ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ

ಸನಾತನ ಧರ್ಮ ರಕ್ಷಣೆ, ಪ್ರಕೃತಿ ವಿಕೋಪ ತಡೆಗೆ ದೇವರಿಗೆ ಮೊರೆ ಉಡುಪಿ: ಸನಾತನ ಧರ್ಮದ ರಕ್ಷಣೆ, ಕಡಲ್ಕೊರೆತದಂಥ ಪ್ರಕೃತಿ ವಿಕೋಪಗಳು ನಡೆಯದಿರಲು ಭಾನುವಾರ ಕೇರಳದ ಕಾಸರಗೋಡಿನಿಂದ ಬೈಂದೂರು ಸಮೀಪದ ಶಿರೂರು ತನಕ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಠಣ ಅಭಿಯಾನ ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯ ಕೆಲವೆಡೆಗಳಲ್ಲೂ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಿಸಲಾಗಿದೆ. ಅರಬ್ಬಿ ಸಮುದ್ರದ 108 ಸ್ಥಳಗಳಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಮಾಡಲಾಗಿದೆ. 20 […]

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ Read More »

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸ್ಪೀಕರ್‌ ಯು.ಟಿ.ಖಾದರ್‌

ಮಂಗಳೂರು : ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ. ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು. ಉತ್ತರಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ ಕುಂಭಮೇಳದಲ್ಲಿ ಪಾಲ್ಗೊಂಡ ಖಾದರ್, ನಾಗಾಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಅಲಹಾಬಾದ್‌ನಲ್ಲಿ ಹಜರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ ದರ್ಗಾ ಶರೀಫ್‌ಗೆ ಭೇಟಿ ನೀಡಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸ್ಪೀಕರ್‌ ಯು.ಟಿ.ಖಾದರ್‌ Read More »

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು

ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿರುವ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿಯ ಸೊತ್ತುಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು Read More »

ಚಾರ್ಮಾಡಿ ಘಾಟಿಯಲ್ಲಿ ಕಾರು-ಲಾರಿ ಅಪಘಾತ : ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ(55) ಜ್ಞಾನಮ್ಮ (70), ಮಂಜುಳಾ (50) ಮತ್ತು ರೇಣುಕಾ (26) ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆಂದು

ಚಾರ್ಮಾಡಿ ಘಾಟಿಯಲ್ಲಿ ಕಾರು-ಲಾರಿ ಅಪಘಾತ : ನಾಲ್ವರಿಗೆ ಗಂಭೀರ ಗಾಯ Read More »

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ

ಮೈಸೂರು: ಕಳೆದ ಕೆಲ ಸಮಯದಿಂದ ಜನರನ್ನು ಇನ್ನಿಲ್ಲದಂತೆ ಕಾಡಿ ಜೀವ ಹಿಂಡುತ್ತಿರುವ ಮೈಕ್ರೊ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರಕಾರ ಅಬ್ಬರಿಸುತ್ತಿದ್ದರೂ ಈ ಫೈನಾನ್ಸ್‌ ಸಂಸ್ಥೆಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಫೈನಾನ್ಸ್‌ನವರ ಕಾಟಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್ ಫೈವ್ ಸ್ಟಾರ್ ಮೈಕ್ರೊ ಫೈನಾನ್ಸ್‌

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ Read More »

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಪತಿಗೆ ಹಲ್ಲೆ ಮಾಡಿ ಮನೆಯಿಂದ ಹೊರಹಾಕಿ ಬ್ಲ್ಯಾಕ್‌ಮೇಲ್‌ ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪತಿ ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರನ್ನು ಆಧರಿಸಿ ಶಶಿಕಲಾ ಹಾಗೂ ಯೂಟ್ಯೂಬರ್ ಅರುಣ್‌ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಜತೆಗೆ ಕ್ಯಾಬ್ ಚಾಲಕನಾಗಿಯೂ ಕೆಲಸ ಮಾಡುತ್ತಿರುವ ನನಗೆ 2021ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಶಿಕಲಾ ಪರಿಚಯವಾಯಿತು. ತನ್ನೊಂದಿಗೆ ಸಂಬಂಧ ಹೊಂದಿದರೆ ಸಿನಿಮಾದಲ್ಲಿ

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌ Read More »

ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ

ಆಡಳಿತ ಮಂಡಳಿ, ನೌಕರಿಯಲ್ಲಿ ಮೀಸಲಾತಿ ಕೋರಿಕೆ ಮಂಗಳೂರು : ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಬೇಡಿಕೆಯಿರುವ ಮನವಿ ಪತ್ರವನ್ನು ಸಮುದಾಯದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮುಖಾಂತರ ಮುಖ್ಯ ಮಂತ್ರಿಗೆ ಹಾಗೂ ಸಹಕಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೋ-ಆಪರೇಟಿವ್ ಸೊಸೈಟಿಗಳ ಆಡಳಿತ ಮಂಡಳಿಯಲ್ಲಿ ವಿಶ್ವಕರ್ಮ ಸಮುದಾಯದವರಿಗೆ ಒಂದು ಸ್ಥಾನ ಮೀಸಲು (ಚುನಾಯಿತ ಅಥವಾ ನಾಮನಿರ್ದೇಶಿತ ಸ್ಥಾನ) ಮತ್ತು ಸಹಕಾರ

ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ Read More »

ಮಂಡೆಕೋಲು ಗ್ರಾಮದ ಕನ್ಯಾನದಲ್ಲಿ ಮೃತ ಕಾಡಾನೆ ಪತ್ತೆ

ಸುಳ್ಯ : ತಾಲುಕಿನ ಮಂಡೆಕೋಲು ಗ್ರಾಮದ ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಕಾಡಾನೆ ಹೇಗೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಮಂಡೆಕೋಲು ಗ್ರಾಮದ ಕನ್ಯಾನದಲ್ಲಿ ಮೃತ ಕಾಡಾನೆ ಪತ್ತೆ Read More »

ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ಪುತ್ತೂರು: ಕಳೆದ ಎಪ್ಪತ್ತಾರು ವರ್ಷಗಳಲ್ಲಿ ನಮ್ಮ ದೇಶ ಸಾಗಿ ಬಂದುದುರ ಬಗೆಗೆ ನಾವಿಂದು ವಿಶ್ಲೇಷಣೆ ಮಾಡಬೇಕಾದ ಸಮಯವಿದು. ನಮ್ಮ ದೇಶ ಅತ್ಯಂತ ವಿಶಿಷ್ಟವಾದ ದೇಶ. ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ದೇಶವಾದರೂ ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟ ಮುಂದುವರೆದಿದ್ದೇವೆ. ಅನೇಕ ವಿಚಾರಗಳಲ್ಲಿ ದೇಶ ತನ್ನದೇ ಆದ ರೀತಿಯಲ್ಲಿ ಗುರುತಿಸಿಕೊಂಡಿದೆ. ಕೃಷಿ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿದುದು ಅಲ್ಲದೇ ತಂತ್ರಜ್ಞಾನ, ಕೈಗಾರಿಕಾ ಕ್ಷೇತ್ರದಲ್ಲಿಯೂ ಅಭಿವೃದ್ಧಿಯನ್ನು ಸಾಧಿಸಿಕೊಂಡು ಬಂದಿದೆ. ಆದರೆ ದೇಶ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶ ಇಂದು

ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಸಹಯೋಗದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಕ್ಷಯ ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಧ್ವಜಾರೋಹಣ ನೆರವೇರಿಸಿದರು.  ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ ಕುಮಾರಿ ಮೇಘಶ್ರೀ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್  ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ -ಸೇವಕಿಯರು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿ

ಸಂಪ್ಯ ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ Read More »

error: Content is protected !!
Scroll to Top