ಸಂವಿಧಾನದಿಂದಾಗಿ ದೇಶದಲ್ಲಿ ಸಾಮಾಜಿಕ ನ್ಯಾಯ : ಜುಬಿನ್ ಮೊಹಾಪಾತ್ರ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಣರಾಜ್ಯೋತ್ಸವ
ಪುತ್ತೂರು: ಸಂವಿಧಾನದ ಆಧಾರದಲ್ಲಿ ನಾವು ಈ ಮಟ್ಟದ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವಾಗಿದ್ದು, ಸಂವಿಧಾನದಿಂದಾಗಿ ದೇಶದಲ್ಲಿ ಸಾಮಾಜಿಕ ನ್ಯಾಯವಿದೆ. ಪ್ರಪಂಚದಲ್ಲಿಯೇ ದೊಡ್ಡ ಸಂವಿಧಾವಿರುವ ದೇಶ ನಮ್ಮದು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಹೇಳಿದರು. ಅವರು ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಸಂವಿಧಾವು ನಮಗೆ ವಿವಿಧ ಹಕ್ಕುಗಳನ್ನು ನೀಡಿದೆ ಅದನ್ನು ಉತ್ತಮ […]










