ್ ವತಿಯಿಂದ ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ

ವಿಟ್ಲ  : ವಿಟ್ಲ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಇವರ ಅಧಿಕೃತ ಬೇಟಿಯ ಸಂದರ್ಭದಲ್ಲಿ ವಿಟ್ಲ ರೋಟರಿ ಕ್ಲಬ್ ವತಿಯಿಂದ ವಿಟ್ಲ  ಕೊಡಂಗೆ ನಿರ್ಗತಿಕ ಮಹಿಳೆ ಎಂಬವರಿಗೆ ಪುಷ್ಪಾ ಇವರಿಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮನೆಯನ್ನು ಹಸ್ತಾಂತರಿಸಲಾಯಿತು. ಸುನಂದಾ ಎಂಬವರಿಗೆ 10 ಸಾವಿರ ಧನ ಸಹಾಯ, ಪ್ರತಿಭಾವಂತ ವಿದ್ಯಾರ್ಥಿಗಳಾದ ಸಮೃದ್ಧಿ, ಅಕ್ಷತಾ ಮತ್ತು ಕೌಶಿಕ್ ಎಂಬವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಪಿ ಡಿ ಶ್ರೀನಿವಾಸ್ ಗೌಡ, ಸುನಿಲ್

ಜಿಲ್ಲಾ ಗವರ್ನರ್ ವಿಕ್ರಂ ದತ್ತ ಬೇಟಿ ಸಂದರ್ಭ | ವಿಟ್ಲ ರೋಟರಿ ಕ್ಲಬ್ ವತಿಯಿಂದ ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ Read More »

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ತೀವ್ರ ಅಸ್ವಸ್ಥನಾದ ಆರೋಪಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು: ವಿಟ್ಲದ ಬೋಳಂತೂರಿನ ಸಮೀಪ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿ ಎಂಬವರ ಮನೆಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆಸಿದ ತಂಡದ ಇನ್ನೋರ್ವ ಸದಸ್ಯನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಕೇರಳ ಮೂಲದ ಸಚಿನ್‌ ಸೆರೆಯಾಗಿರುವ ಆರೋಪಿ. ಬಂಧನವಾದ ಬೆನ್ನಿಗೆ ತೀವ್ರ ಅಸ್ವಸ್ಥನಾದ ಅವನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ. ಆರೋಪಿ ಅಪಸ್ಮಾರ ಮತ್ತು ತಲೆನೋವಿನಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಲದಿನಗಳ

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷ ರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆ

ವಿಟ್ಲ : ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆಯಿತು. ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯಿಂದ ಸ್ಪರ್ಧಿಸಿದ ಎಲ್ಲಾ ಹನ್ನೆರಡು ಅಭ್ಯರ್ಥಿಗಳು ಬಹುಮತದಿಂದ ಆರಿಸಲಾಗಿದೆ. ಈ ಚುನಾವಣ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿಯವರು ಆಯ್ಕೆಯಾಗಿದ್ದಾರೆ.

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷ ರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆ Read More »

error: Content is protected !!
Scroll to Top